News Kadaba

ಕಾಲೇಜಿನಲ್ಲಿ ಚೂರಿಯಿಂದ ಇರಿದು ವಿದ್ಯಾರ್ಥಿಯ ಮರ್ಡರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.29. ಕಾಲೇಜಿನಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದು ಓರ್ವ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗುಜರಾತ್ ಮೂಲದ ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಭಾಸ್ಕರ್ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದ ಎನ್ನಲಾಗಿದೆ.

ಕಾಲೇಜಿನಲ್ಲಿ ಚೂರಿಯಿಂದ ಇರಿದು ವಿದ್ಯಾರ್ಥಿಯ ಮರ್ಡರ್ Read More »

ಕರ್ನಾಟಕ

 ಜೆಡಿಎಸ್ ಅಭ್ಯರ್ಥಿ ಚುನಾವಣಾ ಕಣದಿಂದ ನಿವೃತ್ತಿ ಘೋಷಣೆ.!   ➤ ವೆಂಕಟಾಚಲಪತಿ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ನಗರದ ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವು ಸಿಪಿಐ(ಎಂ) ಪಕ್ಷದ ಅಭ್ಯರ್ಥಿಗೆ ಬೆಂಬಲಿಸುವುದಾಗಿ ಘೋಷಿಸಿತ್ತು. ಈ ಬೆನ್ನಲ್ಲೇ ಸಿಪಿಐಎಂಗೆ ಬೆಂಬಲ ಘೋಷಿಸಿ, ಕೆಆರ್ ಪುರಂ ಜೆಡಿಎಸ್ ಅಭ್ಯರ್ಥಿ ಚುನಾವಣಾ ನಿವೃತ್ತಿಯನ್ನು ಘೋಷಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವಂತ ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ ರಮೇಶ್ ಗೌಡ ಅವರು, ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಸಿಪಿಐ(ಎಂ) ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಲು ತೀರ್ಮಾನವಾಗಿರುತ್ತದೆ. ಅದರಂತೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ

 ಜೆಡಿಎಸ್ ಅಭ್ಯರ್ಥಿ ಚುನಾವಣಾ ಕಣದಿಂದ ನಿವೃತ್ತಿ ಘೋಷಣೆ.!   ➤ ವೆಂಕಟಾಚಲಪತಿ Read More »

ಕರ್ನಾಟಕ

ತಾವೇ ಸಾಕಿದ ಗೂಳಿಯ ದಾಳಿಗೆ ಪತಿ ಮೃತ್ಯು, ಪತ್ನಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ)Newskadaba.com ಕೊಟ್ಟಾಯಂ,ಏ.29 ಗೂಳಿಯನ್ನು ಮೇಯಿಸಲು ಹೊಲಕ್ಕೆ ಹೋದಾಗ ತನ್ನದೇ ಗೂಳಿಯ ದಾಳಿಯಿಂದ ವ್ಯಕ್ತಿಯೊಬ್ಬ ದುರಂತ ಸಾವಿಗೀಡಾಗಿರುವ ಆತಂಕಕಾರಿ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯ ಪೊಂಕುನ್ನಂ ಚಮಂಪತಲ್​ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರೆಜಿ ಜಾರ್ಜ್​ (60) ಎಂದು ಗುರುತಿಸಲಾಗಿದೆ.ಆತನ ಪತ್ನಿ ಡಾರ್ಲಿ (52) ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಪಲಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.    

ತಾವೇ ಸಾಕಿದ ಗೂಳಿಯ ದಾಳಿಗೆ ಪತಿ ಮೃತ್ಯು, ಪತ್ನಿಗೆ ಗಂಭೀರ ಗಾಯ..! Read More »

ರಾಷ್ಟ್ರೀಯ ನ್ಯೂಸ್

ವಿಚಾರಣಾಧೀನ ಕೈದಿ ಜೈಲಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಏ.29. ಕೊಲೆ ಪ್ರಕರಣದ ಆರೋಪಿಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆಂಟ್ರಲ್ ಜೈಲಿನಲ್ಲಿ ನಡೆದಿದೆ. ಭದ್ರಾವತಿ ನಗರದ ದೇವಸ್ಥಾನದ ಬಳಿ ವೃದ್ಧೆ ಒಬ್ಬರನ್ನು ಕೊಲೆ ಮಾಡಿ, ಅವರ ಬಳಿ ಇದ್ದ ಹಣವನ್ನ ಕಿತ್ತುಕೊಂಡಿದ್ದ ಆರೋಪದ ಮೇಲೆ ಜೈಲಿನಲ್ಲಿದ್ದ ವಿಚಾರಣಾಧೀನ ಖೈದಿ ಕರುಣಾಕರ ದೇವಾಡಿಗ (23) ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿ ತಿಳಿಸಿದೆ.

ವಿಚಾರಣಾಧೀನ ಕೈದಿ ಜೈಲಿನಲ್ಲಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಡಹಗಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪಾಪಿ ಶಿಕ್ಷಕ..! ➤ಆರೋಪಿ ಅರೆಸ್ಟ್

(ನ್ಯೂಸ್ ಕಡಬ)Newskadaba.com ಉತ್ತರಪ್ರದೇಶ,ಏ.29 ಉತ್ತರಪ್ರದೇಶ ಮಿರ್ಜಾಪುರದ ಕಾಲೇಜೊಂದರಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ.ಟ್ವಿಟರ್ ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಬಳಕೆದಾರರಾದ ಅರುಣೇಶ್ ಯಾದವ್ ಅವರು “ಅತ್ಯಾಚಾರಿಗಳಿಗೆ ಮುಕ್ತ ಹಸ್ತ ನೀಡಿರುವುದು ನಮ್ಮ ರಾಜ್ಯದ ದುರದೃಷ್ಟಕರ ಘಟನೆ. ಸರ್ಕಾರಿ ಕೈಗಾರಿಕಾ ಸಂಸ್ಥೆಯ ಐಟಿಐ ಕಾಲೇಜಿನ ಈ ವೀಡಿಯೊ ವೈರಲ್ ಆಗುತ್ತಿದೆ. ಶಿಕ್ಷಕರೊಬ್ಬರು ಬಲವಂತವಾಗಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದಾರೆ” ಎಂದು ವಿಡಿಯೋವನ್ನ ಉತ್ತರಪ್ರದೇಶ ಪೊಲೀಸರಿಗೆ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದರು.

ಹಾಡಹಗಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪಾಪಿ ಶಿಕ್ಷಕ..! ➤ಆರೋಪಿ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

‘ಕಾಂಗ್ರೆಸ್ ನಾಯಕರೇ ಜಾಮೀನು ಪಡೆದು ಚುನಾವಣೆ ಎದುರಿಸುತ್ತಿದ್ದಾರೆ’ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಕಲಬುರಗಿ, ಏ.29. ಕಾಂಗ್ರೆಸ್ ನ ರಾಷ್ಟ್ರೀಯ ನಾಯಕರು ಬೇಲ್ ಮೇಲೆ ಇದ್ದಾರೆ. ರಾಜ್ಯಾಧ್ಯಕ್ಷರು ಬೇಲ್ ಮೇಲೆ ಇದ್ದಾರೆ. ಹಾಗೆ ನೋಡಿದರೆ ಕಾಂಗ್ರೆಸ್ ನಾಯಕರು ಯಾರೂ ಚುನಾವಣೆಗೇ ನಿಲ್ಲುವ ಹಾಗಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಅವರು ಇಂದು ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದರು.

‘ಕಾಂಗ್ರೆಸ್ ನಾಯಕರೇ ಜಾಮೀನು ಪಡೆದು ಚುನಾವಣೆ ಎದುರಿಸುತ್ತಿದ್ದಾರೆ’ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ರಾಜ್ಯದ 8 ಜಿಲ್ಲೆಗಳಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ ಪ್ರಧಾನಿ ಮೋದಿ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ವಿಧಾನಸಭೆ ಚುನಾವಣೆ ಪ್ರಚಾರ ಭರಾಟೆ ಬಾರಿ ಜೋರಾಗಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅಧಿಕೃತ ಪ್ರಚಾರ ಆರಂಭವಾಗಲಿದೆ. ಇಂದು ಬೀದರ್ ಗೆ ಆಗಮಿಸಲಿರುವ ಪ್ರಧಾನಿ ಮೋದಿ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಬೆಳಗಾವಿ ಜಿಲ್ಲೆ ಕುಡಚಿ ಹಾಗೂ ವಿಜಯಪುರದಲ್ಲಿ ನಡೆಯುವ ಸಮಾವೇಶಗಳಲ್ಲಿ ಭಾಗವಹಿಸಲಿರುವ ಮೋದಿ ಸಂಜೆ ಬೆಂಗಳೂರಿನ ಸುಂಕದಕಟ್ಟೆ ಸಮೀಪ ರೋಡ್ ಶೋ ನಡೆಸಿ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬೆಂಗಳೂರಿನಿಂದ ಕೋಲಾರಕ್ಕೆ ತೆರಳಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಹಾಸನ ಜಿಲ್ಲೆಯ ಬೇಲೂರು, ರಾಮನಗರ

ರಾಜ್ಯದ 8 ಜಿಲ್ಲೆಗಳಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ ಪ್ರಧಾನಿ ಮೋದಿ..! Read More »

ಕರ್ನಾಟಕ

ಪ್ರಚಾರದ ವೇಳೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮೇಲೆ ಕಲ್ಲು ತೂರಾಟ

(ನ್ಯೂಸ್ ಕಡಬ)newskadaba.com ಕೊರಟಗೆರೆ, ಏ.29. ಕೊರಟಗೆರೆ ತಾಲೂಕಿನ ಬೈರನಹಳ್ಳಿ ಕ್ರಾಸ್ ಬಳಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಕಲ್ಲೇಟಿನಿಂದಾಗಿ ಪರಮೇಶ್ವರ್‌ ಅವರ ತಲೆಗೆ ಗಾಯವಾಗಿದ್ದು ಸಮೀಪದ ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ಕರೆದೊಯ್ಯಲಾಗಿದೆ. ಇನ್ನು ಪ್ರಚಾರದ ಸಮಯದಲ್ಲಿ ಕಾರ್ಯಕರ್ತರು ಡಾ.ಜಿ. ಪರಮೇಶ್ವರ್ ಅವರನ್ನು ಎತ್ತಿಕೊಂಡು ಹೂ ಮಳೆ ಸುರಿಸಿದ್ದಾರೆ, ಈ ವೇಳೆ ಅವುಗಳ ನಡುವೆ ತೂರಿಬಂದ ಕಲ್ಲೊಂದು ಪರಮೇಶ್ವರ್

ಪ್ರಚಾರದ ವೇಳೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮೇಲೆ ಕಲ್ಲು ತೂರಾಟ Read More »

ಕರ್ನಾಟಕ

ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ..!  ➤ಆರೋಪಿಗಳ ವಿರುದ್ಧ  ಪ್ರಕರಣ ದಾಖಲು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ಕಾಲೇಜಿನಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಾ ರೇವಾ ಕಾಲೇಜಿನಲ್ಲಿ ಕಾಲೇಜು ಫೆಸ್ಟ್ ವೇಳೆ ಗಲಾಟೆ ನಡೆದಿದ್ದು, ಈ ವೇಳೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು ಗುಂಪುಗಳ

ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ..!  ➤ಆರೋಪಿಗಳ ವಿರುದ್ಧ  ಪ್ರಕರಣ ದಾಖಲು..! Read More »

ಕರ್ನಾಟಕ

2 ಗಂಟೆಗಳ ಅಂತರದಲ್ಲಿ ನೇಪಾಳದಲ್ಲಿ ಎರಡು ಬಾರಿ ಭೂಕಂಪ

(ನ್ಯೂಸ್ ಕಡಬ)newskadaba.com ನೇಪಾಳ, ಏ.29. ಬೆಳಗಿನ ಜಾವ ಎರಡು ಗಂಟೆಯೊಳಗೆ ನೇಪಾಳದ ಬಾಜುರಾದ ದಹಕೋಟ್‌ ನಲ್ಲಿ ಎರಡು ಭೂಕಂಪಗಳು ಸಂಭವಿಸಿವೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಮೊದಲ ಭೂಕಂಪವು ರಿಕ್ಟರ್ ಮಾಪಕದಲ್ಲಿ 4.8 ರಷ್ಟಿತ್ತು, ರಾತ್ರಿ 11:58 ಕ್ಕೆ (ಸ್ಥಳೀಯ ಕಾಲಮಾನ) ಸಂಭವಿಸಿದೆ, ನಂತರ ಶುಕ್ರವಾರ ಮುಂಜಾನೆ 1:30 ಕ್ಕೆ 5.9 ರ ತೀವ್ರತೆಯೊಂದಿಗೆ ಮತ್ತೊಂದು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಕೇಂದ್ರ ತಿಳಿಸಿದೆ.    

2 ಗಂಟೆಗಳ ಅಂತರದಲ್ಲಿ ನೇಪಾಳದಲ್ಲಿ ಎರಡು ಬಾರಿ ಭೂಕಂಪ Read More »

ರಾಷ್ಟ್ರೀಯ ನ್ಯೂಸ್
Scroll to Top