News Kadaba

ಡ್ರಗ್ಸ್ ಬಗ್ಗೆ ಮತ್ತೊಂದು ವಿವಾದಾತ್ಮಕ ಪೋಸ್ಟ್ ➤ ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ ಎಂದ ನಟ ಚೇತನ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.14. ಸದಾ ಒಂದಲ್ಲೊಂದು ವಿಚಾರ, ಟೀಕೆಗಳ ಮೂಲಕ ಸುದ್ದಿಯಾಗುವ ನಟ ಚೇತನ್ ಇದೀಗ ಮತ್ತೆ ಹೊಸ ವಿವಾದವೊಂದು ಸೃಷ್ಟಿಸಿದ್ದಾರೆ. ಹಿಮಾಚಲ ಮುಖ್ಯಮಂತ್ರಿ ಸುಖು ಗಾಂಜಾ ವಿಚಾರವಾಗಿ ಮಾತನಾಡಿದ್ದನ್ನು ಅನುಮೋದಿಸುವ ಮೂಲಕ ‘ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ ಎಂದು ನಟ ಚೇತನ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ. ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಫೇಸ್ ಬುಕ್ ನಲ್ಲಿ ಬರೆದುಕೊಂಡ ಚೇತನ್, ಹಿಮಾಚಲದ ಮುಖ್ಯಮಂತ್ರಿಯ ನಡೆಯು ಒಳ್ಳೆಯದು ಕರ್ನಾಟಕವೂ ಇದರತ್ತ ಗಮನ ಹರಿಸುವ ಮೂಲಕ […]

ಡ್ರಗ್ಸ್ ಬಗ್ಗೆ ಮತ್ತೊಂದು ವಿವಾದಾತ್ಮಕ ಪೋಸ್ಟ್ ➤ ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ ಎಂದ ನಟ ಚೇತನ್ Read More »

ಕರ್ನಾಟಕ

ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್‌ ಗೆ ಸೇರ್ಪಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.14. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದ ನಂತರ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ರಾಜೀನಾಮೆ ನೀಡಿದ ಎರಡು ದಿನಗಳ ನಂತರ ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿ, ಸವದಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ದೃಢಪಡಿಸಿದರು. ಮಾಜಿ ಬಿಜೆಪಿ ನಾಯಕ ಅಥಣಿ ವಿಧಾನಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದರು, ಆದರೆ ಹಾಲಿ ಶಾಸಕ ಮಹೇಶ್ ಕುಮಟಳ್ಳಿ ಅವರಿಗೆ ಟಿಕೆಟ್ ನೀಡಲಾಯಿತು.

ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್‌ ಗೆ ಸೇರ್ಪಡೆ Read More »

ಕರ್ನಾಟಕ

ಗುಂಡ್ಯ: ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಅಪಘಾತ

(ನ್ಯೂಸ್ ಕಡಬ)newskadaba.com ಗುಂಡ್ಯ, ಏ.14. ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಸಮೀಪ KSRTC ರಾಜಹಂಸ ಬಸ್ ಹಾಗೂ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕನ ಕೈ ಮುರಿತಕ್ಕೊಳಗಾದ ಘಟನೆ ಸಂಭವಿಸಿದೆ. ಗಾಯಾಳುವನ್ನು ತುಮಕೂರಿನ ಮಧು(25)ಎಂದು ಗುರುತಿಸಲಾಗಿದ್ದು, ಆತನಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕೊಂಡೊಯ್ಯಲಾಗಿದೆ.

ಗುಂಡ್ಯ: ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಅಪಘಾತ Read More »

ಕರಾವಳಿ

ಟಿಕೆಟ್ ದೊರೆಯುವ ವಿಶ್ವಾಸದಲ್ಲಿ – ಜಗದೀಶ ಶೆಟ್ಟರ್

(ನ್ಯೂಸ್ ಕಡಬ) newskadaba.com. ಹುಬ್ಬಳ್ಳಿ, ಏ.14.  ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನನ್ನನ್ನು ದೆಹಲಿಗೆ ಬರುವಂತೆ ತಿಳಿಸಿದ್ದರಿಂದ ಹೋಗಿದ್ದೆ. ಈ ವೇಳೆ ಅವರೊಂದಿಗೆ ಎಲ್ಲಾ ವಿಚಾರಗಳನ್ನು ತಿಳಿಸಿದ್ದೇನೆ. ನನಗೆ ಟಿಕೆಟ್ ದೊರೆಯಲಿದೆ ಎನ್ನುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಿಳಿಸಿದ್ದಾರೆ. ದೆಹಲಿಯಿಂದ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರು ನನ್ನ ಎಲ್ಲಾ ವಿಚಾರಗಳನ್ನು ಸಮಧಾನದಿಂದ ಕೇಳಿದ್ದಾರೆ. ಈ ಕುರಿತು ರಾಜ್ಯ ಹಾಗೂ ರಾಷ್ಟ್ರ ನಾಯಕರೊಂದಿಗೆ ಮಾತನಾಡಿ ಸೂಕ್ತ

ಟಿಕೆಟ್ ದೊರೆಯುವ ವಿಶ್ವಾಸದಲ್ಲಿ – ಜಗದೀಶ ಶೆಟ್ಟರ್ Read More »

ಕರ್ನಾಟಕ

ಬೆಳ್ತಂಗಡಿ: ಬಾರ್ ಎದುರು ಕುಡಿದ ಮತ್ತಿನಲ್ಲಿ ಗಲಾಟೆ ➤ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.14. ವೇಣೂರು ಜುಗುಲ್‌ ಬಾರ್‌ ಎದುರು ಹಲ್ಲೆ ನಡೆಸಿದ ಪ್ರಕರಣದಡಿ ಗೋಳಿಯಂಗಡಿ ಪ್ರಸಾದ್‌ ಅಲಿಯಾಸ್‌ ಬಾಡು ಹಾಗೂ ಗರ್ಡಾಡಿಯ ಕರುಣಾಕರ ಶೆಟ್ಟಿ ಎಂಬವರ ವಿರುದ್ಧ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಿಬ್ಬರು ಆರೋಪಿಗಳು ಕುಡಿದ ಮತ್ತಿನಲ್ಲಿ ಮೂಡುಕೋಡಿ ನಿವಾಸಿ ನಾರ್ಣಪ್ಪ ಪೂಜಾರಿ (70) ಎಂಬವರಿಗೆ ಹಲ್ಲೆ ನಡೆಸಿದ್ದು, ತಲೆಯ ಬಾಗಕ್ಕೆ ಗಾಯಗೊಂಡಿದ್ದ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಳ್ತಂಗಡಿ: ಬಾರ್ ಎದುರು ಕುಡಿದ ಮತ್ತಿನಲ್ಲಿ ಗಲಾಟೆ ➤ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.14. ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರು 12 ಮಂದಿಯಿಂದ ಲಕ್ಷಾಂತರ ಹಣ ಪಡೆದು ವಂಚಿಸಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಂಚನೆ ನಡೆಸಿದ ಲೀನಾ ಲೋಬೋ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿತೇಶ ಕ್ಲಿಶನ್ ಡಿ ಸೋಜಾ, ರಿಕ್ಸನ್ ಸಂತಾನಿಸ್, ಎಡ್ಲಿನ್ ಕ್ಲಿಂಟನ್ ಡಿ ಸೋಜಾ, ಗ್ಲಾನ್ಸಿಲ ಫೆರ್ನಾಂಡೀಸ್, ಜೋಸೆಫ್ ಡಿ ಸೋಜಾ, ಗ್ಲಾನೆಟ್ ಫೆರ್ನಾಂಡೀಸ್, ಸಚಿನ್ ಪಸನ್ನ, ವಿನಯ್ ಜೋಯ್ ಅಲ್ವಾರಿಸ್, ಜೀವನ್ ಕ್ಲಿಫರ್ಡ್ ಡಿ ಸೋಜಾ,

ಉಳ್ಳಾಲ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಜಿ ಡಿಸಿಎಂ ಲಕ್ಷ್ಮಣ್‌ ಸವಧಿ ಬಿಜೆಪಿ ತೊರೆಯುತ್ತಿರುವುದು ಬೇಸರದ ಸಂಗತಿ’- ಸಿಎಂ

(ನ್ಯೂಸ್ ಕಡಬ) newskadaba.com.ಬೆಂಗಳೂರು. ಏ.14. ಅಥಣಿ ಟಿಕೆಟ್ ಕೈ ತಪ್ಪಿರುವುದರಿಂದ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ್‌ ಸವಧಿ ಕಾಂಗ್ರೆಸ್‌ ಸೇರ್ಪಡೆಗೆ ಉತ್ಸುಕರಾಗಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ ” ಲಕ್ಷ್ಮಣ್‌ ಸವದಿ ಕಾಂಗ್ರೆಸ್‌ ಸೇರಿರುವುದು ಗೊತ್ತಿರುವ ವಿಚಾರವಾಗಿದೆ, ಇದರಿಂದ ನನಗೆ ತುಂಬಾ ಬೇಸರವಾಗಿದೆ ಎಂದರು. ಲಕ್ಷ್ಮಣ್‌ ಸವದಿ ಕಾಂಗ್ರೆಸ್ ನಲ್ಲಿ ಭವಿಷ್ಯ ಕಾಣಿಸಿದೆ ಅದಕ್ಕೆ ಹೋಗಿದ್ದಾರೆ, ಬೇಸರದ ಸಂಗತಿ ಇದು, ಸವದಿಗೆ ಉತ್ತಮ ಭವಿಷ್ಯ ಬಿಜೆಪಿಯಲ್ಲೇ ಇತ್ತು ಕೆಲವೊಮ್ಮೆ ರಾಜಕೀಯ ಸನ್ನಿವೇಶದಲ್ಲಿ ಇಂತಹ

ಮಾಜಿ ಡಿಸಿಎಂ ಲಕ್ಷ್ಮಣ್‌ ಸವಧಿ ಬಿಜೆಪಿ ತೊರೆಯುತ್ತಿರುವುದು ಬೇಸರದ ಸಂಗತಿ’- ಸಿಎಂ Read More »

ಕರ್ನಾಟಕ

ಕೆಟ್ಟು‌ ನಿಂತಿದ್ದ ಆಟೋದಲ್ಲಿ ಬರೊಬ್ಬರಿ 1 ಕೋಟಿ ರೂ.ಹಣ ಪತ್ತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.14. ಕೆಟ್ಟು ನಿಂತ ಆಟೋದಲ್ಲಿ ಬರೊಬ್ಬರಿ ಒಂದು ಕೋಟಿ ರೂ.‌ಹಣ ಪತ್ತೆಯಾದ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣೆ ಬಳಿ ನಡೆದಿದೆ. ಠಾಣೆ ಬಳಿಯ ಚೆಕ್ ಪೋಸ್ಟ್ ಪಕ್ಕ ಆಟೋ ಕೆಟ್ಟು ನಿಂತ ಸಂದರ್ಭದಲ್ಲಿ ಪೊಲೀಸರು ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಕೆಟ್ಟು‌ ನಿಂತಿದ್ದ ಆಟೋದಲ್ಲಿ ಬರೊಬ್ಬರಿ 1 ಕೋಟಿ ರೂ.ಹಣ ಪತ್ತೆ Read More »

ಕರ್ನಾಟಕ

PFI ನಿಷೇಧದ ವೇಳೆ ಬಂಧಿತ 8 ಮಂದಿಯ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.14. PFI ನಿಷೇಧದ ವೇಳೆ ಬಂಧಿತ 8 ಮಂದಿ ಆರೋಪಿಗಳಿಗೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಜಾಮೀನು ನೀಡಿದೆ. ದೇಶಾದ್ಯಂತ ಪಿಎಫ್’ಐ ಕಚೇರಿ, ನಾಯಕರ ಮನೆ ಮೇಲೆ ದಾಳಿ ನಡೆಸಿದ ಎನ್ ಐಎ ಮತ್ತು ಸ್ಥಳೀಯ ಪೊಲೀಸರು ಹಲವರನ್ನು ಬಂಧಿಸಿದ್ದರು. ಕರ್ನಾಟಕದಲ್ಲಿ ಒಟ್ಟು 19 ಮಂದಿಯ ವಿರುದ್ಧ ಯುಎಪಿಎ ಮತ್ತು ಐಪಿಸಿ 153ಎ, 120ಬಿ ಸೆಕ್ಷನ್’ ಗಳಡಿ ಎಫ್’ಐಆರ್ ದಾಖಲಿಸಲಾಗಿತ್ತು. ಈ ಪೈಕಿ 15 ಮಂದಿಯನ್ನು ಬಂಧಿಸಲಾಗಿದೆ. ನಾಲ್ವರು ತಲೆಮರೆಸಿಕೊಂಡಿದ್ದಾರೆ ಎಂದು ಇತ್ತೀಚೆಗೆ

PFI ನಿಷೇಧದ ವೇಳೆ ಬಂಧಿತ 8 ಮಂದಿಯ ಬಿಡುಗಡೆ Read More »

ಕರ್ನಾಟಕ

ಏಕಾಏಕಿ ಏರಿಕೆಯತ್ತ ಸಾಗುತ್ತಿದೆ ಕೋವಿಡ್ ➤ ಮುನ್ನೆಚ್ಚರಿಕೆ ಅಗತ್ಯ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.14. ದೇಶದಲ್ಲಿ ಕೋವಿಡ್‌ನ ಹೊಸ ಪ್ರಕರಣಗಳ ಸಂಖ್ಯೆ ಏಕಾಏಕಿ ಏರಿಕೆಯತ್ತ ಸಾಗುತ್ತಿದೆ. ಭಾರತ ಮಾತ್ರವಲ್ಲ ದಕ್ಷಿಣ ಮತ್ತು ಆಗ್ನೇಯ ಏಷ್ಯಾದ ಹಲವು ದೇಶಗಳಲ್ಲಿ ಕೋವಿಡ್‌ನ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಳ ಕಾಣುತ್ತಿದೆ. ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಮುಂದಿನ 10-12 ದಿನಗಳಲ್ಲಿ ಕೊರೊನಾ ಸೋಂಕು ಮತ್ತಷ್ಟು ತೀವ್ರವಾಗಿ ಹರಡಲಿದೆ. ಹೆಚ್ಚುತ್ತಿರುವ ಪ್ರಕರಣಗಳನ್ನು ನಿಭಾಯಿಸುವುದಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ರಾಜ್ಯಗಳಿಗೆ ಸೂಚಿಸಿದೆ. ಇನ್ನು ನನಗೆ ಟಿಕೆಟ್ ನೀಡುವಂತೆ ಬೇಡಿಕೆಯಿಟ್ಟಿದ್ದೇನೆಯೇ ಹೊರತು, ಮಗನಿಗೆ ಅಥವಾ ಇನ್ನಾರಿಗೋ

ಏಕಾಏಕಿ ಏರಿಕೆಯತ್ತ ಸಾಗುತ್ತಿದೆ ಕೋವಿಡ್ ➤ ಮುನ್ನೆಚ್ಚರಿಕೆ ಅಗತ್ಯ Read More »

ರಾಷ್ಟ್ರೀಯ ನ್ಯೂಸ್
Scroll to Top