News Kadaba

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ ಆರಂಭ ➤ 3,305 ಪರೀಕ್ಷಾ ಕೇಂದ್ರಗಳಲ್ಲೂ ಸಕಲ ಸಿದ್ಧತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.31. ಇಂದಿನಿಂದ ರಾಜ್ಯಾದ್ಯಂತ SSLC ಮುಖ್ಯ ಪರೀಕ್ಷೆ ಆರಂಭಗೊಡು ಎಪ್ರಿಲ್ 15ರ ವರೆಗೆ ನಡೆಯಲಿದ್ದು, 3,305 ಪರೀಕ್ಷಾ ಕೇಂದ್ರಗಳಲ್ಲೂ ಸಕಲ ಸಿದ್ಧತೆ ನಡೆದಿದೆ. ಎಸೆಸೆಲ್ಸಿ ಪರೀಕ್ಷೆಗೆ ರಾಜ್ಯದ 15,498 ಶಾಲೆಗಳಿಂದ 8,42,811 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 5,833 ಸರಕಾರಿ ಶಾಲೆಗಳು, 3,605 ಅನುದಾನಿತ ಹಾಗೂ 6,060 ಅನುದಾನರಹಿತ ಶಾಲೆಗಳಾಗಿವೆ. ಇನ್ನು ಪರೀಕ್ಷಾ ಅಕ್ರಮ ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷಾ ಕೇಂದ್ರಗಳಲ್ಲಿ ನಿಗಾ ವಹಿಸಿದೆ. […]

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ ಆರಂಭ ➤ 3,305 ಪರೀಕ್ಷಾ ಕೇಂದ್ರಗಳಲ್ಲೂ ಸಕಲ ಸಿದ್ಧತೆ Read More »

ಕರ್ನಾಟಕ

ಮಂಗಳೂರು: ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!       

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.31. ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ದೇವೇಂದ್ರ (46) ಅವರ ಪತ್ನಿ ಮತ್ತು 2 ಮಕ್ಕಳು ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು, ಪಕ್ಕದಲ್ಲೇ ಡೆತ್ ನೋಟು ಕೂಡ ಪತ್ತೆಯಾಗಿದೆ ಎನ್ನಲಾಗಿದೆ. ಇನ್ನು ನಾಲ್ವರ ಪೈಕಿ ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ್ರೆ, ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿ

ಮಂಗಳೂರು: ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!        Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ನ್ಯಾಯಸಮ್ಮತ ಚುನಾವಣೆ ನಡೆಸಲು ಕೋವಿ    ➤ ಶಸ್ತ್ರಾಸ್ತ್ರ ದಾಸ್ತಾನಿರಿಸಲು ಜಿಲ್ಲಾಧಿಕಾರಿ ಸೂಚನೆ.!                        

(ನ್ಯೂಸ್ ಕಡಬ)newskadaba.com ಮಂಗಳೂರು,ಮಾ.31 ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾದ ಕಾರಣ ಜಿಲ್ಲೆಯಲ್ಲಿ ಮುಕ್ತ, ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಲು, ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಲ್ಲಿ ಪರವಾನಗಿ ಪಡೆದಿರುವ ಆಯುಧಗಳನ್ನು ಠೇವಣಿ ಮಾಡುವಂತೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ ಅಧೀಕೃತ ಕೋವಿ ಮದ್ದುಗುಂಡು ವ್ಯಾಪಾರಸ್ಥರು ಹಾಗೂ ಪೊಲೀಸ್ ಠಾಣೆಗಳಲ್ಲಿ ಶಸ್ತ್ರಾಸ್ತ್ರ ನಿಯಮ 2016 ನಿಯಮ-48 ರಲ್ಲಿ ತಿಳಿಸಿರುವಂತೆ ಪ್ರತೀ ಆಯುಧಗಳಿಗೆ ತಿಂಗಳಿಗೆ

ಮಂಗಳೂರು: ನ್ಯಾಯಸಮ್ಮತ ಚುನಾವಣೆ ನಡೆಸಲು ಕೋವಿ    ➤ ಶಸ್ತ್ರಾಸ್ತ್ರ ದಾಸ್ತಾನಿರಿಸಲು ಜಿಲ್ಲಾಧಿಕಾರಿ ಸೂಚನೆ.!                         Read More »

ಕರಾವಳಿ, ಕರ್ನಾಟಕ

ನೀವು ಉದ್ಯೋಗ ಇಲ್ಲದೆ ಪರದಾಡುತ್ತಿದ್ದೀರಾ..?    ➤ ಕಡಬದ ಅಡಿಗ ಮೋಟಾರ್ಸ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಕಡಬ, ಮಾ.31. ಕಡಬ ತಾಲೂಕಿನಲ್ಲಿ ಟಿವಿಎಸ್ ಕಂಪೆನಿಯ ಅಧಿಕೃತ ಡೀಲರ್ ಆಗಿರುವ ಅಡಿಗ ಮೋಟಾರ್ಸ್ ಸಂಸ್ಥೆಯು ಕಳೆದ 7 ವರ್ಷಗಳಿಂದ ಟಿವಿಎಸ್ ವಾಹನಗಳ ಮಾರಾಟ ಹಾಗೂ ಸೇವೆಯಲ್ಲಿ ತೊಡಗಿದ್ದು, ಸಂಸ್ಥೆಯ ವಿಸ್ತರಿಸುವ ಭಾಗವಾಗಿ ಈ ಕೆಳಗಿನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಈ ಕೆಳಕಂಡ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮ್ಯಾನೇಜರ್ 2. ಸೇಲ್ಸ್ ಎಕ್ಸಕ್ಯೂಟಿವ್ 3. ಪಾರ್ಟ್ಸ್ ಎಕ್ಸಕ್ಯುಟಿವ್ 4. ಟೆಕ್ನಿಷಿಯನ್ 5. ವಾಶ್ ಅಂಡ್ ಹೆಲ್ಪರ್ ಬಾಯ್ಸ್. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ತಮ್ಮ ಬಯೋಡೇಟಾ

ನೀವು ಉದ್ಯೋಗ ಇಲ್ಲದೆ ಪರದಾಡುತ್ತಿದ್ದೀರಾ..?    ➤ ಕಡಬದ ಅಡಿಗ ಮೋಟಾರ್ಸ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

10 ನೇ ತರಗತಿ ವಿದ್ಯಾರ್ಥಿ ತೀವ್ರ ಜ್ವರದಿಂದ ಮೃತ್ಯು 

(ನ್ಯೂಸ್ ಕಡಬ)newskadaba.com ಕಿನ್ನಿಗೋಳಿ, ಮಾ.31. ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ಬಾಲಕನೋರ್ವ ತೀವ್ರ ಜ್ವರದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಪಕ್ಷಿಕೆರೆ ಜುಮಾ‌ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ 10ನೇ ತರಗತಿ ವಿದ್ಯಾರ್ಥಿ ಹಿಲಾಲ್(16 )ಮೃತ ಬಾಲಕ ಎಂದು ಗುರುತಿಸಲಾಗಿದೆ. ಹಿಲಾಲ್ ಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಆತನನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.    

10 ನೇ ತರಗತಿ ವಿದ್ಯಾರ್ಥಿ ತೀವ್ರ ಜ್ವರದಿಂದ ಮೃತ್ಯು  Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ‘ಯಕ್ಷಗಾನ, ಕೋಲ, ಧಾರ್ಮಿಕ ಆಚರಣೆಗೆ ನಿರ್ಬಂಧವಿದೆಯೇ’ ?    ➤ ಡಿಸಿ ಮಾಹಿತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ದ.ಕ.ಜಿಲ್ಲೆಯ ಎಂಟು ಕ್ಷೇತ್ರಗಳಲ್ಲಿ 17,58,647 ಮತದಾರರಿದ್ದು, 8,59,899 ಪುರುಷರು, 8,98,132 ಮಹಿಳೆಯರು ಮತ್ತು 75 ತೃತೀಯಲಿಂಗಿಗಳಿದ್ದಾರೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 10 ರಂದು ಮತದಾನ ಮತ್ತು ಮೇ 13 ರಂದು ಮತ ಎಣಿಕೆ ನಡೆಯಲಿದೆ ಎಂದರು.

ಮಂಗಳೂರು: ‘ಯಕ್ಷಗಾನ, ಕೋಲ, ಧಾರ್ಮಿಕ ಆಚರಣೆಗೆ ನಿರ್ಬಂಧವಿದೆಯೇ’ ?    ➤ ಡಿಸಿ ಮಾಹಿತಿ Read More »

ಕರಾವಳಿ

ರಾಜಕಾರಣದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದರೆ ದ್ವೇಷ ಭಾಷಣ ನಿಲ್ಲುತ್ತದೆ      ➤ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.30. ರಾಜಕಾರಣಿಗಳು ರಾಜಕಾರಣದಲ್ಲಿ ಧರ್ಮವನ್ನು ಬಳಸುವುದನ್ನು ನಿಲ್ಲಿಸಿದರೆ ದ್ವೇಷ ಭಾಷಣಗಳಿಗೆ ಕಡಿವಾಣ ಹಾಕಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್​ ಅಭಿಪ್ರಾಯಪಟ್ಟಿದೆ. ದ್ವೇಷ ಭಾಷಣ ಕುರಿತು ಶಾಹೀನ್​ ಅಬ್ದುಲ್ಲಾ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಂ.ಜೋಸೆಫ್​, ಜಸ್ಟಿಸ್​ ಬಿ.ವಿ.ನಾಗರತ್ನ ಅವರಿದ್ದ ದ್ವಿಸದಸ್ಯ ಪೀಠವು ಮಾಜಿ ಪ್ರಧಾನ ಮಂತ್ರಿಗಳಾದ ಜವಾಹರಲಾಲ್​ ನೆಹರೂ, ಅಟಲ್​ ಬಿಹಾರಿ ವಾಜಪೇಯಿ ಅವರ ಭಾಷಣಗಳನ್ನು ಕೇಳಲು ಜನರು ದೂರದ ಪ್ರದೇಶಗಳಿಂದ ಬರತುತ್ತಿದ್ದರು ಎಂದು ಉಲ್ಲೇಖಿಸಿದರು.  

ರಾಜಕಾರಣದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದರೆ ದ್ವೇಷ ಭಾಷಣ ನಿಲ್ಲುತ್ತದೆ      ➤ ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

(ನ್ಯೂಸ್ ಕಡಬ)newskadaba.com ಮಾ.30 ದಕ್ಷಿಣ ಫಿಲಿಪೈನ್ಸ್‌ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲೇಡಿ ಮೇರಿ ಜಾಯ್ 3 ಮಿಂಡನಾವೊ ದ್ವೀಪದ ಜಾಂಬೊಂಗಾ ನಗರದಿಂದ ಸುಲು ಪ್ರಾಂತ್ಯದ ಜೋಲೋ ದ್ವೀಪಕ್ಕೆ ತೆರಳುತ್ತಿದ್ದ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ದುರಂತದಲ್ಲಿ 12 ಜನ ಸಾವನ್ನಪ್ಪಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ. 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಹಡಗಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಹಲವು ಪ್ರಯಾಣಿಕರು ನೀರಿಗೆ ಹಾರಿದ್ದಾರೆ ಎಂದು ವಿಪತ್ತು ಅಧಿಕಾರಿ ನಿಕ್ಸನ್ ಅಲೋಂಜೊ ಹೇಳಿದರು. ಅಪಘಾತದ ಬಳಿಕ ಮಾಹಿತಿ ಪಡೆದ

Read More »

ಅಂತರ್ರಾಷ್ಟ್ರೀಯ ನ್ಯೂಸ್

ಗುಂಪು ಘರ್ಷಣೆ; ಪೊಲೀಸ್ ವಾಹನಗಳಿಗೆ ಬೆಂಕಿ        

(ನ್ಯೂಸ್ ಕಡಬ)newskadaba.com ಮುಂಬೈ, ಮಾ.30. ಮಹಾರಾಷ್ಟ್ರದ ಔರಂಗಾಬಾದ್’ನಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯ ವೇಳೆ ಒಂದು ಗುಂಪು ಪೊಲೀಸ್ ತಂಡದ ಮೇಲೆ ದಾಳಿ ನಡೆಸಿದ್ದಲ್ಲದೆ ಹಲವು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಈಗ ಚತ್ರಪತಿ ಸಂಭಾಜಿ ನಗರ ಆಗಿರುವ ಔರಂಗಾಬಾದಿನಲ್ಲಿ ಎರಡು ಗುಂಪುಗಳ ನಡುವಣ ವಾಗ್ವಾದವು ಗಲಭೆಗೆ ತಿರುಗಿದೆ ಎಂದು ತಿಳಿದುಬಂದಿದೆ. ಒಂದು ಕಡೆ ರಾಮ ನವಮಿ, ಮತ್ತಿನ್ನೊಂದು ಕಡೆ ರಮಝಾನ್ ಉಪವಾಸವಿರುವುದರಿಂದ ಕೋಮು ಗಲಭೆಗೆ ತಿರುಗಬಾರದು ಎನ್ನುವುದಕ್ಕಾಗಿ ಭಾರೀ ಪೊಲೀಸ್ ಪಡೆಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ಗುಂಪು ಘರ್ಷಣೆ; ಪೊಲೀಸ್ ವಾಹನಗಳಿಗೆ ಬೆಂಕಿ         Read More »

ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ   ➤ ಮುಖ್ಯೋಪಾಧ್ಯಯ ಅರೆಸ್ಟ್

(ನ್ಯೂಸ್ ಕಡಬ)newskadaba.com ರಾಯಚೂರು, ಮಾ.30. ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಸರ್ಕಾರಿ ಸ್ವಾಮ್ಯದ ಶಾಲೆಯೊಂದರ ಮುಖ್ಯೋಪಾಧ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ. ವಿ.ಕೆ.ಅಂಗಡಿ ಬಂಧಿತ ಶಾಲೆಯ ಮುಖ್ಯೋಪಾಧ್ಯಾಯ. ಪ್ರತಿದಿನ ಮೊಬೈಲ್ ಕರೆ ಮಾಡಿ ಹಾಗೂ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಅಲ್ಲದೇ ನಿನಗೆ ಒಳ್ಳೆಯ ಆಫರ್ ಕೊಡುತ್ತೇನೆ. ನನ್ನ ಮನೆಗೆ ಒಂದು ಗಂಟೆ ಬಂದು ಹೋಗು ಎಂದು ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ. ಮುಖ್ಯೋಪಾಧ್ಯಾಯನ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ   ➤ ಮುಖ್ಯೋಪಾಧ್ಯಯ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top