News Kadaba

ರಾಜಕೀಯ ನಿವೃತ್ತಿ ಘೋಷಿಸಿದ ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್

(ನ್ಯೂಸ್ ಕಡಬ) newskadaba.com. ಮೈಸೂರು, ಏ.13.  ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಪಕ್ಷ ತೊರೆದು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುತ್ತಿದ್ದು, ಇದೀಗ ಕೇಂದ್ರದ ಮಾಜಿ ಸಚಿವ, ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. 2024 ರಲ್ಲಿ ಸಂಸದರ ಅವಧಿ ಕೊನೆಗೊಂಡ ನಂತರ ಸಕ್ರಿಯ ರಾಜಕೀಯದಿಂದ ಹೊರನಡೆಯುವುದಾಗಿ ಹೇಳಿದ್ದಾರೆ. ಇನ್ನು 2013ರ ವಿಧಾನಸಭೆ ಚುನಾವಣೆ ತಮ್ಮ ಕೊನೆಯ ಚುನಾವಣೆ ಎಂದು ಶ್ರೀನಿವಾಸ್‌ ಪ್ರಸಾದ್ ಈ ಹಿಂದೆಯೇ ಘೋಷಿಸಿದ್ದರು. ಆದರೆ 2016 ರಲ್ಲಿ ಅಂದಿನ […]

ರಾಜಕೀಯ ನಿವೃತ್ತಿ ಘೋಷಿಸಿದ ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ Read More »

ಕರ್ನಾಟಕ

ನಾಳೆಯೊಳಗೆ ಕಾಂಗ್ರೆಸ್ 3ನೇ ಪಟ್ಟಿ ಬಿಡುಗಡೆ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ಕಳೆದ ಮೂರ್ನಾಲ್ಕು ದಿನಗಳ ಹಿಂದೇ 3ನೇ ಪಟ್ಟಿಗಾಗಿ ಕಸರತ್ತು ನಡೆಸಿರುವ ಕಾಂಗ್ರೆಸ್‌ ಬಿಜೆಪಿಯ ಪಟ್ಟಿ ಬಿಡುಗಡೆಯಾದ ನಂತರ ಕೆಲವೊಂದು ಬದಲಾವಣೆಗಳನ್ನು ಮಾಡಿ ನಾಳೆಯೊಳಗೆ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಬಿಜೆಪಿ ಟಿಕೆಟ್‌ ಹಂಚಿಕೆಯ ಕಸರತ್ತು ಬಹುತೇಕವಾಗಿ ಪೂರ್ಣಗೊಂಡಿದೆ. ಆದರೆ, ಕಾಂಗ್ರೆಸ್ ಈಗಾಗಲೇ ಬಿಡುಗಡೆ ಮಾಡಿರುವ ಎರಡು ಪಟ್ಟಿಗಳಲ್ಲಿ ಯಾವುದೇ ಗೊಂದಲಗಳು ಇಲ್ಲದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಿದ್ದು, 58 ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡುವುದು ಬಾಕಿಯಿದೆ.

ನಾಳೆಯೊಳಗೆ ಕಾಂಗ್ರೆಸ್ 3ನೇ ಪಟ್ಟಿ ಬಿಡುಗಡೆ ಸಾಧ್ಯತೆ Read More »

ಕರ್ನಾಟಕ

ಉಡುಪಿ: ಸಿಎಂ ಬೊಮ್ಮಯಿ ಹೆಲಿಕಾಪ್ಟರ್ ಲ್ಯಾಂಡ್ ವೇಳೆ ಹೆಲಿಪ್ಯಾಡ್ ಬಳಿ ಬೆಂಕಿ

(ನ್ಯೂಸ್ ಕಡಬ)newskadaba.com ಉಡುಪಿ, ಏ.13. ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡ ಘಟನೆ ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್ ಬಳಿ ನಡೆದಿದೆ. ಮುಖ್ಯಮಂತ್ರಿಗಳ ಎಸ್ಕಾರ್ಟ್ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು ಕೆಲ ಕ್ಷಣ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬೈಂದೂರು ಅಗ್ನಿಶಾಮಕದಳ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದು ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ಸಿಎಂ ಆಗಮಿಸಿದ್ದಾರೆ.

ಉಡುಪಿ: ಸಿಎಂ ಬೊಮ್ಮಯಿ ಹೆಲಿಕಾಪ್ಟರ್ ಲ್ಯಾಂಡ್ ವೇಳೆ ಹೆಲಿಪ್ಯಾಡ್ ಬಳಿ ಬೆಂಕಿ Read More »

ಕರಾವಳಿ

ಶೆಟ್ಟರ್ ಗೆ ಟಿಕೆಟ್ ಖಚಿತ, ಎರಡನೇ ಪಟ್ಟಿ ಇಂದೇ ಬಿಡುಗಡೆ’ ➤ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.13.  ಮಾಜಿ ಸಿಎಂ ಜಗದೀಶ್ ಶೆಟ್ಟರ್​ಗೆ ಪಕ್ಷ ಟಿಕೆಟ್ ಸಿಗುವುದು ಖಚಿತ ಎಂದು ಮಾಜಿ ಸಿಎಂ ಬಿ.ಎಸ್​​.ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿ ಟಿಕೆಟ್​ ಹಂಚಿಕೆಯಲ್ಲಿ 2-3 ಕಡೆ ಗೊಂದಲ ಇದೆ ಅಷ್ಟೇ. ಉಳಿದ ಎಲ್ಲಾ ಕಡೆ ಒಳ್ಳೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ಪ್ರಕಟಿಸಿದೆ. ಉಳಿದ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ರಾತ್ರಿ ಬಿಡುಗಡೆ ಮಾಡುವ ಸಾಧ್ಯತೆ ಇದೆ

ಶೆಟ್ಟರ್ ಗೆ ಟಿಕೆಟ್ ಖಚಿತ, ಎರಡನೇ ಪಟ್ಟಿ ಇಂದೇ ಬಿಡುಗಡೆ’ ➤ಯಡಿಯೂರಪ್ಪ Read More »

ಕರ್ನಾಟಕ

ವಂದೇ ಭಾರತ್ ರೈಲು ಉದ್ಘಾಟನಾ ಸಮಾರಂಭ ➤ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಮೋದಿ, ಗೆಹ್ಲೋಟ್

(ನ್ಯೂಸ್ ಕಡಬ)newskadaba.com ಜೈಪುರ, ಏ.13. ರಾಜಸ್ತಾನದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಉದ್ಘಾಟಿಸಿದ ಪ್ರಧಾನಿ ಮೋದಿಯವರು ರಾಜಸ್ತಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ನನ್ನ ಒಳ್ಳೆಯ ಮಿತ್ರ ಮತ್ತು ಪ್ರಧಾನಿಯಾಗಿ ನನ್ನ ಕೆಲಸ ಮಾಡಲು ಬಿಟ್ಟವರು ಎಂದು ಬಣ್ಣಿಸಿದರು. ವೀಡಿಯೋ ಕಾನ್ಫರೆನ್ಸ್ ಮೂಲಕ ವಂದೇ ಭಾರತ್ ಗೆ ಚಾಲನೆ ನೀಡಿದ ಮೋದಿಯವರು ಗೆಹ್ಲೋಟ್ ಜೊತೆಗೆ ಕಾಣಿಸಿಕೊಂಡರು. ರಾಜಸ್ತಾನದ ರೈಲು ಯೋಜನೆಯಾದ್ದರಿಂದ ಇದರಲ್ಲಿ ಅಚ್ಚರಿ ಏನಿಲ್ಲ. ಆದರೆ ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ರಾಜ್ಯದ ಮುಖ್ಯಮಂತ್ರಿಯನ್ನು ಪ್ರಧಾನಿ

ವಂದೇ ಭಾರತ್ ರೈಲು ಉದ್ಘಾಟನಾ ಸಮಾರಂಭ ➤ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಮೋದಿ, ಗೆಹ್ಲೋಟ್ Read More »

ರಾಷ್ಟ್ರೀಯ ನ್ಯೂಸ್

ಆಟೋ ರಿಕ್ಷಾ ಢಿಕ್ಕಿ ಹೊಡೆದು ಗರ್ಭಿಣಿ ಮೃತ್ಯು

(ನ್ಯೂಸ್ ಕಡಬ)newskadaba.com ಅಂಕೋಲಾ, ಏ.13. ಆಟೊ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಮಹಿಳೆ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ. ಅಂಕೋಲಾದ ಶೋಭಾ ಗೋಪಾಲ(28) ಮೃತಪಟ್ಟವರಾಗಿದ್ದಾರೆ. ಸುಮಾರು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಇವರು ತನ್ನ ಮನೆ ಮುಂದಿನ ಡಾಂಬರು ರಸ್ತೆ ಪಕ್ಕದ ಮಣ್ಣಿನ ರಸ್ತೆಯಲ್ಲಿ ತನ್ನ ಪತಿ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ರಿಕ್ಷಾ ಚಾಲಕ ನಿಯಂತ್ರಣ ತಪ್ಪಿ ಮಹಿಳೆಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.  

ಆಟೋ ರಿಕ್ಷಾ ಢಿಕ್ಕಿ ಹೊಡೆದು ಗರ್ಭಿಣಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಬಾಂಬ್ ತಯಾರಿಸುವ ವೇಳೆ ಸ್ಪೋಟಗೊಂಡು ಕೈಗಳನ್ನು ಕಳೆದು ಕೊಂಡ ಯುವಕ

(ನ್ಯೂಸ್ ಕಡಬ)newskadaba.com ತಲಸ್ಸೆರಿ, ಏ.13. ಬಾಂಬ್ ತಯಾರಿಸುತ್ತಿದ್ದಾಗ ಸಂಭವಿಸಿದ ಸ್ಫೋಟದಲ್ಲಿ ಯುವಕ ತನ್ನ ಒಂದು ಕೈಯನ್ನು ಕಳೆದುಕೊಂಡಿದ್ದಾನೆ ಮತ್ತು ಇನ್ನೊಂದು ಕೈಗೆ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿನ ತಲಸ್ಸೆರಿಯ ಎರಂಜೋಲಿಪಾಲಂ ಬಳಿ ಈ ಘಟನೆ ನಡೆದಿದೆ. ಬಾಂಬ್ ನಿರ್ಮಾಣದ ವೇಳೆ ಸ್ಫೋಟ ಸಂಭವಿಸಿದ್ದು, ಸ್ಫೋಟಕ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂಬ್ ತಯಾರಿಸುವ ವೇಳೆ ಸ್ಪೋಟಗೊಂಡು ಕೈಗಳನ್ನು ಕಳೆದು ಕೊಂಡ ಯುವಕ Read More »

ರಾಷ್ಟ್ರೀಯ ನ್ಯೂಸ್

ಮಾನವೀಯತೆ ಮೆರೆದ ಮಹಿಳಾ ಪೊಲೀಸ್ ➤ ಬಡ ವೃದ್ಧೆಗೆ ಹೊಸ ಬಟ್ಟೆ ಕೊಟ್ಟು ಮನೆಗೆ ಬಿಟ್ಟು ಬಂದ ಅಧಿಕಾರಿ

ನ್ಯೂಸ್ ಕಡಬ) newskadaba.com. ಮಧ್ಯಪ್ರದೇಶ, ಏ.13. ಅನಾರೋಗ್ಯದಿಂದ ಮಲಗಿದ್ದ 80 ವರ್ಷದ ವೃದ್ಧೆಗೆ ಸಹಾಯ ಹಸ್ತ ಚಾಚಿ ಮಾನವೀಯತೆ ಮೆರೆದು ಮಹಿಳಾ ಪೊಲೀಸ್ ಅಧಿಕಾರಿ ಸುದ್ದಿಯಾಗಿದ್ದಾರೆ. ಮಧ್ಯಪ್ರದೇಶದ ದಾಮೋಹ್‌ನ ಮಹಿಳಾ ಪೊಲೀಸ್ ಅಧಿಕಾರಿ ಸುರಭಿ 80 ವರ್ಷದ ಮಹಿಳೆ ಬೀದಿಯಲ್ಲಿ ಮಲಗಿದ್ದನ್ನು ಕಂಡು ವಿಚಾರಿಸಿದ್ದಾರೆ.ಮಹಿಳೆ ತೀವ್ರ ಅಸ್ವಸ್ಥಗೊಂಡಿರುವುದನ್ನು ಕಂಡ ಸುರುಭಿ ತೆಂಡುಖೇಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ವೃದ್ಧೆ ಹರಿದ ಬಟ್ಟೆ ತೊಟ್ಟಿದ್ದರಿಂದ ಸುರುಭಿ ಹೊಸ ಬಟ್ಟೆ ತಂದು ಕೊಟ್ಟಿದ್ದಾರೆ. ಬಳಿಕ ಆಕೆಗೆ ಹಣ್ಣುಗಳನ್ನು ತಂದುಕೊಟ್ಟು

ಮಾನವೀಯತೆ ಮೆರೆದ ಮಹಿಳಾ ಪೊಲೀಸ್ ➤ ಬಡ ವೃದ್ಧೆಗೆ ಹೊಸ ಬಟ್ಟೆ ಕೊಟ್ಟು ಮನೆಗೆ ಬಿಟ್ಟು ಬಂದ ಅಧಿಕಾರಿ Read More »

ಕರ್ನಾಟಕ

ಹಣಕ್ಕಾಗಿ 2 ವರ್ಷದ ಮಗುವನ್ನು ಹತ್ಯೆ ಮಾಡಿ ಚೀಲದಲ್ಲಿ ಬಚ್ಚಿಟ್ಟ ಪಾಪಿ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.13. ಗ್ರೇಟರ್ ನೋಯ್ಡಾದಲ್ಲಿ ಹಣಕ್ಕಾಗಿ ಎರಡು ವರ್ಷದ ಬಾಲಕಿಯನ್ನು ಕೊಂದು ಚೀಲದಲ್ಲಿ ಬಚ್ಚಿಟ್ಟ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿ ರಾಘವೇಂದ್ರನನ್ನು ಇದೀಗ ಬಂಧಿಸಲಾಗಿದೆ. ಆರೋಪಿ ಮನೆಯಿಂದ ದುರ್ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡ ನೆರೆಹೊರೆಯವರು ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ರಾಘವೇಂದ್ರ ಕೆಲ ದಿನಗಳ ಹಿಂದೆ ಕೆಲಸ ಕಳೆದುಕೊಂಡಿದ್ದ. ಪತಿ ತನ್ನ ಬ್ಯಾಂಕ್ ಖಾತೆಯಲ್ಲಿ ಸುಮಾರು 10 ಲಕ್ಷ ರೂ. ಇಟ್ಟಿರುವುದಾಗಿ ಬಾಲಕಿಯ ತಂದೆ ಮಂಜು ಹೇಳುವುದನ್ನು ರಾಘವೇಂದ್ರ

ಹಣಕ್ಕಾಗಿ 2 ವರ್ಷದ ಮಗುವನ್ನು ಹತ್ಯೆ ಮಾಡಿ ಚೀಲದಲ್ಲಿ ಬಚ್ಚಿಟ್ಟ ಪಾಪಿ Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ವಾಸ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.13. ಪೊಲೀಸ್ ಸಿಬ್ಬಂದಿಯೋರ್ವರು ವಾಸ ಸ್ಥಳದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕೊಲ್ಲಂ ಮೂಲದ ಬೈಜು(54) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕರ್ತವ್ಯಕ್ಕೆ ಹಾಜರಾಗದ ಹಿನ್ನಲೆ ಯಲ್ಲಿ ಪೊಲೀಸ್ ಸಿಬ್ಬಂದಿಗಳು ವಾಸಸ್ಥಳಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ತಲುಪಿ ಮುಂದಿನ ಕ್ರಮ ತೆಗೆದು ಕೊಂಡಿದ್ದಾರೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ.  

ಕಾಸರಗೋಡು: ವಾಸ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ Read More »

ರಾಷ್ಟ್ರೀಯ ನ್ಯೂಸ್
Scroll to Top