News Kadaba

ರೈಲಿನಲ್ಲಿ ಬೆಂಕಿ ಹಚ್ಚಿ ಮೂವರ ಹತ್ಯೆ ➤ ಆರೋಪಿ ಸೆರೆ

(ನ್ಯೂಸ್ ಕಡಬ)newskadaba.com  ಮುಂಬೈ, ಏ.05.  ಕೋಯಿಕ್ಕೋಡ್‌ ನಲ್ಲಿ ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರ ಸಾವಿಗೆ ಕಾರಣವಾಗಿದ್ದ ಪ್ರಮುಖ ಆರೋಪಿ ಶಾರುಖ್ ಸೈಫಿಯನ್ನು ಮಹಾರಾಷ್ಟ್ರ ಪೊಲೀಸ್ ಮತ್ತು ಕೇಂದ್ರ ಗುಪ್ತಚರ ದಳ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿವೆ. ಈ ಭೀಕರ ಪ್ರಕರಣದಲ್ಲಿ ಮೂವರ ಸಾವು ಮಾತ್ರವಲ್ಲದೇ 9 ಜನರು ಗಾಯಗೊಂಡಿದ್ದರು. ಕೊಯಿಕ್ಕೋಡ್‌ ನಲ್ಲಿ ಅಳಪುಳಾ- ಕಣ್ಣೂರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿದ ಆರೋಪಿ ಅಲ್ಲಿಂದ ತಪ್ಪಿಸಿಕೊಂಡಿದ್ದ. ಈತನ ಪತ್ತೆಗೆ ವಿಶೇಷ […]

ರೈಲಿನಲ್ಲಿ ಬೆಂಕಿ ಹಚ್ಚಿ ಮೂವರ ಹತ್ಯೆ ➤ ಆರೋಪಿ ಸೆರೆ Read More »

ರಾಷ್ಟ್ರೀಯ ನ್ಯೂಸ್

SSLC ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ   ➤ಇಬ್ಬರ ಬಂಧನ

(ನ್ಯೂಸ್ ಕಡಬ)Newskadaba.com ನವದೆಹಲಿ, ಏ.05 10ನೇ ತರಗತಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಅವರನ್ನು ಬಂಧಿಸಲಾಗಿದೆ. ಬಂಧನದ ವೇಳೆ ಕರೀಂನಗರದಲ್ಲಿರುವ ಸಂಸದ ಸಂಜಯ್ ಅವರ ನಿವಾಸದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಕಾರ್ಯಕರ್ತರು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ತಮ್ಮ ನಾಯಕನನ್ನು ಏಕೆ ಬಂಧಿಸಲಾಗುತ್ತಿದೆ ಎಂದು ಬಿಜೆಪಿ ಕಾರ್ಯಕರ್ತರು ಸಿಐ ದಾಮೋದರ್ ಅವರನ್ನು ಪ್ರಶ್ನಿಸಿದರು. ಏತನ್ಮಧ್ಯೆ, ಸಂಜಯ್‌ಗೆ 151 ಸಿಆರ್‌ಪಿಸಿ ನೋಟಿಸ್‌ಗಳನ್ನು ನೀಡಲಾಗಿದೆ.

SSLC ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ   ➤ಇಬ್ಬರ ಬಂಧನ Read More »

ರಾಷ್ಟ್ರೀಯ ನ್ಯೂಸ್

ಮದುವೆ ಉಡುಗೊರೆಯಾಗಿ ನೀಡಿದ್ದ ಮ್ಯೂಸಿಕ್‌ ಸಿಸ್ಟಮ್‌ನಲ್ಲಿ ಬಾಂಬ್‌..! ➤ ನವ ವಿವಾಹಿತ ಸೇರಿ ಇಬ್ಬರು ಬಲಿ

(ನ್ಯೂಸ್ ಕಡಬ)newskadaba.com  ಛತ್ತೀಸ್ ಗಢ, ಏ.05. ಮದುವೆಗೆ ನಾನಾ ರೀತಿಯ ಉಡುಗೊರೆಗಳು ಬರೋದು ಸಾಮಾನ್ಯವಾಗಿದ್ದು, ಸಂತಸದ ಸಮಾರಂಭದಲ್ಲಿ ಸೂತಕದ ವಾತಾವರಣ ಏರ್ಪಟ್ಟಿದೆ. ಛತ್ತೀಸ್‌ಗಢದಲ್ಲಿ ದುರಂತ ಘಟನೆ ನಡೆದಿದೆ. ಮದುವೆ ಉಡುಗೊರೆಯಾಗಿ ಪಡೆದ ಹೋಮ್ ಥಿಯೇಟರ್ ಮ್ಯೂಸಿಕ್ ಸಿಸ್ಟಮ್ ಮನೆಯಲ್ಲೇ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಮತ್ತು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮದುವೆ ಉಡುಗೊರೆಯಾಗಿ ನೀಡಿದ್ದ ಮ್ಯೂಸಿಕ್‌ ಸಿಸ್ಟಮ್‌ನಲ್ಲಿ ಬಾಂಬ್‌..! ➤ ನವ ವಿವಾಹಿತ ಸೇರಿ ಇಬ್ಬರು ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆಯನ್ನು ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ)newskadaba.com ಹರಿಯಾಣ, ಏ.05. 16 ವರ್ಷದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.  ಕಳೆದ ಎರಡು ವರ್ಷಗಳಲ್ಲಿ ಪತಿ ಮಗಳ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಒಮ್ಮೆ ತನ್ನ ಪತಿ ಅಪ್ರಾಪ್ತ ಬಾಲಕಿಯ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ತಡೆದಿದ್ದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ತನ್ನ ಮಗಳೊಂದಿಗೆ ತನ್ನ ಸ್ವಗ್ರಾಮದಿಂದ ಹಿಂದಿರುಗಿದಾಗ, ಆರೋಪಿಯು ಮತ್ತೆ ಮಗಳ ಮೇಲೆ

ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆಯನ್ನು ಬಂಧಿಸಿದ ಪೊಲೀಸರು Read More »

ರಾಷ್ಟ್ರೀಯ ನ್ಯೂಸ್

ಕೆಲವರ ಪಕ್ಷಾಂತರದಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮವಿಲ್ಲ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.05. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಕೆಲವು ಶಾಸಕರು ಮತ್ತು ಎಂಎಲ್‌ಸಿಗಳ ಪಕ್ಷಾಂತರವು ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಟಿಕೆಟ್ ಸಿಗುವುದಿಲ್ಲ ಎಂಬ ಖಚಿತತೆಯ ಮೇರೆಗೆ ಕೆಲ ನಾಯಕರು ಪಕ್ಷ ತೊರೆದಿದ್ದು, ಇದರಿಂದ ಪಕ್ಷಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ. ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆಯಲಿದೆ ಎಂದು ಪುನರುಚ್ಚರಿಸಿದರು.  

ಕೆಲವರ ಪಕ್ಷಾಂತರದಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮವಿಲ್ಲ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಅಕ್ರಮ ಆಸ್ತಿ ಪ್ರಕರಣದಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಸಂಕಷ್ಟ ➤ ಅರ್ಜಿ ವಜಾಗೊಳಿಸಿದ ಹೈಕೋರ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.05. ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಒಂದೇ ವಿಷಯದ ಕುರಿತು ಅನೇಕ ಎಫ್‌ಐಆರ್‌ಗಳ ರೇಣುಕಾಚಾರ್ಯ ಅವರ ವಾದವನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರ ಅರ್ಜಿಯನ್ನು ವಜಾಗೊಳಿಸಿದರು.  

ಅಕ್ರಮ ಆಸ್ತಿ ಪ್ರಕರಣದಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಸಂಕಷ್ಟ ➤ ಅರ್ಜಿ ವಜಾಗೊಳಿಸಿದ ಹೈಕೋರ್ಟ್ Read More »

ಕರ್ನಾಟಕ

ಶುಭ ಸಮಾರಂಭ ನಡೆಸುವ ಕುಟುಂಬಗಳಿಗೆ ಹೊಸ ತಲೆನೋವು   ➤ ಚುನಾವಣೆ ಎಫೆಕ್ಟ್‌: ಮೇ 10,13ಕ್ಕೆ ನಿಗದಿಯಾಗಿದ್ದ  ಸಮಾರಂಭಗಳು ಕ್ಯಾನ್ಸಲ್‌ʼ..!!*  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05  ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದೆ. ಮೇ.10ರಂದು ಮತದಾನ, ಮೇ.13ರಂದು ಮತ ಏಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮದುವೆ, ಶುಭ ಸಮಾರಂಭಗಳಿಗೆ ಭಾರೀ ಎಫೆಕ್ಟ್‌ ತಟ್ಟಿದೆ. ವಿಧಾನ ಸಭಾ ಚುನಾವಣೆ ಸಂದರ್ಭದಲ್ಲೇ ಡೇಟ್‌ ಫಿಕ್ಸ್‌ ಆಗಿದ್ದ ಮದುವೆ, ಶುಭ ಸಮಾರಂಭಗಳ ನಡೆಯುವ ಕುಟುಂಬಗಳಿಗೆ ಹೊಸ ತಲೆನೋವು ಶುರುವಾಗಿದೆ.                

ಶುಭ ಸಮಾರಂಭ ನಡೆಸುವ ಕುಟುಂಬಗಳಿಗೆ ಹೊಸ ತಲೆನೋವು   ➤ ಚುನಾವಣೆ ಎಫೆಕ್ಟ್‌: ಮೇ 10,13ಕ್ಕೆ ನಿಗದಿಯಾಗಿದ್ದ  ಸಮಾರಂಭಗಳು ಕ್ಯಾನ್ಸಲ್‌ʼ..!!*   Read More »

ಕರ್ನಾಟಕ

ಕಿಚ್ಚ ಸುದೀಪ್ ಸೇರ್ಪಡೆ ಬಗ್ಗೆ ಚರ್ಚೆ ನಡೆಯುತ್ತಿದೆ..! ➤ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.05. ಸ್ಯಾಂಡಲ್ ವುಡ್ ನಟ, ಅಭಿಮಾನಿಗಳ ಪಾಲಿನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಯಾಗುತ್ತಾರೆಯೇ, ಇಲ್ಲ ಸ್ಟಾರ್ ಪ್ರಚಾರಕರಾಗಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ಮಾಡಲಿದ್ದಾರೆಯೇ ಎಂಬ ಬಗ್ಗೆ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುದ್ದಿಗೋಷ್ಠಿಯನ್ನು ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ನಡೆಸಲಿದ್ದು ಅದರಲ್ಲಿ ಕಿಚ್ಚ ಸುದೀಪ್ ಭಾಗಿಯಾಗುತ್ತಿದ್ದಾರೆ. ಅದರಲ್ಲಿ ತಮ್ಮ ನಡೆಯನ್ನು ಘೋಷಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಕಿಚ್ಚ ಸುದೀಪ್ ಸೇರ್ಪಡೆ ಬಗ್ಗೆ ಚರ್ಚೆ ನಡೆಯುತ್ತಿದೆ..! ➤ ಸಿಎಂ ಬಸವರಾಜ ಬೊಮ್ಮಾಯಿ Read More »

ಕರ್ನಾಟಕ

ಕಾಶ್ಮೀರ ಕಣಿವೆಯ RSS ನಾಯಕರ ಹಿಟ್‌ಲಿಸ್ಟ್‌ ಬಿಡುಗಡೆ ಮಾಡಿದ ಉಗ್ರರು

 (ನ್ಯೂಸ್ ಕಡಬ)newskadaba.com ಶ್ರೀನಗರ, ಏ.05. ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರೆಸ್ಸೆಸ್‌ ಪ್ರಮುಖ ನಾಯಕರು ಹಾಗೂ ಕಾರ‍್ಯಕರ್ತರ ರಕ್ತ ಹರಿಸುತ್ತೇವೆ ಎಂದು ಸ್ಥಳೀಯ ಉಗ್ರ ಸಂಘಟನೆ ‘ದಿ ರೆಸಿಸ್ಟೆನ್ಸ್‌ ಫ್ರಂಟ್‌’ (ಟಿಆರ್‌ಎಫ್‌) ಜೀವ ಬೆದರಿಕೆ ಹಾಕಿದೆ. ಪಾಕ್‌ ಪೋಷಿತ ಲಷ್ಕರೆ ತಯ್ಬಾ ಉಗ್ರ ಸಂಘಟನೆಯ ಅಂಗಸಂಸ್ಥೆ ‘ಟಿಆರ್‌ಫ್‌’ಅನ್ನು ಸರಕಾರ ಜನವರಿಯಲ್ಲಿಯೇ ನಿಷೇಧಿಸಿದೆ. ”ನಿಮ್ಮನ್ನು ಸುಮ್ಮನೇ ಬಿಡುವುದಿಲ್ಲ, ನಿಮ್ಮ ರಕ್ತ ಹರಿಸುತ್ತೇವೆ,” ಎಂದು 30 ಆರೆಸ್ಸೆಸ್‌ ನಾಯಕರು ಹಾಗೂ ಕಾರ‍್ಯಕರ್ತರ ‘ಟಾರ್ಗೆಟ್‌ ಲಿಸ್ಟ್‌’ಅನ್ನು ಟಿಆರ್‌ಎಫ್‌ ಬಿಡುಗಡೆ ಮಾಡಿದೆ.

ಕಾಶ್ಮೀರ ಕಣಿವೆಯ RSS ನಾಯಕರ ಹಿಟ್‌ಲಿಸ್ಟ್‌ ಬಿಡುಗಡೆ ಮಾಡಿದ ಉಗ್ರರು Read More »

ರಾಷ್ಟ್ರೀಯ ನ್ಯೂಸ್

ಮೂಡುಬಿದಿರೆ: ಕೃಷಿ ತಜ್ಞ  ಡಾ.ಎಲ್.ಸಿ. ಸೋನ್ಸ್ ನಿಧನ..!!

(ನ್ಯೂಸ್ ಕಡಬ)Newskadaba.com ಮೂಡುಬಿದಿರೆ,ಏ.05 ಕೃಷಿ ತಜ್ಞ ಮೂಡುಬಿದಿರೆಯ ಬನ್ನಡ್ಕದ ಸೋನ್ಸ್ ಫಾರ್ಮ್ ನ ಕೃಷಿ ಋಷಿ ಡಾ. ಎಲ್. ಸಿ. ಸೋನ್ಸ್ ಅವರು ಎ.5 ಬುಧವಾರ ಮುಂಜಾನೆ ಸ್ವಗೃಹದಲ್ಲಿ ನಿಧನ ಹೊಂದಿದರು. ಕೃಷಿರಂಗದಲ್ಲಿ ಅಪಾರ ಸಾಧನೆ ಮಾಡಿದ ಇವರು ತನ್ನ ಜೀವನವನ್ನು ಕೃಷಿಗಾಗಿ ಮುಡಿಪಾಗಿಟ್ಟವರು. 1934ರ ಎಪ್ರಿಲ್ 4ರಂದು ಜನಿಸಿದ ಲಿವಿಂಗ್ ಸ್ಟನ್ ಚಂದ್ರಮೋಹನ ಸೋನ್ಸ್ ಸಸ್ಯ ಶಾಸ್ತ್ರದಲ್ಲಿ ಪದವಿ, ಮೊಂಟಾನ ವಿ.ವಿ.ಯಿಂದ ಪಿಎಚ್ ಡಿ. ಪದವಿ ಪಡೆದುಕೊಂಡಿದ್ದರು.ಕೃಷಿ ಕ್ಷೇತ್ರದಲ್ಲಿ ಅಸಾಮಾನ್ಯ ಸಾಧನೆ ಮಾಡಿರುವ ಸೋನ್ಸ್ ಅನಾನಸು

ಮೂಡುಬಿದಿರೆ: ಕೃಷಿ ತಜ್ಞ  ಡಾ.ಎಲ್.ಸಿ. ಸೋನ್ಸ್ ನಿಧನ..!! Read More »

ಕರಾವಳಿ
Scroll to Top