News Kadaba

ಲಂಚದ ರೂಪದಲ್ಲಿ ಲ್ಯಾಪ್‌ಟಾಪ್ ಪಡೆಯುತ್ತಿದ್ದಾಗ ಅಗ್ನಿಶಾಮಕ ಅಧಿಕಾರಿ ಲೋಕಾಯುಕ್ತ ಬಲೆಗೆ.!  

(ನ್ಯೂಸ್ ಕಡಬ)Newskadaba.com ದಾವಣಗೆರೆ,ಏ.20 ದಾವಣಗೆರೆ ಶಾಲೆಯ ಮಾನ್ಯತೆ ನವೀಕರಣಕ್ಕೆ ಅಗತ್ಯವಿದ್ದ ನಿರಾಕ್ಷೇಪಣಾ ಪತ್ರ (ಎನ್‌ಒಸಿ)ವನ್ನು ನೀಡಲು ಲಂಚದ ರೂಪದಲ್ಲಿ ಲ್ಯಾಪ್‌ಟಾಪ್ ಪಡೆಯುತ್ತಿದ್ದಾಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಸವಪ್ರಭು ಶರ್ಮ ಹಾಗೂ ಫೈರ್‌ಮನ್ ಎಸ್.ಕೆ. ರಾಜೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಡೆಲ್‌ ಕಂಪನಿಯ ₹ 38,500 ಬೆಲೆಯ ಲ್ಯಾಪ್‌ಟಾಪ್ ಅನ್ನು ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.  

ಲಂಚದ ರೂಪದಲ್ಲಿ ಲ್ಯಾಪ್‌ಟಾಪ್ ಪಡೆಯುತ್ತಿದ್ದಾಗ ಅಗ್ನಿಶಾಮಕ ಅಧಿಕಾರಿ ಲೋಕಾಯುಕ್ತ ಬಲೆಗೆ.!   Read More »

ಕರ್ನಾಟಕ

ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 1.54 ಕೋಟಿ ರೂ. ಪೊಲೀಸರ ವಶಕ್ಕೆ.!

(ನ್ಯೂಸ್ ಕಡಬ)Newskadaba.com ಬೆಳಗಾವಿ,ಏ.20 (ಇಂದು) ಮುಂಜಾನೆ ಕಾರ್ಯಾಚರಣೆ ನಡೆಸಿದ ಪೊಲೀಸರು ರಾಮದುರ್ಗ ಪಟ್ಟಣ ಪಟ್ಟಣದಲ್ಲಿ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ 1.54 ಕೋಟಿ ರೂ.ನ್ನು ವಶಪಡಿಸಿಕೊಂಡಿದ್ದಾರೆ. ನಸುಕಿನ ವೇಳೆ ಕಾರಿನಲ್ಲಿ ವ್ಯಕ್ತಿಯೋರ್ವ ರಾಮದುರ್ಗ ಪಟ್ಟಣದ ಮೂಲಕ ಬೆಳಗಾವಿಗೆ ಹಣ ಸಾಗಣೆ ಮಾಡುತ್ತಿರುವುದನ್ನು ಗಸ್ತಿನಲ್ಲಿದ್ದ ಪೊಲೀಸರು ತಪಾಸಣೆ ವೇಳೆ ಪತ್ತೆಹಚ್ಚಿದ್ದಾರೆ. ಸೂಕ್ತ ದಾಖಲೆಗಳು ಇಲ್ಲದ ಕಾರಣ ಹಣ ಹಾಗೂ ಕಾರನ್ನು ವಶಕ್ಕೆ ಪಡೆದಿರುವ ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ. ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 1.54 ಕೋಟಿ ರೂ. ಪೊಲೀಸರ ವಶಕ್ಕೆ.! Read More »

ಕರ್ನಾಟಕ

ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್ ತಗುಲಿ ಬಾಲಕರಿಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ತುಮಕೂರು, ಏ.20. ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಮೃತಪಟ್ಟ ಘಟನೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ. ನಿತೇಶ್(14), ಪ್ರಜ್ವಲ್(13) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಬಾಲಕರು ಮನೆ ಮೇಲೆ ಆಟವಾಡುತ್ತಿದ್ದಾಗ ತಂತಿ ತಗುಲಿ ಈ ದುರಂತ ಸಂಭವಿಸಿದ್ದು, ಕೆಇಬಿ ವಿರುದ್ಧ ಗ್ರಾಮಸ್ಥರು ಹಾಗೂ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್ ತಗುಲಿ ಬಾಲಕರಿಬ್ಬರು ಮೃತ್ಯು Read More »

ಕರ್ನಾಟಕ

ವರುಣಾದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಳಮೈತ್ರಿ ಮಾಡಿಕೊಂಡಿದ್ದಾರೆ.!   ➤ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.20 ವರುಣಾದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಳಮೈತ್ರಿ ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು. ಈ ವಿಚಾರವಾಗಿ ಸಿಎಂ ಬೊಮ್ಮಾಯಿ ಪ್ರತ್ಯುತ್ತರ ನೀಡಿದ್ದಾರೆ.ಸಿದ್ದರಾಮಯ್ಯಗೆ ಸಿಎಂ ಕೌಂಟರ್ ನೀಡಿದ್ದು ‘ಎಲ್ಲ ಅಭ್ಯರ್ಥಿಗಳೂ ತಾವೇ ಗೆಲ್ಬೇಕು ಅಂತ ಚುನಾವಣೆಯಲ್ಲಿ ನಿಲ್ಲುವುದು. ಒಳ ಮೈತ್ರಿನಾ, ಹೊರ ಮೈತ್ರಿನಾ ಅಂತ ಮಾತಾಡ್ತಿದಾರೆ. ಅಲ್ಲಿ ಎಲ್ಲ ಪಕ್ಷಗಳಿಂದಲೂ ಅಭ್ಯರ್ಥಿಗಳು ಫಿಕ್ಸ್ ಆಗಿದ್ದಾರೆ. ಯಾರೇ ಸೇರಿಕೊಂಡರೂ ಸಿದ್ದರಾಮಯ್ಯ ಗೆ ಸ್ವಂತ ಬಲ ಇದ್ರೆ ಗೆಲ್ತಾರೆ.    

ವರುಣಾದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಳಮೈತ್ರಿ ಮಾಡಿಕೊಂಡಿದ್ದಾರೆ.!   ➤ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ.! Read More »

ಕರ್ನಾಟಕ

ವಿಧಾನಸಭಾ ಚುನಾವಣೆ ಹಿನ್ನೆಲೆ.!   ➤ಆಸ್ತಿ ವಿವರದ ಜತೆಗೆ ಇಬ್ಬರು ಪತ್ನಿಯರು ಇರುವುದಾಗಿ ಘೋಷಿಸಿದ ಎಎಪಿ ಅಭ್ಯರ್ಥಿ! 

(ನ್ಯೂಸ್ ಕಡಬ)Newskadaba.com ವಿಜಯನಗರ,ಏ.20 ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕಣಕ್ಕಿಳಿದಿರುವ ಅಭ್ಯರ್ಥಿಗಳು ತಮ್ಮ ಆಸ್ತಿ ವಿವರಗಳ ಜತೆಗೆ ಇನ್ನಿತರ ಮಾಹಿತಿಗಳನ್ನು ನಾಮಪತ್ರದಲ್ಲಿ ಘೋಷಿಸಿಕೊಳ್ಳುತ್ತಿದ್ದಾರೆ. ಇದೀಗ ವಿಜಯನಗರ ಕ್ಷೇತ್ರದ ಆಮ್​ ಆದ್ಮಿ ಪಾರ್ಟಿ ಅಭ್ಯರ್ಥಿ ಆಸ್ತಿ ವಿವರದ ಜತೆ ಇಬ್ಬರು ಪತ್ನಿಯರು ಇರುವುದನ್ನು ಧೃಡಪಡಿಸಿಕೊಂಡಿದ್ದಾರೆ. ವಿಜಯನಗರ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ದಾಸರ ಶಂಕರ್ ಅವರಿಗೆ ಇಬ್ಬರು ಪತ್ನಿಯರು ಹಾಗೂ ನಾಲ್ವರು ಮಕ್ಕಳಿದ್ದಾರೆ.    

ವಿಧಾನಸಭಾ ಚುನಾವಣೆ ಹಿನ್ನೆಲೆ.!   ➤ಆಸ್ತಿ ವಿವರದ ಜತೆಗೆ ಇಬ್ಬರು ಪತ್ನಿಯರು ಇರುವುದಾಗಿ ಘೋಷಿಸಿದ ಎಎಪಿ ಅಭ್ಯರ್ಥಿ!  Read More »

ಕರ್ನಾಟಕ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ದಿನಗಳಲ್ಲಿ ಭಾರೀ ಬದಲಾವಣೆ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.20. ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಕುರಿತು, ಪ್ರಮುಖ ದಿನಾಂಕಗಳ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದೆ. ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ, ಮಕ್ಕಳ ಶಾಲಾ ದಿನಗಳ ಸಂಖ್ಯೆಯನ್ನು 26 ದಿನಗಳು ಕಡಿತಗೊಂಡಿವೆ. ಹೀಗಾಗಿ ಈ ವರ್ಷ ಒಟ್ಟು 244 ಶಾಲಾ ದಿನಗಳು

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ದಿನಗಳಲ್ಲಿ ಭಾರೀ ಬದಲಾವಣೆ Read More »

ಕರ್ನಾಟಕ

ಉದ್ಯೋಗಿಯನ್ನು ಮರವೊಂದಕ್ಕೆ ಕಟ್ಟಿ ಹಾಕಿ ಹಲ್ಲೆ    ➤ ದೂರು ದಾಖಲು

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಏ.20. ನಿವೃತ್ತ BSNL ಉದ್ಯೋಗಿಯನ್ನು ಮರವೊಂದಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ. ಪೂಂದಾಡು ನಿವಾಸಿ ಲಕ್ಷ್ಮಿ ನಾರಾಯಣ ಅವರ ಮೇಲೆ ಆರೋಪಿಗಳಾದ ಶೈಲೇಶ್‌, ವಿಠ್ಠಲ್, ರಂಜಿತ್‌ ಹಾಗೂ ಇನ್ನಿಬ್ಬರು ಕೈಯಿಂದ, ಹೆಲ್ಮೆಟ್‌, ಬೆಲ್ಟ್‌ಗಳಿಂದ ಹೊಡೆದಿರುವ ಆರೋಪ ಮಾಡಲಾಗಿದೆ.  

ಉದ್ಯೋಗಿಯನ್ನು ಮರವೊಂದಕ್ಕೆ ಕಟ್ಟಿ ಹಾಕಿ ಹಲ್ಲೆ    ➤ ದೂರು ದಾಖಲು Read More »

ಕರಾವಳಿ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..!   ➤ ‘ಕಲಿಯುವಾಗಲೇ ಗಳಿಸಿರಿ’ ಯೋಜನೆ ಜಾರಿ!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.20 ವಿದ್ಯಾರ್ಥಿಗಳಿಗೆ ಕಲಿಯುವಾಗಲೇ ಕೆಲಸ ನೀಡಲಾಗುವುದು. ಕ್ಯಾಂಪಸ್ ನಲ್ಲೇ ಅರೆಕಾಲಿಕ ಕೆಲಸ ನೀಡಲಾಗುತ್ತದೆ. ವಾರಕ್ಕೆ 20 ಗಂಟೆ ಉದ್ಯೋಗ ಕಲ್ಪಿಸುವ ಕುರಿತಂತೆ ಯುಜಿಸಿ ಕರಡು ವರದಿ ಬಿಡುಗಡೆ ಮಾಡಲಾಗಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಕಲಿಯುವಾಗಲೇ ಗಳಿಸಿರಿ ಎಂಬ ಯೋಜನೆಯನ್ನು ಜಾರಿ ಮಾಡಲು ಯುಜಿಸಿ ಮುಂದಾಗಿದೆ.    

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..!   ➤ ‘ಕಲಿಯುವಾಗಲೇ ಗಳಿಸಿರಿ’ ಯೋಜನೆ ಜಾರಿ! Read More »

ರಾಷ್ಟ್ರೀಯ ನ್ಯೂಸ್

ನಿಷೇಧಿತ ಇ-ಸಿಗರೇಟ್‌ ವಿರುದ್ಧ ಪೊಲೀಸರ ಕಾರ್ಯಾಚರಣೆ ➤ ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಉಡುಪಿ, ಏ. 20. ಐ.ಟಿ.ಸಿ ಕಂಪೆನಿಯ ಗೋಲ್ಡ್ ಫ್ಲೇಕ್ ನಕಲಿ ಸಿಗರೇಟ್‌ಗಳು, ವಿದೇಶಿ ಕಂಪನಿಯ ಸಿಗರೇಟ್ ಹಾಗೂ ನಿಷೇಧಿತ ಇ- ಸಿಗರೇಟ್‌ ವಿರುದ್ಧ ಉಡುಪಿ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದು, 3 ಪ್ರಕರಣಗಳಲ್ಲಿ 4 ಆರೋಪಿಗಳನ್ನು ಬಂಧಿಸಿ 6,34,970 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಪ್ರಿಲ್ 17 ರಂದು ಪಡುಬಿದ್ರಿ ಪೊಲೀಸರು ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 4,79,970 ರೂಪಾಯಿ ಮೌಲ್ಯದ ಇ ಸಿಗರೇಟ್ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದರು.

ನಿಷೇಧಿತ ಇ-ಸಿಗರೇಟ್‌ ವಿರುದ್ಧ ಪೊಲೀಸರ ಕಾರ್ಯಾಚರಣೆ ➤ ನಾಲ್ವರು ಆರೋಪಿಗಳ ಬಂಧನ Read More »

ಕರಾವಳಿ

ಚೀನಾ ಗಡಿಯಲ್ಲಿ ಅಲರ್ಟ್ ಆಗಿರಿ ➤ ಭೂಸೇನೆಗೆ ರಕ್ಷಣಾ ಸಚಿವ ರಾಜನಾಥ್ ಸೂಚನೆ

(ನ್ಯೂಸ್ ಕಡಬ) newskadaba.com. ಹೊಸದಿಲ್ಲಿ, ಏ.20. ನೆರೆಯ ಚೀನಾ ಗಡಿಯಲ್ಲಿ ಗಸ್ತು ಹೆಚ್ಚಿಸುವ ಮೂಲಕ ಹೆಚ್ಚಿನ ನಿಗಾ ವಹಿಸಿ ಎಂದು ಕೇಂದ್ರ ಸರಕಾರ, ಭೂಸೇನಾಪಡೆಗೆ ಸೂಚನೆ ನೀಡಿದೆ. ಸೇನಾ ಕಮಾಂಡರ್‌ಗಳ ಸಮ್ಮೇಳನದಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಇಂಥದ್ದೊಂದು ಸೂಚನೆ ಕೊಟ್ಟಿದ್ದಾರೆ ಎಂದು ಮೂಲಗಳು ಹೇಳಿವೆ. ಚೀನಾಗೆ ಹೊಂದಿಕೊಂಡಿರುವ ವಾಸ್ತವ ನಿಯಂತ್ರಣ ರೇಖೆಯುದ್ದಕ್ಕೂ (ಎಲ್‌ಎಸಿ) ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ ಎಂದು ಗುಪ್ತಚರ ವರದಿ ಹಿನ್ನೆಲೆಯಲ್ಲಿ ಸಚಿವರ ಈ ಸೂಚನೆ ಮಹತ್ವ ಪಡೆದಿದೆ.  ‘ಉತ್ತರ ವಲಯದಲ್ಲಿ ಚೀನಾದ

ಚೀನಾ ಗಡಿಯಲ್ಲಿ ಅಲರ್ಟ್ ಆಗಿರಿ ➤ ಭೂಸೇನೆಗೆ ರಕ್ಷಣಾ ಸಚಿವ ರಾಜನಾಥ್ ಸೂಚನೆ Read More »

ರಾಷ್ಟ್ರೀಯ ನ್ಯೂಸ್
Scroll to Top