ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಸುಳ್ಯದ ಯುವಕ ಮೃತ್ಯು
(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.25. ಬೆಂಗಳೂರಿನಲ್ಲಿ ನಡೆದ ಕಾರು ಹಾಗೂ ಬೈಕ್ ಅಪಘಾತದಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನ ಯುವಕ ಮೃತಪಟ್ಟ ಘಟನೆ ನಡೆದಿದೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರು ಧರ್ಮಪಾಲ ಗೌಡ ಬಾಳೆಬೈಲು ಮತ್ತು ಕಮಲಾಕ್ಷಿ ದಂಪತಿ ಪುತ್ರ ಯತೀಶ್ ಬಾಳೆಬೈಲು (30) ಮೃತ ಯುವಕ ಎಂದು ಗುರುತಿಸಲಾಗಿದೆ. ಯತೀಶ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಸುಳ್ಯದ ಯುವಕ ಮೃತ್ಯು Read More »
ಕರ್ನಾಟಕ
