News Kadaba

ಸುಳ್ಯ : ಕುಕ್ಕೆಗೂ ತಟ್ಟಿದ ಗ್ಯಾಸ್ ಪೊರೈಕೆ ವ್ಯತ್ಯಯ ಬಿಸಿ – ಉಪಹಾರದಲ್ಲಿ ಬದಲಾವಣೆ

(ನ್ಯೂಸ್‌ ಕಡಬ) newskadaba.com,  ಮಾ.11: ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಮಾ.11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತಿದಿನ ಬೆಳಗ್ಗೆ ವಿವಿಧ ಬಗೆಯ ಉಪಹಾರ ನೀಡಲಾಗುತ್ತಿತ್ತು, ಇದೀಗ ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಬೇಯಿಸುವ ತಿನಿಸು ಬದಲಾಗಿ, ಅವಲಕ್ಕಿ, ಮೊಸರು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ದೇವಸ್ಥಾನದಲ್ಲಿ ಮುಂದಿನ 3 ದಿನಕ್ಕೆ ಬೇಕಾಗುವಷ್ಟು ಗ್ಯಾಸ್ ಲಭ್ಯವಿದ್ದು, ಬಳಿಕದಲ್ಲೂ ಪೊರೈಕೆ ಆಗದೇ ಇದ್ದಲ್ಲಿ ಸಮಸ್ಯೆ ಆಗಲಿದೆ […]

ಸುಳ್ಯ : ಕುಕ್ಕೆಗೂ ತಟ್ಟಿದ ಗ್ಯಾಸ್ ಪೊರೈಕೆ ವ್ಯತ್ಯಯ ಬಿಸಿ – ಉಪಹಾರದಲ್ಲಿ ಬದಲಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ : ಕಣ್ಮರೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ

(ನ್ಯೂಸ್‌ ಕಡಬ) newskadaba.com,  ಮಾ.11: ಕೆಲಸಕ್ಕೆ ತೆರಳಿದ್ದ ಯುವಕನೊಬ್ಬ ಮನೆಗೆ ವಾಪಸ್ಸಾಗದೆ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕೊಣಾಜೆ ಗ್ರಾಮ ಮುಚ್ಚಿಲಕೋಡಿ ಮನೆ ನಿವಾಸಿ ದಿನೇಶ್ ಶೆಟ್ಟಿಗಾರ್ ಎಂಬವರ ಪುತ್ರ ವಿವೇಕ್ ಶೆಟ್ಟಿಗಾರ್ (32) ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆಯಾಗಿದೆ ಮಾಹಿತಿ ಪ್ರಕಾರ, ನಾಪತ್ತೆಯಾದ ದಿನವೇ ವಿವೇಕ್ ತಮ್ಮ ಸ್ಕೂಟರನ್ನು ಸೋಮೇಶ್ವರ ರಥದ ಕೊಠಡಿ ಸಮೀಪ ನಿಲ್ಲಿಸಿದ್ದು ಕಂಡುಬಂದಿದೆ. ಅಲ್ಲಿಯೇ ಅವರ ಮೊಬೈಲ್ ಫೋನ್ ಹಾಗೂ ಚಪ್ಪಲಿಗಳನ್ನು ಇಟ್ಟು

ಉಳ್ಳಾಲ : ಕಣ್ಮರೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಗುರುತು ಸಿಗದ ವ್ಯಕ್ತಿ ಮೃತ್ಯು ; ವಾರಸುದಾರರ ಪತ್ತೆಗೆ ಪೊಲೀಸರ ಮೊರೆ

(ನ್ಯೂಸ್‌ ಕಡಬ) newskadaba.com,  ಮಾ.11: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುತು ಸಿಗದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದ್ದು, ಮೃತರ ಗುರುತು ಪತ್ತೆ ಮಾಡಲು ಸಾರ್ವಜನಿಕರ ಸಹಕಾರವನ್ನು ಕಡಬ ಪೊಲೀಸರು ಕೋರಿದ್ದಾರೆ. ಪೊಲೀಸ್ ಮಾಹಿತಿಯ ಪ್ರಕಾರ, ಮಾರ್ಚ್ 6ರಂದು ಮಧ್ಯಾಹ್ನ ಸುಮಾರು 1.20 ಗಂಟೆಯ ವೇಳೆಗೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಬಿಳಿನೆಲೆ ಜಂಕ್ಷನ್ ಸಮೀಪದ ಅಂಗಡಿಯ ಬಳಿ ಒಬ್ಬ ವ್ಯಕ್ತಿ ಅಸ್ವಸ್ಥಗೊಂಡು ಮಲಗಿರುವ ಸ್ಥಿತಿಯಲ್ಲಿ ಕಂಡುಬಂದಿದ್ದರು. ಸ್ಥಳೀಯರ ಸಹಾಯದಿಂದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ

ಕಡಬ: ಗುರುತು ಸಿಗದ ವ್ಯಕ್ತಿ ಮೃತ್ಯು ; ವಾರಸುದಾರರ ಪತ್ತೆಗೆ ಪೊಲೀಸರ ಮೊರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಚಿನ್ನದ ದರದಲ್ಲಿ ಅಲ್ಪ ಏರಿಕೆ

(ನ್ಯೂಸ್‌ ಕಡಬ) newskadaba.com,  ಮಾ.11: ಇರಾನ್-ಇಸ್ರೇಲ್ ಹಾಗೂ ಅಮೆರಿಕ ಸಂಘರ್ಷದ ಹಿನ್ನೆಲೆ, ಚಿನ್ನ ಬೆಳ್ಳಿ ಸುರಕ್ಷಿತ ಹೂಡಿಕೆಯತ್ತ ಬೇಡಿಕೆ ಹೆಚ್ಚಾಗಿರುವುದರಿಂದ ಚಿನ್ನ ಬೆಳ್ಳಿ ದರ ಏರಿಕೆಯಾಗಿದೆ.ಮಾರ್ಚ್ 11, 2026, ಬುಧವಾರದಂದು 24 ಕ್ಯಾರೆಟ್ 10 ಗ್ರಾಂ ನಲ್ಲಿ 930 ರೂ ಏರಿಕೆ ಆಗಿ 1,63,310 ಕ್ಕೆ ಏರಿಕೆಯಾಗಿದೆ. 1 ಗ್ರಾಂ ಬೆಲೆ ಇಂದು 93 ರೂ ಹೆಚ್ಚಳ ಕಂಡಿದ್ದು, 16,331 ರೂ ದಾಖಲಾಗಿದೆ. 22 ಕ್ಯಾರೆಟ್ 1 ಗ್ರಾಂ ಬೆಲೆ 85 ರೂ ಏರಿಕೆ ಆಗಿ 14,970

ಇಂದು ಚಿನ್ನದ ದರದಲ್ಲಿ ಅಲ್ಪ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಮನೆ ಪಕ್ಕದ ಶೆಡ್‌ನಲ್ಲಿ ಅಕ್ರಮ ಡೀಸೆಲ್ ಅಡ್ಡೆ; 4,175 ಲೀಟರ್ ಇಂಧನ ಜಪ್ತಿ

(ನ್ಯೂಸ್‌ ಕಡಬ) newskadaba.com,  ಮಾ.11: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮನೆಯೊಂದರ ಸಮೀಪವಿರುವ ಶೆಡ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 4,175 ಲೀಟರ್ ಡೀಸೆಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ಉಪವಿಭಾಗದ ಡಿವೈಎಸ್‌ಪಿ ರೋಹಿಣಿ ಸಿ.ಕೆ. ಅವರಿಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಮಾರ್ಚ್ 9ರ ರಾತ್ರಿ ಈ ದಾಳಿ ನಡೆಸಲಾಗಿದೆ.. ಜಗದೀಶ್ (35) ಎಂಬುವವರ ಮನೆಯ ಪಕ್ಕದ ಶೆಡ್‌ನಲ್ಲಿ ತಪಾಸಣೆ ನಡೆಸಿದಾಗ, ತಲಾ 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್‌ಗಳು ಮತ್ತು

ಬೆಳ್ತಂಗಡಿ: ಮನೆ ಪಕ್ಕದ ಶೆಡ್‌ನಲ್ಲಿ ಅಕ್ರಮ ಡೀಸೆಲ್ ಅಡ್ಡೆ; 4,175 ಲೀಟರ್ ಇಂಧನ ಜಪ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಬಸ್-ಬೈಕ್ ಡಿಕ್ಕಿ ಹೊಡೆದು ತರುಣ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.11: ಒಂದು ವಾರದ ಹಿಂದೆ ಸರ್ಕಾರಿ ಬಸ್ ಮತ್ತು ಬೈಕ್‌ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ 19 ವರ್ಷದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತರನ್ನು ಹೆರ್ಗ ಶೆಟ್ಟಿಬೆಟ್ಟು ನಿವಾಸಿ ಮೊಹಮ್ಮದ್ ಝಾದ್ (19) ಎಂದು ಗುರುತಿಸಲಾಗಿದ್ದು, ಸಂತೆಕಟ್ಟೆಯ ಲಕ್ಷ್ಮಿನಗರ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ ಮಾರ್ಚ್ 10, ಮಂಗಳವಾರ ನಿಧನರಾಗಿದ್ದಾರೆ. ಝಾದ್ ಇತ್ತೀಚೆಗೆ

ಉಡುಪಿ: ಬಸ್-ಬೈಕ್ ಡಿಕ್ಕಿ ಹೊಡೆದು ತರುಣ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.11:ರಾಜ್ಯದಲ್ಲಿ ಬಿಸಿಲಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಒಣ ಹವೆ ಹಾಗೂ ಬಿಸಿಲಿನಿಂದ ಕೂಡಿದ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಟೋ ಗ್ಯಾಸ್ ಬೆಲೆ ದಿಢೀರ್ ಏರಿಕೆ ; ಆಟೋ ಚಾಲಕರ ಪರದಾಟ

(ನ್ಯೂಸ್‌ ಕಡಬ) newskadaba.com,ಮಾ.10   ಇರಾನ್-ಇಸ್ರೇಲ್ ಅಮೆರಿಕದ ನಡುವೆ ಯುದ್ಧದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಎಫೆಕ್ಟ್ ಭಾರತದ ಮೇಲೆ ತಟ್ಟಿದೆ. ಆಟೋ ಗ್ಯಾಸ್‌ ದರ ದಿಢೀರ್‌ ಹೆಚ್ಚಳವಾಗಿದ್ದು, ಹಾವೇರಿಯಲ್ಲಿ ಆಟೋ ಚಾಲಕರ ಪರದಾಡುವಂತಾಗಿದೆ. ಹಾವೇರಿಯ ಹಾನಗಲ್ ರಸ್ತೆಯಲ್ಲಿರುವ ಗೋ ಗ್ಯಾಸ್ ಬಂಕ್‌ನಲ್ಲಿ ಗ್ಯಾಸ್ ವ್ಯತ್ಯಯದ ಬ್ಯಾನರ್ ಹಾಕಲಾಗಿದೆ. ಇರಾನ್-ಇಸ್ರೇಲ್ ಯುದ್ಧದ ಹಿನ್ನೆಲೆ ಆಟೋ ಚಾಲಕರಿಗೆ ಗ್ಯಾಸ್ ಕೊರತೆ ಸಾಧ್ಯತೆ ಇದೆ. ಸಹಕರಿಸಬೇಕು ಎನ್ನುವ ಬ್ಯಾನರ್ ಅಳವಡಿಸಿದ್ದಾರೆ. ಕಳೆದ 15 ದಿನಗಳ ಹಿಂದೆ ಕೆಜಿ ಗ್ಯಾಸ್ ಬೆಲೆ

ಆಟೋ ಗ್ಯಾಸ್ ಬೆಲೆ ದಿಢೀರ್ ಏರಿಕೆ ; ಆಟೋ ಚಾಲಕರ ಪರದಾಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬಸ್‌ನಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ; ಆರೋಪಿಯ ಬಂಧನ, 20 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

(ನ್ಯೂಸ್‌ ಕಡಬ) newskadaba.com,ಮಾ.10  ಕಡಬ: ಸುಮಾರು ಐದು ತಿಂಗಳ ಹಿಂದೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಯ ಬ್ಯಾಗ್‌ನಿಂದ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ..ಈ ಸಂಬಂಧ ಮಧ್ಯಪ್ರದೇಶ ಮೂಲದ ಆರೋಪಿಯನ್ನು ಬಂಧಿಸಲಾಗಿದ್ದು, ಆತನಿಂದ ಕಳವು ಮಾಡಲಾಗಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. 2025ರ ನವೆಂಬರ್ 19ರಂದು ಬ್ರಹ್ಮಾವರ ಮೂಲದ ದಂಪತಿಯು ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿರುವ ಹೋಟೆಲೊಂದರ ಬಳಿ ಬಸ್ ನಿಂತಿದ್ದಾಗ, ದಂಪತಿಯ ಬ್ಯಾಗ್‌ನಲ್ಲಿದ್ದ

ಬಂಟ್ವಾಳ: ಬಸ್‌ನಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ; ಆರೋಪಿಯ ಬಂಧನ, 20 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, ಸಮೀಪದ ಮನೆಗಳಿಗೆ ಹಾನಿ -ದೂರು ಬಾಂಬ್ ನಿಷ್ಕ್ರಿಯ ದಳದಿಂದ ಮದ್ದುಗುಂಡು ತೆರವು ಕಾರ್ಯಾಚರಣೆ

(ನ್ಯೂಸ್‌ ಕಡಬ) newskadaba.com,ಮಾ.10  ಕಡಬ: ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಬಳಕೆ ಮಾಡಿರುವುದರಿಂದ ಸಮೀಪದ ಮನೆಗಳಿಗೆ ಹಾನಿಯಾಗಿರುವ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಮಾ.8 ರಂದು ನಡೆದಿದೆ. ಈ ಮಧ್ಯೆ ಸ್ಪೋಟವಾಗದೆ ಬಾವಿಯೊಳಗೆ ಉಳಿದಿರುವ ಮದ್ದುಗುಂಡುಗಳನ್ನು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ತೆರವುಗೊಳಿಸುವ ಕಾರ್ಯಾಚರಣೆ ಮಾ. 10 ರಂದು ಬೆಳಿಗ್ಗೆ ಆರಂಭಿಸಿದ್ದಾರೆ. ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಮೈಸೂರು ನಿವಾಸಿ ಸೋಮಶೇಖರ ಎಂಬವರು ತಮ್ಮ ಸಂಬಂಧಿಕರಿಂದ 23 ಸೆಂಟ್ಸ್ ಜಾಗ ಖರೀದಿಸಿದ್ದು ಅದರಲ್ಲಿ ಅಡಿಕೆ

ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, ಸಮೀಪದ ಮನೆಗಳಿಗೆ ಹಾನಿ -ದೂರು ಬಾಂಬ್ ನಿಷ್ಕ್ರಿಯ ದಳದಿಂದ ಮದ್ದುಗುಂಡು ತೆರವು ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top