News Kadaba

ವಿವಾಹವಾಗಿ 15 ವರ್ಷ ಕಳೆದರೂ ಮಕ್ಕಳಾಗಿಲ್ಲ ಎಂದು ಮಹಿಳೆಗೆ ವಿಷ ಉಣಿಸಿ ಹತ್ಯೆ

(ನ್ಯೂಸ್ ಕಡಬ)newskadaba.com ಉತ್ತರಪ್ರದೇಶ, ಮೇ.09.  ಮದುವೆಯಾಗಿ 15 ವರ್ಷಗಳಾದರೂ ಮಗುವಾಗಿಲ್ಲ ಎಂದು 33 ವರ್ಷದ ಮಹಿಳೆಗೆ ಅತ್ತೆ ವಿಷ ಆಹಾರ ನೀಡಿ ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದ ಗ್ರಾಮವೊಂದರಲ್ಲಿ ನಡೆದಿದೆ. ಸಾಲಿ ಬೇಗಂ ಎಂದು ಗುರುತಿಸಲಾದ ಮಹಿಳೆ ಮೃತರು ಎಂದು ಗುರುತಿಸಲಾಗಿದೆ. ಈಕೆಯ ಅತ್ತೆ, ಮಗುವಾಗದಿದ್ದಕ್ಕಾಗಿ ಅವಳ ಜೊತೆ ಜಗಳವಾಡಿ ವಿಷ ಆಹಾರ ನೀಡಿ ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಮೃತಳ ಸಹೋದರ ಗೌಸ್ ಮೊಹಮ್ಮದ್ ತನ್ನ ದೂರಿನಲ್ಲಿ, ಬೇಗಂ 15 ವರ್ಷಗಳ ಹಿಂದೆ ಫಿರೋಜ್ ಅಹ್ಮದ್ ಎಂಬಾತನನ್ನು […]

ವಿವಾಹವಾಗಿ 15 ವರ್ಷ ಕಳೆದರೂ ಮಕ್ಕಳಾಗಿಲ್ಲ ಎಂದು ಮಹಿಳೆಗೆ ವಿಷ ಉಣಿಸಿ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗ್ಯಾಂಗ್‌ಸ್ಟರ್‌ ಟಿಲ್ಲು ತಾಜ್‌ಪುರಿ ಹತ್ಯೆ ಪ್ರಕರಣ ➤7 ಮಂದಿ ಪೊಲೀಸ್ ಸಿಬ್ಬಂದಿ ಅಮಾನತು.!

(ನ್ಯೂಸ್ ಕಡಬ)Newskadaba.com ಹೊಸದಿಲ್ಲಿ,ಮೇ.09 ತಿಹಾರ್‌ ಜೈಲಿನಲ್ಲಿ ಗ್ಯಾಂಗ್‌ಸ್ಟರ್‌ ಟಿಲ್ಲು ತಾಜ್‌ಪುರಿಯಾನನ್ನು ಸಹಕೈದಿಗಳು ಇರಿದು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ವಿಶೇಷ ಪೊಲೀಸ್‌ ಪಡೆಯ ಏಳು ಸಿಬಂದಿಯನ್ನು ಅಮಾನತುಗೊಳಿಸಲಾಗಿದೆ. ಘಟನೆ ನಡೆದ ವೇಳೆ ಈ ಏಳು ಮಂದಿ ಪೊಲೀಸ್‌ ಸಿಬಂದಿ ಜೈಲಿನ ಭದ್ರತೆಯ ಕರ್ತವ್ಯದಲ್ಲಿದ್ದರು. ಇವರ ಕಣ್ಣೆದುರೇ ಟಿಲ್ಲು ತಾಜ್‌ಪುರಿಯಾನ ಮೇಲೆ ಸಹಕೈದಿಗಳು ಹಲ್ಲೆ ನಡೆಸುತ್ತಿದ್ದರೂ ಇವರು ಮೂಕಪ್ರೇಕ್ಷಕರಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇವರನ್ನು ಅಮಾನತುಗೊಳಿಸಿ ತಮಿಳುನಾಡಿಗೆ ಕಳುಹಿಸಿಕೊಡಲಾಗಿದೆ.      

ಗ್ಯಾಂಗ್‌ಸ್ಟರ್‌ ಟಿಲ್ಲು ತಾಜ್‌ಪುರಿ ಹತ್ಯೆ ಪ್ರಕರಣ ➤7 ಮಂದಿ ಪೊಲೀಸ್ ಸಿಬ್ಬಂದಿ ಅಮಾನತು.! Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕ ವಿಧಾನಸಭೆ ಚುನಾವಣೆ ➤ ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರ

(ನ್ಯೂಸ್ ಕಡಬ) newskadaba.com.ಬೆಂಗಳೂರು,  ಮೇ.9. ಹೈವೋಲ್ಟೇಜ್ ಪ್ರಚಾರದ ನಂತರ ಇದೀಗ ಕರ್ನಾಟಕದಲ್ಲಿ ಮತದಾನಕ್ಕೆ ಕಾಲ ಕೂಡಿಬಂದಿದ್ದು, 224 ಸದಸ್ಯ ಬಲದ ವಿಧಾನಸಭೆಗೆ ಬುಧವಾರ ಮತದಾನ ನಡೆಯಲಿದೆ. ಮತದಾನಕ್ಕೆ ಸಕಲ ಸಿದ್ಧತೆಗಳನ್ನು ಚುನಾವಣಾ ಆಯೋಗ ಮಾಡುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಈ ಚುನಾವಣೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳಾದ, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮತ್ತು ಸ್ವತಂತ್ರ ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ರಾಜ್ಯದಾದ್ಯಂತ 58,545 ಮತಗಟ್ಟೆಗಳಲ್ಲಿ ಮತ ಚಲಾವಣೆ ನಡೆಯಲಿದ್ದು,

ಕರ್ನಾಟಕ ವಿಧಾನಸಭೆ ಚುನಾವಣೆ ➤ ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರ Read More »

ಕರ್ನಾಟಕ

ಜೇನುನೊಣದ ದಾಳಿಗೆ ಹೆದರಿ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದ ವ್ಯಕ್ತಿ.! ➤ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)Newskadaba.com ಗುಜರಾತ್,ಮೇ.09 ಜೇನುನೊಣಗಳ ದಾಳಿಗೆ ಹೆದರಿದ ವ್ಯಕ್ತಿಯೊಬ್ಬರು ಗುಜರಾತ್ ನ ಖಾಂಡ್ವಾದ ಜಿಲ್ಲಾ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಸ್ಥಳದಲ್ಲೇ ಮೃತಟ್ಟಿದ್ದಾರೆ.ದುರಂತವೆಂದರೆ ಮೃತರ ಪತ್ನಿ ಅದೇ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳ ನಂತರ ಈ ಘಟನೆ ವರದಿಯಾಗಿದೆ. ಘಟನೆಯ ನಂತರ ಸಂತಸ ತುಂಬಿದ್ದ ಕುಟುಂಬದಲ್ಲಿ ಕತ್ತಲೆ ಕವಿದಿದೆ.ಮಾಹಿತಿ ಪ್ರಕಾರ ಮೃತರನ್ನು ಸಚಿನ್ ಸೋಲಂಕಿ ಎಂದು ಗುರುತಿಸಲಾಗಿದ್ದು ಅವರು ಖಾಂಡ್ವಾ ಜಿಲ್ಲೆಯ ಸಿಂಗೋಟ್‌ನ ರಾಂಪುರ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.    

ಜೇನುನೊಣದ ದಾಳಿಗೆ ಹೆದರಿ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದ ವ್ಯಕ್ತಿ.! ➤ಸ್ಥಳದಲ್ಲೇ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಮತ ಎಣಿಕಾ ಕೇಂದ್ರಕ್ಕೆ ಮೊಬೈಲ್, ಇ-ಗ್ಯಾಜೆಟ್‌ಗಳು ನಿಷೇಧ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.09. ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಧಿಸಿದಂತೆ ಮೇ.10ರಂದು ಚುನಾವಣೆ ನಡೆಯಲಿದ್ದು ಚುನಾವಣೆಯ ಮತ ಎಣಿಕೆ ಮೇ 13ರಂದು ಸುರತ್ಕಲ್‌ನಲ್ಲಿರು ಎನ್.ಐ.ಟಿ.ಕೆಯಲ್ಲಿ ನಡೆಯಲಿದೆ. ಮತ ಎಣಿಕೆಯ ದಿನದಂದು ಜನಪ್ರತಿನಿಧಿಗಳು, ಚುನಾವಣಾ ಎಂಜೆಟರುಗಳು, ಮತ ಎಣಿಕೆ ಎಂಜೆಟ್‌ಗಳು, ಮತ ಎಣಿಕೆ ಕೇಂದ್ರಕ್ಕೆ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾದ ಮೇಲ್ವಿಚಾರಕರು, ಸಹಾಯಕರು, ಗ್ರೂಪ್ ಡಿ ಸಿಬ್ಬಂದಿಗಳು ಮತ್ತು ಇನ್ನಿತರ ಎಲ್ಲಾ ಸಿಬ್ಬಂದಿಗಳು ಮತ ಎಣಿಕೆ ಕೇಂದ್ರದ ಆವರಣದೊಳಗೆ ಪ್ರವೇಶಿಸುವಾಗ ಮೊಬೈಲ್, ಎಲೆಕ್ಟಾçನಿಕ್ಸ್ ವಾಚ್, ಮತ್ತು ಇನ್ನಿತರೇ ಡಿಜಿಟಲ್

ಮಂಗಳೂರು: ಮತ ಎಣಿಕಾ ಕೇಂದ್ರಕ್ಕೆ ಮೊಬೈಲ್, ಇ-ಗ್ಯಾಜೆಟ್‌ಗಳು ನಿಷೇಧ Read More »

ಕರಾವಳಿ

ಮಂಗಳೂರು: (ನಾಳೆ)ಮೇ.10ರಂದು ಸಾರ್ವತ್ರಿಕ ಚುನಾವಣೆ ಹಿನ್ನೆಲೆ ರಜೆ ಘೋಷಣೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.09. ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ, ಮತದಾರರು ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ, ಮೇ.10ರ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳು, ಶಾಲೆಗಳು, ಕಾಲೇಜುಗಳು, ವಿವಿಧ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳಿಗೆ (ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳು) ಮೇ.10ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು ಡಿಪಿಎಆರ್‌ನ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಮಂಗಳೂರು: (ನಾಳೆ)ಮೇ.10ರಂದು ಸಾರ್ವತ್ರಿಕ ಚುನಾವಣೆ ಹಿನ್ನೆಲೆ ರಜೆ ಘೋಷಣೆ Read More »

ಕರಾವಳಿ

ರಾಜ್ಯಕ್ಕೆ ‘ಟಾಪರ್’ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿನಿ.! ➤ ಅನುಪಮಾ

(ನ್ಯೂಸ್ ಕಡಬ)Newskadaba.com ಬೆಳಗಾವಿ,ಮೇ.09 ಟಾಪ್ 3 ಜಿಲ್ಲೆಗಳಲ್ಲಿ ಚಿತ್ರದುರ್ಗ ಮೊದಲ ಸ್ಥಾನದಲ್ಲಿದ್ದು, ನಂತರದ ಸ್ಥಾನದಲ್ಲಿ ಮಂಡ್ಯ ಹಾಗೂ ಹಾಸನ ಜಿಲ್ಲೆ ಇದೆ.ಹಲವು ವಿದ್ಯಾರ್ಥಿಗಳು ಅಂಕ ಗಳಿಕೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ಈ ಪೈಕಿ ಬೆಳಗಾವಿ ಜಿಲ್ಲೆ ಸವದತ್ತಿಯ ಅನುಪಮಾ ಕೂಡ ಒಬ್ಬರು.ಕಿತ್ತು ತಿನ್ನುವ ಬಡತನ ಹಾಗೂ ತಂದೆ ಕಳೆದುಕೊಂಡ ನೋವಿನಲ್ಲೂ ಅನುಪಮಾ 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಟಾಪರ್ ಆಗಿದ್ದಾರೆ. ಸವದತ್ತಿಯ ಎಲ್ಲಮ್ಮ ದೇವಿ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಅನುಪಮಾ ತಂದೆ ಕಳೆದ ವರ್ಷ ನಿಧನರಾಗಿದ್ದು,

ರಾಜ್ಯಕ್ಕೆ ‘ಟಾಪರ್’ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿನಿ.! ➤ ಅನುಪಮಾ Read More »

ಕರ್ನಾಟಕ

2023 ರಾಜ್ಯ ವಿಧಾನಸಭೆ ಚುನಾವಣೆ ➤ಮತದಾನದ ದಿನ ವಿಶೇಷ ರೈಲು, ಹೆಚ್ಚುವರಿ ಕೋಚ್ ಅಳವಡಿಕೆ!

(ನ್ಯೂಸ್ ಕಡಬ) newskadaba.com.ಬೆಂಗಳೂರು,  ಮೇ.6. ರಾಜ್ಯದಲ್ಲಿ ಮೇ.10 ರಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ದಿನವಾದ ಬುಧವಾರ ವಿಶೇಷ ರೈಲು ಹಾಗೂ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಬೆಂಗಳೂರು-ಬೆಳಗಾವಿ, ಬೆಂಗಳೂರು-ಬೀದರ್, ಬೆಂಗಳೂರು (ಯಶವಂತಪುರ) -ಮುರುಡೇಶ್ವರಕ್ಕೆ ವಿಶೇಷ ರೈಲು ಸಂಚರಿಸಲಿವೆ. ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಬೆಳಗಾವಿಗೆ ಒಂದು ರೈಲು ಸಂಚರಿಸಲಿದೆ. ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಮೇ 9ರಂದು 8.30ಕ್ಕೆ ಹೊರಡಲಿದ್ದು, ಮೇ 10ರಂದು ಬೆಳಗ್ಗೆ 8.20ಕ್ಕೆ ಬೆಳಗಾವಿ ತಲುಪಲಿದೆ. ಮೇ 10ರ

2023 ರಾಜ್ಯ ವಿಧಾನಸಭೆ ಚುನಾವಣೆ ➤ಮತದಾನದ ದಿನ ವಿಶೇಷ ರೈಲು, ಹೆಚ್ಚುವರಿ ಕೋಚ್ ಅಳವಡಿಕೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದತ್ತು ಪುತ್ರಿಗೆ ಸಿಗರೇಟಿನಿಂದ ಸುಟ್ಟು ಕಿರುಕುಳ ➤ ವೈದ್ಯ ದಂಪತಿಗಳಿಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com ಅಸ್ಸಾಂ, ಮೇ.09. ಐದು ವರ್ಷದ ದತ್ತು ಮಗಳನ್ನು ಟೆರೇಸಿನ ಮೇಲೆ ಸುಡು ಬಿಸಿಲಿನಲ್ಲಿ ಕಟ್ಟಿ ಹಾಕಿ ಸಿಗರೇಟಿನಿಂದ ಸುಟ್ಟು ಕಿರುಕುಳ ನೀಡಿದ ವೈದ್ಯ ದಂಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಅಸ್ಸಾಂನ ಪ್ರಮುಖ ಮನೋವೈದ್ಯ ಡಾ. ಸಂಗೀತಾ ದತ್ತಾ ಮತ್ತು ಅವರ ಪತಿ ಡಾ. ವಲಿಯುಲ್ ಇಸ್ಲಾಂ ಬಂಧಿತ ಆರೋಪಿಗಳಾಗಿದ್ದಾರೆ ಎಂದು ವರದಿ ತಿಳಿಸಿದೆ. ಪ್ರಕರಣದಲ್ಲಿ ಡಾ. ವಲಿಯುಲ್ ರನ್ನು ಬಂಧಿಸಿದ್ದರೆ ಆತನ ಪತ್ನಿ ತಲೆಮರೆಸಿಕೊಂಡಿದ್ದ ಸಂಗೀತಾ ಅವರನ್ನು ಮೇಘಾಲಯದ ರಿಬೋದಿಂದ ಬಂಧಿಸಲಾಗಿದೆ

ದತ್ತು ಪುತ್ರಿಗೆ ಸಿಗರೇಟಿನಿಂದ ಸುಟ್ಟು ಕಿರುಕುಳ ➤ ವೈದ್ಯ ದಂಪತಿಗಳಿಬ್ಬರು ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಸುಳ್ಯ: ಹೊಳೆಯಲ್ಲಿ ಮುಳುಗಿ ಸಹೋದರಿಯರಿಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಸುಳ್ಯ, ಮೇ.09. ಬಳ ಸಮೀಪದ ಕೇನ್ಯ ಕಟ್ಕಲ್ ಬಳಿಯ ಹೊಳೆಯಲ್ಲಿ ಮುಳುಗಿ ನೀರು ಪಾಲಾಗಿದ್ದು ಇಬ್ಬರ ಮೃತದೇಹ ವೂಸ ಹೋದರಿಯರಿಬ್ಬರು ಪತ್ತೆಯಾಗಿದೆ. ಈ ದುರ್ಘಟನೆ ಸಂಭವಿಸಿದೆ. ಮೂಲತಃ ಕಲ್ ನವರಾಗಿದ್ದು ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ (15) ಮತ್ತು ಅವಂತಿಕಾ (11) ಎಂಬ ಸಹೋದರಿಯರು ನೀರು ಪಾಲಾದರು ಎಂದು ವರದಿ ತಿಳಿಸಿದೆ. ಸಹೋದರಿಯರು ನೀರುಪಾಲಾದ ಸುದ್ದಿ ತಿಳಿದು ಆಗಮಿಸಿದ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿದ್ದು, ರಾತ್ರಿ

ಸುಳ್ಯ: ಹೊಳೆಯಲ್ಲಿ ಮುಳುಗಿ ಸಹೋದರಿಯರಿಬ್ಬರು ಮೃತ್ಯು Read More »

ಕರಾವಳಿ
Scroll to Top