News Kadaba

ಬಾಲಕಿ ಮೇಲೆ ಅತ್ಯಾಚಾರ ಯತ್ನ ➤ ಆರೋಪಿಗಳನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಮೇ.08. ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳಿಬ್ಬರನ್ನು ಗ್ರಾಮಸ್ಥರು ಹಿಡಿದು ಮರಕ್ಕೆ ಕಟ್ಟಿ ಥಳಿಸಿದ ಘಟನೆ ಪಿಲಿಭಿತ್ ಜಿಲ್ಲೆಯಲ್ಲಿ ನಡೆದಿದೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಸೆರಾಮೌ ಉತ್ತರ ಪೊಲೀಸ್ ವೃತ್ತದ ವ್ಯಾಪ್ತಿಯಲ್ಲಿರುವ ಹಳ್ಳಿಯಲ್ಲಿ 16 ವರ್ಷದ ಬಾಲಕಿಯ ಮೇಲೆ 22 ರಿಂದ 25 ವರ್ಷ ವಯಸ್ಸಿನ ಇಬ್ಬರು ಯುವಕರು ಅತ್ಯಾಚಾರ ಯತ್ನ ನಡೆಸಿದ್ದಾರೆ. ಸಂತ್ರಸ್ತೆಯ ಕಿರುಚಾಟ ಕೇಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಿಸಿದ್ದಾರೆ.  

ಬಾಲಕಿ ಮೇಲೆ ಅತ್ಯಾಚಾರ ಯತ್ನ ➤ ಆರೋಪಿಗಳನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು Read More »

ರಾಷ್ಟ್ರೀಯ ನ್ಯೂಸ್

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ.! ➤ರಾಜ್ಯದಲ್ಲಿ BJP ಅಲೆ ಸೃಷ್ಟಿಸಿದ ಮೋದಿ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.08 ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಒಟ್ಟು ಒಂದು ವಾರಗಳ ಕಾಲ ಕರ್ನಾಟಕದಲ್ಲಿ ಗಟ್ಟಿಯಾಗಿ ನಿಂತು ಬಿಜೆಪಿ ಪರ ಅಲೆ ಮೂಡಿಸುವಲ್ಲಿ ಯಶಸ್ವಿಯಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಪ್ರಚಾರ ಕಾರ್ಯ ಭಾನುವಾರ ಮುಕ್ತಾಯಗೊಂಡಿದೆ.ಬೆಂಗಳೂರಿನಲ್ಲಿ ನಡೆದ ಐತಿಹಾಸಿಕ ರೋಡ್‌ ಶೋ ಸೇರಿದಂತೆ ಒಟ್ಟು 27 ಕಾರ್ಯಕ್ರಮಗಳಲ್ಲಿ ಮೋದಿ ಭಾಗಿಯಾಗಿದ್ದಾರೆ.ಒಟ್ಟು 21ಸಭೆ ಹಾಗೂ 6 ರೋಡ್‌ ಶೋದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದಾರೆ. ಬೀದರ್‌ ಜಿಲ್ಲೆಯ ಹುಮ್ನಾಬಾದ್‌ನಲ್ಲಿ ಮೊದಲ ಕಾರ್ಯಕ್ರಮ ಆರಂಭವಾಗುವುದರೊಂದಿಗೆ ಕರ್ನಾಟಕದಲ್ಲಿ ಮೋದಿ ಹವಾ ಪ್ರಾರಂಭಗೊಂಡಿತು. ಇದರ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ.! ➤ರಾಜ್ಯದಲ್ಲಿ BJP ಅಲೆ ಸೃಷ್ಟಿಸಿದ ಮೋದಿ Read More »

ಕರ್ನಾಟಕ

ಸಾಲದ ವಿಚಾರವಾಗಿ ಪತಿಯೊಂದಿಗೆ ಗಲಾಟೆ.! ➤ಪತ್ನಿ ಆತ್ಮಹತ್ಯೆ

(ನ್ಯೂಸ್ ಕಡಬ)Newskadaba.com ಕಾರ್ಕಳ,ಮೇ.08 ಸ್ವಸಹಾಯ ಸಂಘದ ಸಾಲ ಕಟ್ಟುವ ವಿಚಾರಕ್ಕಾಗಿ ಪತಿಯೊಂದಿಗೆ ಜಗಳವಾಡಿದ ಪತ್ನಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಕಾರ್ಕಳ ಪತ್ತೊಂಜಿಕಟ್ಟೆ ಎಂಬಲ್ಲಿ ನಡೆದಿದೆ.ಮೃತರನ್ನು ಪತ್ತೊಂಜಿಕಟ್ಟೆ ನಿವಾಸಿ ಅಣ್ಣಪ್ಪ ಎಂಬವರ ಪತ್ನಿ ಪುಷ್ಪ (23) ಎಂದು ಗುರುತಿಸಲಾಗಿದೆ.ಗೇರುಬೀಜ ಸಿಪ್ಪೆ ತೆಗೆಯುವ ಕೆಲಸ ಮಾಡಿಕೊಂಡಿದ್ದ ಪುಷ್ಪಾ ಸ್ವಸಹಾಯ ಸಂಘದ ಸಾಲ ಕಟ್ಟುವ ಬಗ್ಗೆ ಪತಿಯೊಂದಿಗೆ ಚರ್ಚೆ ಮಾಡಿದ್ದು, ಬೆಳಗ್ಗೆ ಹಣದ ವ್ಯವಸ್ಥೆ ಮಾಡುವುದಾಗಿ ಪತಿ ಹೇಳಿದ್ದರು. ಆದರೆ ಪುಷ್ಪಾ ಈಗಲೇ ಹಣ ಬೇಕೆಂದು ಹೇಳಿ ಅವರೊಳಗೆ

ಸಾಲದ ವಿಚಾರವಾಗಿ ಪತಿಯೊಂದಿಗೆ ಗಲಾಟೆ.! ➤ಪತ್ನಿ ಆತ್ಮಹತ್ಯೆ Read More »

ಕರ್ನಾಟಕ

ಸೆಕ್ಯುರಿಟಿ ಗಾರ್ಡ್ ಮೇಲೆ ಸನ್ಯಾಸಿಯಿಂದ ಲೈಂಗಿಕ ಕಿರುಕುಳ

(ನ್ಯೂಸ್ ಕಡಬ)newskadaba.com ಪಶ್ಚಿಮ ಬಂಗಾಳ, ಮೇ.08. ಮಾಯಾಪುರದಲ್ಲಿ ಇಸ್ಕಾನ್‌ನ ಪುರುಷ ಭದ್ರತಾ ಸಿಬ್ಬಂದಿ ಮೇಲೆ ಸನ್ಯಾಸಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಈಗಾಗಲೇ ಇಸ್ಕಾನ್ ದೇವಾಲಯದ ಮಹಾರಾಜ್ ಜಗಧಾತ್ರಿ ದಾಸ್ ವಿರುದ್ಧ ನವದ್ವೀಪ್ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಾಗಿದೆ. ಆರೋಪಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ, ಆರೋಪಿ ತಲೆಮರೆಸಿಕೊಂಡಿದ್ದಾನೆ. ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾನಿ ಪಾಲ್ ತಿಳಿಸಿದ್ದಾರೆ.

ಸೆಕ್ಯುರಿಟಿ ಗಾರ್ಡ್ ಮೇಲೆ ಸನ್ಯಾಸಿಯಿಂದ ಲೈಂಗಿಕ ಕಿರುಕುಳ Read More »

ರಾಷ್ಟ್ರೀಯ ನ್ಯೂಸ್

 ಈ ಬಾರಿ ಚುನಾವಣೆಯಲ್ಲಿ ದ.ಕ. ಜಿಲ್ಲೆಯ ಎಂಟು ಕ್ಷೇತ್ರಗಳೂ ಕಾಂಗ್ರೆಸ್ ಪಾಲಾಗುವುದು ಖಚಿತ.! ➤ ಫಾರೂಕ್ ಉಳ್ಳಾಲ್

(ನ್ಯೂಸ್ ಕಡಬ)Newskadaba.com ಮಂಗಳೂರು,ಮೇ.08 ಅಗತ್ಯ ವಸ್ತುಗಳ ಬೆಲೆಯೇರಿಕೆ ಮತ್ತು ಭ್ರಷ್ಟಾಚಾರವನ್ನು ಮೂಲದೇಯ್ಯವನ್ನಾಗಿ ರಾಜ್ಯದ ಬೊಕ್ಕಸ ಬರಿದಾಗಿಸಿರುವ ಬಿಜೆಪಿ ಸರಕಾರದ ವಿರುದ್ಧ ಜನಾಕ್ರೋಶ ದ.ಕ. ಜಿಲ್ಲೆಯ ಉದ್ದಗಲಕ್ಕೂ ಎದ್ದು ಕಾಣುತ್ತಿವೆ. ಆದ್ದರಿಂದ ಈ ಬಾರಿ ಚುನಾವಣೆಯಲ್ಲಿ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ‌. ಉಳ್ಳಾಲದಲ್ಲಂತೂ ಯು.ಟಿ.ಖಾದರ್ ಅಭೂತಪೂರ್ವ ದಾಖಲೆಯೊಂದಿಗೆ ಗೆದ್ದು ಬರಲಿದ್ದಾರೆ ಎಂದು ಕೆ.ಪಿ.ಸಿ.ಸಿ ಸಂಯೋಜಕ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಉಸ್ತುವಾರಿ ಫಾರೂಕ್ ಉಳ್ಳಾಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 ಈ ಬಾರಿ ಚುನಾವಣೆಯಲ್ಲಿ ದ.ಕ. ಜಿಲ್ಲೆಯ ಎಂಟು ಕ್ಷೇತ್ರಗಳೂ ಕಾಂಗ್ರೆಸ್ ಪಾಲಾಗುವುದು ಖಚಿತ.! ➤ ಫಾರೂಕ್ ಉಳ್ಳಾಲ್ Read More »

ಕರಾವಳಿ

ಮೋಚಾ ಚಂಡಮಾರುತ ಹಿನ್ನೆಲೆ   ➤ ಸಮುದ್ರ ಕಡೆ ತೆರಳದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ..!

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.08 ಚಂಡಮಾರುತದ ಚಲನೆಯಿಂದಾಗಿ ಬಂಗಾಳಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಪ್ರಕ್ಷುಬ್ಧತೆ ಉಂಟಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಪ್ರಕಾರ, ಸಮುದ್ರದಲ್ಲಿ ಚಂಡಮಾರುತ ಚಲನೆಯಿಂದಾಗಿ, ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ನಿರೀಕ್ಷೆಯಿದೆ.ಪಶ್ಚಿಮ ಬಂಗಾಳದಲ್ಲಿ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತ ಪರಿಣಾಮ ಸಮೀಪದ ರಾಜ್ಯಗಳಲ್ಲಿ ಕಾಣಬಹುದು ಎಂದು ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಈ ರಾಜ್ಯಗಳಲ್ಲಿ ಸಾಧಾರಣ ಮಳೆಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರಿಗೆ

ಮೋಚಾ ಚಂಡಮಾರುತ ಹಿನ್ನೆಲೆ   ➤ ಸಮುದ್ರ ಕಡೆ ತೆರಳದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ..! Read More »

ರಾಷ್ಟ್ರೀಯ ನ್ಯೂಸ್

ಐದು ಕೆಜಿ ಐಇಡಿ ಹೊಂದಿದ್ದ ಉಗ್ರನ ಬಂಧನ ➤ ತಪ್ಪಿದ ದೊಡ್ಡ ದುರಂತ

(ನ್ಯೂಸ್ ಕಡಬ)newskadaba.com ಶ್ರೀನಗರ, ಮೇ.08. ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ 5 ಕೆಜಿ ಸುಧಾರಿತ ಸ್ಫೋಟಕ ಸಾಧನದೊಂದಿಗೆ (ಐಇಡಿ) ಉಗ್ರನೊಬ್ಬನನ್ನು ಬಂಧಿಸಿ ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕಾಶ್ಮೀರ ವಲಯ ಪೊಲೀಸರು, ಪುಲ್ವಾಮಾ ಪೊಲೀಸರು ಭಯೋತ್ಪಾದಕ ಸಹಚರ ಇಶ್ಫಾಕ್ ಅಹ್ಮದ್ ವಾನಿ ಅನ್ನು ಬಂಧಿಸುವ ಮತ್ತು ಐಇಡಿ (ಸುಮಾರು 5-6 ಕೆಜಿ) ವಶಪಡಿಸಿಕೊಳ್ಳುವ ಮೂಲಕ ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.  

ಐದು ಕೆಜಿ ಐಇಡಿ ಹೊಂದಿದ್ದ ಉಗ್ರನ ಬಂಧನ ➤ ತಪ್ಪಿದ ದೊಡ್ಡ ದುರಂತ Read More »

ರಾಷ್ಟ್ರೀಯ ನ್ಯೂಸ್

ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ ➤ ಇಂದು(ಮೇ.8)ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.08. ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಮೇ.08 ರಿಂದ 12ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮೋಚಾ ಚಂಡಮಾರುತ ರೂಪುಗೊಳ್ಳುತ್ತಿದ್ದು, ಮೇ 08ರಂದು ಇದು ತೀವ್ರ ಸ್ವರೂಪ ಪಡೆದುಕೊಳ್ಳಲಿದ್ದು, ಈ ಹಿನ್ನೆಲೆ ಮೇ.09 ಮತ್ತು 10ರಂದು ಭಾರೀ ಮಳೆಯಾಗಬಹುದು. ಮೇ 10ರಂದು ಮತದಾನಕ್ಕೆ ತೆರಳುವವರಿಗೆ ಮಳೆಯಿಂದ ಸಮಸ್ಯೆ ಉಂಟಾಗಬಹುದು. ಇನ್ನು, ಇಂದು ರಾಜ್ಯದ ವಿವಿಧೆಡೆ

ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ ➤ ಇಂದು(ಮೇ.8)ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ Read More »

ಕರ್ನಾಟಕ

ಮೇ. 12 ರವರೆಗೆ ಗೋ ಫಸ್ಟ್ ವಿಮಾನ ಸೇವೆ ಸ್ಥಗಿತ

(ನ್ಯೂಸ್ ಕಡಬ)newskadaba.com ಮುಂಬೈ, ಮೇ.08. ಹಣಕಾಸು ಬಿಕ್ಕಟ್ಟಿನ ಕಾರಣ ‘ಗೋ ಫಸ್ಟ್’ ವಿಮಾನಯಾನ ಕಂಪನಿಯು ಮೇ. 12ರವರೆಗೆ ತನ್ನ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ತಿಳಿಸಿದೆ. ಕಾರ್ಯಾಚರಣೆಯ ಕಾರಣಗಳಿಂದಾಗಿ 2023 ರ ಮೇ 12 ರವರೆಗೆ ನಿಗದಿಯಾಗಿದ್ದ ಎಲ್ಲಾ ಗೋ ಫಸ್ಟ್ ವಿಮಾನಗಳ ಸೇವೆಯನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಟ್ವೀಟ್‌ನಲ್ಲಿ ತಿಳಿಸಿದೆ.

ಮೇ. 12 ರವರೆಗೆ ಗೋ ಫಸ್ಟ್ ವಿಮಾನ ಸೇವೆ ಸ್ಥಗಿತ Read More »

ರಾಷ್ಟ್ರೀಯ ನ್ಯೂಸ್

ನಾಪತ್ತೆಯಾಗಿದ್ದ ಸುಳ್ಯದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಮೇ.08. ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಗೆ ಸ್ನೇಹಿತರೊಂದಿಗೆ ಜಲ ಕ್ರೀಡೆಯಾಡಲೆಂದು ಹೋಗಿ ನಾಪತ್ತೆಯಾಗಿದ್ದ ಸುಳ್ಯದ ಯುವಕನ ಮೃತದೇಹ ಪತ್ತೆಯಾಗಿದೆ. ಸುಳ್ಯದ ನಿವಾಸಿ ಸುಹಾಸ್ ಎಂ (21) ಮೃತ ಯುವಕ ಎಂದು ತಿಳಿದುಬಂದಿದೆ. ಸುಹಾಸ್ ಮೃತದೇಹ ಮುಳುಗಿದ ಸ್ಥಳದಿಂದ ಸುಮಾರು 200 ಮೀಟರ್ ದೂರದಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಕೋಟ ಪೊಲೀಸರು ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ನಾಪತ್ತೆಯಾಗಿದ್ದ ಸುಳ್ಯದ ಯುವಕನ ಮೃತದೇಹ ನದಿಯಲ್ಲಿ ಪತ್ತೆ Read More »

ಕರಾವಳಿ
Scroll to Top