News Kadaba

ಏ.25ಕ್ಕೆ ಪ್ರಧಾನಿ ಮೋದಿ ದೇಶದ ಮೊದಲ ವಾಟರ್ ಮೆಟ್ರೋಗೆ ಚಾಲನೆ ನೀಡಲಿದ್ದಾರೆ..!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.23  ಪ್ರಧಾನಮಂತ್ರಿ ನರೇಂದ್ರ ಮೋದಿ ಏ.25 ರಂದು ಕೇರಳಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ದೇಶದ ಮೊದಲ ವಾಟರ್ ಮೆಟ್ರೋವನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಟರ್ ಮೆಟ್ರೋ ಒಂದು ವಿಶಿಷ್ಟವಾದ ನಗರ ಸಮೂಹ ಸಾರಿಗೆ ವ್ಯವಸ್ಥೆಯಾಗಿದ್ದು, ಸಾಂಪ್ರದಾಯಿಕ ಮೆಟ್ರೋ ವ್ಯವಸ್ಥೆಯಂತಹ ಅನುಭವ ಮತ್ತು ಸುಲಭವಾಗಿ ಪ್ರಯಾಣಿಸಬಹುದಾಗಿದೆ. ಕೊಚ್ಚಿಯಂತಹ ನಗರಗಳಲ್ಲಿ ಇದು ತುಂಬಾ ಉಪಯುಕ್ತವಾಗಿದೆ.    

ಏ.25ಕ್ಕೆ ಪ್ರಧಾನಿ ಮೋದಿ ದೇಶದ ಮೊದಲ ವಾಟರ್ ಮೆಟ್ರೋಗೆ ಚಾಲನೆ ನೀಡಲಿದ್ದಾರೆ..! Read More »

ರಾಷ್ಟ್ರೀಯ ನ್ಯೂಸ್

ಬಿಸಿಎಂ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ..!   ➤ ಪ್ರಕರಣ ದಾಖಲು.!

(ನ್ಯೂಸ್ ಕಡಬ)Newskadaba.com ಕಲಬುರಗಿ,ಏ.23  ಜೇವರ್ಗಿ ಪಟ್ಟಣದಲ್ಲಿನ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಯನ್ನು ಸಿದ್ದುಪ್ರಸಾದ್ ಶಹಾಪುರ (23) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಜೇವರ್ಗಿ ತಾಲೂಕಿನ ಬೀರಾಳ ಬಿ ಗ್ರಾಮದ ನಿವಾಸಿ. ಬಿಕಾಂ ಮುಗಿದು ಎರಡು ವರ್ಷ ಆಗಿದೆ,ಹಾಸ್ಟೆಲ್ ನ ಹಳೆಯ ವಿದ್ಯಾರ್ಥಿ ಆಗಿದ್ದ ಎನ್ನಲಾಗಿದೆ. ಆರ್ಥಿಕ ಸಮಸ್ಯೆ ಇರುವುದರಿಂದ ಹಾಸ್ಟೆಲ್ ನಲ್ಲಿ ವಾಸವಾಗಿದ್ದ. ಕುಟುಂಬದ ಮೂಲಗಳ ಪ್ರಕಾರ ಸಾಲ ಮಾಡಿಕೊಂಡಿದ್ದ. ಮೂರು ದಿನಗಳ ಹಿಂದೆ

ಬಿಸಿಎಂ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ..!   ➤ ಪ್ರಕರಣ ದಾಖಲು.! Read More »

ಕರ್ನಾಟಕ

ಬೆಳ್ತಂಗಡಿ: ವಿದ್ಯುತ್‌ ತಂತಿ ಸ್ಪರ್ಶಿಸಿ ಮೂರು ಮಕ್ಕಳಿಗೆ ಗಾಯ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.23. ಚಾರ್ಮಾಡಿಯಲ್ಲಿ ಅಲ್ಯುಮಿನಿಯಂ ದೋಟಿ ಕೊಂಡೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್‌ ಲೈನ್‌ಗೆ ಸಂಪರ್ಕಿಸಿ ಮೂವರು ಮಕ್ಕಳು ಗಾಯಗೊಂಡ ಘಟನೆ ನಡೆದಿದೆ. ಇಮ್ತಿಯಾಜ್ ಅವರ ಮಕ್ಕಳಾದ ಮಹಮ್ಮದ್‌ ಆಲಿ (16), ಮಹಮ್ಮದ್‌ ಇನಾಜ್‌ (8) ಹಾಗೂ ಹನೀಫ್‌ ಅವರ ಪುತ್ರ ಅಯ್ನಾನ್‌ (6) ವಿದ್ಯುತ್‌ ಆಘಾತಕ್ಕೊಳಗಾದವರು. ಇನ್ನು ಸ್ಥಳೀಯರು ಕೂಡಲೇ ಅವರನ್ನು ಕಕ್ಕಿಂಜೆ ಹಾಗೂ ಉಜಿರೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ಪ್ರಾಥಮಿಕ ಚಿಕಿತ್ಸೆ ಒದಗಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಕ್ಕಳು ಸುಟ್ಟ

ಬೆಳ್ತಂಗಡಿ: ವಿದ್ಯುತ್‌ ತಂತಿ ಸ್ಪರ್ಶಿಸಿ ಮೂರು ಮಕ್ಕಳಿಗೆ ಗಾಯ Read More »

ಕರಾವಳಿ

ಇಬ್ಬರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.23 ವಿಧಾನಸಭಾ ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರಿನ ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹಾಗೂ ದಾವಣಗೆರೆ ಎಸ್.ಪಿ. ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.ವೈಟ್ ಫೀಲ್ಡ್ ವಿಭಾಗಕ್ಕೆ ಧರ್ಮೇಂದ್ರ ಕುಮಾರ್ ಮೀನಾ ನೂತನ ಡಿಸಿಪಿಯಾಗಿ ನೇಮಕಗೊಂಡಿದ್ದಾರೆ. ದಾವಣಗೆರೆ ಎಸ್ ಪಿಯಾಗಿ ಅರುಣ್ ಕೆ ನೇಮಕಗೊಂಡಿದ್ದಾರೆ.    

ಇಬ್ಬರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ..! Read More »

ಕರ್ನಾಟಕ

ಪಕ್ಷದ ಮುಖಂಡನ ಕಾರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..! ➤ ರಮೇಶ್‌ಗೆ ಧೈರ್ಯ ತುಂಬಿ ಕಣ್ಣೀರಿಟ್ಟ ಜೆಡಿಎಸ್ ಅಭ್ಯರ್ಥಿ ಎಂ.ಆರ್ ಮಂಜುನಾಥ್ .!  

(ನ್ಯೂಸ್ ಕಡಬ)Newskadaba.com ಚಾಮರಾಜನಗರ,ಏ.23 ಕೆಲ ತಿಂಗಳುಗಳ ಹಿಂದೆಯಷ್ಟೇ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದ ಮುಖಂಡನ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ತೆಳ್ಳನೂರು ಗ್ರಾಮದಲ್ಲಿ ನಡೆದಿದೆ. ರಮೇಶ್ ಅವರು ನಿಲ್ಲಿಸಿದ ಕಾರಿಗೆ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ರಮೇಶ್ ಅವರ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಅಭ್ಯರ್ಥಿ ಎಂ.ಆರ್.ಮಂಜುನಾಥ್ ಭೇಟಿ ಕೊಟ್ಟು ಕಾರಿನ ಸ್ಥಿತಿ ಕಂಡು ಕಣ್ಣೀರು ಹಾಕಿದ್ದು, ಬೆಂಕಿ ಇಟ್ಟವರು ಸಿಕ್ಕಿ ಹಾಕಿಕೊಳ್ಳುತ್ತಾರೆ ಎಂದು ಮುಖಂಡನಿಗೆ ರಮೇಶ್‌ಗೆ ಧೈರ್ಯ

ಪಕ್ಷದ ಮುಖಂಡನ ಕಾರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..! ➤ ರಮೇಶ್‌ಗೆ ಧೈರ್ಯ ತುಂಬಿ ಕಣ್ಣೀರಿಟ್ಟ ಜೆಡಿಎಸ್ ಅಭ್ಯರ್ಥಿ ಎಂ.ಆರ್ ಮಂಜುನಾಥ್ .!   Read More »

ಕರ್ನಾಟಕ

ಹುಬ್ಬಳ್ಳಿಗೆ ಆಗಮಿಸಿದ ರಾಹುಲ್ ಗಾಂಧಿಗೆ ಸ್ವಾಗತ ಕೋರಿದ ಜಗದೀಶ್ ಶೆಟ್ಟರ್..!

(ನ್ಯೂಸ್ ಕಡಬ)Newskadaba.com ಹುಬ್ಬಳ್ಳಿ,ಏ.23  ರಾಜ್ಯ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಇದೀಗ ಹುಬ್ಬಳ್ಳಿ ಏರ್ ಪೋರ್ಟ್ ಗೆ ಆಗಮಿಸಿದ್ದಾರೆ.ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿಗೆ ಜಗದೀಶ್ ಶೆಟ್ಟರ್ ಸ್ವಾಗತ ಕೋರಿದರು.ಈ ವೇಳೆ ಹಲವು ಕಾಂಗ್ರೆಸ್ ನಾಯಕರು ಸಾತ್ ನೀಡಿದರು. ಹುಬ್ಬಳ್ಳಿಯಿಂದ ರಾಹುಲ್ ಗಾಂಧಿ ಕೂಡಲಸಂಗಮಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಕರ್ನಾಟಕ ಚುನಾವಣೆಯ ಹೊತ್ತಿನಲ್ಲಿ ರಾಜ್ಯಕ್ಕೆ ಸ್ಟಾರ್ ಪ್ರಚಾರಕರ ಆರ್ಭಟ ಹೆಚ್ಚಾಗಿದೆ. ಈಗಾಗಲೇ ಬಿಜೆಪಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ರಾಜ್ಯದಲ್ಲಿ

ಹುಬ್ಬಳ್ಳಿಗೆ ಆಗಮಿಸಿದ ರಾಹುಲ್ ಗಾಂಧಿಗೆ ಸ್ವಾಗತ ಕೋರಿದ ಜಗದೀಶ್ ಶೆಟ್ಟರ್..! Read More »

ಕರ್ನಾಟಕ

ಮಂಗಳೂರು: ಬಂಟ್ವಾಳದ ಯುವಕನ ಮೃತದೇಹ ಬೀಚ್ ನಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.23. ಮನೆಯಿಂದ ಹೊರಟು ಹೋದ ಯುವಕನ ಮೃತದೇಹ ಮಂಗಳೂರಿನ ಪಣಂಬೂರಿನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿದೆ. ಬಂಟ್ವಾಳ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್ (25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮಂಗಳೂರಿನ ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಯುವಕನ ಮೃತದೇಹ ಪತ್ತೆಯಾಗಿದ್ದು, ಪಣಂಬೂರು ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಮಂಗಳೂರು: ಬಂಟ್ವಾಳದ ಯುವಕನ ಮೃತದೇಹ ಬೀಚ್ ನಲ್ಲಿ ಪತ್ತೆ Read More »

ಕರಾವಳಿ

ಬಿ.ಎಸ್ ಯಡಿಯೂರಪ್ಪ ಅವರ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣ ➤ಮಾಜಿ ಶಾಸಕರ ಕೈವಾಡವಿದೆಯೆಂದು BYR ಆರೋಪ.!

(ನ್ಯೂಸ್ ಕಡಬ)Newskadaba.com ಹೊಳೆಹೊನ್ನೂರು,ಏ.23  ಮೀಸಲಾತಿ ವಿಚಾರದಲ್ಲಿ ಯಡಿಯೂರಪ್ಪ ಅವರ ನಿವಾಸದ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕರ ಕೈವಾಡವಿದೆ. ಅವರ ಪಿಎ ಕಾಣಿಸಿಕೊಂಡಿದ್ದು, ಮಾಧ್ಯಮಗಳ ವರದಿಯಿಂದ ಗೊತ್ತಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳದೆ ಆರೋಪಿಸಿದ್ದಾರೆ. ಪಟ್ಟಣದ ಭಗೀರಥ ಸಮುದಾಯ ಭವನದಲ್ಲಿ ಕರ್ನಾಟಕ ಮಾದಿಗ ದಂಡೋರ ಸಮಿತಿ ಹಾಗೂ ಮಾದಿಗ ಸಮಾಜ ವತಿಯಿಂದ ಆಯೋಜಿಸಲಾಗಿದ್ದ ಸರಕಾರಕ್ಕೆ ಅಭಿನಂದನಾ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.            

ಬಿ.ಎಸ್ ಯಡಿಯೂರಪ್ಪ ಅವರ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣ ➤ಮಾಜಿ ಶಾಸಕರ ಕೈವಾಡವಿದೆಯೆಂದು BYR ಆರೋಪ.! Read More »

ಕರ್ನಾಟಕ

ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್

(ನ್ಯೂಸ್ ಕಡಬ)newskadaba.com ಮಂಡ್ಯ, ಏ.23. ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಖಾಸಗಿ ವೋಲ್ವೊ ಬಸ್ಸೊಂದು ಚಲಿಸುವಾಗಲೇ ಹೊತ್ತಿ ಉರಿದ ಘಟನೆ ಶ್ರೀರಂಗಪಟ್ಟಣದಲ್ಲಿ ಶನಿವಾರ ನಡೆದಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ 30 ಪ್ರಯಾಣಿಕರು ಪಾರಾಗಿದ್ದಾರೆ. ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್‌’ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸಾರ್ವಜನಿಕರು ಕೂಡಲೇ ಬೊಬ್ಬೆ ಹೊಡೆದು ಬಸ್ಸನ್ನು ನಿಲ್ಲಿಸಿದ್ದಾರೆ. ಅಪಾಯದ ಸೂಚನೆ ಅರಿತ ಬಸ್ ಚಾಲಕ ಬಸ್ಸನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನೂ ಕೆಳಗೆ ಇಳಿಸಿದ್ದಾರೆ.

ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್ Read More »

ಕರ್ನಾಟಕ

ಹಲವು ಸೀರಿಯಲ್‌ ನಲ್ಲಿ ನಟಿಸಿದ್ದ ನಟ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.23. ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಅಗ್ನಿಸಾಕ್ಷಿ’ ಸೇರಿದಂತೆ ಹಲವು ಸೀರಿಯಲ್‌ನಲ್ಲಿ ನಟಿಸಿದ್ದ ಸಂಪತ್ ಜಯರಾಮ್ (35) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ನೆಲಮಂಗಲದಲ್ಲಿ ನಟ ಸಂಪತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರುತೆರೆ- ಹಿರಿತೆರೆಯಲ್ಲಿ ನಟ ಸಂಪತ್ ಜಯರಾಮ್ ಆಕ್ಟೀವ್ ಆಗಿದ್ದರು ಎನ್ನಲಾಗಿದೆ.

ಹಲವು ಸೀರಿಯಲ್‌ ನಲ್ಲಿ ನಟಿಸಿದ್ದ ನಟ ಆತ್ಮಹತ್ಯೆ Read More »

ಕರ್ನಾಟಕ
Scroll to Top