News Kadaba

‘ನನಗೆ ಟಿಕೆಟ್ ದೊರೆಯುತ್ತದೆ ಎನ್ನುವ ವಿಶ್ವಾಸವಿದೆ’ ➤ ಜಗದೀಶ ಶೆಟ್ಟರ್

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.14. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನನ್ನನ್ನು ದೆಹಲಿಗೆ ಬರುವಂತೆ ತಿಳಿಸಿದ್ದರಿಂದ ಹೋಗಿದ್ದೆ. ಈ ವೇಳೆ ಅವರೊಂದಿಗೆ ಎಲ್ಲಾ ವಿಚಾರಗಳನ್ನು ತಿಳಿಸಿದ್ದೇನೆ. ನನಗೆ ಟಿಕೆಟ್ ದೊರೆಯಲಿದೆ ಎನ್ನುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಿಳಿಸಿದ್ದಾರೆ. ದೆಹಲಿಯಿಂದ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರು ನನ್ನ ಎಲ್ಲಾ ವಿಚಾರಗಳನ್ನು ಸಮಧಾನದಿಂದ ಕೇಳಿದ್ದಾರೆ. ಈ ಕುರಿತು ರಾಜ್ಯ ಹಾಗೂ ರಾಷ್ಟ್ರ ನಾಯಕರೊಂದಿಗೆ ಮಾತನಾಡಿ ಸೂಕ್ತ ಪರಿಹಾರ […]

‘ನನಗೆ ಟಿಕೆಟ್ ದೊರೆಯುತ್ತದೆ ಎನ್ನುವ ವಿಶ್ವಾಸವಿದೆ’ ➤ ಜಗದೀಶ ಶೆಟ್ಟರ್ Read More »

ಕರ್ನಾಟಕ

ಕಾಸರಗೋಡು: 67 ಲಕ್ಷ ರೂ. ಹಣ ಸಹಿತ ಓರ್ವ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.14. ಸುಮಾರು 67 ಲಕ್ಷ ರೂ. ಹವಾಲ ಹಣ ಸಹಿತ ಓರ್ವನನ್ನು DYSP ಬಾಲಕೃಷ್ಣನ್ ನಾಯರ್ ನೇತೃತ್ವದ ತಂಡವು ಬಂಧಿಸಿದೆ. ಕಲ್ಲೂರಾವಿಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಸ್ಕೂಟರನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಹವಾಲ ಹಣ ಪತ್ತೆಯಾಗಿದೆ. ಪುಂಜಾವಿ ಯ ಹಾರಿಸ್ (39) ಎಂಬಾತನನ್ನು ಬಂಧಿಸಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.  

ಕಾಸರಗೋಡು: 67 ಲಕ್ಷ ರೂ. ಹಣ ಸಹಿತ ಓರ್ವ ಪೊಲೀಸರ ವಶಕ್ಕೆ Read More »

ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಧಾರ್ಮಿಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ..! ➤ ಶಾಸಕ ಯು.ಟಿ ಖಾದರ್ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.14. ಧಾರ್ಮಿಕ ಕೇಂದ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಉಳ್ಳಾಲ ಶಾಸಕ ಯು.ಟಿ ಖಾದರ್ ವಿರುದ್ಧ ಚುನಾವಣಾ ಆಯೋಗಕ್ಕೆ SDPI ನಿಂದ ದೂರು ನೀಡಲಾಗಿದೆ. ಮದನಿ ನಗರ, ಉಳ್ಳಾಲ ಕೋಡಿ ತೋಟದ ಮಸೀದಿ ಹಾಗೂ ಮದರಸಗಳಲ್ಲಿ ಶಾಸಕ ಯು.ಟಿ ಖಾದರ್ ಮಾತನಾಡುತ್ತಿರುವ ಚಿತ್ರಗಳು ವೈರಲ್ ಆಗಿತ್ತು. ಇದೊಂದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ, ಧಾರ್ಮಿಕ ಕೇಂದ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸುವುದು ಸಮಂಜಸವಲ್ಲ, ತಕ್ಷಣ ಆಯೋಗ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಅನ್ನುವ ಒತ್ತಾಯ ಮಾಡಿದ್ದಾರೆ.

ಉಳ್ಳಾಲ: ಧಾರ್ಮಿಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ..! ➤ ಶಾಸಕ ಯು.ಟಿ ಖಾದರ್ ವಿರುದ್ಧ ದೂರು ದಾಖಲು Read More »

ಕರಾವಳಿ

ಬಂಟ್ವಾಳ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..! ➤ ಶಂಕೆ ಹಿನ್ನೆಲೆ ಪತಿಯಿಂದ ಠಾಣೆಗೆ ದೂರು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.14. ಮನೆಯಲ್ಲಿ ಯಾರು ಇಲ್ಲದ ವೇಳೆ ಮಹಿಳೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿಲಾತಬೆಟ್ಟು ಗ್ರಾಮದ ನಯನಾಡು ನಿವಾಸಿ ಹರಿಪ್ರಸಾದ್ ಅವರ ಪತ್ನಿ ಜಯಲಕ್ಮೀ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದುಬಂದಿದೆ. ಮನೆಯೊಳಗೆ ನೇಣು ಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಅವರ ಪತಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಬಂಟ್ವಾಳ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..! ➤ ಶಂಕೆ ಹಿನ್ನೆಲೆ ಪತಿಯಿಂದ ಠಾಣೆಗೆ ದೂರು Read More »

ಕರಾವಳಿ, ಕ್ರೈಮ್ ನ್ಯೂಸ್

ಮೋದಿ ಉಪನಾಮ ಪ್ರಕರಣ..! ➤ ಏ. 20ಕ್ಕೆ ತೀರ್ಪು ಪ್ರಕಟ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.14. ‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ 2019ರಲ್ಲಿ ರಾಹುಲ್ ಗಾಂಧಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ತೀರ್ಪು ಅನ್ನು ಗುಜರಾತ್ ನ ಸೂರತ್ ನ್ಯಾಯಾಲಯ ಏಪ್ರಿಲ್ 20ರಂದು ಪ್ರಕಟಿಸಲಿದೆ. ‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿಯನ್ನ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಮೋದಿ ಉಪನಾಮ ಪ್ರಕರಣ..! ➤ ಏ. 20ಕ್ಕೆ ತೀರ್ಪು ಪ್ರಕಟ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ವ್ಯಾನ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.14. ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ಅಂಗಡಿ ಹಾಗೂ ಗ್ಯಾರೇಜ್ ಗೆ ನುಗ್ಗಿದ ಘಟನೆ ನಗರದ ಬಿಕರ್ನಕಟ್ಟೆಯಲ್ಲಿ ನಡೆದಿದೆ. ಮರೋಳಿಯಲ್ಲಿರುವ ವೃಧ್ದಾಶ್ರಮಕ್ಕೆ ಸೇರಿದ ವ್ಯಾನ್ ಇದಾಗಿದ್ದು, ಚಾಲಕನಿಗೆ ಅಪಸ್ಮಾರ ಕಾಣಿಸಿಕೊಂಡ ಕಾರಣ ವಾಹನ ನಿಯಂತ್ರಣ ಕಳೆದುಕೊಂಡಿದೆ. ಸ್ಥಳದಲ್ಲಿ ಹೆಚ್ಚಿನ ಜನ ಸಂಚಾರವಿರಲಿಲ್ಲ. ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವರದಿ ತಿಳಿಸಿದೆ.  

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ವ್ಯಾನ್ Read More »

ಕರಾವಳಿ

ಉಡುಪಿ: ಮೊದಲ ದಿನ 4 ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಉಡುಪಿ, ಏ.14. ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು ಜಿಲ್ಲೆಯಲ್ಲಿ ಒಟ್ಟು 4 ನಾಮಪತ್ರಗಳು ಸಲ್ಲಿಕೆಯಾಗಿದೆ. 119 ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕಿರಣ್ ಕುಮಾರ್ ಕೊಡ್ಗಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಅಭ್ಯರ್ಥಿಯಾಗಿ ದಿನೇಶ್ ನಾಮಪತ್ರ ಸಲ್ಲಿಸಿರುತ್ತಾರೆ. 120 ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಮದಾಸ ಭಟ್ ನಾಮಪತ್ರ ಸಲ್ಲಿಸಿದ್ದಾರೆ. 122 ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ

ಉಡುಪಿ: ಮೊದಲ ದಿನ 4 ನಾಮಪತ್ರ ಸಲ್ಲಿಕೆ Read More »

ಕರಾವಳಿ

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ ಹಿನ್ನೆಲೆ ➤ ಮೊದಲ ದಿನವೇ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.14. ಚುನಾವಣೆಗೆ ಅಧಿಸೂಚನೆಯೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನವೇ ರಾಜ್ಯಾದ್ಯಾಂತ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯ 27 ಅಭ್ಯರ್ಥಿಗಳು, ಕಾಂಗ್ರೆಸ್​ನ 26, ಎಎಪಿ 10, ಜೆಡಿಎಸ್​ 12, 45 ಸ್ವತಂತ್ರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.ನೋಂದಾಯಿಯ ಮಾನ್ಯತೆ ಹೊಂದಿರದ ಪಕ್ಷಗಳು 100 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ವರದಿ ತಿಳಿಸಿದೆ. ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆ ಆರಂಭವಾಗುತ್ತದೆ. ಇನ್ನು ನಾಮಪತ್ರ ಸಲ್ಲಿಕೆಗೆ ಏಪ್ರಿಲ್​

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ ಹಿನ್ನೆಲೆ ➤ ಮೊದಲ ದಿನವೇ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ Read More »

ಕರ್ನಾಟಕ

ಉಳ್ಳಾಲ: ಸಿಎಂ ಭೇಟಿ ಹಿನ್ನೆಲೆ ➤ ಸಂಚಾರಿ ಪೇದೆ ಗಂಭೀರ

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.13. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಳ್ಳಾಲದ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಹಿನ್ನೆಲೆ ರಾ.ಹೆ.66 ರಲ್ಲಿ ಬಂದೋಬಸ್ತ್ ನಲ್ಲಿದ್ದ ಕಂಕನಾಡಿ ಸಂಚಾರಿ ಠಾಣೆ ಪೊಲೀಸ್ ಪೇದೆಗೆ ಟೆಂಪೋ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿರುವ ಘಟನೆ ಆಡಂಕುದ್ರು ಬಳಿ ಸಂಭವಿಸಿದೆ. ಮಂಜುನಾಥ ಹೆಗಡೆ ಗಂಭೀರ ಗಾಯಗೊಂಡವರು. ರಾ.ಹೆ66 ರಲ್ಲಿ ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ವಾಹನಗಳನ್ನು ನಿಯಂತ್ರಿಸುವ ಕೆಲಸ ಮಾಡುತ್ತಿದ್ದರು. ಈ ವೇಳೆ ತಲಪಾಡಿ ಕಡೆಗೆ ತೆರಳುತ್ತಿದ್ದ ಟೆಂಪೋವೊಂದರ ಚಾಲಕನ ನಿಯಂತ್ರಣ ಕಳೆದು ಪೊಲೀಸ್ ಪೇದೆಗೆ

ಉಳ್ಳಾಲ: ಸಿಎಂ ಭೇಟಿ ಹಿನ್ನೆಲೆ ➤ ಸಂಚಾರಿ ಪೇದೆ ಗಂಭೀರ Read More »

ಕರಾವಳಿ

ಯುವಕನನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿ ಹತ್ಯೆ

(ನ್ಯೂಸ್ ಕಡಬ)newskadaba.com ಉತ್ತರಪ್ರದೇಶ, ಏ.13. ಕಳ್ಳತನದ ಶಂಕೆಯಲ್ಲಿ ಯುವಕನನ್ನು ಕಬ್ಬಿಣದ ಕಂಬಕ್ಕೆ ಕಟ್ಟಿಹಾಕಿ ಥಳಿಸಿ ಹತ್ಯೆ ಮಾಡಿದ ಅಮಾನವೀಯ ಘಟನೆ ಉತ್ತರಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಶಿವಂ ಜೋಹ್ರಿ ಎಂಬ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿದ್ದು, ವ್ಯಕ್ತಿಯೊಬ್ಬ ಶಿವಂನನ್ನು ಕಬ್ಬಿಣದ ರಾಡ್‌ನಿಂದ ಮನಬಂದಂತೆ ಹೊಡೆಯುತ್ತಿರುವ ಮತ್ತು ಇತರರು‌ ನಿಂದಿಸುವುದು ವಿಡಿಯೋದಲ್ಲಿ ಸೆರೆಯಾಗಿದೆ. ಶಿವಂಗೆ ಕೊಲೆ‌ ಮಾಡಿ ಬಳಿಕ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಬಗ್ಗೆ ಹೇಳಲಾಗಿತ್ತು. ಆದರೆ ಪೊಲೀಸರಿಗೆ ಸಂಶಯ ಬಂದು ತನಿಖೆ ನಡೆಸಿದಾಗ ಥಳಿಸಿ ಹತ್ಯೆ

ಯುವಕನನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿ ಹತ್ಯೆ Read More »

ರಾಷ್ಟ್ರೀಯ ನ್ಯೂಸ್
Scroll to Top