News Kadaba

ಆಸ್ತಿ ವಿವರ ಸಲ್ಲಿಸದ 33 ರಾಜಕಾರಣಿಗಳ ಪಟ್ಟಿ ಬಿಡುಗಡೆ ಮಾಡಿದ ಲೋಕಾಯುಕ್ತ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.26. ಕರ್ನಾಟಕ ಲೋಕಾಯುಕ್ತ ಕಾಯ್ದೆ ಪ್ರಕಾರ ಪ್ರತಿವರ್ಷ ಶಾಸಕರು ಹಾಗೂ ಅವರ ಕುಟುಂಬ ಸದಸ್ಯರ ಆಸ್ತಿ ವಿವರಗಳನ್ನು ಸಲ್ಲಿಕೆ ಮಾಡಬೇಕು. ಆದರೆ, 2021-22ನೇ ಸಾಲಿಗೆ ಸಚಿವರು ಸೇರಿದಂತೆ ಹಲವು ಶಾಸಕರು ಆಸ್ತಿ ವಿವರಗಳನ್ನು ಸಲ್ಲಿಕೆ ಮಾಡದೆ ಕಾನೂನಿನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಆಸ್ತಿ ವಿವರ ನೀಡದ 15 ಮಂದಿ ಶಾಸಕರು ಮತ್ತು 18 ಮಂದಿ ವಿಧಾನ ಪರಿಷತ್‌ ಸದಸ್ಯರ ಹೆಸರುಗಳನ್ನು ಬಹಿರಂಗಪಡಿಸಲಾಗಿದೆ. ಸಚಿವ ಶ್ರೀರಾಮುಲು, ಮಾಜಿ ಸಚಿವರಾದ ಜಮೀರ್‌ ಅಹ್ಮದ್‌, ಎನ್‌. ಮಹೇಶ್‌ […]

ಆಸ್ತಿ ವಿವರ ಸಲ್ಲಿಸದ 33 ರಾಜಕಾರಣಿಗಳ ಪಟ್ಟಿ ಬಿಡುಗಡೆ ಮಾಡಿದ ಲೋಕಾಯುಕ್ತ Read More »

ಕರಾವಳಿ

ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳ ಮಾರಾಟ ನಿಷೇಧ   ➤ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ..!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.26 ತಮಿಳುನಾಡಿನಲ್ಲಿ ಗುಟ್ಕಾ, ಪಾನ್ ಮಸಾಲಾ ಮತ್ತು ಇತರ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವ 2018 ರ ಅಧಿಸೂಚನೆಯನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು, ತಯಾರಕರು ತಮ್ಮ ಚಟುವಟಿಕೆಗಳು ರಾಜ್ಯ ಹೊರಡಿಸಿದ ಅಧಿಸೂಚನೆಯ ವ್ಯಾಪ್ತಿಗೆ ಒಳಪಡದಿದ್ದರೆ ಅವರು ಪರಿಹಾರ ಪಡೆಯಲು ಸೂಕ್ತ ವೇದಿಕೆಯನ್ನು ಸಂಪರ್ಕಿಸಬಹುದು ಎಂದು ಸ್ಪಷ್ಟಪಡಿಸಿದೆ.    

ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳ ಮಾರಾಟ ನಿಷೇಧ   ➤ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ..! Read More »

ರಾಷ್ಟ್ರೀಯ ನ್ಯೂಸ್

ಲಕ್ಷ್ಮಣ ಸವದಿಗೆ ಸವಾಲು ಹಾಕಿದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ.!

(ನ್ಯೂಸ್ ಕಡಬ)Newskadaba.com ಅಥಣಿ,ಏ.26 ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಅಥಣಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ, ಮಾಜಿ ಡಿಸಿಎಂ, ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿಗೆ ಸವಾಲು ಹಾಕಿದ್ದಾರೆ.ಅಥಣಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ ಮಹೇಶ್ ಕುಮಟಳ್ಳಿ, ಲಕ್ಷ್ಮಣ ಸವದಿ ವಿರುದ್ಧ ವಾಗ್ದಾಳಿ ನಡೆಸಿದರು.ನಿಮ್ಮ ಉಪಕಾರ ನಮ್ಮ ಮೇಲಿಲ್ಲ, ನಾವು ಘಂಟಾಘೋಷವಾಗಿ ಹೇಳಬೇಕಾಗುತ್ತದೆ. ನಮ್ಮಿಂದ ನೀವು ಇಂದು ಎಂಎಲ್ ಸಿ ಆದ್ರಿ. ರಾಜ್ಯದ ಡಿಸಿಎಂ ಆದ್ರಿ. ಆದರೆ ನನ್ನ ವಿರುದ್ಧ 50 ಕೋಟಿ ಆರೋಪ ಮಾಡಿದ್ದಿರಿ. ಇದಕ್ಕೆ ಜನರು ತಕ್ಕ

ಲಕ್ಷ್ಮಣ ಸವದಿಗೆ ಸವಾಲು ಹಾಕಿದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ.! Read More »

ರಾಷ್ಟ್ರೀಯ ನ್ಯೂಸ್

ಈಜಲು ತೆರಳಿದ್ದ ಐವರು ನೀರುಪಾಲು

(ನ್ಯೂಸ್ ಕಡಬ) newskadaba.com.ಮಂಡ್ಯ, ಏ.26. ಈಜಲು ತೆರಳಿದ್ದ ಐವರು ನೀರುಪಾಲಾದ ಘಟನೆ ತಾಲೂಕಿನ ದೊಡ್ಡ ಕೊತ್ತಗೆರೆ ಗ್ರಾಮದ ಬಳಿ ವಿಸಿ ನಾಲೆಯಲ್ಲಿ ನಡೆದಿದೆ.  ಬೆಂಗಳೂರಿನ ನೀಲಸಂದ್ರ ಮೂಲದ ನಿವಾಸಿಗಳಾದ ಮೆಹತಾ (10), ಅನಿಷಾ ಬೇಗಂ (34), ತಸ್ಮಿಯಾ (22), ಅಶ್ರಕ್ (28), ಅತೀಕ್ (22) ಮೃತರು ಎಂದು ಗುರುತಿಸಲಾಗಿದೆ. ಇವರು ರಂಝಾನ್ ಬಳಿಕ ರಜೆಗೆಂದು ಹಲ್ಲಗೆರೆಯ ಅಜ್ಜಿ ಮನೆಗೆ ಬಂದಿದ್ದರು. ಈ ವೇಳೆ ಈಜಲು ಹೋಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು,

ಈಜಲು ತೆರಳಿದ್ದ ಐವರು ನೀರುಪಾಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

29 ಕೋಟಿ ಆಸ್ತಿ ಮಾಡಿ ,40 ಪ್ರಕರಣಗಳಲ್ಲಿ ಭಾಗಿಯಾಗಿರುವ ಬಿಜೆಪಿಯ ಅಭ್ಯರ್ಥಿ…! ➤ಮಣಿಕಂಠ ರಾಠೋಡ್

(ನ್ಯೂಸ್ ಕಡಬ)Newskadaba.com ಕಲಬುರಗಿ,ಏ.26 ಆತನ ವಯಸ್ಸು 26, ದಾಖಲಾಗಿರುವ ಪ್ರಕರಣಗಳು 40, ಆಸ್ತಿ 29 ಕೋಟಿ, ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಫೇಲ್, ಅಂಗನವಾಡಿ ಮಕ್ಕಳಿಗೆ ಹಂಚುವ ಹಾಲಿನ ಪುಡಿ, ಪಡಿತರ ಅಕ್ಕಿ ಕಳ್ಳ ಸಾಗಣೆ ಆರೋಪ ಎದುರಿಸುತ್ತಿರುವ ಈತ ಈ ಬಾರಿಯ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿ. ಮೇ 10ರಂದು ನಡೆಯುವ ವಿಧಾನಸಭೆ ಚುನಾವಣೆಗೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್. ಬಿಜೆಪಿ ಅಭ್ಯರ್ಥಿ ಆಯ್ಕೆಯ ಬಗ್ಗೆ ಪ್ರತಿಪಕ್ಷಗಳಾದ ಜೆಡಿಎಸ್ ಮತ್ತು ಕಾಂಗ್ರೆಸ್ ಅಸಮಾಧಾನ ಹೊರಹಾಕಿವೆ.

29 ಕೋಟಿ ಆಸ್ತಿ ಮಾಡಿ ,40 ಪ್ರಕರಣಗಳಲ್ಲಿ ಭಾಗಿಯಾಗಿರುವ ಬಿಜೆಪಿಯ ಅಭ್ಯರ್ಥಿ…! ➤ಮಣಿಕಂಠ ರಾಠೋಡ್ Read More »

ಕರ್ನಾಟಕ

ಕರಾವಳಿ ಮೂಲದ ಮುಂಬಯಿ ಹೋಟೆಲ್‌ ಉದ್ಯಮಿಯ ಅಪಹರಣ

(ನ್ಯೂಸ್ ಕಡಬ)newskadaba.com  ಮುಂಬಯಿ, ಏ.26. ಮುಂಬಯಿಯ ಹೋಟೆಲ್‌ ಉದ್ಯಮಿಯೊಬ್ಬರು ಅಪಹರಣಕ್ಕೊಳಗಾದ ಘಟನೆ ಸೋಮವಾರ ಸಂಭವಿಸಿದೆ. ಅಪಹರಣಕ್ಕೊಳಗಾದ ಹೋಟೆಲ್‌ ಉದ್ಯಮಿ ಕರಾವಳಿ ಅನೂಪ್‌ ಶೆಟ್ಟಿ ಎನ್ನಲಾಗಿದೆ. ತಕ್ಷಣ ಕಾರ್ಯಾಚರಣೆಗಿಳಿದ ಪೊಲೀಸರು ಅನೂಪ್‌ ಶೆಟ್ಟಿಯವರನ್ನು ಪಾರು ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಹಣಕಾಸಿನ ವ್ಯವಹಾರದ ತಗಾದೆಯ ಹಿನ್ನೆಲೆಯಲ್ಲಿ ಈ ಅಪಹರಣವಾಗಿದೆ. ಕೆಲ ಸಮಯ ಹೋಟೆಲ್‌ ವ್ಯವಹಾರದಲ್ಲಿ ಪಾಲುದಾರನಾಗಿದ್ದ ವ್ಯಕ್ತಿಯೇ ಹಣಕಾಸಿನ ವಿಚಾರದಲ್ಲಿ ತಗಾದೆ ಬಂದು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.  

ಕರಾವಳಿ ಮೂಲದ ಮುಂಬಯಿ ಹೋಟೆಲ್‌ ಉದ್ಯಮಿಯ ಅಪಹರಣ Read More »

ಕರಾವಳಿ

ಗೃಹ ಸಾಲವನ್ನು ಪಾವತಿಸಲು ಬೈಕ್‌ ಕಳ್ಳತನ ಮಾಡಿದ ಲಿವ್ ಇನ್ ರಿಲೇಶನ್ ಶಿಪ್ ಜೋಡಿ..!

(ನ್ಯೂಸ್ ಕಡಬ)Newskadaba.com ಪುಣೆ,ಏ.26 ಆಧುನಿಕತೆ ಬೆಳೆದಂತೆ ನಾವೆಲ್ಲರೂ ಪಾಶ್ಚಾತ್ಯ ಸಂಸ್ಕೃತಿಗೆ ಒಗ್ಗಿಕೊಳ್ಳತ್ತಿದ್ದೇವೆ. ಲಿವ್ ಇನ್ ರಿಲೇಷನ್ ಇರುವ ಜೋಡಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗೆ ಜೋಡಿಯೊಂದು ಗೃಹ ಸಾಲವನ್ನು ಪಾವತಿಸಲು ಬೈಕ್‌ ಕದ್ದು ಸಿಕ್ಕಿಬಿದ್ದಿದ್ದಾರೆ. ಬಂಧಿತ ಆರೋಪಿಗಳನ್ನು ವಿಕ್ರಮ್ ಮತ್ತು ಅನುರಾಧ ಎಂದು ಗುರುತಿಸಲಾಗಿದೆ. ವಿಕ್ರಮ್ ಹಾಗೂ ಅನುರಾಧ ತಮ್ಮ ಆರ್ಥಿಕ ನಿರ್ವಹಣೆಗೆ ಸಾಧ್ಯವಾಗದೇ ಮೋಟಾರ್ ಬೈಕ್ ಗಳನ್ನು ಕದಿಯಲು ನಿರ್ಧರಿಸಿದ್ದರು. ಮನೆಗೆ ಮಾಡಿರುವ ಸಾಲವನ್ನು ಪಾವತಿಸಲು ದ್ವಿಚಕ್ರ ವಾಹನಗಳನ್ನು ಕದ್ದ ಆರೋಪದ ಮೇಲೆ ಪುಣೆಯ ಲಿವ್ ಇನ್

ಗೃಹ ಸಾಲವನ್ನು ಪಾವತಿಸಲು ಬೈಕ್‌ ಕಳ್ಳತನ ಮಾಡಿದ ಲಿವ್ ಇನ್ ರಿಲೇಶನ್ ಶಿಪ್ ಜೋಡಿ..! Read More »

ರಾಷ್ಟ್ರೀಯ ನ್ಯೂಸ್

ಮಲಯಾಳಂ ನಟ ಮಾಮುಕೋಯ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com.ಕೇರಳ, ಏ.26. ಮಲಯಾಳಂ ಚಲನಚಿತ್ರ ನಟ ಮಾಮುಕೋಯ ಅವರು ಕಾಳಿಕಾವುನಲ್ಲಿ ಫುಟ್ಬಾಲ್ ಪಂದ್ಯಾವಳಿಯ ವೇಳೆ ಕುಸಿದುಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು.  ಪಂದ್ಯಾವಳಿಯಲ್ಲಿ ಮುಖ್ಯ ಅತಿಥಿಯಾಗಿದ್ದ ಮಾಮುಕೋಯ ಅವರು ಕಾರ್ಯಕ್ರಮದ ಉದ್ಘಾಟನೆಗೆ ಕೆಲವೇ ನಿಮಿಷಗಳ ಮೊದಲು ಅನಾರೋಗ್ಯದಿಂದ ಹೊರಬಂದಿದ್ದಾರೆ. ಸ್ವಯಂಸೇವಕರು ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ವಂಡೂರಿನ ಆಸ್ಪತ್ರೆಗೆ ಸಾಗಿಸಿದರು. ಮಾಮುಕೋಯ ಅವರಿಗೆ ಹೃದಯಾಘಾತವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಮಂಗಳವಾರ ಮುಂಜಾನೆ ಅವರನ್ನು ಕೋಝಿಕ್ಕೋಡ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ‌‌.ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಮಲಯಾಳಂ ನಟ ಮಾಮುಕೋಯ ಸ್ಥಿತಿ ಗಂಭೀರ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ➤ ಏ.30 ರಂದು ‘ಮೊಬೈಲ್ ಲೈಟ್ ಬೆಳಗಿಸಿ ನಾನು ವೋಟ್ ಹಾಕುವೆ’ ಎಂಬ ಸಂದೇಶ..! 

(ನ್ಯೂಸ್ ಕಡಬ)Newskadaba.com ವಿಜಯಪುರ,ಏ.26 ಕರ್ನಾಟಕ ವಿಧಾನಸಭಾ ಚುನಾವಣೆ-2023 ರ ಹಿನ್ನೆಲೆಯಲ್ಲಿ ಮತದಾರರ ಶಿಕ್ಷಣ ಹಾಗೂ ಜಾಗೃತಿ ಕಾರ್ಯಕ್ರಮದಡಿ ಕೊಡಗು ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಸ್ವೀಪ್ ಸಮಿತಿ, ಮಡಿಕೇರಿಯಲ್ಲಿನ ರೋಟರಿ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿದೆ. ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಏಪ್ರಿಲ್, 30 ರಂದು ಸಂಜೆ 6.30 ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ (ಮ್ಯಾನ್ಸ್ ಕಾಂಪೌಂಡ್) ನೂರಾರು ಜನರು ನಿಗದಿತ ಸ್ಥಳದಲ್ಲಿ ಸಾಲಾಗಿ ನಿಂತು ‘ಮೊಬೈಲ್

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ➤ ಏ.30 ರಂದು ‘ಮೊಬೈಲ್ ಲೈಟ್ ಬೆಳಗಿಸಿ ನಾನು ವೋಟ್ ಹಾಕುವೆ’ ಎಂಬ ಸಂದೇಶ..!  Read More »

ಕರ್ನಾಟಕ

ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.! 

(ನ್ಯೂಸ್ ಕಡಬ)Newskadaba.com ವಿಜಯಪುರ,ಏ.26 ವಿವಾಹಿತೆ ಮಹಿಳೆಯೊಬ್ಬರು ನೇಣಿಗೆ ಶರಣಾಗುವ ಮುನ್ನ ಮೊಬೈಲ್ ವಿಡಿಯೋ ಆನ್ ಮಾಡಿ ಲೈವ್ ಸೊಸೈಡ್ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸುಹಾನ್ ಸೋನಾರ್ (21) ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆ. ಈಕೆ ನೇಣಿಗೆ ಶರಣಾಗುವ ಮುನ್ನ ಪ್ರಿಯಕರನ ಬ್ಲ್ಯಾಕ್ಮೇಲ್​ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆ. ಹೌದು ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಮರ್ಯಾದೆಗೆ ಹೆದರಿ ಸುಹಾನಾ ಲೈವ್ ವಿಡಿಯೋ

ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.!  Read More »

ಕರ್ನಾಟಕ
Scroll to Top