News Kadaba

ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆದ ಕೂಲಿ ಕಾರ್ಮಿಕರ ಮಗ..!

(ನ್ಯೂಸ್ ಕಡಬ)Newskadaba.com ತಾಳಿಕೋಟೆ,ಏ.21 ಜಿಲ್ಲೆಯ ತಾಳಿಕೋಟೆ ಪಟ್ಟಣದ ಎಸ್.ಕೆ. ಪಿಯು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ರಾಹುಲ್ ರಾಠೋಡ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಸ್ಥಾನದಲ್ಲಿ ಉತ್ತೀರ್ಣನಾಗಿದ್ದಾನೆ. ವಿದ್ಯಾರ್ಥಿ ರಾಹುಲ್ ರಾಠೋಡ ಪಿಯು ಪರೀಕ್ಷೆಯಲ್ಲಿ 592 ಅಂಕ ಪಡೆದು ಸಾಧನೆ ಮಾಡಿದ್ದಾನೆ. ವಿದ್ಯಾರ್ಥಿ ರಾಹುಲ್ ರಾಠೋಡ ಕುಟುಂಬ ಕಡು ಬಡತನದಾಗಿದ್ದು, ಮಹಾರಾಷ್ಟ್ರಕ್ಕೆ ಗುಳೆ ಹೋಗಿದ್ದು, ಕೂಲಿ ಕಾರ್ಮಿಕರಾಗಿದ್ದಾರೆ.ರಾಹುಲ್ ರಾಠೋಡನ ಸಾಧನೆ ಕಂಡು ವಿದ್ಯಾರ್ಥಿಯ ತಂದೆ- ತಾಯಿ ಮೋತಿಲಾಲ್ ಹಾಗೂ ಸವಿತಾ ಸಂತಸಪಟ್ಟಿದ್ದು, ವಿದ್ಯಾರ್ಥಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ. […]

ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆದ ಕೂಲಿ ಕಾರ್ಮಿಕರ ಮಗ..! Read More »

ಕರ್ನಾಟಕ

ಭಾರತೀಯ ಸ್ನಾತಕೋತ್ತರ ವಿದ್ಯಾರ್ಥಿಗೆ ಗುಂಡೇಟು, ಮೃತ್ಯು

(ನ್ಯೂಸ್ ಕಡಬ)newskadaba.com ಅಮೆರಿಕ, ಏ.21. ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿಯೊಬ್ಬ ದುಷ್ಕರ್ಮಿಗಳ ಗುಂಡೇಟಿನಿಂದ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ. ಮೃತನನ್ನು ಸಾಯಿಶ್ ವೀರಾ ಎಂದು ಗುರುತಿಸಲಾಗಿದೆ. 24 ವರ್ಷದ ಸಾಯಿಶ್ ಕೊಲಂಬಸ್ ನ ಇಂಧನ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದು ಇಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗುಂಡೇಟಿನಿಂದ ಸಾವನ್ನಪ್ಪಿದ್ದಾನೆ ಎಂದು ಯುಎಸ್ ರಾಜ್ಯ ಓಹಿಯೋದ ಪೊಲೀಸರು ತಿಳಿಸಿದ್ದಾರೆ.

ಭಾರತೀಯ ಸ್ನಾತಕೋತ್ತರ ವಿದ್ಯಾರ್ಥಿಗೆ ಗುಂಡೇಟು, ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿ ಅಭ್ಯರ್ಥಿ ಸಚಿವ ಬಿ.ಸಿ. ನಾಗೇಶ್ ನೀತಿ ಸಂಹಿತೆ ಉಲ್ಲಂಘನೆ..!   ➤ ಪ್ರಕರಣ ದಾಖಲು..!  

(ನ್ಯೂಸ್ ಕಡಬ)Newskadaba.com ತುಮಕೂರು,ಏ.21 ತುಮಕೂರು ಜಿಲ್ಲೆ ತಿಪಟೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಬಿ.ಸಿ. ನಾಗೇಶ್ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.ನಾಗೇಶ್ ರವರು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಚುನಾವಣಾ ಅಧಿಕಾರಿ ಕಚೇರಿಯ 100 ಮೀಟರ್ ವ್ಯಾಪ್ತಿಯೊಳಗೆ ನಾಲ್ಕು ಖಾಸಗಿ ಕಾರ್, ಒಂದು ಬೆಂಗಾವಲು ವಾಹನ ತಂದಿದ್ದರು. ಇದು ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ನಾಮಪತ್ರ ಸಲ್ಲಿಕೆಗೆ ಬರುವ ಅಭ್ಯರ್ಥಿಗಳಿಗೆ ಚುನಾವಣಾ ಅಧಿಕಾರಿ ಕಚೇರಿಯ 100 ಮೀಟರ್ ವ್ಯಾಪ್ತಿಯಲ್ಲಿ ಮೂರು ವಾಹನ ತರಲು ಮಾತ್ರ

ಬಿಜೆಪಿ ಅಭ್ಯರ್ಥಿ ಸಚಿವ ಬಿ.ಸಿ. ನಾಗೇಶ್ ನೀತಿ ಸಂಹಿತೆ ಉಲ್ಲಂಘನೆ..!   ➤ ಪ್ರಕರಣ ದಾಖಲು..!   Read More »

ಕರ್ನಾಟಕ

ಹೈಕೋರ್ಟ್, ಸುಪ್ರೀಂಕೋರ್ಟ್‌ನ ತೀರ್ಪುಗಳು ಕನ್ನಡದಲ್ಲಿ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.21. ನ್ಯಾಯಾಂಗದ ಆದೇಶಗಳನ್ನು ಸಾಮಾನ್ಯ ಜನ ಮತ್ತು ದಾವೆದಾರರಿಗೆ ಅರ್ಥೈಸುವುದಕ್ಕಾಗಿ ಸುಪ್ರೀಂ ಕೋರ್ಟ್ ಮತ್ತು ಕರ್ನಾಟಕ ಹೈಕೋರ್ಟ್‌ ನ ಒಟ್ಟು 197 ಪ್ರಮುಖ ತೀರ್ಪುಗಳನ್ನು ಕನ್ನಡೀಕರಿಸಿ ಹೈಕೋರ್ಟ್ ವೆಬ್ಸೈಟ್‌ನಲ್ಲಿ ಪ್ರಕಟಿಸಿದೆ. ಕೇರಳ, ಗುಜರಾತ್ ಮತ್ತು ಮಹಾರಾಷ್ಟ್ರ ಹೈಕೋರ್ಟ್‌ಗಳು ಈಗಾಗಲೇ ಸ್ಥಳೀಯ ಭಾಷೆಯಲ್ಲಿ ತೀರ್ಪುಗಳನ್ನು ಪ್ರಕಟಿಸಲು ಆರಂಭಿಸಿವೆ. ಆದರೆ, ಅತಿ ಹೆಚ್ಚು ತೀರ್ಪುಗಳನ್ನು ಕನ್ನಡದಲ್ಲಿ ಪ್ರಕಟಿಸಿರುವುದು ಕರ್ನಾಟಕ ಹೈಕೋರ್ಟ್ ಮಾತ್ರ ಎಂದು ತಿಳಿದು ಬಂದಿದೆ.

ಹೈಕೋರ್ಟ್, ಸುಪ್ರೀಂಕೋರ್ಟ್‌ನ ತೀರ್ಪುಗಳು ಕನ್ನಡದಲ್ಲಿ ಪ್ರಕಟ Read More »

ಕರ್ನಾಟಕ

ರಾಮಕಥಾ ಗಾಯಕಿ ಅತ್ಯಾಚಾರ ಪ್ರಕರಣ       ➤ ಪ್ರಭಾಕರ ಭಟ್ ವಿರುದ್ಧದ ದೋಷಾರೋಪ ಪಟ್ಟಿ ರದ್ದು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.21. ರಾಮಕಥಾ ಗಾಯಕಿ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ರಾಘವೇಶ್ವರ ಭಾರತೀ ಸ್ವಾಮೀಜಿ ಪರ ವಹಿಸುವಂತೆ ಸಂತ್ರಸ್ತೆಯ ಪತಿಯ ಸಹೋದರ ಶ್ಯಾಮ್ ಪ್ರಸಾದ್ ಶಾಸ್ತ್ರಿಗೆ ಒತ್ತಡ ಹೇರಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಪ್ರಕರಣದಲ್ಲಿ ಆರೋಪಿತರ ವಿರುದ್ಧದ ದೋಷಾರೋಪ ಪಟ್ಟಿಯನ್ನು ಹೈಕೋರ್ಟ್​ ರದ್ದುಪಡಿಸಿದೆ. ಈ ಪ್ರಕರಣದಲ್ಲಿ ಹೊಸನಗರ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಶ್ರೀಗಳು ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಿಸಲಾಗಿದ್ದ ದೋಷಾರೋಪ ಪಟ್ಟಿಯನ್ನು

ರಾಮಕಥಾ ಗಾಯಕಿ ಅತ್ಯಾಚಾರ ಪ್ರಕರಣ       ➤ ಪ್ರಭಾಕರ ಭಟ್ ವಿರುದ್ಧದ ದೋಷಾರೋಪ ಪಟ್ಟಿ ರದ್ದು Read More »

ಕರ್ನಾಟಕ

ಕರಿ ಚಿರತೆ ಕೊನೆಗೂ ಬೋನಿಗೆ

(ನ್ಯೂಸ್ ಕಡಬ)newskadaba.com ಉತ್ತರ ಕನ್ನಡ, ಏ.21. ಅಪರೂಪದ ಬ್ಲ್ಯಾಕ್ ಪ್ಯಾಂಥರ್ ಸೆರೆ ಹಿಡಿಯಲಾಗಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಹೊನ್ನಾವರ ತಾಲೂಕಿನ ವಂದೂರು ಜಡ್ಡಿಗದ್ದೆಯಲ್ಲಿ ಕಳೆದ 3-4 ತಿಂಗಳಿನಿಂದ ಹಸುಗಳನ್ನು ಭಕ್ಷಿಸುತ್ತಿದ್ದ ಕರಿ ಚಿರತೆಯೊಂದನ್ನು ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.  

ಕರಿ ಚಿರತೆ ಕೊನೆಗೂ ಬೋನಿಗೆ Read More »

ಕರ್ನಾಟಕ

ರಾಜೇಶ್ ಮಾಸ್ಟರ್ ನಿಗೂಢ ನಿಧನದ ಹಿಂದೆ ಆತ್ಮಹತ್ಯೆ ಶಂಕೆ!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.21 ನೃತ್ಯ ನಿರ್ದೇಶಕ ಮಾಸ್ಟರ್ ದಿಢೀರನೆ ನಿಧನರಾಗಿರೋ ಆಘಾತದ ಸುದ್ದಿ ಹೊರಬಿದ್ದಿದೆ.ಅವರ ಸಾವಿನ ಕಾರಣದ ಬಗ್ಗೆ ಯಾವುದೇ ಅಧಿಕೃತ ದೃಢೀಕರಣಗಳಿಲ್ಲದಿದ್ದರೂ, ನಿಗೂಢ ಕಾರಣಕ್ಕಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ತಮ್ಮ ಅಸಾಧಾರಣ ಕೌಶಲ್ಯಕ್ಕೆ ಹೆಸರುವಾಸಿಯಾಗಿರುವ ರಾಜೇಶ್ ಸಿನಿಮಾ ರಂಗದಲ್ಲಿ ಕೆಲಸ ಮಾಡಿದ್ದಾರೆ.ಹಲವಾರು ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ರಾಜೇಶ್ ಮಾಸ್ಟರ್ ಸಾವಿನ ಸುದ್ದಿ ಬಗ್ಗೆ ತಮ್ಮ ಆಘಾತವನ್ನು ವ್ಯಕ್ತಪಡಿಸಿದ್ದಾರೆ.      

ರಾಜೇಶ್ ಮಾಸ್ಟರ್ ನಿಗೂಢ ನಿಧನದ ಹಿಂದೆ ಆತ್ಮಹತ್ಯೆ ಶಂಕೆ! Read More »

ಕರ್ನಾಟಕ

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನಲೆ!   ➤ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಚುನಾವಣಾ ಆಯೋಗ ಅನುಮತಿ ನಿರಾಕರಿಸಿದೆ…!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.21 ಚುನಾವಣಾ ದಿನಾಂಕ ಘೋಷಣೆಯಾಗಿದ್ದರೂ ಸಹ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂಬ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಚುನಾವಣಾ ಆಯೋಗ ಅನುಮತಿ ನೀಡಲು ನಿರಾಕರಿಸಿದೆ.ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವ ತನಕ ಕಾಯಬೇಕಿದೆ.          

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನಲೆ!   ➤ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಚುನಾವಣಾ ಆಯೋಗ ಅನುಮತಿ ನಿರಾಕರಿಸಿದೆ…! Read More »

ಕರ್ನಾಟಕ

ನಾಳೆ ವಿಜಯಪುರಕ್ಕೆ ಪಟ್ಟಣಕ್ಕೆ ಅಮಿತ್ ಶಾ ಭೇಟಿ   ➤ ಪೊಲೀಸ್ ಬಂದೋಬಸ್ತ್

(ನ್ಯೂಸ್ ಕಡಬ)newskadaba.com ವಿಜಯಪುರ, ಏ.21. ನಾಳೆ ವಿಜಯಪುರ ಪಟ್ಟಣಕ್ಕೆ ಅಮಿತ್ ಶಾ ಭೇಟಿ ನೀಡಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ವಿಜಯಪುರ ಪಟ್ಟಣಕ್ಕೆ ಅಮಿತ್ ಶಾ ಭೇಟಿ ನೀಡಲಿದ್ದು ಪ್ರಮುಖ ಸ್ಥಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ. ದೇವನಹಳ್ಳಿ ಬಿಜೆಪಿ ಅಭ್ಯರ್ಥಿ ಪಿಳ್ಳಮುನಿಶಾಮಪ್ಪ ಪರ ಪ್ರಚಾರ ನಡೆಸಲಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ. ನಾಳೆ ವಿಜಯಪುರ ಪಟ್ಟಣಕ್ಕೆ ಅಮಿತ್ ಶಾ ಭೇಟಿ ನೀಡಲಿದ್ದು, ಮುನ್ನೆಚ್ಚರಿಕೆ

ನಾಳೆ ವಿಜಯಪುರಕ್ಕೆ ಪಟ್ಟಣಕ್ಕೆ ಅಮಿತ್ ಶಾ ಭೇಟಿ   ➤ ಪೊಲೀಸ್ ಬಂದೋಬಸ್ತ್ Read More »

ಕರ್ನಾಟಕ

ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಡ್ತಿದ್ರೂ ‘ವೈದ್ಯರು ನಿರ್ಲಕ್ಷ್ಯ

(ನ್ಯೂಸ್ ಕಡಬ)newskadaba.com ಗದಗ, ಏ.21. ನಗರದ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಡುತ್ತಿದ್ರೂ ವೈದ್ಯರು ನಿರ್ಲಕ್ಷ್ಯ ತೋರಿದ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಘಟನೆಯನ್ನು ಕಂಡು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಬಂದ ಸುದ್ದಿಯಾಗಿದ್ದು ಹೆಚ್ಚಿನ ಮಾಹಿತಿಯನ್ನು ತಿಳಿದ ತಕ್ಷಣ ಅಪ್‌ಡೇಟ್‌ ಮಾಡಲಾಗುತ್ತದೆ.  

ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಡ್ತಿದ್ರೂ ‘ವೈದ್ಯರು ನಿರ್ಲಕ್ಷ್ಯ Read More »

ಕರ್ನಾಟಕ
Scroll to Top