News Kadaba

ಮತದಾನಕ್ಕೆ ಆಗಮಿಸುತ್ತಿದ್ದಾಗ ಆನೆ ದಾಳಿ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಚಾಮರಾಜನಗರ, ಮೇ.11. ಮತದಾನಕ್ಕಾಗಿ ಆಗಮಿಸುತ್ತಿದ್ದಂತ ವೇಳೆ ಆನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತೋಕೆರೆ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಪುಟ್ಟಸ್ವಾಮಿ(35) ಎಂಬುದಾಗಿ ಗುರುತಿಸಲಾಗಿದೆ. ಪುಟ್ಟಸ್ವಾಮಿ ಮತದಾನಕ್ಕಾಗಿ ಮಹದೇಶ್ವರ ಬೆಟ್ಟದಲ್ಲಿರುವಂತ ಹಳೇ ಮಾರ್ಟನಳ್ಳಿಯಿಂದ ತೋಕೆರೆಗೆ ಕಾಲು ದಾರಿಯ ಮೂಲಕ ಬರುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ದಿಢೀರ್ ಆನೆ ದಾಳಿ ನಡೆಸಿ, ತುಳಿದು ಹಾಕಿದ್ದರಿಂದ ಪುಟ್ಟಸ್ವಾಮಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ  

ಮತದಾನಕ್ಕೆ ಆಗಮಿಸುತ್ತಿದ್ದಾಗ ಆನೆ ದಾಳಿ ➤ ವ್ಯಕ್ತಿ ಮೃತ್ಯು Read More »

ಕರ್ನಾಟಕ

 ಬಿಜೆಪಿ ಶಾಸಕ ಸಿ.ಟಿ.ರವಿ ದಿಢೀರ್‌ ಆಸ್ಪತ್ರೆಗೆ ದಾಖಲು.!

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಮೇ.11 ದಿಢೀರ್ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆ ಚಿಕ್ಕಮಗಳೂರಿನ ಶಾಸಕ ಸಿ.ಟಿ. ರವಿ ಅವರು ದಿಢೀರ್‌ ತಡರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಿಡ್ನಿ ಸಮಸ್ಯೆಯಿಂದ ಬಳುತ್ತಿದ್ದ ಕಾರಣ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರನ್ನು ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ‌ದಾಖಲಿಸಲಾಗಿದೆ. ವಿಧಾನಸಭೆ ಚುನಾವಣೆ ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದರು. ಆದರೆ ತಡರಾತ್ರಿ ಅವರ ಆರೋಗ್ಯದಲ್ಲಿ ವ್ಯತ್ಯಾಸ ಆಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ

 ಬಿಜೆಪಿ ಶಾಸಕ ಸಿ.ಟಿ.ರವಿ ದಿಢೀರ್‌ ಆಸ್ಪತ್ರೆಗೆ ದಾಖಲು.! Read More »

ಕರ್ನಾಟಕ

ಇವಿಎಂ ಯಂತ್ರಗಳನ್ನು ಮರೆತು ಬಿಟ್ಟುಹೋದ ಅಧಿಕಾರಿಗಳು➤ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ.!*

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಮೇ.11 ಅತ್ಯಂತ ಜಾಗರೂಕತೆಯಿಂದ ನಡೆಯಬೇಕಾದ ಚುನಾವಣೆಯಲ್ಲಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡ ಪ್ರಕರಣವೊಂದು ನಡೆದಿದೆ. ಅದರಲ್ಲೂ ಬಹುಮುಖ್ಯವಾದ ಇವಿಎಂ ಯಂತ್ರಗಳನ್ನೇ ಮತದಾನದ ಬಳಿ ಮರೆತು ಬಿಟ್ಟುಹೋದ ಪ್ರಸಂಗ ನಡೆದಿದೆ. ಚಿಕ್ಕಮಗಳೂರು ನಗರದ ಪೆನ್ಷನ್ ಮೊಹಲ್ಲಾದಲ್ಲಿ ಈ ಘಟನೆ ನಡೆದಿದೆ.ಮತದಾನ ಮುಗಿದ ಬಳಿಕ ಮರಳುವಾಗ ಇವಿಎಂ ಯಂತ್ರಗಳನ್ನು ಅಧಿಕಾರಿಗಳು ಮರೆತು ಕಾಲೇಜಿನಲ್ಲೇ ಬಿಟ್ಟುಹೋಗಿದ್ದಾಗಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕಾಲೇಜಿನಲ್ಲಿ 168 ಹಾಗೂ 169ನೇ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಮತದಾನದ ಬಳಿಕ 169ರ ಮತಗಟ್ಟೆಯಲ್ಲಿನ ಯಂತ್ರಗಳನ್ನು ತೆಗೆದುಕೊಂಡು ಹೋಗಿದ್ದ

ಇವಿಎಂ ಯಂತ್ರಗಳನ್ನು ಮರೆತು ಬಿಟ್ಟುಹೋದ ಅಧಿಕಾರಿಗಳು➤ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ.!* Read More »

ಕರ್ನಾಟಕ

ಮಂಗಳೂರು: ಮತದಾನದೋತ್ತರ ಘರ್ಷಣೆ ➤ 5 ಠಾಣಾ ವ್ಯಾಪ್ತಿಗಳಲ್ಲಿ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.11. ಮತದಾನದ ಮುಗಿದ ಬಳಿಕ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಾವೂರು, ಸುರತ್ಕಲ್ ಬಜ್ಪೆ, ಮೂಡುಬಿದಿರೆ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕಾನೂನು ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಮೇ.10

ಮಂಗಳೂರು: ಮತದಾನದೋತ್ತರ ಘರ್ಷಣೆ ➤ 5 ಠಾಣಾ ವ್ಯಾಪ್ತಿಗಳಲ್ಲಿ ನಿಷೇಧಾಜ್ಞೆ ಜಾರಿ Read More »

ಕರಾವಳಿ

ಕಾಸರಗೋಡು: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ➤ ಬಾಲಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಮೇ.11. ಕಾರು ಮತ್ತು ಸ್ಕೂಟರ್ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ. ಚೇರೂರಿನ ಅಬ್ದುಲ್ ರಹಮಾನ್ ರವರ ಪುತ್ರ ಅಬ್ದುಲ್ ರಹಮಾನ್ ರವರ ಪುತ್ರ ಮುಹಮ್ಮದ್ ರಫಾಲ್ (16) ಮೃತಪಟ್ಟವನು ಎಂದು ಗುರುತಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟನು. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಕಾಸರಗೋಡು: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ➤ ಬಾಲಕನೋರ್ವ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದುವೆ ವೇದಿಕೆಯಲ್ಲಿ ಹೃದಯಾಘಾತದಿಂದ ವ್ಯಕ್ತಿ ಮೃತ್ಯು.!

(ನ್ಯೂಸ್ ಕಡಬ)Newskadaba.com ಛತ್ತೀಸ್‌ಗಢ,ಮೇ.11 ಮದುವೆ ಸಂಭ್ರಮದಲ್ಲಿ ಡ್ಯಾನ್ಸ್‌ ಮಾಡುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತ ಸಂಭವಿಸಿ ವೇದಿಕೆಯಲ್ಲಿ ಕುಸಿದು ಬಿದ್ದು  ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯ ಡೊಂಗರಗಢದಲ್ಲಿ ನಡೆದಿದೆ. ಮೃತರನ್ನು ದಿಲೀಪ್ ರೌಜ್ಕರ್ ಎಂದು ಗುರುತಿಸಲಾಗಿದೆ.ಎಲೆಕ್ಟ್ರಿಕಲ್ ವಿಭಾಗದ ಉದ್ಯೋಗಿಯಾಗಿದ್ದ ದಿಲೀಪ್ ರೌಜ್ಕರ್ ಛತ್ತೀಸ್‌ಗಢದ ಬಲೋದ್ ಜಿಲ್ಲೆಯ ನಿವಾಸಿ. ಅವರು ಇತ್ತೀಚೆಗೆ ತಮ್ಮ ಸಂಬಂಧಿಕರೊಬ್ಬರ ಮದುವೆಗೆ ಹೋಗಿದ್ದು, ಅಲ್ಲಿ ತನ್ನ ಆತ್ಮೀಯರೊಂದಿಗೆ ಮದುವೆ ವೇದಿಕೆಯಲ್ಲಿ ಡ್ಯಾನ್ಸ್‌ ಮಾಡಿದ್ದಾರೆ. ಬಹಳ ಸಂತಸದಿಂದ ಭಿನ್ನ – ವಿಭಿನ್ನವಾಗಿ ಹಾಡಿಗೆ ಹೆಜ್ಜೆ

ಮದುವೆ ವೇದಿಕೆಯಲ್ಲಿ ಹೃದಯಾಘಾತದಿಂದ ವ್ಯಕ್ತಿ ಮೃತ್ಯು.! Read More »

ರಾಷ್ಟ್ರೀಯ ನ್ಯೂಸ್

ಮಗಳು ಫಸ್ಟ್​ಟೈಮ್​ ವೋಟ್ ಮಾಡುತ್ತಿದ್ದಾಳೆ.!➤ ಕಿಚ್ಚ ಸುದೀಪ್ ಸಂಭ್ರಮ

(ನ್ಯೂಸ್ ಕಡಬ)Newskadaba.com ಬೆಂಗಳೂರು ,ಮೇ.10 ಕಿಚ್ಚ ಸುದೀಪ್ ಬಿಜೆಪಿ ಪರವಾಗಿ ಪ್ರಚಾರ ಮಾಡಿದಾಗಿನಿಂದ ಸುದ್ದಿಯಲ್ಲಿದ್ದಾರೆ. ಅದರಲ್ಲೂ ‘ಬೊಮ್ಮಾಯಿ ಮಾಮ’ ಪರವಾಗಿ ಪ್ರಚಾರ ಮಾಡಿದಾಗಿನಿಂದ ಹಿಡಿದು ಅವರ ಈ ನಡೆಯ ಬಗ್ಗೆ ಪರ ವಿರೋಧಗಳು ಕೇಳಿ ಬರುತ್ತಿದ್ದವು. ಇಂದು ರಾಜ್ಯದ ಭವಿಷ್ಯ ನಿರ್ಧಾರ ಆಗುವ ದಿನ ಆಗಿದ್ದು ಕಿಚ್ಚ ಸುದೀಪ್ ಪುಟ್ಟೇನಹಳ್ಳಿ ಆಕ್ಸ್‌ಫರ್ಡ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಂದರ್ಭ ಮಾತನಾಡಿದ ಕಿಚ್ಚ ‘ನನ್ ಮಗಳು ಫಸ್ಟ್ ಟೈಮ್ ವೋಟ್ ಮಾಡ್ತಿದಾಳೆ. ರೋಡ್

ಮಗಳು ಫಸ್ಟ್​ಟೈಮ್​ ವೋಟ್ ಮಾಡುತ್ತಿದ್ದಾಳೆ.!➤ ಕಿಚ್ಚ ಸುದೀಪ್ ಸಂಭ್ರಮ Read More »

ಕರ್ನಾಟಕ

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ ಮಾಜಿ ಪ್ರಧಾನಿ..!➤ಎಚ್.ಡಿ.ದೇವೇಗೌಡ

(ನ್ಯೂಸ್ ಕಡಬ)Newskadaba.com ಹಾಸನ,ಮೇ.10 ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರು ಪತ್ನಿ ಚೆನ್ನಮ್ಮ ಅವರೊಂದಿಗೆ ಹೆಲಿಕಾಪ್ಟರ್​​ನಲ್ಲಿ ಬಂದು ಮತ ಚಲಾಯಿಸಿದ್ದಾರೆ. ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡಲಾಗಿದೆ. ಅಲ್ಲಿಂದ ಪಡುವಲಹಿಪ್ಪೆ ಗ್ರಾಮ ಮತಗಟ್ಟೆ ಸಂಖ್ಯೆ 251ರಲ್ಲಿ ಹಕ್ಕು ಮತ ಚಲಾವಣೆ ಮಾಡಿದ್ದಾರೆ.      

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ ಮಾಜಿ ಪ್ರಧಾನಿ..!➤ಎಚ್.ಡಿ.ದೇವೇಗೌಡ Read More »

ಕರ್ನಾಟಕ

ಭಾರತೀಯ ಸೇನೆಯಿಂದ ಇಬ್ಬರು ಉಗ್ರರು ಅರೆಸ್ಟ್

(ನ್ಯೂಸ್ ಕಡಬ)newskadaba.com ಶ್ರೀನಗರ, ಮೇ.10. ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಇಬ್ಬರು ಸಹಚರರನ್ನು ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಬಂಧಿಸಿದೆ. ಬಂಧಿತರನ್ನು ಶಾಹಿದ್ ಅಹ್ಮದ್ ಲೋನ್ ಹಾಗೂ ವಸೀಮ್ ಅಹ್ಮದ್ ಗನಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರೂ ಸ್ಥಳಿಯ ನಿವಾಸಿಗಳಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ. ಓರ್ವ ಉಗ್ರನಿಂದ 1 ಪಿಸ್ತೂಲ್, 1 ಪಿಸ್ತೂಲ್ ಮ್ಯಾಗಜೀನ್, 4 ಪಿಸ್ತೂಲ್ ರೌಂಡ್ಸ್, 1 ರಿವಾಲ್ವಾರ್ ಸೈಲೆನ್ಸರ್, 1 ಐಇಡಿ,

ಭಾರತೀಯ ಸೇನೆಯಿಂದ ಇಬ್ಬರು ಉಗ್ರರು ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ.!

(ನ್ಯೂಸ್ ಕಡಬ)Newskadaba.com ಮಂಗಳೂರು,ಮೇ.10 2023ರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಅಪರಾಹ್ನ 1 ಗಂಟೆವರೆಗೆ ಕ್ರಮವಾಗಿ 44.16% ಮತ್ತು 47.79%ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಬೈಂದೂರು – 45.43ಕುಂದಾಪುರ – 49.5%, ಉಡುಪಿ -46.49%, ಕಾಪು – 49%ಕಾರ್ಕಳ – 49.13% ರಷ್ಟು ಮತದಾನವಾಗಿದೆ.ಬೆಳ್ತಂಗಡಿ 44.82%, ಮಂಗಳೂರು 43.85%, ಮಂಗಳೂರು ಉತ್ತರ 43.43%, ಮಂಗಳೂರು ದಕ್ಷಿಣ 38.44ಮೂಡುಬಿದಿರೆ,44.45%ಬಂಟ್ವಾಳ46.53% ,

ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ.! Read More »

ಕರಾವಳಿ
Scroll to Top