News Kadaba

ಹಣಕಾಸಿನ ಸಮಸ್ಯೆ ➤ ಮಹಿಳಾ ಚೆಸ್‌ ಪಂದ್ಯಕ್ಕೆ ಬುರ್ಖಾ ಧರಿಸಿ ಬಂದ ಯುವಕ

(ನ್ಯೂಸ್ ಕಡಬ) newskadaba.com. ನೈರೋಬಿ, ಏ.17. ಕೀನ್ಯಾದಲ್ಲಿ ಕಳೆದ ವಾರ ಮಹಿಳಾ ಮುಕ್ತ ಚೆಸ್ ಪಂದ್ಯಾವಳಿ ನಡೆದಿದ್ದು, ಈ ಪಂದ್ಯಾವಳಿಯಲ್ಲಿ ಬುರ್ಖಾ ಹಾಕಿಕೊಂಡು ಮಹಿಳೆಯಂತೆ ವ್ಯಕ್ತಿಯೊಬ್ಬ ಸ್ಪರ್ಧಾಳಾಗಿ ಭಾಗವಹಿಸಿ ಸಿಕ್ಕಿ ಬಿದ್ದಿರುವ ಘಟನೆ ವರದಿಯಾಗಿದೆ. ಕೀನ್ಯಾ ಮೂಲದ ಸ್ಟಾನ್ಲಿ ಒಮೊಂಡಿ ಎಂಬ ವ್ಯಕ್ತಿ ಆರ್ಥಿಕವಾಗಿ ತೀರ ಸಂಕಷ್ಟದಲ್ಲಿದ್ದು, ಹಣಗಳಿಸುವ ಉದ್ದೇಶದಿಂದ ನೈರೋಬಿಯಲ್ಲಿ ನಡೆದ ಮಹಿಳಾ ಮುಕ್ತ ಚೆಸ್ ಪಂದ್ಯಾವಳಿಯಲ್ಲಿ ಭಾಗಿಯಾಗಿದ್ದಾನೆ. ಇನ್ನು ತನ್ನ ಪರಿಚಯ ಯಾರಿಗೂ ತಿಳಿಯಬಾರದು ಎಂಬ ಕಾರಣಕ್ಕೆ ಬುರ್ಖಾವನ್ನು ಧರಿಸಿಕೊಂಡು, ಕನ್ನಡಕವೊಂದನ್ನು ಹಾಕಿಕೊಂಡು ತನ್ನ […]

ಹಣಕಾಸಿನ ಸಮಸ್ಯೆ ➤ ಮಹಿಳಾ ಚೆಸ್‌ ಪಂದ್ಯಕ್ಕೆ ಬುರ್ಖಾ ಧರಿಸಿ ಬಂದ ಯುವಕ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ ರಾಜ್ಯದ ನಂ.1 ಶ್ರೀಮಂತ ದೇವಸ್ಥಾನ ➤ 123 ಕೋಟಿ ರೂ. ಆದಾಯ

(ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ, ಏ.17. ನಾಗಾರಾಧನೆಗೆ ಪ್ರಸಿದ್ಧಿ ಪಡೆದ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಈ ಬಾರಿಯೂ 123 ಕೋಟಿ ರೂ. ಆದಾಯ ಗಳಿಸಿದೆ.  2022ರ ಏಪ್ರಿಲ್‌ನಿಂದ 2023ರ ಮಾ.31ರವರೆಗಿನ ಆರ್ಥಿಕ ವರ್ಷದಲ್ಲಿ 123,64,49,480 ರೂ. ಆದಾಯ ಗಳಿಸಿದೆ. ದೇವಾಲಯಕ್ಕೆ ಹರಕೆ ಸೇವೆ, ಕಾಣಿಕೆ ಮಾತ್ರವಲ್ಲದೇ ಬಡ್ಡಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಕೃಷಿ ತೋಟದಿಂದಲೂ ಆದಾಯ ಬರುತ್ತದೆ. ಕೊರೊನಾ ಸಾಂಕ್ರಮಿಕದ ಹಿನ್ನಲೆಯಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಭಂಧವಿದ್ದ ಕಾರಣ 2021-22ನೇ ಸಾಲಿನಲ್ಲಿ ಕೇವಲ 72,73,23,758 ರೂ.

ಕುಕ್ಕೆ ಸುಬ್ರಹ್ಮಣ್ಯ ರಾಜ್ಯದ ನಂ.1 ಶ್ರೀಮಂತ ದೇವಸ್ಥಾನ ➤ 123 ಕೋಟಿ ರೂ. ಆದಾಯ Read More »

ಕರಾವಳಿ, ಕರ್ನಾಟಕ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 130 ಸೀಟು ಖಚಿತ ➤ವೀರಪ್ಪ ಮೊಯ್ಲಿ

(ನ್ಯೂಸ್ ಕಡಬ) newskadaba.com. ನವದೆಹಲಿ, ಏ.17. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಕನಿಷ್ಠ 130 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಗೆ ಹೆಬ್ಬಾಗಿಲು ಎಂಬ ವಿಚಾರವೇ ಈ ವಿಧಾನಸಭೆ ಚುನಾವಣೆಯಲ್ಲಿ ಅಳಿಸಿ ಹೋಗಲಿದೆ. ಈ ವಿಧಾನಸಭಾ ಚುನಾವಣೆಯ ಫಲಿತಾಂಶ ಬಿಜೆಪಿಯ ದಕ್ಷಿಣ ಭಾರತದ ಹೆಬ್ಬಾಗಿಲನ್ನು ಸಂಪೂರ್ಣವಾಗಿ ಮುಚ್ಚಲಿದೆ  ಎಂದು ಹೇಳಿದರು. ಜೆಡಿಎಸ್ ಕೂಡ ಬಿಜೆಪಿ ಜತೆ ರಹಸ್ಯ ಹೊಂದಾಣಿಕೆ ಮಾಡಿಕೊಂಡಿದೆ. ಕೇಂದ್ರದಲ್ಲಿ ಸರಕಾರ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 130 ಸೀಟು ಖಚಿತ ➤ವೀರಪ್ಪ ಮೊಯ್ಲಿ Read More »

ಕರ್ನಾಟಕ

ಸ್ವಚ್ಚಗೊಳಿಸಲೆಂದು ಬಾವಿಗೆ ಇಳಿದ ವ್ಯಕ್ತಿ ➤ಅಗ್ನಿಶಾಮಕ ದಳದಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಏ.17. ಸ್ವಚ್ಚಗೊಳಿಸಲೆಂದು ಬಾವಿಗೆ ಇಳಿದ ವ್ಯಕ್ತಿ ಮೇಲೆ ಹತ್ತಲು ಸಾಧ್ಯವಾಗದೇ ಅಗ್ನಿಶಾಮಕ ದಳವು ರಕ್ಷಿಸಿದ ಘಟನೆ ನಗರದ ಬಂಡೀಮಠ ಪರಿಸರದಲ್ಲಿ ನಡೆದಿದೆ.  ಬಂಡಿಮಠ ಬಳಿ ಗೋಪನಾಥ ಪುರಾಣಿಕ್ ರವರಿಗೆ ಸೇರಿದ ಬಾವಿಯಲ್ಲಿ ಪವನ್ ಪೂಜಾರಿ(32)ಎಂಬವರು ಸಿಲುಕಿಕೊಂಡಿದ್ದರು. ಅವರು ಬಾವಿಯ ಸ್ವಚತೆಗಾಗಿ ಇಳಿದು, ಮೇಲಕ್ಕೆ ಬರಲಾಗದೇ ಅಶಕ್ತರಾಗಿ ಉಳಿದುಕೊಂಡಿದ್ದಾರೆಂಬ ಮಾಹಿತಿಯು ಅಗ್ನಿಶಾಮಕ ದಳಕ್ಕೆ ತಲುಪಿತು. ಅದರ ಹಿನ್ನಲೆಯಲ್ಲಿ ಅಗ್ನಿಶಾಮಕ ದಳ ಸ್ಥಳಕ್ಕೆ ದಾವಿಸಿ ವ್ಯಕ್ತಿಯನ್ನು ಬಾವಿಯಿಂದ ಮೇಲಕ್ಕೆ ಎತ್ತಿ ರಕ್ಷಣೆ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ,

ಸ್ವಚ್ಚಗೊಳಿಸಲೆಂದು ಬಾವಿಗೆ ಇಳಿದ ವ್ಯಕ್ತಿ ➤ಅಗ್ನಿಶಾಮಕ ದಳದಿಂದ ರಕ್ಷಣೆ Read More »

ಕರಾವಳಿ

‘ನಾನು ಜಗದೀಶ್ ಶೆಟ್ಟರ್‌‌ಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡುತ್ತಿಲ್ಲ’ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.15. ನಾವು ರಾಜಕಾರಣಕ್ಕೆ ಬರುವುದಕ್ಕಿಂತ ಮೊದಲೇ ಜಗದೀಶ್ ಶೆಟ್ಟರ್ ಹಾಗೂ ನಾನು ಸ್ನೇಹಿತರು. ಅವರಿಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡುತ್ತಿಲ್ಲ. ಅವರ ಬೆಂಬಲಿಗರ ಮಾತಿನಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಸರ್ವ ಪ್ರಯತ್ನ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ನಿತ್ಯವೂ ವರಿಷ್ಠರೊಂದಿಗೆ ಸಂಪರ್ಕದಲ್ಲಿದ್ದೇವೆ. ಆದರೆ ತಪ್ಪಿಸಲು ಕೆಲಸ ಮಾಡುತ್ತಿದ್ದಾರೆ ಎನ್ನುವುದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದರು.

‘ನಾನು ಜಗದೀಶ್ ಶೆಟ್ಟರ್‌‌ಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡುತ್ತಿಲ್ಲ’ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

‘2023ರಲ್ಲಿ ಭಾರತವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ’ ➤ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ)newskadaba.com ನವದೆಹಲಿ, ಏ.15. ಅಂತರರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವ ಬ್ಯಾಂಕ್ 2023 ರಲ್ಲಿ ಭಾರತವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ವ್ಯವಸ್ಥಾಪಕ ನಿರ್ದೇಶಕರ ಜಾಗತಿಕ ನೀತಿ ಕಾರ್ಯಸೂಚಿಯಲ್ಲಿ ಗುರುತಿಸಲಾದ ಆದ್ಯತೆಗಳ ಕುರಿತು ಚರ್ಚಿಸಲು ಐಎಂಎಫ್ ಪ್ರಧಾನ ಕಚೇರಿಯಲ್ಲಿ ನಡೆದ ಅಂತರರಾಷ್ಟ್ರೀಯ ಹಣಕಾಸು ಮತ್ತು ಹಣಕಾಸು ಸಮಿತಿಯ ಸಮಗ್ರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತೀಯ ಆರ್ಥಿಕತೆಯು ಇದೇ ಹಾದಿಯಲ್ಲಿಯೇ ಇರುತ್ತದೆ ಮತ್ತು 2022-23 ರಲ್ಲಿ ಶೇಕಡಾ

‘2023ರಲ್ಲಿ ಭಾರತವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ’ ➤ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ Read More »

ರಾಷ್ಟ್ರೀಯ ನ್ಯೂಸ್

ಮಹಿಳಾ ಚೆಸ್‌ ಪಂದ್ಯಕ್ಕೆ ಬುರ್ಖಾ ಧರಿಸಿ ಬಂದ ಯುವಕ

(ನ್ಯೂಸ್ ಕಡಬ)newskadaba.com  ನೈರೋಬಿ, ಏ.15. ಕಳೆದ ವಾರ ಮಹಿಳಾ ಮುಕ್ತ ಚೆಸ್ ಪಂದ್ಯಾವಳಿ ನಡೆದಿದ್ದು, ಈ ಪಂದ್ಯಾವಳಿಯಲ್ಲಿ ಬುರ್ಖಾ ಹಾಕಿಕೊಂಡು ಮಹಿಳೆಯಂತೆ ವ್ಯಕ್ತಿಯೊಬ್ಬ ಸ್ಪರ್ಧಾಳಾಗಿ ಭಾಗವಹಿಸಿ ಸಿಕ್ಕಿ ಬಿದ್ದಿರುವ ಘಟನೆ ವರದಿಯಾಗಿದೆ. ಕೀನ್ಯಾ ಮೂಲದ ಸ್ಟಾನ್ಲಿ ಒಮೊಂಡಿ ಎಂಬ ವ್ಯಕ್ತಿ ಆರ್ಥಿಕವಾಗಿ ತೀರ ಸಂಕಷ್ಟದಲ್ಲಿದ್ದು, ಹಣಗಳಿಸುವ ಉದ್ದೇಶದಿಂದ ನೈರೋಬಿಯಲ್ಲಿ ನಡೆದ ಮಹಿಳಾ ಮುಕ್ತ ಚೆಸ್ ಪಂದ್ಯಾವಳಿಯಲ್ಲಿ ಭಾಗಿಯಾಗಿದ್ದಾನೆ.

ಮಹಿಳಾ ಚೆಸ್‌ ಪಂದ್ಯಕ್ಕೆ ಬುರ್ಖಾ ಧರಿಸಿ ಬಂದ ಯುವಕ Read More »

ರಾಷ್ಟ್ರೀಯ ನ್ಯೂಸ್

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ 13 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಮುಂಬಯಿ, ಏ.15. ಮಹಾರಾಷ್ಟ್ರದಲ್ಲಿ ನಸುಕಿನಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತ ದುರಂತದಲ್ಲಿ ಕನಿಷ್ಠ 13 ಮಂದಿ ಮೃತಪಟ್ಟಿದ್ದಾರೆ. ಇನ್ನೂ 27 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ರಾಯಗಡ ಜಿಲ್ಲೆಯಲ್ಲಿ ಹಳೆ ಮುಂಬಯಿ- ಪುಣೆ ಹೆದ್ದಾರಿಯಲ್ಲಿನ ಕಂದಕಕ್ಕೆ ಬಸ್ ಉರುಳಿ ಬಿದ್ದು ಈ ಅಪಘಾತ ಸಂಭವಿಸಿದೆ.

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ 13 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

43 ಅಭ್ಯರ್ಥಿಗಳ ಕಾಂಗ್ರೆಸ್‌ ನ ಮೂರನೇ ಪಟ್ಟಿ ರಿಲೀಸ್‌    ➤ ಕೋಲಾರದಿಂದ ಸಿದ್ದರಾಮಯ್ಯಗೆ ಟಿಕೆಟ್‌ ಇಲ್ಲ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.15. ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ ಎಂದು ವರದಿ ತಿಳಿಸಿದೆ. ಈಗಾಗಲೇ ಮೊದಲ ಪಟ್ಟಿಯಲ್ಲಿ 124 ಹಾಗೂ ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದ ಕಾಂಗ್ರೆಸ್‌ ಈಗ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದು, ಇನ್ನು 15 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ ಎಂದು ವರದಿಯಾಗಿದೆ.  

43 ಅಭ್ಯರ್ಥಿಗಳ ಕಾಂಗ್ರೆಸ್‌ ನ ಮೂರನೇ ಪಟ್ಟಿ ರಿಲೀಸ್‌    ➤ ಕೋಲಾರದಿಂದ ಸಿದ್ದರಾಮಯ್ಯಗೆ ಟಿಕೆಟ್‌ ಇಲ್ಲ Read More »

ಕರ್ನಾಟಕ

ನಟ ಚೇತನ್‌ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.15. ಹಿಂದುಗಳನ್ನು ಕೆರಳಿಸುವಂಥ ಹೇಳಿಕೆಗಳನ್ನು ನೀಡುವ ಮೂಲಕವೇ ಸುದ್ದಿಯಾಗುತ್ತಿದ್ದ ನಟ ಚೇತನ್‌ ಅಹಿಂಸಾ ಅವರ ಸಾಗರೋತ್ತರ ವೀಸಾವನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ನಟ ಚೇತನ್ ವೀಸಾ ರದ್ದುಗೊಳಿಸಿ ಕೇಂದ್ರ ಗೃಹ ಇಲಾಖೆ ನೋಟಿಸ್‌ ಜಾರಿ ಮಾಡಿದೆ. ಸಾಗರೋತ್ತರ ಭಾರತೀಯ ನಾಗರೀಕ ವೀಸಾ ಹೊಂದಿದ್ದ ಚೇತನ್‌, ಹೋರಾಟದ ಮೂಲಕವೇ ಇಲ್ಲಿ ಸುದ್ದಿಯಾಗಿದ್ದರು. ಏಪ್ರಿಲ್ 14 ರಂದು, ಚೇತನ್ ಅವರು ಮಾರ್ಚ್ 28 ರಂದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯಿಂದ (FRRO) ಪತ್ರವನ್ನು ಸ್ವೀಕರಿಸಿದ್ದಾರೆ

ನಟ ಚೇತನ್‌ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಸರ್ಕಾರ Read More »

ಕರ್ನಾಟಕ
Scroll to Top