News Kadaba

ಮಂಗಳೂರು: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.15. 2018ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಲವು ಅಪರಾಧ ಪ್ರಕರಣಗಳ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ನಿವಾಸಿ ಆನಂದ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನ ವಿರುದ್ದ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಕಲಂ 365, 395, 326, 506 ಮತ್ತು 324 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈತನು ಬಯಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಎ ಒನ್ ರೌಡಿಯಾಗಿದ್ದು ಈತನ ವಿರುದ್ಧ ಬೈಲುಕೊಪ್ಪ, ಹಾಸನ, ಬೆಟ್ಟದಹಳ್ಳಿ, ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು […]

ಮಂಗಳೂರು: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ

➤ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಾರು ಪರಿಶೀಲನೆ

(ನ್ಯೂಸ್ ಕಡಬ) newskadaba.com, ಚಾರ್ಮಾಡಿ,  ಏ.15. ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕಟ್ಟು ನಿಟ್ಟಿನ ವಾಹನ ತಪಾಸಣೆ ನಡೆಸುತ್ತಿದ್ದು, ಅಧಿಕಾರಿಗಳು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಜಿಲ್ಲಾಧ್ಯಕ್ಷ ಸುದರ್ಶನ ಅವರ ಕಾರನ್ನು ತಡೆದು ತಪಾಸಣೆ ನಡೆಸಿದ್ದಾರೆ‌. ಅಧಿಕಾರಿ ಜಯಕೀರ್ತಿ ಹೆಚ್.ಬಿ. ಅವರಿದ್ದ ತಂಡವು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿರುವ ಇನೋವಾ ಕಾರು ಹಾಗೂ ಐದು ಪೊಲೀಸ್ ಭದ್ರತಾ ವಾಹನದೊಂದಿಗೆ ಬೆಂಗಳೂರಿನಿಂದ ಮಂಗಳೂರಿಗೆ ಚಾರ್ಮಾಡಿ ಘಾಟ್ ರಸ್ತೆ ಮೂಲಕ ಬರುತ್ತಿದ್ದಾಗ

➤ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಾರು ಪರಿಶೀಲನೆ Read More »

ಕರ್ನಾಟಕ

ಬಂಟ್ವಾಳ: ಹೃದಯಾಘಾತದಿಂದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.15. ಹೃದಯಾಘಾತದಿಂದ ಅವಿವಾಹಿತ ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ. ಬಂಟ್ವಾಳ ನಿವಾಸಿ ಧೀರಜ್ ಮೃತ ಯುವಕ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಧೀರಜ್ ರಾತ್ರಿ ಊಟ ಮಾಡಿ ಮಲಗಿದ್ದರು. ಮಲಗಿದ್ದಲ್ಲಿಯೇ ಮೃತಪಟ್ಟಿದ್ದರು. ಈ ಬಗ್ಗೆ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ  

ಬಂಟ್ವಾಳ: ಹೃದಯಾಘಾತದಿಂದ ಯುವಕ ಮೃತ್ಯು Read More »

ಕರಾವಳಿ

ಚಿರಂಜೀವಿ ಸಹೋದರನ ಮಗಳ ದಾಂಪತ್ಯದಲ್ಲಿ ಬಿರುಕು

(ನ್ಯೂಸ್ ಕಡಬ) newskadaba.com, ಹೈದರಾಬಾದ್,  ಏ.15. ಮೆಗಾಸ್ಟಾರ್ ಚಿರಂಜೀವಿ ಅವರ ಸಹೋದರ ನಾಗೇಂದ್ರ ಬಾಬು ಮಗಳು ನಿಹಾರಿಕಾ ಡಿವೋರ್ಸ್ ಸುದ್ದಿಗೆ ಇದೀಗ ಸಾಕ್ಷಿ ಸಿಕ್ಕಿದ್ದು, ಈಗ ಸೋಶಿಯಲ್ ಮೀಡಿಯಾದಲ್ಲಿ ಈ ಸುದ್ದಿ ಸದ್ದು ಮಾಡುತ್ತಿದೆ. ನಿಹಾರಿಕಾ ಅವರು ಚೈತನ್ಯ ಅವರನ್ನ 2020ರಲ್ಲಿ ಪ್ರೀತಿಸಿ, ಅದ್ದೂರಿಯಾಗಿ ಮದುವೆಯಾಗಿದ್ದರು. ಈಗ ಮದುವೆಯಾಗಿ ಎರಡೇ ವರ್ಷಕ್ಕೆ ದಾಂಪತ್ಯ ಬದುಕಿಗೆ ಅಂತ್ಯ ಹಾಡಲಿದ್ದಾರೆ. ಇನ್ನು ಡಿವೋರ್ಸ್ ಬಗ್ಗೆ ಮೌನವಾಗಿರುವ ಈ ಜೋಡಿ, ದಾಂಪತ್ಯದಲ್ಲಿ ಬಿರುಕಾಗಿರುವ ಬಗ್ಗೆ ಸುಳಿವು ಸಿಕ್ಕಿದೆ.  ವೆಂಕಟ ಚೈತನ್ಯ ಅವರು ನಿಹಾರಿಕಾರನ್ನು

ಚಿರಂಜೀವಿ ಸಹೋದರನ ಮಗಳ ದಾಂಪತ್ಯದಲ್ಲಿ ಬಿರುಕು Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೆಚ್ಚ ವೀಕ್ಷಕರ ನೇಮಕ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.15. ಕೇಂದ್ರ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೀಕ್ಷಕರನ್ನು ನಿಯೋಜಿಸಿದೆ. ಈ ಪೈಕಿ ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾ ಇಡಲು ಚುನಾವಣಾ ಖರ್ಚುಗಳ ವೀಕ್ಷಕರು (ಎಕ್ಸೆಂಡಿಚರ್ ಅಬ್ಸರ್ ವರ್) ಜಿಲ್ಲೆಗೆ ಆಗಮಿಸಿದ್ದಾರೆ. 204 ಮಂಗಳೂರು ಹಾಗೂ 205 ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಪ್ರದೀಪ್ ಸಿಂಗ್ ಗೌತಮ್ (ಐಆರ್‌ಎಸ್) ಅವರು ಖರ್ಚು ವೆಚ್ಚಗಳ ವೀಕ್ಷಕರಾಗಿ ಆಗಮಿಸಿದ್ದಾರೆ ಅವರ ಮೊಬೈಲ್ ಸಂಖ್ಯೆ: 9141046507 ಆಗಿದೆ. 206 ಪುತ್ತೂರು ಹಾಗೂ 207 ಸುಳ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೆಚ್ಚ ವೀಕ್ಷಕರ ನೇಮಕ Read More »

ಕರಾವಳಿ
Death, deadbody, Waterfall

ಮಂಗಳೂರು: ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿಗೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.15. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬೆಳಾಲು ನಿವಾಸಿ ರಾಘವ ಯಾನೆ ಜೀವನ್‌(35)ಮೃತರು ಎಂದು ಗುರುತಿಸಲಾಗಿದೆ. ಢಿಕ್ಕಿ ಹೊಡೆದು ಪರಾರಿಯಾದ ಕಾರನ್ನು ಹಳೆಯಂಗಡಿ ಬಳಿ ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮಂಗಳೂರು: ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿಗೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು Read More »

ಕರಾವಳಿ

ದೆಹಲಿ ಮದ್ಯ ನೀತಿ ಪ್ರಕರಣ ➤ ಅರವಿಂದ್ ಕೇಜ್ರಿವಾಲ್‌ಗೆ ಸಿಬಿಐನಿಂದ ಸಮನ್ಸ್‌

(ನ್ಯೂಸ್ ಕಡಬ)newskadaba.com ನವದೆಹಲಿ, ಏ.15. ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಅರವಿಂದ್ ಕೇಜ್ರಿವಾಲ್ ಅವರಿಗೆ ಏಪ್ರಿಲ್. 16 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದು, ಇದಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದ ನಂತರ ಕೇಂದ್ರ ಸರ್ಕಾರ ತಮ್ಮ ಮೇಲೆ ಒತ್ತಡ ಹೇರುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಇನ್ನು ಎಎಪಿ ನಾಯಕ

ದೆಹಲಿ ಮದ್ಯ ನೀತಿ ಪ್ರಕರಣ ➤ ಅರವಿಂದ್ ಕೇಜ್ರಿವಾಲ್‌ಗೆ ಸಿಬಿಐನಿಂದ ಸಮನ್ಸ್‌ Read More »

ರಾಷ್ಟ್ರೀಯ ನ್ಯೂಸ್

ಸುಳ್ಯ: ಸ್ಕೂಟಿ ಕದ್ದು ನಿದ್ದೆ ಮಾಡಿ ಸಿಕ್ಕಿಬಿದ್ದ ಕಳ್ಳ !

(ನ್ಯೂಸ್ ಕಡಬ)newskadaba.com ಸುಳ್ಯ, ಏ.17. ಕಳ್ಳನೋರ್ವ ಒಂದು ಸ್ಕೂಟಿ ಕದ್ದುಕೊಂಡು ಬಂದು ಹೋಟೆಲ್ ಒಂದರ ಶೌಚಾಲಯದಲ್ಲಿ ನಿದ್ದೆ ಮಾಡಿ ಕೊನೆಗೆ ಪೊಲೀಸ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಮಂಡ್ಯದ ನಿವಾಸಿ ಸುಲ್ತಾನ್ ಎಂಬಾತ ಉಡುಪಿಯ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶವೊಂದರಿಂದ ಸ್ಕೂಟಿ ಕದ್ದಿದ್ದ. ಅದನ್ನು ಮಂಡ್ಯದತ್ತ ತೆಗೆದುಕೊಂಡು ಹೋಗುವ ದಾರಿಯಲ್ಲಿ ಸುಳ್ಯ ಸಮೀಪದ ಗೂನಡ್ಕದ ದೊಡ್ಡಡ್ಕದಲ್ಲಿರುವ ತಾಜುದ್ದೀನ್ ಟರ್ಲಿ ಎಂಬುವವರ ಇಂಡಿಯನ್ ಗೇಟ್ ಹೋಟೆಲ್ ನಲ್ಲಿ ಟೀ ಕುಡಿಯಲೆಂದು ವಾಹನ ನಿಲ್ಲಿಸಿದ್ದಾನೆ ಎಂದು ವರದಿ

ಸುಳ್ಯ: ಸ್ಕೂಟಿ ಕದ್ದು ನಿದ್ದೆ ಮಾಡಿ ಸಿಕ್ಕಿಬಿದ್ದ ಕಳ್ಳ ! Read More »

ಕರಾವಳಿ

ಸುಳ್ಯ: ರಾಜಕೀಯ ನಿವೃತ್ತಿ ಹೇಳಿಕೆ ವಾಪಸ್ ➤ ಸಚಿವ ಎಸ್. ಅಂಗಾರ

(ನ್ಯೂಸ್ ಕಡಬ)newskadaba.com ಸುಳ್ಯ, ಏ.14. ರಾಜಕೀಯ ನಿವೃತ್ತಿ ಹೇಳಿಕೆ ಟಿಕೆಟ್ ಸಿಗದ ಕಾರಣ ತತ್ ಕ್ಷಣದ ನೋವಾಗಿತ್ತು. ಆದರೆ ಇದೀಗ ನನ್ನ ಹೇಳಿಕೆ ಹಿಂಪಡೆಯುತ್ತಿದ್ದು, ಸಕ್ರೀಯ ರಾಜಕೀಯದಲ್ಲಿದ್ದುಕೊಂಡು ಪಕ್ಷದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಗೆಲುವಿಗೆ ಸಂಪೂರ್ಣವಾಗಿ ತೊಡಗಿಕೊಂಡು ಪೂರಕ ಕೆಲಸ ಮಾಡುತ್ತೇನೆ ಎಂದು ಸಚಿವ ಎಸ್.ಅಂಗಾರ ತಿಳಿಸಿದರು. ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭ್ಯರ್ಥಿ ಆಯ್ಕೆ ಬಗ್ಗೆ ಯಾವುದೇ ಅಸಮಾಧಾನ ಇಲ್ಲ, ಆದರೆ ನನಗೆ ಹೇಳದೆ ಆಯ್ಕೆ ಮಾಡಿರುವುದು ನೋವುಂಟಾಗಿತ್ತು. ಇದು

ಸುಳ್ಯ: ರಾಜಕೀಯ ನಿವೃತ್ತಿ ಹೇಳಿಕೆ ವಾಪಸ್ ➤ ಸಚಿವ ಎಸ್. ಅಂಗಾರ Read More »

ಕರಾವಳಿ

ಏಪ್ರಿಲ್ 3 ನೇ ವಾರದಲ್ಲಿ `ದ್ವಿತೀಯ ಪಿಯುಸಿ’ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.14. 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್ 5 ರಿಂದ ಆರಂಭವಾಗಿದ್ದು, ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಮಾರ್ಚ್ 09 ರಿಂದ 29ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಏಪ್ರಿಲ್ 5 ರಿಂದ 65 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯ ಶುರುವಾಗಿದೆ. ಮೌಲ್ಯಮಾಪನ ಕಾರ್ಯಕ್ಕೆ 25 ಸಾವಿರ ಉಪನ್ಯಾಸಕರನ್ನು ನಿಯೋಜನೆ ಮಾಡಲಾಗಿದೆ. ಒಟ್ಟು ದ್ವಿತೀಯ ಪಿಯುಸಿಯಲ್ಲಿ

ಏಪ್ರಿಲ್ 3 ನೇ ವಾರದಲ್ಲಿ `ದ್ವಿತೀಯ ಪಿಯುಸಿ’ ಫಲಿತಾಂಶ ಪ್ರಕಟ Read More »

ಕರ್ನಾಟಕ
Scroll to Top