News Kadaba

ಉಡುಪಿ: ವಿವಿಧೆಡೆ ಪೋಲಿಸರಿಂದ ಪಥ ಸಂಚಲನ

(ನ್ಯೂಸ್ ಕಡಬ)newskadaba.com ಉಡುಪಿ, ಏ.07. ಉಡುಪಿ ಜಿಲ್ಲೆಯ ವಿವಿಧೆಡೆ ಚುನಾ ವಣೆ ಪೂರ್ವಭಾವಿಯಾಗಿ ಪ್ಯಾರಾ ಮಿಲಿಟರಿ ಪಡೆ, ಪೊಲೀಸ್ ಅಧಿಕಾರಿಗಳು ಹಾಗೂ ಸಿಬಂದಿ ಜಿಲ್ಲೆಯ ವಿವಿಧೆಡೆ ಪಥ ಸಂಚಲನ ನಡೆಸಿದರು ಎಂದು ವರದಿಯಾಗಿದೆ. ಉಡುಪಿ ವಿಧಾನಸಭಾ ಕ್ಷೇತ್ರಕ್ಕೊಳಪಡುವ ಮಲ್ಪೆ, ಕಾಪು ವಿಧಾನಸಭಾ ಕ್ಷೇತ್ರಕ್ಕೊಳಪಡುವ ಕಾಪು ಪ್ರದೇಶ, ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೊಳಪಡುವ ಬೈಲೂರು ಹಾಗೂ ಕಾರ್ಕಳ ಪೇಟೆ, ಬೈಂದೂರು ವಿಧಾನಸಭಾ ಕ್ಷೇತ್ರಕ್ಕೊಳಪಡುವ ಶಿರೂರು ಭಾಗ ಗಳಲ್ಲಿ ಪಥಸಂಚಲನ ಮಾಡಲಾಯಿತು.  

ಉಡುಪಿ: ವಿವಿಧೆಡೆ ಪೋಲಿಸರಿಂದ ಪಥ ಸಂಚಲನ Read More »

ಕರಾವಳಿ

ವಿಟ್ಲ: ಚುನಾವಣೆ ಹಿನ್ನೆಲೆ ಹೆಚ್ಚಿದ ತಪಾಸಣೆ ➤ ಅಧಿಕಾರಿಗಳಿಂದ ಪರಿಶೀಲನೆ

(ನ್ಯೂಸ್ ಕಡಬ)newskadaba.com ಪುತ್ತೂರು, ಏ.07. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಡಿಭಾಗದಲ್ಲಿ ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಡಾ. ಕುಮಾರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಕ್ರಂ ಅಮಟೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಟ್ಲ ಠಾಣಾ ವ್ಯಾಪ್ತಿಯ ಸಾರಡ್ಕ, ಕನ್ಯಾನ, ಆನೆಕಲ್ಲು, ಮೊದಲಾದ ಕಡೆಗಳಿಗೆ ಜಂಟಿಯಾಗಿ ಸಿಬ್ಬಂದಿಗಳ ಜತೆ ಭೇಟಿ, ಪರಿಶೀಲನೆ ನಡೆಸಿದ್ದು, ಕರ್ನಾಟಕ-ಕೇರಳ ಭಾಗದಲ್ಲಿ ಬಿಗೀ ಬಂದೋ ಬಸ್ತ್ ಏರ್ಪಡಿಸಿ, ತಪಾಸಣೆ ಕಾರ್ಯ ಬಿಗಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.  

ವಿಟ್ಲ: ಚುನಾವಣೆ ಹಿನ್ನೆಲೆ ಹೆಚ್ಚಿದ ತಪಾಸಣೆ ➤ ಅಧಿಕಾರಿಗಳಿಂದ ಪರಿಶೀಲನೆ Read More »

ಕರಾವಳಿ

ಕೇವಲ 15 ದಿನಗಳ ಅಂತರದಲ್ಲೇ ಪತಿ, ಪತ್ನಿ ನಿಧನ..!!   ➤  ಕಂಗಾಲಾದ ಇಬ್ಬರು ಮಕ್ಕಳು

(ನ್ಯೂಸ್ ಕಡಬ)Newskadaba.com ಮೈಸೂರು,ಏ.07 ಕಾಂಗ್ರೆಸ್ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ ಅಗಲಿ ಇನ್ನು ಒಂದು ತಿಂಗಳು ಕಳೆದಿಲ್ಲ. ಈ ದುಃಖ ಮಾಸುವ ಮುನ್ನವೇ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಧ್ರುವನಾರಾಯಣ ಪತ್ನಿ ವೀಣಾ ವಿಧಿವಶರಾಗಿದ್ದಾರೆ.  ವೀಣಾ ಧ್ರುವನಾರಾಯಣ ಅವರಿಗೆ 55 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಎರಡು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಧ್ರುವನಾರಾಯಣ್‌ಗೆ ದರ್ಶನ್ ಮತ್ತು ಧೀರನ್ ಇಬ್ಬರು ಪುತ್ರರನ್ನು ಅಗಲಿದ್ದಾರೆ.  

ಕೇವಲ 15 ದಿನಗಳ ಅಂತರದಲ್ಲೇ ಪತಿ, ಪತ್ನಿ ನಿಧನ..!!   ➤  ಕಂಗಾಲಾದ ಇಬ್ಬರು ಮಕ್ಕಳು Read More »

ಕರ್ನಾಟಕ

ಬಂಟ್ವಾಳ:  ರೈಲ್ವೆ ಹಳಿಯ ಸಮೀಪ ಅಗ್ನಿ ಅವಘಡ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.07. ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿ ರೈಲ್ವೆ ಹಳಿಯ ಸಮೀಪ ಹಾಗೂ ಅದರ ಎದುರು ಬದಿಯ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೆಲ ಹೊತ್ತು ಬಿಸಿರೋಡಿನಿಂದ ನಂದಾವರಕ್ಕೆ ತೆರಳುವ ರಸ್ತೆ ಬಂದ್ ಆಗಿರುವ ಘಟನೆ ವರದಿಯಾಗಿದೆ. ರಸ್ತೆಯ ಎರಡೂ ಭಾಗದಲ್ಲಿ ಕಸದ ರಾಶಿ ಬಿದ್ದಿದ್ದು ಕಸದ ರಾಶಿಗೆ ಯಾರೋ ಬೆಂಕಿ ಹಾಕಿರ ಬೇಕು ಎಂದು ಹೇಳಲಾಗುತ್ತಿದ್ದು, ರಸ್ತೆ ತುಂಬಾ ಹೊಗೆ ತುಂಬಿದ್ದು, ಬೆಂಕಿಯ ಜ್ವಾಲೆ ವಿಪರೀತವಾಗಿ ಹರಡಿತ್ತು. ಆದರೆ

ಬಂಟ್ವಾಳ:  ರೈಲ್ವೆ ಹಳಿಯ ಸಮೀಪ ಅಗ್ನಿ ಅವಘಡ Read More »

ಕರಾವಳಿ, ಕ್ರೈಮ್ ನ್ಯೂಸ್

‘ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ’ ಇದೇ ಕೊನೆ..!!   ➤ ಸಚಿವ ಬಿ.ಸಿ ಪಾಟೀಲ್

(ನ್ಯೂಸ್ ಕಡಬ)Newskadaba.com ಹಾವೇರಿ,ಏ.07  ಸಚಿವ ಬಿ ಸಿ ಪಾಟೀಲ್ ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು  ಅಚ್ಚರಿ ಘೋಷಣೆ ಮಾಡಿದ್ದಾರೆ. ಹೀರೇಕೆರೂರು ಪಟ್ಟಣದಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾದ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಇದು ನನ್ನ ಕೊನೆಯ ಚುನಾವಣೆ, ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸಬಾರದು ಎಂದು ತೀರ್ಮಾನ ಕೈಗೊಂಡಿದ್ದೇನೆ ಎಂದು ಸಚಿವ ಬಿ ಸಿ ಪಾಟೀಲ್ ಅಚ್ಚರಿ ಘೋಷಣೆ ಮಾಡಿದ್ದಾರೆ.  

‘ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ’ ಇದೇ ಕೊನೆ..!!   ➤ ಸಚಿವ ಬಿ.ಸಿ ಪಾಟೀಲ್ Read More »

ಕರ್ನಾಟಕ

SSLC ಪರೀಕ್ಷಾ ಕೇಂದ್ರದಿಂದ ಅಪ್ಪನ ಅಂತ್ಯಸಂಸ್ಕಾರ ನೋಡಿದ ಮಗಳು

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಏ.07. SSLC ಎಕ್ಸಾಂ ಸಮಯದಲ್ಲಿ ರಾಜ್ಯದಲ್ಲಿ ಹೃದಯ ಸ್ಪರ್ಶಿ ಘಟನೆಯೊಂದು ನಡೆದಿದ್ದು, ಪರೀಕ್ಷಾ ಕೇಂದ್ರದಲ್ಲೇ ವಿಡಿಯೋ ಕಾಲ್ ಮೂಲಕ ಮಗಳು ತಂದೆಯ ಅಂತ್ಯ ಸಂಸ್ಕಾರವನ್ನು ನೋಡಿದ್ದಾಳೆ ಎಂದು ವರದಿಯಾಗಿದೆ. ಮನಿಯಾರ್ ಕೊಪ್ಪಳದ ನಿವಾಸಿ ಆರ್ಶೀಯಾ ಶಿವಮೊಗ್ಗದ ಹೊಸನಗರ ತಾಲೂಕಿನ ಹಿಂದುಳಿದ ವರ್ಗಗಳ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ SSLC  ಓದುತ್ತಿದ್ದಾರೆ ಎನ್ನಲಾಗಿದೆ.

SSLC ಪರೀಕ್ಷಾ ಕೇಂದ್ರದಿಂದ ಅಪ್ಪನ ಅಂತ್ಯಸಂಸ್ಕಾರ ನೋಡಿದ ಮಗಳು Read More »

ಕರ್ನಾಟಕ

ಮಂಗಳೂರು: ದ್ವಿಚಕ್ರ ವಾಹನದಿಂದ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.07. ದ್ವಿಚಕ್ರ ವಾಹನದಿಂದ ಮಹಿಳೆಯೋರ್ವರು ಬಿದ್ದು ಮೃತಪಟ್ಟ ಘಟನೆ ಕಟೀಲು ಸಮೀಪದ ಕಲ್ಲಕುಮೇರು ಬಳಿ ನಡೆದಿದೆ ಎಂದು ವರದಿ ತಿಳಿಸಿದೆ. ಮೃತ ಮಹಿಳೆಯನ್ನು ಕಾರ್ಕಳದ ಈದು ಗ್ರಾಮದ ಮಮತಾ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಮಮತಾ ಕಾರ್ಕಳದಿಂದ ಕಟೀಲಿಗೆ ತನ್ನ ಪತಿಯ ಜೊತೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದರು. ವೇಗವಾಗಿ ಬರುತ್ತಿದ್ದ ದ್ವಿಚಕ್ರವಾಹನ ಕಲ್ಲಕುಮೇರು ಬಳಿ ಹಂಪ್ಸ್ ಗಮನಿಸದ ಹಿನ್ನೆಲೆ ವೇಗವಾಗಿ ಬಂದ ಕಾರಣ ಮಮತಾ ದ್ವಿಚಕ್ರ ವಾಹನದಿಂದ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮಂಗಳೂರು: ದ್ವಿಚಕ್ರ ವಾಹನದಿಂದ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಬಾಲಕನ ಮೈಮೇಲೆ ಬಿದ್ದ ಮನೆ ಗೇಟ್..! ➤ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.07. ನಿರ್ಮಾಣ ಹಂತದ ಮನೆಯೊಂದರ ಗೇಟ್ ಬಿದ್ದು 7 ವರ್ಷದ ಬಾಲಕ ಮೃತಪಟ್ಟ ಘಟನೆ ನಗರದ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯೊಂದರ ಸಮೀಪ ಬಾಲಕ ಆಟವಾಡುತ್ತಿದ್ದಾಗ ಗೇಟ್ ಬಾಲಕನ ಮೈಮೇಲೆ ಬಿದ್ದಿದೆ. ಗಾಯಾಳು ಬಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.  

ಬಾಲಕನ ಮೈಮೇಲೆ ಬಿದ್ದ ಮನೆ ಗೇಟ್..! ➤ ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಅಮುಲ್ ಹಾಲಿನ ಉತ್ಪನ್ನ ಮಾರಾಟ   ➤ ಕನ್ನಡಿಗರ ಆಕ್ರೋಶ..!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.07 ನಂದಿನಿ ಬ್ರಾಂಡ್ ಮೂಲಕ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಮಾಡುತ್ತಿರುವ ಕೆಎಂಎಫ್ ಗೆ ಸೆಡ್ಡು ಹೊಡೆಯಲು ಗುಜರಾತ್ ಮೂಲದ ಅಮುಲ್ ಮುಂದಾಗಿದೆ.ಆನ್ಲೈನ್ ಮೂಲಕ ಹಾಲು, ಮೊಸರು ವಿತರಣೆಗೆ ಗುಜಾರಾತ್ ನ ಅಮೂಲ್ ಸಜ್ಜಾಗಿದೆ. ಇದರ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಸೇವ್ ನಂದಿನಿ ಅಭಿಯಾನ ಆರಂಭಿಸಿದ್ದಾರೆ. ಗೋ ಬ್ಯಾಕ್ ಅಮುಲ್ ಅಭಿಯಾನ ಆರಂಭಿಸಿರುವ ಕನ್ನಡಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  

ರಾಜ್ಯದಲ್ಲಿ ಅಮುಲ್ ಹಾಲಿನ ಉತ್ಪನ್ನ ಮಾರಾಟ   ➤ ಕನ್ನಡಿಗರ ಆಕ್ರೋಶ..!! Read More »

ಕರ್ನಾಟಕ

ನೆಲ್ಯಾಡಿ: ಹೊಟ್ಟೆ ನೋವಿನಿಂದ ಬಳಲಿ ಯುವತಿಯರಿಬ್ಬರು ಮೃತ್ಯು ➤ ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ)newskadaba.com ನೆಲ್ಯಾಡಿ, ಏ.07. ಹೊಟ್ಟೆ ನೋವಿನಿಂದ ಬಳಲಿ ಆಸ್ಪತ್ರೆಗೆ ದಾಖಲಾದ ನೆರೆಕರೆಯ ಮನೆಯ ಇಬ್ಬರು ಯುವತಿಯರು ಮೃತಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಮತ್ತು ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21) ಸುರತ್ಕಲ್ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ.  

ನೆಲ್ಯಾಡಿ: ಹೊಟ್ಟೆ ನೋವಿನಿಂದ ಬಳಲಿ ಯುವತಿಯರಿಬ್ಬರು ಮೃತ್ಯು ➤ ಆತ್ಮಹತ್ಯೆ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top