News Kadaba

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 18 ಲಕ್ಷ ಹಣ ಜಪ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.15. ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಚಾಣದ ಸದ್ದು‌ ಜೋರಾಗಿದೆ. ತಡರಾತ್ರಿ ಬಸವನಗುಡಿ ಪೊಲೀಸರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 18 ಲಕ್ಷ ಹಣವನ್ನ ಜಪ್ತಿ ಮಾಡಿದ್ದಾರೆ‌. ರಿಷಭ್ ಎಂಬಾತನಿಂದ ಹಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹ್ಯುಂಡೈ ಕ್ರೆಟಾ ಕಾರಿನಲ್ಲಿ ಹೋಗುತ್ತಿದ್ದ ರಿಷಭ್ ಎಂಬಾತನನ್ನ ಪೊಲೀಸರು ತಡೆದು ಪರಿಶೀಲನೆ ನಡೆಸಿದ್ದರು. ಈ ವೇಳೆ 2 ಸಾವಿರ, 500 ಹಾಗೂ‌ 200 ರೂ. ಮುಖಬೆಲೆಯ ಒಟ್ಟು 18 ಲಕ್ಷ ರೂ‌ ನಗದು ಪತ್ತೆಯಾಗಿದೆ. ಸದ್ಯ […]

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 18 ಲಕ್ಷ ಹಣ ಜಪ್ತಿ Read More »

ಕರ್ನಾಟಕ

ಘಟಪ್ರಭಾ ಜಲಾಶಯದಲ್ಲಿ ನಾಲ್ವರು ಯುವಕರು ನೀರು ಪಾಲು

(ನ್ಯೂಸ್ ಕಡಬ)newskadaba.com ಗೋಕಾಕ, ಏ.15. ಪ್ರವಾಸಕ್ಕೆಂದು ಬಂದಿದ್ದ ಶಿರಸಿ ಸಮೀಪದ ಮುಂಡಗೋಡ ಯುವಕರು ಗೋಕಾಕ ತಾಲೂಕಿನ ಘಟಪ್ರಭಾ ಸಮೀಪದ ಧುಪದಾಳ ಜಲಾಶಯದಲ್ಲಿ ಈಜುತ್ತಿದ್ದಾಗ ಕೆಸರಿನಲ್ಲಿ ಸಿಲುಕಿ ನಾಲ್ವರು ಮೃತಪಟ್ಟ ಘಟನೆ ಸಂಭವಿಸಿದೆ. 12 ಜನ ಯುವಕರ ಗುಂಪಿನಲ್ಲಿ ಆರೇಳು ಜನ ಈಜಾಡಲು ಹೋಗಿದ್ದರು. ಈ ವೇಳೆ ಈಜುವಾಗ ಜಲಾಶಯದ ಮಣ್ಣಿ ಕೆಸರಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ.‌ ಉತ್ತರ‌ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಸಿರಿಗೆರೆ ಗ್ರಾಮದ ಸಂತೋಷ‌ ಈಡಿಗ(19), ಅಜಯ ಬಾಬು ಜೋಕಿ(19), ಕೃಷ್ಣಾ ಜೋಕಿ(20), ಆನಂದ ವಿಷ್ಣು

ಘಟಪ್ರಭಾ ಜಲಾಶಯದಲ್ಲಿ ನಾಲ್ವರು ಯುವಕರು ನೀರು ಪಾಲು Read More »

ಕರ್ನಾಟಕ

ಪೊಲೀಸ್ ‌ಠಾಣೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಏ.15. ಮಹಿಳೆಯೊಬ್ಬರು ಮೂಡಿಗೆರೆ ಪೊಲೀಸ್ ಠಾಣೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಹಳೆ ಮೂಡಿಗೆರೆ ಗ್ರಾಮದ ಶಿಲ್ಪ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯಾಗಿದ್ದು, ಆಕೆಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಹಳೆ ಮೂಡಿಗೆರೆ ಗ್ರಾಮದ ಶಿಲ್ಪ ಮತ್ತು ಆಕೆಯ ಅಕ್ಕನ ನಡುವೆ 2022ರಲ್ಲಿ ಗಲಾಟೆಯಾಗಿತ್ತು, ಈ ವಿಷಯಕ್ಕೆ ಇಬ್ಬರು ಅಕ್ಕ ತಂಗಿಯರು ದೂರು ನೀಡಲು ಮೂಡಿಗೆರೆ ಠಾಣೆಗೆ ಹೋಗಿದ್ದರು ಎನ್ನಲಾಗಿದೆ.

ಪೊಲೀಸ್ ‌ಠಾಣೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ Read More »

ಕರ್ನಾಟಕ

ಸಿಎಂ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಹಾವೇರಿ, ಏ.15. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾವಿ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಪಟ್ಟಣದ ದ್ಯಾಮವ್ವ ಗುಡಿಗೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ಹಾಗೂ ಕಿತ್ತೂರ ರಾಣಿ ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ತಹಶೀಲ್ದಾರ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ Read More »

ಕರ್ನಾಟಕ

ಬಿಜೆಪಿ ಮುಖಂಡನ ಗುಂಡಿಕ್ಕಿ ಕೊಂದ ಅಪರಿಚಿತ ದುಷ್ಕರ್ಮಿಗಳು

(ನ್ಯೂಸ್ ಕಡಬ)newskadaba.com ನವದೆಹಲಿ, ಏ.15. ದೆಹಲಿಯ ದ್ವಾರಕಾ ಜಿಲ್ಲೆಯ ಬಿಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಟಿಯಾಲ ರಸ್ತೆಯಲ್ಲಿರುವ ಅವರ ಕಚೇರಿಯಲ್ಲಿ ಸ್ಥಳೀಯ ಬಿಜೆಪಿ ಮುಖಂಡ ಸುರೇಂದ್ರ ಮಟಿಯಾಲ ಅವರನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಇಬ್ಬರು ಅಪರಿಚಿತ ದುಷ್ಕರ್ಮಿಗಳು ಕಚೇರಿಗೆ ನುಗ್ಗಿ ಮನಬಂದಂತೆ ಗುಂಡು ಹಾರಿಸಿದರು ಎಂದು ಮೃತ ರಾಮ್ ಸಿಂಗ್ ಅವರ ಸೋದರ ಸಂಬಂಧಿ ತಿಳಿಸಿದ್ದಾರೆ.

ಬಿಜೆಪಿ ಮುಖಂಡನ ಗುಂಡಿಕ್ಕಿ ಕೊಂದ ಅಪರಿಚಿತ ದುಷ್ಕರ್ಮಿಗಳು Read More »

ರಾಷ್ಟ್ರೀಯ ನ್ಯೂಸ್

KSRTC ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.15. ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ಕೆಎಸ್ಆರ್‌‌ಟಿಸಿ ಬಸ್ ಸ್ಕೂಟರ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ ಮೂಲ್ಯ (60) ಮೃತಪಟ್ಟ ವ್ಯಕ್ತಿ. ಡೊಂಬಯ್ಯ ಅವರು ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಜಕ್ರಿಬೆಟ್ಟು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಸರಕಾರಿ ಬಸ್ ಹಿಂಬದಿಯಿಂದ ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸವಾರ

KSRTC ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು Read More »

ಕರಾವಳಿ

ಪತ್ನಿಯ ಕೊಲೆಗೆ ಯತ್ನಿಸಿ ಪತಿ ಆತ್ಮಹತ್ಯೆ ➤ ದೂರು ದಾಖಲು

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.15. ಪತ್ನಿಯ ಕೊಲೆಗೆತ್ನಿಸಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆದೂರು ಠಾಣಾ ವ್ಯಾಪ್ತಿಯ ಬೋವಿಕ್ಕಾನದಲ್ಲಿ ನಡೆದಿದೆ. ಮುದಲಪ್ಪಾರೆಯ ಮಣಿ (40) ಆತ್ಮಹತ್ಯೆಗೈದವರು ಎಂದು ಗುರುತಿಸಲಾಗಿದೆ. ಪತ್ನಿ ಸುಗಂಧಿ(35)ಯನ್ನು ಇರಿತದ ಗಾಯಗಳೊಂದಿಗೆ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಷುಲ್ಲಕ್ಕ ಕಾರಣಕ್ಕಾಗಿ ಮಧ್ಯಾಹ್ನ ಇಬ್ಬರ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ. ಈ ಸಂದರ್ಭದಲ್ಲಿ ಮಣಿ ಪತ್ನಿ ಸುಗಂಧಿಗೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ಬಳಿಕ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ.ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ಪತ್ನಿಯ ಕೊಲೆಗೆ ಯತ್ನಿಸಿ ಪತಿ ಆತ್ಮಹತ್ಯೆ ➤ ದೂರು ದಾಖಲು Read More »

ರಾಷ್ಟ್ರೀಯ ನ್ಯೂಸ್

ಹೊಲದಲ್ಲಿ ಗಾಂಜಾ ಬೆಳೆದ ವ್ಯಕ್ತಿ ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ವಿಜಯಪುರ, ಏ.15. ವ್ಯಕ್ತಿಯೋರ್ವ ತನ್ನ ಹೊಲದಲ್ಲಿ ಬೆಳೆಸಿದ್ದ ಗಾಂಜಾ ಗಿಡವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಮಲಗಲದಿನ್ನಿ ಗ್ರಾಮ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮಲಗಲದಿನ್ನಿ ಗ್ರಾಮ ವ್ಯಾಪ್ತಿಯ ಬಸವರಾಜ ಮಲ್ಲೇಶಪ್ಪ ಬಿರಾದಾರ ಎಂಬಾತನ ಹೊಲದಲ್ಲಿ ಬೆಳೆಗಳ ಮಧ್ಯೆ ಕಾನೂನು ಬಾಹಿರವಾಗಿ ಬೆಳೆಸಿದ್ದ ಸುಮಾರು 1.80 ಲಕ್ಷ ಮೌಲ್ಯದ 36.820 ಕೆಜಿಯಷ್ಟು ಹಸಿ ಗಾಂಜಾ ಬೆಳೆಯನ್ನು ಮುದ್ದೇಬಿಹಾಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಾಂಜಾ ಗಿಡ ಬೆಳೆದಿರುವ ಬಗ್ಗೆ ಒದಗಿದ ಖಚಿತ ಮಾಹಿತಿ ಮೇರೆಗೆ ಮುದ್ದೇಬಿಹಾಳ ಸಿಪಿಐ

ಹೊಲದಲ್ಲಿ ಗಾಂಜಾ ಬೆಳೆದ ವ್ಯಕ್ತಿ ➤ ಆರೋಪಿ ಪೊಲೀಸ್ ವಶಕ್ಕೆ Read More »

ಕರ್ನಾಟಕ

ಮದ್ಯ ನೀತಿ ಪ್ರಕರಣ ➤ ಅರವಿಂದ್ ಕೇಜ್ರಿವಾಲ್‌ಗೆ ಸಿಬಿಐನಿಂದ ಸಮನ್ಸ್‌

(ನ್ಯೂಸ್ ಕಡಬ) newskadaba.com. ನವದೆಹಲಿ, ಏ.15. ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಅರವಿಂದ್ ಕೇಜ್ರಿವಾಲ್ ಅವರಿಗೆ ಏಪ್ರಿಲ್. 16 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದು, ಇದಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದ ನಂತರ ಕೇಂದ್ರ ಸರ್ಕಾರ ತಮ್ಮ ಮೇಲೆ ಒತ್ತಡ ಹೇರುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಇನ್ನು ಎಎಪಿ ನಾಯಕ

ಮದ್ಯ ನೀತಿ ಪ್ರಕರಣ ➤ ಅರವಿಂದ್ ಕೇಜ್ರಿವಾಲ್‌ಗೆ ಸಿಬಿಐನಿಂದ ಸಮನ್ಸ್‌ Read More »

ರಾಷ್ಟ್ರೀಯ ನ್ಯೂಸ್
crime, arrest, suspected

ಮಂಗಳೂರು: ಅಕ್ರಮ ಗಾಂಜಾ ಮಾರಾಟ ➤ ಮೆಡಿಕಲ್ ವಿದ್ಯಾರ್ಥಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.15. ಗಾಂಜಾ ಮಾರಾಟ ಆರೋಪದಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಹಿತ ಮೂರು ಮಂದಿಯನ್ನು ಮಂಗಳೂರು ದಕ್ಷಿಣ ಠಾಣೆ ಮತ್ತು ಮಂಗಳೂರು ಸಿಸಿಬಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ. ವೆಲೆನ್ಸಿಯಾ, ಗೋರಿಗುಡ್ಡೆಯ ಪ್ರಜ್ವಲ್ ಫಿನ್ಹಾನ್ (26), ಸಕಲೇಶಪುರದ ಧ್ರುವ ಶೆಟ್ಟಿ(19) ಮತ್ತು ಕುಳಾಯಿಯ ಶಿವಾನಿ (22) ಬಂಧಿತ ಆರೋಪಿಗಳು. ಬಂಧಿತರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರೆನ್ನಲಾಗಿದೆ. ಬಂಧಿತರಿಂದ ಸುಮಾರು 1,40,000 ರೂ. ಮೌಲ್ಯದ

ಮಂಗಳೂರು: ಅಕ್ರಮ ಗಾಂಜಾ ಮಾರಾಟ ➤ ಮೆಡಿಕಲ್ ವಿದ್ಯಾರ್ಥಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top