News Kadaba

ಅನಾರೋಗ್ಯಕ್ಕೆ ತುತ್ತಾದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ…!  ➤ ಆಸ್ಪತ್ರೆಗೆ ದಾಖಲು..!

ಸ್ ಕಡಬ)Newskadaba.com ಬೆಂಗಳೂರು,ಏ.23 ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಪರ ಪ್ರಚಾರದಲ್ಲಿ ನಿರತರಾಗಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚುನಾವಣೆ ನಿಮಿತ್ತ ನಿರಂತರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದ ಕಾರಣ, ಆಯಾಸದಿಂದಾಗಿ ಜ್ವರ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ವಿಶ್ರಾಂತಿ ತೆಗೆದುಕೊಂಡು ಬಳಿಕ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗುವುದಾಗಿ ಮಾಹಿತಿ ನೀಡಿದ್ದಾರೆ.  

ಅನಾರೋಗ್ಯಕ್ಕೆ ತುತ್ತಾದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ…!  ➤ ಆಸ್ಪತ್ರೆಗೆ ದಾಖಲು..! Read More »

ಕರ್ನಾಟಕ

ಧರ್ಮಸ್ಥಳ: ಡಿಕೆಶಿ ಹೆಲಿಕಾಪ್ಟರ್ ಧಿಡೀರ್ ತಪಾಸಣೆ

(ನ್ಯೂಸ್ ಕಡಬ)newskadaba.com ಧರ್ಮಸ್ಥಳ, ಏ.23. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಧರ್ಮಸ್ಥಳಕ್ಕೆ ಪ್ರವಾಸ ಕೈಗೊಂಡಿದ್ದು, ಹೆಲಿಪ್ಯಾಡ್ ನಲ್ಲಿ ಕುಟುಂಬ ಸಮೇತ ಬಂದಿಳಿದರು ಎಂದು ವರದಿ ತಿಳಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅಧಿಕಾರಿಗಳು ರಾಜಕಾರಣಿಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಡಿ.ಕೆ.ಶಿವಕುಮಾರ್ ಅವರ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಇತ್ತೀಚೆಗೆ ಧರ್ಮಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಂದಿದ್ದಾಗಲೂ ಅವರ ಹೆಲಿಕಾಪ್ಟರ್ ಅನ್ನು ಪರಿಶೀಲನೆ ನಡೆಸಲಾಗಿತ್ತು ಎನ್ನಲಾಗಿದೆ.

ಧರ್ಮಸ್ಥಳ: ಡಿಕೆಶಿ ಹೆಲಿಕಾಪ್ಟರ್ ಧಿಡೀರ್ ತಪಾಸಣೆ Read More »

ಕರಾವಳಿ, ಕರ್ನಾಟಕ

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಅಮೃತಪಾಲ್ ಸಿಂಗ್ ಬಂಧನ.!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.23 ಸಿಖ್ ಪ್ರತ್ಯೇಕತಾವಾದಿ ನಾಯಕ ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 18 ರಂದು ಸಿಂಗ್ ಮತ್ತು ಅವರ ಸಂಘಟನೆ ‘ವಾರಿಸ್ ಪಂಜಾಬ್ ದೇ’ ಸದಸ್ಯರ ವಿರುದ್ಧ ಪೊಲೀಸರು ಕ್ರಮಕೈಗೊಂಡಿದ್ದರು. ಅಮೃತ್ ಪಾಲ್ ಸಿಂಗ್ ಮತ್ತು ಅವರ ಸಹಚರರ ಮೇಲೆ ವರ್ಗಗಳ ನಡುವೆ ವೈಮನಸ್ಸು ಹರಡುವುದು, ಕೊಲೆ ಯತ್ನ, ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮತ್ತು ಸಾರ್ವಜನಿಕ ಸೇವಕರಿಂದ ಕಾನೂನುಬದ್ಧ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸುವುದು ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ.

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಅಮೃತಪಾಲ್ ಸಿಂಗ್ ಬಂಧನ.! Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಲಕ್ಷಾಂತರ ಮೌಲ್ಯದ ಮಾದಕ ವಸ್ತು ಸಾಗಾಟ    ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.23. ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಹಿತ ದಂಪತಿ ಸೇರಿದಂತೆ ನಾಲ್ವರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೇಲ್ಪರಂಬ ದ ಅಬೂಬಕ್ಕರ್ (35), ಪತ್ನಿ ಅಮೀನಾ ಅಸರ್ (23), ಬೆಂಗಳೂರಿನ ಸೂರಜ್ (32) ಮತ್ತು ಎ.ಕೆ ವಸೀಮ್ (32) ಎಂದು ಗುರುತಿಸಲಾಗಿದೆ. ಬಂಧಿತರಿಂದ 150 ಗ್ರಾಂ ಎಂಡಿಎಂಎ ಮಾದಕ ವಸ್ತು ವನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.  

ಕಾಸರಗೋಡು: ಲಕ್ಷಾಂತರ ಮೌಲ್ಯದ ಮಾದಕ ವಸ್ತು ಸಾಗಾಟ    ➤ ಆರೋಪಿಗಳು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ.!   ➤ ಐವರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.23ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಈ ದುರಂತ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಇನ್ನೊರ್ವ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.    

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ.!   ➤ ಐವರು ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ

ಮಂಗಳೂರು: ಉಗ್ರರ ದಾಳಿಯಿಂದಾಗಿ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.23. ಸೇನೆಯ ರಾಷ್ಟ್ರೀಯ ರೈಫಲ್ಸ್‌ ತುಕಡಿಗೆ ಸೇರಿದ ಜಮ್ಮುವಿನ ಪೂಂಚ್-ರಜೌರಿ ವಿಭಾಗದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯದಲ್ಲಿ ತೊಡಗಿದ್ದ ಸೇನಾ ವಾಹನವೊಂದರ ಮೇಲೆ ಭಯೋತ್ಪಾದಕರು ಗ್ರೆನೇಡ್ ಹಾಗೂ ಅತ್ಯಾಧುನಿಕ ವಿದೇಶಿ ಶಸ್ತ್ರಾಸ್ತ್ರಗಳ ಮೂಲಕ ನಡೆಸಿದ ದಾಳಿಯಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದು, ಓರ್ವ ಸೈನಿಕ ತೀವ್ರ ಗಾಯಗೊಂಡಿದ್ದು, ಸೇನಾ ವಾಹನ ಹೊತ್ತಿ ಉರಿದು ನಾಶವಾಗಿದೆ. ಇಂದು ಸಂಜೆ ಮಂಗಳೂರಿನ ಕದ್ರಿಯಲ್ಲಿರುವ ಸೈನಿಕ ಸ್ಮಾರಕದಲ್ಲಿ ನಗರದ ಪ್ರಮುಖರು ಸೇರಿ ರಾಷ್ಟ್ರಸೇವೆಗಾಗಿ ಬಲಿದಾನ ಗೈದು ಹುತಾತ್ಮರಾದ ರಾಷ್ಟ್ರೀಯ ರೈಫಲ್ಸ್‌ನ

ಮಂಗಳೂರು: ಉಗ್ರರ ದಾಳಿಯಿಂದಾಗಿ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ Read More »

ಕರಾವಳಿ

➤ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಗ್ರಾ.ಪಂ.ಅಧ್ಯಕ್ಷೆ..!  

(ನ್ಯೂಸ್ ಕಡಬ)Newskadaba.com ಪುತ್ತೂರು,ಏ.23 ಪಾಣಾಜೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಭಾರತಿ ಭಟ್‌ 24 ವರ್ಷಗಳ ಬಳಿಕ ದ್ವಿತೀಯ ಪಿಯು ಪರೀಕ್ಷೆಯನ್ನು ಖಾಸಗಿಯಾಗಿ ಬರೆದು 421 ಅಂಕಗಳೊಂದಿಗೆ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಕಳೆದ ಬಾರಿ ಎಸೆಸೆಲ್ಸಿ ಪರೀಕ್ಷೆಯನ್ನು ಖಾಸಗಿಯಾಗಿ ಬರೆದು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು. ಬಡ ಕುಟುಂಬದಲ್ಲಿ ಜನಿಸಿದ್ದ ಭಾರತಿ 1997-98ರಲ್ಲಿ 8ನೇ ತರಗತಿ ತೇರ್ಗಡೆ ಹೊಂದಿದ್ದು, ತಂದೆಯ ವಿಯೋಗದಿಂದಾಗಿ ವಿದ್ಯಾಭ್ಯಾಸ ಮುಂದುವರಿಸಲಾಗಲಿಲ್ಲ.ಅನಂತರ ವೆಂಕಟ್ರಮಣ ಭಟ್‌ ಅವರನ್ನು ವಿವಾಹವಾಗಿ ಪಾಣಾಜೆಯಲ್ಲಿ ನೆಲೆಸಿರುವ ಅವರು 2020-21ನೇ ಸಾಲಿನ ಗ್ರಾ.ಪಂ. ಚುನಾವಣೆಯಲ್ಲಿ ಸದಸ್ಯೆಯಾಗಿ ಆಯ್ಕೆಯಾಗಿ 2

➤ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಗ್ರಾ.ಪಂ.ಅಧ್ಯಕ್ಷೆ..!   Read More »

ಕರಾವಳಿ

ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರಕ್ಕೆ ಪ್ರಧಾನಿ ಮೋದಿ ಕ್ರಮ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.23. ಸಂಘರ್ಷ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರ ಪರಿಸ್ಥಿತಿ ಬಗ್ಗೆ ಚರ್ಚಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಸರ್ಕಾರಿ ಅಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆಯಲ್ಲಿ ವಿದೇಶಾಂಗ ಸಚಿವರು, ರಾಷ್ಟ್ರೀಯ ಭದ್ರತಾ ಸಲಹೆಗಾರರು, ಸುಡಾನ್ ​​ಗಿರುವ ಭಾರತದ ರಾಯಭಾರಿ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಇನ್ನು ಸುಡಾನ್‌ನಲ್ಲಿರುವ 3,000ಕ್ಕಿಂತಲೂ ಅಧಿಕ ಭಾರತೀಯರ ಸುರಕ್ಷೆ ಬಗ್ಗೆ ಗಮನಹರಿಸುವಂತೆ ಹೇಳಿದ್ದಾರೆ. [contact-form][contact-field label=”Name” type=”name” required=”true” /][contact-field label=”Email” type=”email”

ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರಕ್ಕೆ ಪ್ರಧಾನಿ ಮೋದಿ ಕ್ರಮ Read More »

ರಾಷ್ಟ್ರೀಯ ನ್ಯೂಸ್

ಮ್ಯಾನ್‌ಹೋಲ್‌ನಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆ.!

(ನ್ಯೂಸ್ ಕಡಬ)Newskadaba.com ಹರಿಯಾಣ ,ಏ.21 ಇಲ್ಲಿನ ರಸ್ತೆ ಬದಿಯ ಮ್ಯಾನ್‌ಹೋಲ್‌ನಿಂದ ಕೊಳೆತ ಸ್ಥಿತಿಯಲ್ಲಿದ್ದ ಶವವನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಾಹ್ನ ಸುಮಾರು 3 ಗಂಟೆ ಹೊತ್ತಿಗೆ ವಾಟಿಕಾ ಚೌಕ್‌ನ ಬಳಿ ಬಾದಶಹಪುರದ ಕಡೆಗೆ ಹೋಗುವ ರಸ್ತೆ ಬದಿಯಲ್ಲಿ ಮ್ಯಾನ್‌ಹೋಲ್ ತೆರೆದಿದೆ. ಅದರಿಂದ ದುರ್ವಾಸನೆ ಬರುತ್ತಿದೆ ಎಂಬ ಮಾಹಿತಿ ಬಂದ ತಕ್ಷಣವೇ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.ಈ ಸಂದರ್ಭ ಪೊಲೀಸರಿಗೆ ಒಳಗಡೆ ಮೃತ ದೇಹವಿರುವುದು ತಿಳಿದುಬಂದಿದೆ. ಬಳಿಕ ಅಗ್ನಿಶಾಮಕ ದಳ ಹಾಗೂ ಜೆಸಿಬಿ ಯಂತ್ರದ ನೆರವಿನಿಂದ 10 ಅಡಿ ಆಳಕ್ಕೆ ಬಿದ್ದ

ಮ್ಯಾನ್‌ಹೋಲ್‌ನಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆ.! Read More »

ಕರ್ನಾಟಕ

ಅಭ್ಯರ್ಥಿಗಳಿಂದ ಹಣ ಪಡೆದು ಜನರಿಗೆ ನೀಡದ ಮುಖಂಡ..!   ➤ ಮುಖಂಡನಿಗೆ ಹಿಗ್ಗಾಮುಗ್ಗಾ ತಳಿಸಿದ ಮಹಿಳೆ..!

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಏ.21 ಅಭ್ಯರ್ಥಿಗಳಿಂದ ಹಣ ಪಡೆದು ಗ್ರಾಮದ ಜನರಿಗೆ ನೀಡದೇ ತಾನೇ ಇಟ್ಟುಕೊಂಡಿದ್ದಾನೆ ಎನ್ನಲಾದ ಗ್ರಾಮದ ಮುಖಂಡನಿಗೆ ಮಹಿಳೆಯೊಬ್ಬರು ಹಿಗ್ಗಾಮುಗ್ಗಾ ಬಾರಿಸಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಪಿರಮೇನಹಳ್ಳಿಯಲ್ಲಿ  ನಡೆದಿದೆ. ಹಣ ನೀಡುತ್ತೇನೆ ಎಂದು ವಂಚಿಸಿದ ಮಂಜು ಎಂಬಾತನಿಗೆ ಕ್ಲಾಸ್‌ ತೆಗೆದುಕೊಂಡು ಮನಸ್ಸಿಗೆ ಬಂದಂತೆ ಕೋಲಿನಿಂದ ಮಹಿಳೆ ಬಾರಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸುರೇಶ್ ಮತ್ತು ಪಕ್ಷೇತರ ಅಭ್ಯರ್ಥಿ ಗೋಪಿಕೃಷ್ಣ ಹಮ್ಮಿಕೊಂಡಿದ್ದ ರೋಡ್‌ಶೋನಲ್ಲಿ ಭಾಗವಹಿಸಿದರೆ ದುಡ್ಡು ಕೊಡೋದಾಗಿ ಮಂಜು ಗ್ರಾಮಸ್ಥರಿಗೆ ಹೇಳಿ ಕರೆದೊಯ್ದಿದ್ದ.ಆದರೆ ಕಾರ್ಯಕ್ರಮ ಮುಗಿದರೂ ಗ್ರಾಮದ

ಅಭ್ಯರ್ಥಿಗಳಿಂದ ಹಣ ಪಡೆದು ಜನರಿಗೆ ನೀಡದ ಮುಖಂಡ..!   ➤ ಮುಖಂಡನಿಗೆ ಹಿಗ್ಗಾಮುಗ್ಗಾ ತಳಿಸಿದ ಮಹಿಳೆ..! Read More »

ಕರ್ನಾಟಕ
Scroll to Top