News Kadaba

RSS ಹಿರಿಯ ಮುಖಂಡ ಸತೀಶ್ ಪ್ರಭು ಕಾಂಗ್ರೆಸ್ ಸೇರ್ಪಡೆ!!

(ನ್ಯೂಸ್ ಕಡಬ)Newskadaba.com ಮಂಗಳೂರು,ಮೇ.08 ಮಂಗಳೂರಿನ ಆರ್ಎಸ್ಎಸ್ ಹಿರಿಯ ಮುಖಂಡ ಸತೀಶ್ ಪ್ರಭು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿ, ಆರ್ಎಸ್ಎಸ್ನಲ್ಲಿ 32 ವರ್ಷಗಳಿಂದ ವಿವಿಧ ಜವಾಬ್ದಾರಿ ವಹಿಸಿಕೊಂಡಿದ್ದ ಸತೀಶ್ ಪ್ರಭು 2014ರಲ್ಲಿ ಮೋದಿ ಅವರನ್ನು ಮಂಗಳೂರಿಗೆ ಕರೆಸಿ ಪಕ್ಷ ಸಂಘಟಿಸಿದ್ದರು. ಆದರಲ್ಲಿ ಇದೀಗ ಈಗಿನ ಬಿಜೆಪಿಯಿಂದ ಜನಹಿತ ಸಾಧ್ಯವಿಲ್ಲ ಎಂದು ಹೇಳಿ ಸತೀಶ್ ಪ್ರಭು ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಮಂಗಳೂರಿನಲ್ಲಿ ನಿರ್ಣಾಯಕ ಆಗಿರುವ ಜಿಎಸ್ಬಿ ಸಮುದಾಯಕ್ಕೆ ಸೇರಿದ ಸತೀಶ್ ಪ್ರಭು ಅವರು ನಾಲ್ವರು ಮಾಜಿ ಕಾರ್ಪೊರೇಟರ್ಗಳ ಜೊತೆ ಕಾಂಗ್ರೆಸ್ ಕಚೇರಿಯಲ್ಲಿ […]

RSS ಹಿರಿಯ ಮುಖಂಡ ಸತೀಶ್ ಪ್ರಭು ಕಾಂಗ್ರೆಸ್ ಸೇರ್ಪಡೆ!! Read More »

ಕರಾವಳಿ

ಬೆಳ್ತಂಗಡಿ: ರಸ್ತೆ ಬದಿಯ ಬರೆಗೆ ಖಾಸಗಿ ಬಸ್ ಢಿಕ್ಕಿ !!! ➤ ಮಹಿಳೆ ಮೃತ್ಯು, ಐವರು ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ, 08. ಖಾಸಗಿ ಬಸ್ಸೊಂದು ರಸ್ತೆ ಬದಿಯ ಬರೆಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ಐವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ನಾವೂರು ಬಳಿ ನಡೆದಿದೆ. ಮೃತರನ್ನು ಇಂದಬೆಟ್ಟು ಗ್ರಾಮದ ಸುಂದರಿ (60) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಐವರು ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಬೆಳ್ತಂಗಡಿ: ರಸ್ತೆ ಬದಿಯ ಬರೆಗೆ ಖಾಸಗಿ ಬಸ್ ಢಿಕ್ಕಿ !!! ➤ ಮಹಿಳೆ ಮೃತ್ಯು, ಐವರು ಪ್ರಯಾಣಿಕರಿಗೆ ಗಾಯ Read More »

ಕರಾವಳಿ

SSLC ಫಲಿತಾಂಶ ಪ್ರಕಟ !!! ➤ ಚಿತ್ರದುರ್ಗ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡಕ್ಕೆ 19ನೇ ಸ್ಥಾನ

(ನ್ಯೂಸ್ ಕಡಬ)newskadaba.com ದಕ್ಷಿಣ ಕನ್ನಡ, ಮೇ.08.  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಮೇ.8 ರಂದು) ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿ ಶೇ. 83.89 ರಷು ಫಲಿತಾಂಶ ಬಂದಿದೆ. ಒಟ್ಟು 7 ಲಕ್ಷದ 619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಬಾಲಕರು ಶೇ. 80.08 ರಷ್ಟು ಉತ್ತೀರ್ಣರಾಗಿದ್ದಾರೆ. ಶೇಕಡಾ 87.87 ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ ಶೇ.96 ದೊಂದಿಗೆ ಈ ಬಾರಿ ಎಸ್‌ ಎಸ್‌ ಎಲ್‌ ಫಲಿತಾಂಶದಲ್ಲಿ

SSLC ಫಲಿತಾಂಶ ಪ್ರಕಟ !!! ➤ ಚಿತ್ರದುರ್ಗ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡಕ್ಕೆ 19ನೇ ಸ್ಥಾನ Read More »

ಕರಾವಳಿ

14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆ ಮೃತ್ಯು..

 (ನ್ಯೂಸ್ ಕಡಬ) newskadaba.com.ಮೈಸೂರು, ಮೇ.8.  ನಾಡಹಬ್ಬ ದಸರಾದ ಜಂಬೂ ಸವಾರಿ ಮೆರವಣಿಗೆಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ದಾಖಲೆ ನಿರ್ಮಿಸಿದ್ದ 67 ವರ್ಷದ ಬಲರಾಮ ಆನೆ ಭಾನುವಾರ ಸಂಜೆ ಅನಾರೋಗ್ಯದಿಂದ ಸಾವನ್ನಪ್ಪಿದೆ. ಅತ್ಯಂತ ಸೌಮ್ಯ ಸ್ವಭಾವದ ಬಲರಾಮ ಆನೆ, ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಹುಣಸೂರು ಅರಣ್ಯ ವ್ಯಾಪ್ತಿಯ ಹನಗೂಡು ಬಳಿಯ ಭೀಮನಕಟ್ಟೆ ಬಳಿಯ ಅರಣ್ಯ ಶಿಬಿರದಲ್ಲಿ ಆರೈಕೆ ಮಾಡಲಾಗುತ್ತಿತ್ತು, ಹಲವು ದಿನಗಳಿಂದ ಆಹಾರ ನೀರನ್ನು ಸೇವಿಸಿದರೂ ವಾಂತಿ ಮಾಡುತ್ತಿರುವುದಾಗಿ ಕಾವಾಡಿ ತಿಳಿಸಿದ ಮೇರೆಗೆ ಪಶುವೈದ್ಯಾಧಿಕಾರಿಗಳು ಬಲರಾಮನನ್ನು

14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆ ಮೃತ್ಯು.. Read More »

ಕರ್ನಾಟಕ

ಕೊಡಗಿನ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com  ಕೊಡಗು, ಮೇ.08. ಕೊಡಗಿನ ನಿವಾಸಿ ಯುವಕನೋರ್ವ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸೋಮವಾರಪೇಟೆ ಕಿರಗಂದೂರುವಿನ ರುಕ್ಮಿಣಿ ಹಾಗೂ ಶಿವಪ್ಪ ಅವರ ಪುತ್ರ ಜಿತಿನ್‌ (22) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ವರದಿ ತಿಳಿಸಿದೆ. ಜಿತಿನ್ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.  

ಕೊಡಗಿನ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ Read More »

ಕರ್ನಾಟಕ

ಯುವತಿಯೋರ್ವಳ ಬರ್ಬರ ಹತ್ಯೆ ! ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ)newskadaba.com  ತ್ರಿಶೂರು, ಏ. 08. ಯುವತಿಯನ್ನು ಬರ್ಬರವಾಗಿ ಕೊಲೆ‌ ಮಾಡಿ ಮೃತದೇಹವನ್ನು ಕಾಡಿನಲ್ಲಿ ಎಸೆದಿರುವ ಘಟನೆ ಕೇರಳದಲ್ಲಿ ನಡೆದಿದೆ. 26 ವರ್ಷದ ಮಹಿಳೆ ಅಥಿರಾಗೆ ಕೊಲೆ‌ ಮಾಡಿ ತ್ರಿಸ್ಸೂರ್ ಜಿಲ್ಲೆಯ ಚಾಲಾಕುಡಿಯ ತುಂಬುರ್ ಮೂಜಿ ಕಾಡಿನಲ್ಲಿ ಎಸೆಯಲಾಗಿದೆ ಎಂದು ವರದಿ ತಿಳಿಸಿದೆ.  

ಯುವತಿಯೋರ್ವಳ ಬರ್ಬರ ಹತ್ಯೆ ! ➤ ಓರ್ವ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಕಾಂಗ್ರೆಸ್ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ➤ ಎಸ್ಡಿ ಪಿಐ ಕಾರ್ಯಕರ್ತನ ಬಂಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.08. ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್‍ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್ ರ್ಯಾಲಿ ವೇಳೆ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ಸಮೀಪ ಸಂಭವಿಸಿದೆ. ಕಾಂಗ್ರೆಸ್ ಕಾರ್ಯಕರ್ತ ನೌಫಾಲ್ (35) ಹಲ್ಲೆಗೊಳಗಾದವರು ಎಂದು ವರದಿ ತಿಳಿಸಿದೆ. ನಾಟೆಕಲ್ ಸಮೀಪ ಅಸೈಗೋಳಿಯಿಂದ ಚೆಂಬುಗುಡ್ಡೆ ಸಾರ್ವಜನಿಕ ಸಭೆಗೆ ತೆರಳುತ್ತಿದ್ದ ಕಾಂಗ್ರೆಸ್ ಪ್ರಚಾರದ ವಾಹನ ಎಸ್ ಡಿಪಿಐ ಅವರ ರ್ಯಾಲಿಗೆ ನಾಟೆಕಲ್ ಸಮೀಪ ಎದುರಾಗಿತ್ತು.

ಉಳ್ಳಾಲ: ಕಾಂಗ್ರೆಸ್ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ➤ ಎಸ್ಡಿ ಪಿಐ ಕಾರ್ಯಕರ್ತನ ಬಂಧನ Read More »

ಕರಾವಳಿ

ಹೌಸ್ ಬೋಟ್ ಮುಳುಗಡೆ..! ➤ ಮಕ್ಕಳು ಸೇರಿ 21 ಮಂದಿ ಮೃತ್ಯು

(ನ್ಯೂಸ್ ಕಡಬ)Newskadaba.com ಕೇರಳ,ಮೇ.08  ಕೇರಳದ ಮಲಪ್ಪುರಂ ಜಿಲ್ಲೆಯ ತನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಸುಮಾರು 30 ಪ್ರಯಾಣಿಕರಿದ್ದ ಹೌಸ್ ಬೋಟ್ ಪಲ್ಟಿಯಾಗಿ ಮುಳುಗಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 20 ಮಂದಿ ಮೃತ ಪಟ್ಟಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತನೂರ್ ಕರಾವಳಿ ಬಳಿ ಪ್ರವಾಸಿ ದೋಣಿ ಮಗುಚಿ ಬಿದ್ದಿದೆ.ಈ ಘಟನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ. ದೋಣಿಯಲ್ಲಿದ್ದವರೆಲ್ಲರೂ ಪ್ರವಾಸಿಗರಾಗಿದ್ದಾರೆ.ಇದುವರೆಗೆ 21 ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಹೌಸ್ ಬೋಟ್ ಮುಳುಗಡೆ..! ➤ ಮಕ್ಕಳು ಸೇರಿ 21 ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ನಟ ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣ: ನಿರ್ದೇಶಕ ರಮೇಶ್ ಕಿಟ್ಟಿ ಅರೆಸ್ಟ್

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.6. ನಟ ಸುದೀಪ್​ಗೆ ಬೆದರಿಕೆ ಪತ್ರಗಳನ್ನು ಕಳುಹಿಸಿ ಬೆದರಿಕೆಯೊಡ್ಡಿದ ಪ್ರಕರಣದಲ್ಲಿ ನಿರ್ದೇಶಕ ರಮೇಶ್ ಕಿಟ್ಟಿ ಎಂಬುವವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೆಲ ಕಾಲ ಸುದೀಪ್ ಆಪ್ತವಲಯದಲ್ಲಿದ್ದ ಆರೋಪಿ, ಕಿಚ್ಚ ಸುದೀಪ್ ಚಾರಿಟಬಲ್‌ ಟ್ರಸ್ಟ್ ಅಧ್ಯಕ್ಷನಾಗಿಯೂ ಕೆಲಸ ನಿರ್ವಹಿಸಿದ್ದರು. ಆದರೆ, ನಂತರದ ದಿನಗಳಲ್ಲಿ ಹಣಕಾಸು ವಿಚಾರವಾಗಿ ಅವರಿಬ್ಬರ ಮಧ್ಯೆ ವೈಷಮ್ಯ ಉಂಟಾಗಿತ್ತು. ಈ ಕಾರಣಕ್ಕೆ ದೂರವಾಗಿದ್ದ ರಮೇಶ್​​, ಸುದೀಪ್ ಅವರಿಗೆ ಬೆದರಿಕೆ ಪತ್ರ ಕಳುಹಿಸಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಪ್ರಕರಣದ

ನಟ ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣ: ನಿರ್ದೇಶಕ ರಮೇಶ್ ಕಿಟ್ಟಿ ಅರೆಸ್ಟ್ Read More »

ಕರ್ನಾಟಕ

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಗೆ ಕಡಿದ ಚೇಳು

(ನ್ಯೂಸ್ ಕಡಬ) newskadaba.com. ಹೊಸದಿಲ್ಲಿ, ಮೇ.6. ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಚೇಳು ಕಡಿದ ಅಪರೂಪದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಾಗಪುರದಿಂದ ಮುಂಬಯಿಗೆ ಕಳೆದ ತಿಂಗಳು ಏರ್ ಇಂಡಿಯಾ ವಿಮಾನದಲ್ಲಿ ಈ ಘಟನೆ ನಡೆದಿದೆ. ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯುತ್ತಿದ್ದಂತೆಯೇ ಮಹಿಳೆಗೆ ವೈದ್ಯರೊಬ್ಬರಿಂದ ಚಿಕಿತ್ಸೆ ಕೊಡಲಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಅಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಅವರು ಚೇತರಿಸಿಕೊಂಡಿದ್ದು ಬಿಡುಗಡೆ ಮಾಡಲಾಗಿದೆ ಎಂದು ಏರ್ ಇಂಡಿಯಾ ಸಂಸ್ಥೆ  ಹೇಳಿಕೆ ನೀಡಿದೆ.

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಗೆ ಕಡಿದ ಚೇಳು Read More »

ರಾಷ್ಟ್ರೀಯ ನ್ಯೂಸ್
Scroll to Top