News Kadaba

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.23. ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ದೇವಕಿಯವರ ಪುತ್ರಿ ಕೌಶಲ್ಯ ಮೃತಪಟ್ಟ ನವವಿವಾಹಿತೆ ಎಂದು ಗುರುತಿಸಲಾಗಿದೆ. ಇನ್ನು ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಎರಡು ದಿನಗಳ ಹಿಂದೆ ವಿಷ ಸೇವಿಸಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಆತ್ಮ ಹತ್ಯೆಗೆ […]

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಮೃತ್ಯು Read More »

ಕರಾವಳಿ

ಫೋನ್ ಪೇನಲ್ಲಿ ಲಂಚ ಪಡೆದ ಪಿಎಸ್ಐ ➤ ಪೊಲೀಸ್ ಕಾನಸ್ಟೇಬಲ್ ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ)newskadaba.com ದಾವಣಗೆರೆ, ಏ.23. ಕಾಣೆಯಾದ ಮಹಿಳೆಯನ್ನು ಪತ್ತೆ ಹಚ್ಚಿ ಮನೆಗೆ ಕಳುಹಿಸಲು 50 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಪಿಎಸ್ಐ ಹಾಗೂ ಪೊಲೀಸ್ ಕಾನಸ್ಟೇಬಲ್ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಶಿವನಗೌಡ ಹಾಗೂ ಪೋಲಿಸ್ ಕಾನಸ್ಟೇಬಲ್ ಲಿಂಗರಾಜ್ ನಾಯ್ಕ ಲೋಕಾಯುಕ್ತ ಬಲೆಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಫೋನ್ ಪೇನಲ್ಲಿ ಲಂಚ ಪಡೆದ ಪಿಎಸ್ಐ ➤ ಪೊಲೀಸ್ ಕಾನಸ್ಟೇಬಲ್ ಲೋಕಾಯುಕ್ತ ಬಲೆಗೆ Read More »

ಕರ್ನಾಟಕ

‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್..! ➤ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ..!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.23   ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ.10ರಂದು ಮತದಾನ ನಡೆಯಲಿದೆ. ಮೇ.13ರಂದು ಮತಏಣಿಕೆ ನಡೆದು, ಫಲಿತಾಂಶ ಘೋಷಣೆಯಾಗಲಿದೆ. ಈ ಹಿನ್ನಲೆಯಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ. ಈ ಕುರಿತಂತೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಮತದಾನದ ಪ್ರಯುಕ್ತ ದಿನಾಂಕ 08-05-2023ರ ಸಂಜೆ 5 ಗಂಟೆಯಿಂದ, 10-05-2023ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಏಣಿಕೆ ಪ್ರಯುಕ್ತ ದಿನಾಂಕ 13-05-2023ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12ಗಂಟೆಯವೆರೆಗ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್..! ➤ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ..!   Read More »

ಕರ್ನಾಟಕ

ಅಮೇರಿಕಾದ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಆಯ್ಕೆ

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್, ಏ.23. ಅಮೇರಿಕಾದ ರಕ್ಷಣಾ ಖಾತೆಯ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಪ್ಲಂಬ್‌ ನೇಮಕಗೊಂಡಿದ್ದಾರೆ. ರಾಧಾ ಅವರು ರಕ್ಷಣಾ ಸಚಿವಾಲಯದ ಸಿಬ್ಬಂದಿ ಮುಖ್ಯಸ್ಥರಾಗಿದ್ದು, ಸೆನೆಟ್‌ನಲ್ಲಿ 68-30 ಮತಗಳೊಂದಿಗೆ ನೇಮಕ ದೃಢಪಟ್ಟಿದೆ. ಇನ್ನು ರಕ್ಷಣಾ ಸಚಿವಾಲಯದ ಹುದ್ದೆಗಳಿಗೂ ಮುನ್ನ ರಾಧಾ ಅವರು ಗೂಗಲ್‌ನಲ್ಲಿ ಭದ್ರತಾ ಸುರಕ್ಷತೆ ವಿಭಾಗ, ಫೇಸ್‌ಬುಕ್‌ನಲ್ಲಿ ನೀತಿ ವಿಶ್ಲೇಷಣೆಯ ಜಾಗತಿಕ ಮುಖ್ಯಸ್ಥರಾಗಿದ್ದರು.  

ಅಮೇರಿಕಾದ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ..!   ➤ ಅದೃಷ್ಟವಶಾತ್‌ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರು.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.23  ಕೆಎಸ್‌ಆರ್‌ಟಿಸಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದ್ದು, ಅದೃಷ್ಟವಶಾತ್‌ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ದುರಂತ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗೌರಿಬಿದನೂರು ರಸ್ತೆ ಮಾಕಳಿ ತಿರುವಿನಲ್ಲಿ ನಡೆಸಿದೆ ಎಂದು ವರದಿಯಾಗಿದೆ. ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದಾಗ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.ಹತ್ತಿರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.    

ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ..!   ➤ ಅದೃಷ್ಟವಶಾತ್‌ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರು.! Read More »

ಕರ್ನಾಟಕ

‘ಬಿಜೆಪಿ ನಾಯಕರ್‍ಯಾರು ಜಾತಿ ರಾಜಕಾರಣ ಮಾಡಲ್ಲ’ ➤ ಕಾಂಗ್ರೆಸ್ ವಿರುದ್ದ ಈಶ್ವರಪ್ಪ ವಾಗ್ದಾಳಿ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಏ.23. ಲಿಂಗಾಯತ ಸಮಾಜಕ್ಕೆ ಕಾಂಗ್ರೆಸ್ ಮಾಡಿದ್ದಷ್ಟು ದ್ರೋಹ ಯಾರು ಮಾಡಿಲ್ಲ. ನಮ್ಮ ಬಿಜೆಪಿ ನಾಯಕರು ಯಾರು ಜಾತಿ ರಾಜಕಾರಣ ಮಾಡಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಲಿಂಗಾಯತ ಸಮುದಾಯದ ಬಗ್ಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಲಿಂಗಾಯತ ಸಮಾಜಕ್ಕೆ ಕಾಂಗ್ರೆಸ್ ಪಕ್ಷ ಮಾಡಿದ್ದಷ್ಟು ದ್ರೋಹ ಯಾರು ಮಾಡಿಲ್ಲ. ಲಿಂಗಾಯತರಿಗೆ ಮಾಡಿದ ದ್ರೋಹದಿಂದಾಗಿ ಅವರ ಸರ್ಕಾರ ಕಳೆದುಕೊಂಡಿದ್ದಾರೆ ಎಂದರು.

‘ಬಿಜೆಪಿ ನಾಯಕರ್‍ಯಾರು ಜಾತಿ ರಾಜಕಾರಣ ಮಾಡಲ್ಲ’ ➤ ಕಾಂಗ್ರೆಸ್ ವಿರುದ್ದ ಈಶ್ವರಪ್ಪ ವಾಗ್ದಾಳಿ Read More »

ಕರ್ನಾಟಕ

ಮಂಗಳೂರು: ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದ ಶಿಲ್ಪಾ ಶೆಟ್ಟಿ ಕುಟುಂಬ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.23. ಬಾಲಿವುಡ್ ನಟಿ, ಕರಾವಳಿಯ ಶಿಲ್ಪಾ ಶೆಟ್ಟಿ ಕುಟುಂಬ ಸಮೇತರಾಗಿ ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ಧಾರೆ. ದೇವಳದ ವತಿಯಿಂದ ನಟಿಗೆ ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಆಶೀರ್ವದಿಸಲಾಯಿತು. ಇನ್ನು ದೇವಿಯ ದರ್ಶನ ಪಡೆದ ನಂತರ ಶಿಲ್ಪಾ ಶೆಟ್ಟಿ ಯಕ್ಷಗಾನವನ್ನು ವೀಕ್ಷಿಸಿ ಕಲೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದರು. ಈ ವೇಳೆ ಪತಿ ರಾಜ್ ಕುಂದ್ರ, ತಂಗಿ ಶಮಿತಾ ಶೆಟ್ಟಿ, ಕುಟುಂಬ ವರ್ಗದವರು,

ಮಂಗಳೂರು: ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದ ಶಿಲ್ಪಾ ಶೆಟ್ಟಿ ಕುಟುಂಬ Read More »

ಕರಾವಳಿ

ಏ.27ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳೂರಿನಲ್ಲಿ ರೋಡ್ ಶೋ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.23. ಎಪ್ರಿಲ್ 27 ರಂದು ಸಂಜೆ 5 ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳೂರು ನಗರದ ಕಲೆಕ್ಟರ್ಸ್ ಗೇಟ್‌‌ನಿಂದ ನೆಹರೂ ಮೈದಾನದವರೆಗೆ ಸುಮಾರು ಎರಡು ಕಿಮೀ ರೋಡ್ ಶೋ ನಡೆಸಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರೋಜಿ ಜಾನ್ ತಿಳಿಸಿದ್ದಾರೆ. ಎಪ್ರಿಲ್ 27 ರಂದು ಅದ್ದೂರಿ ರೋಡ್ ಶೋ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಕ್ಷೇತ್ರಗಳ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು. ಇನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎ.24

ಏ.27ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳೂರಿನಲ್ಲಿ ರೋಡ್ ಶೋ Read More »

ಕರಾವಳಿ

ಇಬ್ಬರು ‘IPS’ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.23. ಚುನಾವಣೆ ಹೊತ್ತಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಮತ್ತು ದಾವಣಗೆರೆ ಎಸ್ಪಿ ರಿಷ್ಯಾಂತ್ ವರ್ಗಾವಣೆ ಮಾಡಲಾಗಿದೆ. ವೈಟ್ ಫೀಲ್ಡ್ ವಿಭಾಗಕ್ಕೆ ಧರ್ಮೇಂದ್ರ ಕುಮಾರ್ ಮೀನಾ ನೂತನ ಡಿಸಿಪಿ. ಅರೂಣ್ ಕೆ ದಾವಣಗೆರೆ ನೂತನ ಡಿಸಿಪಿಯಾಗಿ ನೇಮಕವಾಗಿದ್ದಾರೆ.  

ಇಬ್ಬರು ‘IPS’ ಅಧಿಕಾರಿಗಳ ವರ್ಗಾವಣೆ Read More »

ಕರ್ನಾಟಕ

ಸುಳ್ಯದಲ್ಲಿ ತಾಯಿ ಮಗಳು ಒಟ್ಟಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ..!

(ನ್ಯೂಸ್ ಕಡಬ)Newskadaba.com ಸುಳ್ಯ,ಏ.23  ಸುಳ್ಯದ ತಾಯಿ ಮತ್ತು ಮಗಳು ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ಅಪರೂಪದ ಫಲಿತಾಂಶಕ್ಕೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಸಾಕ್ಷಿಯಾಗಿದೆ. ಸುಳ್ಯ ಜಯನಗರದ ರಮೇಶ್‌ ಎಂಬವರ ಪತ್ನಿ ಗೀತಾ ಮತ್ತು ಅವರ ಪುತ್ರಿ ತ್ರಿಷಾ ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ ಮತ್ತು ಮಗಳು. ಸುಳ್ಯ ಪೊಲೀಸ್‌ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿರುವ ಗೀತಾ ವೃತ್ತಿ ಜೀವನದ ಮಧ್ಯೆ ಅಧ್ಯಯನ ನಡೆಸಿ ಖಾಸಗಿಯಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದು

ಸುಳ್ಯದಲ್ಲಿ ತಾಯಿ ಮಗಳು ಒಟ್ಟಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ..! Read More »

ಕರಾವಳಿ, ಕರ್ನಾಟಕ
Scroll to Top