News Kadaba

ಒಂದು ಸಾಲಿನ ತೀರ್ಪು ಕೊಡುತ್ತಿದ್ದ ಕರ್ನಾಟಕದ ಜಡ್ಜ್‌ ವಜಾ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ಪೂರ್ಣ ಆದೇಶ ಸಿದ್ಧಪಡಿಸದೆ ಅಥವಾ ಬರೆಸದೆ ಕೇವಲ ತೀರ್ಪಿನ ಕೊನೆಯ ಸಾಲನ್ನಷ್ಟೇ ಪ್ರಕಟಿಸುತ್ತಿದ್ದ ಕರ್ನಾಟಕದ ಜಾರಿ ನ್ಯಾಯಾಲಯದ ನ್ಯಾಯಾಧೀಶ ಒಬ್ಬರನ್ನು ಸುಪ್ರೀಂಕೋರ್ಟ್‌ ಸೇವೆಯಿಂದ ವಜಾಗೊಳಿಸಿದೆ. ಈ ಜಡ್ಜ್‌ ಸಂಪೂರ್ಣ ಆದೇಶ ಸಿದ್ಧಪಡಿಸದೆ ಕೇವಲ ತೀರ್ಪಿನ ಕೊನೆಯ ಭಾಗವನ್ನು ಮಾತ್ರ ತೆರೆದ ನ್ಯಾಯಾಲಯದಲ್ಲಿ ಪ್ರಕಟಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಪೀಠ ಆದೇಶಿಸಿದೆ. ಹೈಕೋರ್ಟ್‌ನ ಪೂರ್ಣ ಪೀಠ ವಜಾಗೊಳಿಸಿದ್ದರೂ ವಿಭಾಗೀಯ ಪೀಠವು ಅವರನ್ನು ಮರುನೇಮಕಗೊಳಿಸಲು ನೀಡಿದ್ದ ಆದೇಶಕ್ಕೆ ಸುಪ್ರೀಂ ತೀವ್ರ ಅಸಮಾಧಾನ ಕೂಡ ವ್ಯಕ್ತಪಡಿಸಿದೆ.  

ಒಂದು ಸಾಲಿನ ತೀರ್ಪು ಕೊಡುತ್ತಿದ್ದ ಕರ್ನಾಟಕದ ಜಡ್ಜ್‌ ವಜಾ Read More »

ಕರ್ನಾಟಕ

ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಡಿ ED ತನಿಖೆ

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಏ.13. ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್‌ನ (ಬಿಬಿಸಿ) ಭಾರತದ ಕಚೇರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ವಿದೇಶಿ ವಿನಿಯಮ ನಿಯಮ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಹೊಸ ತನಿಖೆ ಅರಂಭವಾಗಿದ್ದು, ತನ್ನ ಹಣಕಾಸಿನ ದಾಖಲೆಗಳನ್ನು ಒದಗಿಸುವಂತೆ ಬಿಬಿಸಿ ಇಂಡಿಯಾಕ್ಕೆ ಸೂಚನೆ ನೀಡಲಾಗಿದೆ.

ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಡಿ ED ತನಿಖೆ Read More »

ರಾಷ್ಟ್ರೀಯ ನ್ಯೂಸ್

ಕುಖ್ಯಾತ ಸರಗಳ್ಳರು ಅರೆಸ್ಟ್ ➤ 1 ಕೋಟಿ ಮೌಲ್ಯದ 2 ಕೆ.ಜಿ ಚಿನ್ನಾಭರಣಗಳನ್ನು ಜಪ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಕನ್ನ ಕಳವು ಮಾಡುತ್ತಿದ್ದ ಮಹಿಳೆ ಸೇರಿ ಮೂವರು ಕುಖ್ಯಾತ ಕನ್ನಗಳ್ಳರನ್ನು ಬಂಧಿಸಿ ಭರ್ಜರಿ ಬೇಟೆಯಾಡಿರುವ ಸಿಸಿಬಿ ಪೊಲೀಸರು 1 ಕೋಟಿ ಮೌಲ್ಯದ 2 ಕೆ.ಜಿ ಚಿನ್ನಾಭರಣಗಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಗುಜರಾತ್ ಹಾಗೂ ತಮಿಳುನಾಡಿನಿಂದ ನಗರಕ್ಕೆ ಬಂದು ನಗರದ ವಿವಿಧ ಕಡೆಗಳಲ್ಲಿ ಸಹಚರರೊಂದಿಗೆ ಸೇರಿ ಹಗಲು ಮತ್ತು ರಾತ್ರಿ ವೇಳೆ ಬೀಗ ಹಾಕಿರುವ ಮನೆಗಳನ್ನು ಗುರ್ತಿಸಿ ಹಗಲು ಮತ್ತು ರಾತ್ರಿ ವೇಳೆಯಲ್ಲಿ ತನ್ನ ಸಹಚರರೊಂದಿಗೆ ಸೇರಿಕೊಂಡು

ಕುಖ್ಯಾತ ಸರಗಳ್ಳರು ಅರೆಸ್ಟ್ ➤ 1 ಕೋಟಿ ಮೌಲ್ಯದ 2 ಕೆ.ಜಿ ಚಿನ್ನಾಭರಣಗಳನ್ನು ಜಪ್ತಿ Read More »

ಕರ್ನಾಟಕ

ಮಹಿಳೆಗೆ ಲೈಂಗಿಕ ಕಿರುಕುಳ ➤ PSI ಅಮಾನತು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ದೂರು ನೀಡಲು ಠಾಣೆಗೆ ಬಂದ ಮಹಿಳೆಯ ಸೊಂಟ ಹಿಡಿದು ಕಿರುಕುಳ ನೀಡಿ ಅನುಚಿತ ವರ್ತನೆ ಆರೋಪ ಪ್ರಕರಣ ಸಂಬಂಧಿಸಿದಂತೆ ಸುದ್ದಗುಂಟೆಪಾಳ್ಯ ಠಾಣೆಯ ಪಿಎಸ್‌ಐ ಮಂಜುನಾಥ್‌ ವಿರುದ್ಧ ಕೇಸ್ ದಾಖಲಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ. ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅನುಚಿತ ವರ್ತನೆ ಮಾಡಿದ್ದಾರೆಂದು ಮಹಿಳೆಯು ಟ್ವೀಟ್‌ ಮಾಡಿದ್ದರು. ಬಳಿಕ ಪಿಎಸ್‌ಐ ಮಂಜುನಾಥ್‌ ವಿರುದ್ಧ ದೂರು ಸಹ ನೀಡಿದ್ದರು. ಈ ಕುರಿತಾಗಿ ಮಾತನಾಡಿದ ಡಿಸಿಪಿ ಸಿ.ಕೆ.ಬಾಬಾ, ನಮ್ಮ

ಮಹಿಳೆಗೆ ಲೈಂಗಿಕ ಕಿರುಕುಳ ➤ PSI ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್

ತುಂಡರಿಸಿದ ಕೈಯನ್ನು ಯಶಸ್ವಿಯಾಗಿ ಮರು ಜೋಡಿಸಿದ ವೈದ್ಯರು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ಆಂಧ್ರಪ್ರದೇಶದ ಕುಪ್ಪಂ ಮೂಲದ ಚರಣ್ (11) ಎಂಬಾತ ಹುಲ್ಲು ಕತ್ತರಿಸುವ ಯಂತ್ರಕ್ಕೆ ಸಿಲುಕಿದ್ದ ಮರದ ಕಡ್ಡಿಯೊಂದನ್ನು ಕಿತ್ತು ಹಾಕಲು ಯತ್ನಿಸುವಾಗ ಮುಂಗೈ ತುಂಡಾಗಿ ಬಿದ್ದಿದೆ. ಆತನನ್ನು ಸ್ಥಳೀಯ ವೈದ್ಯಕೀಯ ಕಾಲೇಜಿಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ನಂತರ ಬೆಂಗಳೂರಿನ ನಾರಾಯಣ ಹೆಲ್ತ್ ಗೆ ಕಳುಹಿಸಲಾಗಿದೆ. ಬಾಲಕನ ತೋಳು ದೇಹದಿಂದ ಬೇರ್ಪಟ್ಟಿದ್ದರೂ, ನಾರಾಯಣದ ವೈದ್ಯರು ಕೈಯನ್ನು ಮತ್ತೆ ದೇಹಕ್ಕೆ ಜೋಡಿಸುವ ಶಸ್ತ್ರಚಿಕಿತ್ಸೆ ನಡೆಸಿದರು. ತುಂಡಾಗಿದ್ದ ತೋಳಿಗೆ ರಕ್ತದ ಸಂಚಲನೆಯನ್ನು ಮರು-ಸ್ಥಾಪಿಸಲು ಶಸ್ತ್ರಚಿಕಿತ್ಸೆಯು ಕೈಯನ

ತುಂಡರಿಸಿದ ಕೈಯನ್ನು ಯಶಸ್ವಿಯಾಗಿ ಮರು ಜೋಡಿಸಿದ ವೈದ್ಯರು Read More »

ಕರ್ನಾಟಕ

ಗ್ಯಾಂಗ್ ಸ್ಟರ್ ಅತಿಕ್ ಅಹ್ಮದ್ ಪುತ್ರ ಅಸದ್ ಎನ್’ಕೌಂಟರ್ ನಲ್ಲಿ ಹತ್ಯೆ

(ನ್ಯೂಸ್ ಕಡಬ)newskadaba.com ಲಖನೌ, ಏ.13. ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರ-ರಾಜಕಾರಣಿ ಅತಿಕ್ ಅಹ್ಮದ್ ನ ಪುತ್ರ ಅಸದ್ ಹಾಗೂ ಅವರ ಸಹಾಯಕ ಗುಲಾಮ್ ನನ್ನು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಝಾನ್ಸಿಯಲ್ಲಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಎನ್ಕೌಂಟರ್ ನಡೆಸಿದ್ದು, ಎನ್ಕೌಂಟರ್ ನಲ್ಲಿ ಅಸದ್ ಹಾಗೂ ಆತನ ಸಹಾಯಕನನ್ನು ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗ್ಯಾಂಗ್ ಸ್ಟರ್ ಅತಿಕ್ ಅಹ್ಮದ್ ಪುತ್ರ ಅಸದ್ ಎನ್’ಕೌಂಟರ್ ನಲ್ಲಿ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಅಪರಿಚಿತನಿಗೆ ವಿದ್ಯುತ್‌ ಶಾಕ್‌; ರಕ್ಷಿಸಲು ಹೋದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ಬೀದಿ ದೀಪದ ವಿದ್ಯುತ್‌ ಕಂಬದಿಂದ ವಿದ್ಯುತ್‌ ಪ್ರವಹಿಸಿ ಸಂಕಷ್ಟದಲ್ಲಿದ್ದ ವ್ಯಕ್ತಿಯನ್ನು ಕಾಪಾಡಲು ಹೋಗಿ ಕೇರಳ ಮೂಲದ ಮೊಬೈಲ್‌ ವ್ಯಾಪಾರಿಯೊಬ್ಬರು ಪ್ರಾಣ ತೆತ್ತಿರುವ ಮಡಿವಾಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೇರಳ ರಾಜ್ಯದ ತ್ರಿಶೂರ್‌ ಜಿಲ್ಲೆಯ ಅಕ್ಬರ್‌ ಅಲಿ (36) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮಡಿವಾಳದ ಹೊಸೂರು ರಸ್ತೆಯ ಇಂಡಿಯನ್‌ ಆಯಿಲ್‌ ಪೆಟ್ರೋಲ್‌ ಬಂಕ್‌ ಸಮೀಪದ ಅಲಿ ನಡೆದುಕೊಂಡು ಹೋಗುವಾಗ ವಿದ್ಯುತ್‌ ಕಂಬದಲ್ಲಿ ವಿದ್ಯುತ್‌ ಪ್ರವಹಿಸಿ ಈ ಅವಘಡ ಸಂಭವಿಸಿದೆ ಎಂದು

ಅಪರಿಚಿತನಿಗೆ ವಿದ್ಯುತ್‌ ಶಾಕ್‌; ರಕ್ಷಿಸಲು ಹೋದ ವ್ಯಕ್ತಿ ಮೃತ್ಯು Read More »

ಕರ್ನಾಟಕ

ವಂಚನೆ ಆರೋಪದಡಿ ಫ್ರೀಡಂ ಆ್ಯಪ್‌ CEO ಸುಧೀರ್‌ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ಅರೆಕಾಲಿಕ ಉದ್ಯೋಗ ಕೊಡಿಸುವುದಾಗಿ ಹೇಳಿ ತಮ್ಮ ಆ್ಯಪ್‌ ಪ್ರಚಾರಕ್ಕೆ ಬಳಸಿಕೊಂಡು ಹಣ ನೀಡದೆ ವಂಚಿಸಿದ ಪ್ರಕರಣ ಸಂಬಂಧ ಇಂಡಿಯನ್‌ ಮಿನಿ ಫ್ರೀಡಂ ಕಂಪನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಿ.ಎಸ್‌.ಸುಧೀರ್‌ನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ‘ಕನ್ನಡಪ್ರಭ’ ಜತೆ ಮಾತನಾಡಿದ ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್‌ ಅವರು, ವಂಚನೆ ಪ್ರಕರಣದಲ್ಲಿ ಫ್ರೀಡಂ ಕಂಪನಿಯ ಸಿಇಒ ಸುಧೀರ್‌ನನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಇತರರ ಪಾತ್ರದ ಬಗ್ಗೆ ಸಹ ತನಿಖೆ ಮುಂದುವರೆದಿದೆ ಎಂದು ಹೇಳಿದರು.

ವಂಚನೆ ಆರೋಪದಡಿ ಫ್ರೀಡಂ ಆ್ಯಪ್‌ CEO ಸುಧೀರ್‌ ಬಂಧನ Read More »

ಕರ್ನಾಟಕ

ಕುಕ್ಕೆ ಸುಬ್ರಮಣ್ಯಕ್ಕೆ ಸಿಎಂ ಬೊಮ್ಮಾಯಿ ಭೇಟಿ

(ನ್ಯೂಸ್ ಕಡಬ)newskadaba.com ಸುಬ್ರಹ್ಮಣ್ಯ, ಏ.13. ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು. ಇವರೊಂದಿಗೆ ಪತ್ನಿ ಚೆನ್ನಮ್ಮ ಇದ್ದರು ಎನ್ನಲಾಗಿದೆ. ಬೊಮ್ಮಾಯಿ(CM Basavaraj Bommai) ಅವರಿಗೆ ಕ್ಷೇತ್ರದ ಪ್ರಧಾನ ಅರ್ಚಕ ಸೀತರಾಮ ಯಡಪಡಿತ್ತಾಯ ಶಾಲು ಹೊದೆಸಿ ದೇವರ ಪ್ರಸಾದ ನೀಡಿ ಹರಸಿದರು. ಬಳಿಕ ಸಂಪುಟ ನರಸಿಂಹ ಸ್ವಾಮಿ ದೇವರ ದರುಶನ ಪಡೆದರು. ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.

ಕುಕ್ಕೆ ಸುಬ್ರಮಣ್ಯಕ್ಕೆ ಸಿಎಂ ಬೊಮ್ಮಾಯಿ ಭೇಟಿ Read More »

ಕರಾವಳಿ

ಲೋಕಸಭಾ ಹಾಗೂ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಬಿಜೆಪಿ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.13. ಕರ್ನಾಟಕ ವಿಧಾನಸಭಾ ಚುನಾವಣೆ ಕಾವು ಜೋರಾಗುತ್ತಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಿಂದ  ಬಂಡಾಯ ಬಿಸಿ ಕೂಡ ಹೆಚ್ಚಾಗಿದೆ. ಈಗಾಗಲೇ 2 ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಮೂರನೇ ಹಾಗೂ ಅಂತಿಮ ಪಟ್ಟಿ ಶೀಘ್ರದಲ್ಲೇ ಹೊರಬೀಳಲಿದೆ. ಇದರ ನಡುವ ಬಿಜೆಪಿ ಹೈಕಮಾಂಡ್ ಲೋಕಸಭಾ ಹಾಗೂ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಪಂಜಾಬ್‌ನ ಜಲಂಧರ ಕ್ಷೇತ್ರಕ್ಕೆ ನಡೆಯಲಿರುವ ಲೋಕಸಭಾ ಉಪಚುನಾವಣೆ ಹಾಗೂ ಒಡಿಶಾದ ಝಾರ್ಸುಗುಡ ವಿಧಾನಸಭಾ ಉಪ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ.

ಲೋಕಸಭಾ ಹಾಗೂ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಬಿಜೆಪಿ Read More »

ರಾಷ್ಟ್ರೀಯ ನ್ಯೂಸ್
Scroll to Top