News Kadaba

➤ಹಜ್‌ ಯಾತ್ರೆಗೆ ಮಂಗಳೂರಿನಿಂದ ನೇರ ವಿಮಾನ ಯಾನ ರದ್ದು

(ನ್ಯೂಸ್ ಕಡಬ) newskadaba.com. ಮಂಗಳೂರು, ಮೇ.6.  ಪ್ರಸಕ್ತ ಸಾಲಿನ ಪವಿತ್ರ ಹಜ್‌ ಯಾತ್ರೆಗಾಗಿ ಮಂಗಳೂರು ವಿಮಾನ ನಿಲ್ದಾಣದಿಂದ ನೇರ ಪ್ರಯಾಣ ಅವಕಾಶವನ್ನು ರದ್ದುಪಡಿಸಲಾಗಿದೆ. ಕೋವಿಡ್‌ ಸಾಂಕ್ರಾಮಿಕದ ಬಳಿಕ ಮತ್ತೆ ಮಂಗಳೂರು ವಿಮಾನ ನಿಲ್ದಾಣದಿಂದ ಹಜ್‌ ಯಾತ್ರೆಗೆ ತೆರಳಲು ಯಾತ್ರಿಗಳಿಗೆ ಅವಕಾಶ ಕಲ್ಪಿಸ ಲಾಗಿತ್ತು. ಹಜ್‌ ಯಾತ್ರೆಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿಯೂ ಯಾತ್ರಿ ಗಳಿಗೆ ತಮ್ಮ ಅನುಕೂಲಕ್ಕೆ ತಕ್ಕಂತೆ ವಿಮಾನ ಹತ್ತುವ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿತ್ತು. ಭಾರತೀಯ ಹಜ್‌ ಸಮಿತಿಯು ದೇಶದ ಹಲವಾರು ರಾಜ್ಯ ಗಳಲ್ಲಿನ ವಿಮಾನ ಹತ್ತುವ ಕೇಂದಗಳನ್ನು […]

➤ಹಜ್‌ ಯಾತ್ರೆಗೆ ಮಂಗಳೂರಿನಿಂದ ನೇರ ವಿಮಾನ ಯಾನ ರದ್ದು Read More »

ಕರಾವಳಿ, ಕರ್ನಾಟಕ

ವಿಜಯಪುರ ರೌಡಿಶೀಟರ್ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com.ವಿಜಯಪುರ , ಮೇ.6. ರೌಡಿಶೀಟರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ನಗರದಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಗುಂಡಿನ ದಾಳಿಯಲ್ಲಿ ರೌಡಿಶೀಟರ್​ ಸಾವನ್ನಪ್ಪಿದ್ದಾನೆ. ನಗರದ ಚಾಂದಪುರ ಕಾಲೋನಿಯಲ್ಲಿ ಘಟನೆ ನಡೆದಿದೆ. ರೌಡಿಶೀಟರ್​ ಹೈದರ್ ಅಲಿ ನದಾಫ್ಮೇ ಲೆ ಫೈರಿಂಗ್ ನಡೆದಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹತ್ಯೆ ಮಾಡಿರುವ ದುಷ್ಕರ್ಮಿಗಳು ಸ್ಥಳದಿಂದ ಪರಾರಿ ಆಗಿದ್ದಾರೆ. ಮೃತ ಹೈದರ್​ ಅಲಿ ನಧಾಪ್ ಪತ್ನಿ ನಿಶಾತ್ ನದಾಫ್ ಅವರು ಪಾಲಿಕೆ ಸದಸ್ಯೆ ಆಗಿದ್ದಾರೆ.

ವಿಜಯಪುರ ರೌಡಿಶೀಟರ್ ಮೇಲೆ ಗುಂಡಿನ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ನಾಳೆ ಕರಾವಳಿಗೆ ಪ್ರಿಯಾಂಕಾ ಗಾಂಧಿ ಆಗಮನ

 (ನ್ಯೂಸ್ ಕಡಬ) newskadaba.com. ಮಂಗಳೂರು, ಮೇ.6. ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿಗೆ ಮೇ 7ರಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ  ಆಗಮಿಸಲಿದ್ದಾರೆ.  ಅವರು ಮುಲ್ಕಿ ಕೊಲ್ನಾಡು ಮೈದಾನದಲ್ಲಿ  ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಮೂಡಬಿದ್ರೆ ಕ್ಷೇತ್ರ, ಕಾಪು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 50 ಸಾವಿರ ಮಂದಿ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

ಮಂಗಳೂರು: ನಾಳೆ ಕರಾವಳಿಗೆ ಪ್ರಿಯಾಂಕಾ ಗಾಂಧಿ ಆಗಮನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಾರಾಮುಲ್ಲಾದಲ್ಲೂ ಎನ್‌ಕೌಂಟರ್ ➤ ಓರ್ವ ಭಯೋತ್ಪಾದಕ ಹತ್ಯೆ

(ನ್ಯೂಸ್ ಕಡಬ) newskadaba.com. ಜಮ್ಮುಕಾಶ್ಮೀರ,ಮೇ.6.  ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ದಾಳಿ ನಡೆಯುತ್ತಿದೆ. ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಶನಿವಾರ ಮುಂಜಾನೆ ಆರಂಭವಾದ ಬಾರಾಮುಲ್ಲಾ ದ ಕರ್ಹಾಮಾ ಕುಂಜರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ದಾಳಿ ಮುಂದುವರಿದಿದ್ದು, ಭಯೋತ್ಪಾದಕರನ್ನು ಮಟ್ಟ ಹಾಕಲು ಪೊಲೀಸರು ಮತ್ತು ಭದ್ರತಾ ಪಡೆಗಳು ಒಟ್ಟಾಗಿ ಕಾರ್ಯಾಚರಣೆ ನಡೆಸುತ್ತಿವೆ. ಕಾಶ್ಮೀರ ವಲಯ ಪೊಲೀಸರು ನೀಡಿದ ಮಾಹಿತಿಯಂತೆ ಬಾರಾಮುಲ್ಲಾ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಶೋಧ ಕಾರ್ಯಾಚರಣೆ

ಬಾರಾಮುಲ್ಲಾದಲ್ಲೂ ಎನ್‌ಕೌಂಟರ್ ➤ ಓರ್ವ ಭಯೋತ್ಪಾದಕ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಚರ್ಚ್ ನಲ್ಲಿ ಕಳ್ಳತನ ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com. ಉಪ್ಪಿನಂಗಡಿ,ಮೇ.6. ಶಿರಾಡಿ ಗ್ರಾಮದ ಸೈಂಟ್ ಪೀಟರ್ಸ್ ಮತ್ತು ಸೈಂಟ್ ಪಾಲ್ಸ್ ಜಾಕೋಬೈಟ್ ಸಿರಿಯನ್ ಚರ್ಚ್‌ಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಚರ್ಚ್ ಕಚೇರಿಗೆ ನುಗ್ಗಿದ ಕಳ್ಳರು ಬೀಗ ಒಡೆದು ಒಳ  ಬೀರುವಿನಲ್ಲಿಟ್ಟಿದ್ದ 12 ಗ್ರಾಂ ಚಿನ್ನಾಭರಣ, 250 ಗ್ರಾಂ ಬೆಳ್ಳಿ ಹಾಗೂ 15,880 ರೂ.ನಗದನ್ನು ತೆಗೆದುಕೊಂಡು ಹೋಗಿದ್ದಾರೆ. ಅಲ್ಲದೇ  ಜನರೇಟರ್ ಶೆಡ್ ನ ಲಾಕರ್ ಒಡೆದು 35 ಲೀಟರ್ ಡೀಸೆಲ್ ಕಳ್ಳತನ ಮಾಡಿದ್ದಾರೆ. ಉಪ್ಪಿನಂಗಡಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಉಪ್ಪಿನಂಗಡಿ: ಚರ್ಚ್ ನಲ್ಲಿ ಕಳ್ಳತನ ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಮೌಲ್ಯಮಾಪನ ಕಾರ್ಯ ಪೂರ್ಣ – ಎಸೆಸ್ಸೆಲ್ಸಿ ಫಲಿತಾಂಶ ಶೀಘ್ರ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.6. ಎಸೆಸ್ಸೆಲ್ಸಿ ಫಲಿತಾಂಶ ಮೇ.11 ಅಥವಾ 12ರಂದು ಪ್ರಕಟವಾಗುವ ಸಾಧ್ಯತೆಯಿದೆ ಎಂದು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿವೆ. ಆ ಮೂಲಕ ಚುನಾವಣಾ ಫಲಿತಾಂಶದ ಮೊದಲೇ ಪರೀಕ್ಷಾ ಫಲಿತಾಂಶ ಹೊರಬೀಳುವುದು ಬಹುತೇಕ ಖಚಿತ. ಮೌಲ್ಯ ಮಾಪನ ಕಾರ್ಯ ಸಂಪೂರ್ಣ ಮುಗಿದಿದ್ದು ಮತ್ತೊಮ್ಮೆ ಉತ್ತರ ಪತ್ರಿಕೆಗಳು ಪರಿಶೀಲನೆ ನಡೆಯುತ್ತಿದೆ. ಈ ಬಾರಿ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಮಾ.31ರಿಂದ ಏ.15ರವರೆಗೆ ಒಟ್ಟು 3305 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

ಮೌಲ್ಯಮಾಪನ ಕಾರ್ಯ ಪೂರ್ಣ – ಎಸೆಸ್ಸೆಲ್ಸಿ ಫಲಿತಾಂಶ ಶೀಘ್ರ Read More »

ಕರ್ನಾಟಕ

ಖರ್ಗೆ ಕೊಲ್ಲಲು ಸಂಚು ➤ಆಡಿಯೋ ರಿಲೀಸ್ ಮಾಡಿದ ಸುರ್ಜೇವಾಲಾ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.6. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬವನ್ನು ಕೊಲ್ಲಲು ಬಿಜೆಪಿ ಸಂಚು ರೂಪಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಹತ್ಯೆಗೆ ಸಂಚು ನಡೆದಿದ್ದರೂ ಮೋದಿ ಹಾಗೂ ಬಿಜೆಪಿ ನಾಯಕರು ಮೌನಕ್ಕೆ ಶರಣಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ತೋರುತ್ತಿರುವುದರಿಂದ ಕಂಗೆಟ್ಟಿರುವ ಬಿಜೆಪಿ ಮಲ್ಲಿಕಾರ್ಜುನ ಖರ್ಗೆ, ಅವರ

ಖರ್ಗೆ ಕೊಲ್ಲಲು ಸಂಚು ➤ಆಡಿಯೋ ರಿಲೀಸ್ ಮಾಡಿದ ಸುರ್ಜೇವಾಲಾ Read More »

ಕರ್ನಾಟಕ

ವಿಚಾರಣೆಗೆ ಹಾಜರಾಗುವಂತೆ ವಿನಯ್ ಕುಲಕರ್ಣಿ ಆಪ್ತನಿಗೆ ಐಟಿ ಇಲಾಖೆ ನೋಟಿಸ್

(ನ್ಯೂಸ್ ಕಡಬ) newskadaba.com. ಧಾರವಾಡ, ಮೇ.6. ವಿನಯ್​ ಕುಲಕರ್ಣಿ ಆಪ್ತರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದ ಏಗನಗೌಡರ್​ಗೆ ದಾಖಲೆ ಸಮೇತ ಕಚೇರಿ ಬರುವಂತೆ ನೋಟಿಸ್ ನೀಡಲಾಗಿದೆ. ಮಾಜಿ ಸಚಿವ ವಿನಯ್​ ಕುಲಕರ್ಣಿಯ‌ ಮತ್ತೊಬ್ಬ ಆಪ್ತನಿಗೆ ಐಟಿ ಇಲಾಖೆ ನೋಟಿಸ್​ ನೀಡಿದೆ. ಇಂದು ಬೆಳಗ್ಗೆ 10 ಗಂಟೆಗೆ ಹುಬ್ಬಳ್ಳಿ ಐಟಿ ಕಚೇರಿಗೆ ಆಗಮಿಸುವಂತೆ ವಿನಯ‌್​ ಪರ ಚುನಾವಣಾ ಪ್ರಚಾರದಲ್ಲಿ ಓಡಾಡುತ್ತಿದ್ದ ಅರವಿಂದ ಏಗನಗೌಡರಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ವಿಚಾರಣೆಗೆ ಹಾಜರಾಗುವಂತೆ ವಿನಯ್ ಕುಲಕರ್ಣಿ ಆಪ್ತನಿಗೆ ಐಟಿ ಇಲಾಖೆ ನೋಟಿಸ್ Read More »

ಕರ್ನಾಟಕ

➤ ರಾಜ್ಯಸ್ಥಾನ ವಿಷಾನಿಲದಿಂದ ಮೂವರು ಮೃತ್ಯು..

(ನ್ಯೂಸ್ ಕಡಬ) newskadaba.com. ರಾಜಸ್ಥಾನ, ಮೇ.6. ಮದುವೆ ಹಾಲ್​ವೊಂದರ ಒಳಚರಂಡಿ ಚೇಂಬರ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಮೂವರು ಯುವಕರು ಸಾವಿಗೀಡಾಗಿರುವ ಘಟನೆ ರಾಜಸ್ಥಾನದ ಪಾಲಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.ಸ್ವಚ್ಛ ಮಾಡುತ್ತಿದ್ದ ವೇಳೆ ವಿಷಾನಿಲದಿಂದ ಯುವಕರು ಮೃತಪಟ್ಟಿದ್ದಾರೆ ಎಂದು ಪೊಲೀಸ​ರು ತಿಳಿಸಿದ್ದಾರೆ. ಇದೇ ವೇಳೆ ಯುವಕನೊಬ್ಬ ಅಸ್ವಸ್ಥಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಯ ಮೇರೆಗೆ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬಂಗಾರ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದ ಮೂವರು ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ. ಪಾಲಿ ನಗರದ ಸೆಂಚುರಿಯನ್ ಮ್ಯಾರೇಜ್ ಗಾರ್ಡನ್‌ನಲ್ಲಿ

➤ ರಾಜ್ಯಸ್ಥಾನ ವಿಷಾನಿಲದಿಂದ ಮೂವರು ಮೃತ್ಯು.. Read More »

ಕ್ರೈಮ್ ನ್ಯೂಸ್

ಫೋನ್ ಬಿಟ್ಟಿರಲು ಆಗಲ್ವಾ? ಹಾಗಾದ್ರೆ ನಿಮಗೂ ನೋಮೋಫೋಬಿಯಾ ಇರಬಹುದು!

(ನ್ಯೂಸ್ ಕಡಬ) newskadaba.com ಕಡಬ, ಮೇ 05. ಭಾರತದಲ್ಲಿ ಪ್ರತಿ ನಾಲ್ಕು ಜನರ ಪೈಕಿ ಇಬ್ಬರು ನೋಮೋಫೋಬಿಯಾ ಹೊಂದಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ. ತಮ್ಮ ಸ್ಮಾರ್ಟ್‌ಫೋನ್‌ನಿಂದ ಬೇರ್ಪಡುವ ಭಯ ಹೊಂದಿರುವುದು ನೋಮೋಫೋಬಿಯಾ ಆಗಿದೆ. ಭಾರತದಲ್ಲಿ ಶೇಕಡಾ 72 ರಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ತಮ್ಮ ಮೊಬೈಲ್ ಬ್ಯಾಟರಿ ಶೇಕಡಾ 20 ಅಥವಾ ಅದಕ್ಕಿಂತ ಕಡಿಮೆ ಆದಲ್ಲಿ ಆತಂಕಕ್ಕೆ ಒಳಗಾಗುತ್ತಾರೆ. ಹಾಗೆಯೇ ಶೇಕಡಾ 65 ರಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ಬ್ಯಾಟರಿ ಕಡಿಮೆಯಾಗುತ್ತಿದ್ದಂತೆ ಭಾವನಾತ್ಮಕ ಅಸ್ವಸ್ಥತೆ ಅನುಭವಿಸುತ್ತಾರೆ ಎಂದು ವರದಿ

ಫೋನ್ ಬಿಟ್ಟಿರಲು ಆಗಲ್ವಾ? ಹಾಗಾದ್ರೆ ನಿಮಗೂ ನೋಮೋಫೋಬಿಯಾ ಇರಬಹುದು! Read More »

ಲೈಫ್‍ಸ್ಟೈಲ್
Scroll to Top