News Kadaba

ಸುಳ್ಯದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ

(ನ್ಯೂಸ್‌ ಕಡಬ) newskadaba.com,ಫೆ.24: ಸುಳ್ಯ-ಬೆಳ್ಳಾರೆ ರಸ್ತೆಯ ಬೆಂಗಮಲೆ ಎಂಬಲ್ಲಿ ಸೋಮವಾರ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದಿದೆ.ಕಾರಿನಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಉತ್ಸವ್ ಚಕ್ರವರ್ತಿ ಮತ್ತು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮರ ಬಿದ್ದ ರಭಸಕ್ಕೆ ಉಮ್ಮರ್ ಎಂಬುವವರಿಗೆ ಸೇರಿದ ಬಾಡಿಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.ಘಟನೆಯಿಂದಾಗಿ ಸುಮಾರು ಅರ್ಧ ಗಂಟೆ ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ನಂತರ ಸ್ಥಳೀಯರು ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು..

ಸುಳ್ಯದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

(ನ್ಯೂಸ್‌ ಕಡಬ) newskadaba.com,ಫೆ.24: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಇಂದು ರಾಜ್ಯದ ಹಲವೆಡೆ ಗುಡುಗು, ಸಿಡಿಲು ಕಾಣಿಸಿಕೊಳ್ಳುವ ಸಂಭವವಿದ್ದು, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ, ಹಾಸನ, ಮೈಸೂರು

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ; ದೂರು ದಾಖಲು

(ನ್ಯೂಸ್‌ ಕಡಬ) newskadaba.com,ಫೆ.24: 20 ವರ್ಷದ ಯುವತಿಯೊಬ್ಬರು ಕಟಪಾಡಿಯಿಂದ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.. ನಾಪತ್ತೆಯಾದ ವಿದ್ಯಾರ್ಥಿನಿಯನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಮೂಲದ ಯುವತಿ ಎಂದು ಗುರುತಿಸಲಾಗಿದೆ..ನಾಪತ್ತೆಯಾದ ಯುವತಿ ಉಡುಪಿ ನಗರದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಟಪಾಡಿಯ ಆನೆಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅವರು ಫೆಬ್ರವರಿ 20 ರಂದು ಕಾಲೇಜಿಗೆ ರಜೆ ಹಾಕಿ ಮನೆಯಿಂದ ಹೊರಹೋಗಿದ್ದರು. ಆದರೆ, ಅಂದಿನಿಂದ ಅವರು ಮನೆಗೆ ಮರಳಿಲ್ಲ. ಈ ಸಂಬಂಧ ನಾಪತ್ತೆ ದೂರು ದಾಖಲಾಗಿದ್ದು, ಪತ್ತೆಗಾಗಿ ಪೊಲೀಸರು ಜಾಲ

ಉಡುಪಿ: : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ; ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ಸಾರಿಗೆಯಲ್ಲಿ ಹೊಸ ಕ್ರಾಂತಿ ರಸ್ತೆಗಿಳಿಯಲು ಸಿದ್ಧವಾದ ಮೊದಲ ಖಾಸಗಿ ಇ-ಬಸ್!

(ನ್ಯೂಸ್‌ ಕಡಬ) newskadaba.com,ಫೆ.24: ಮಂಗಳೂರಿನ ಸಾರಿಗೆ ಇತಿಹಾಸದಲ್ಲಿ ಹೊಸ ಕ್ರಾಂತಿ ಆರಂಭವಾಗುತ್ತಿದ್ದು, ನಗರದ ಮೊದಲ ಖಾಸಗಿ ಎಲೆಕ್ಟ್ರಿಕ್ ಬಸ್ ಮಾರ್ಗ ಸಂಖ್ಯೆ 27ರಲ್ಲಿ ಸಂಚರಿಸಲು ಸಜ್ಜಾಗಿದೆ. 1914ರಲ್ಲಿ ದೇಶದ ಮೊದಲ ಖಾಸಗಿ ಬಸ್ ಸೇವೆಗೆ ನಾಂದಿ ಹಾಡಿದ್ದ ಮಂಗಳೂರು, ಈಗ ಇ-ಬಸ್ ಮೂಲಕ ಪರಿಸರ ಸ್ನೇಹಿ ಸಾರಿಗೆಗೆ ಮಾದರಿಯಾಗುತ್ತಿದೆ. * ಬಸ್ ವಿವರ: 9 ಮೀಟರ್ ಉದ್ದ, 32–41 ಆಸನಗಳ ಸಾಮರ್ಥ್ಯದ ಹವಾನಿಯಂತ್ರಿತ (AC) ಬಸ್.ಒಮ್ಮೆ ಚಾರ್ಜ್ ಮಾಡಿದರೆ 200 ಕಿ.ಮೀ ಸಂಚಾರ, ಕೇವಲ 2 ಗಂಟೆಯಲ್ಲಿ

ಮಂಗಳೂರು ಸಾರಿಗೆಯಲ್ಲಿ ಹೊಸ ಕ್ರಾಂತಿ ರಸ್ತೆಗಿಳಿಯಲು ಸಿದ್ಧವಾದ ಮೊದಲ ಖಾಸಗಿ ಇ-ಬಸ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಫೆ.24: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಒಣಹವೆ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲಲ್ಲಿ ಗುಡುಗು ಸಹಿತ ವಾತಾವರಣ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ………..

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಫೆ. 27ರಂದು “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

(ನ್ಯೂಸ್‌ ಕಡಬ) newskadaba.com,ಫೆ.23: “ಫೆ.27ರಂದು ಬಿರ್ದ್ ದ ಕಂಬುಲ ಹಾಗೂ ವೀರಕಂಬಳ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಸಿನಿಮಾಕ್ಕೆ ತುಳುನಾಡಿನ ಕಂಬಳ ಪ್ರೇಮಿಗಳು ಬಹಳಷ್ಟು ಬೆಂಬಲ ನೀಡಿದ್ದಾರೆ. ಸಿನಿಮಾಕ್ಕೆ ಕಂಬಳ ಕ್ಷೇತ್ರದ ಅನೇಕ ಸಾಧಕರು ಸಹಾಯ ನೀಡಿದ್ದಾರೆ. ಎಲ್ಲರಿಗೂ ಅಭಿನಂದನೆಗಳು. ತುಳುನಾಡಿನ ಹೆಮ್ಮೆಯ ಕಂಬಳವನ್ನು ದೇಶ ವಿದೇಶಗಳಲ್ಲಿ ಪಸರಿಸಲು ಸಿನಿಮಾ ಮಾಡಿದ್ದೇವೆ. ಎಲ್ಲರೂ ಸಿನಿಮಾ ನೋಡಿ ಚಿತ್ರತಂಡವನ್ನು ಗೆಲ್ಲಿಸಿ” ಎಂದು ಚಿತ್ರದ ನಿರ್ಮಾಪಕ ಅರುಣ್ ರೈ ತೋಡಾರ್ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಬೆಳಪು

ಮಂಗಳೂರು : ಫೆ. 27ರಂದು “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ : ಹೊಸ ವಸ್ತ್ರಮಳಿಗೆ ತೆರೆಯುವ ಸಂಭ್ರಮದಲ್ಲಿದ್ದ ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com,ಫೆ.23: ನೂತನ ವಸ್ತ್ರಮಳಿಗೆಯೊಂದನ್ನು ತೆರೆಯುವ ಸಂಭ್ರಮದಲ್ಲಿದ್ದ ಯುವಕನೋರ್ವ ಅದೇ ಮಳಿಗೆಯಲ್ಲಿ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ತೊಕ್ಕೊಟ್ಟುವಿನ ಹೃದಯಭಾಗದಲ್ಲಿ ನಡೆದಿದೆ. ಮೂಲತ: ಪಜೀರು ಬೆಂಗೋಡಿ ಪದವು ನಿವಾಸಿ, ಸದ್ಯ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿರುವ ಸಲ್ಮಾನ್ ಫಾರಿಶ್ (20) ಮೃತ ಯುವಕ. ತೊಕ್ಕೊಟ್ಟಿನ ವಾಣಿಜ್ಯ ಮಳಿಗೆಯೊಂದರಲ್ಲಿ ಸಲ್ಮಾನ್ ಫಾರಿಶ್ ಮಾಲಕತ್ವದಲ್ಲಿ ನೂತನ ವಸ್ತ್ರ ಮಳಿಗೆಯೊಂದು ಇದೇ ಶುಕ್ರವಾರ ಶುಭಾರಂಭಗೊಳ್ಳಲಿದ್ದು, ಆ ನಿಟ್ಟಿನಲ್ಲಿ ನೂತನ ಮಳಿಗೆಯ ಒಳ ವಿನ್ಯಾಸ ಕೆಲಸ ನಡೆಯುತ್ತಿತ್ತು. ಭಾನುವಾರ ರಾತ್ರಿಯೂ ಮಳಿಗೆಯ ಒಳಗಡೆ

ಉಳ್ಳಾಲ : ಹೊಸ ವಸ್ತ್ರಮಳಿಗೆ ತೆರೆಯುವ ಸಂಭ್ರಮದಲ್ಲಿದ್ದ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ಆಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

(ನ್ಯೂಸ್‌ ಕಡಬ) newskadaba.com,ಫೆ.23:  ಗರ್ಭಿಣಿಯೊಬ್ಬರನ್ನು ಹೆರಿಗೆಗೆಂದು ಆಂಬುಲೆನ್ಸ್ ನಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿಮಧ್ಯೆ ಆಂಬುಲೆನ್ಸ್ ನಲ್ಲೇ ಮಗುವಿನ ಜನ್ಮ ನೀಡಿದ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ….. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಸುದೆಮುಗೇರು ನಿವಾಸಿ ಲೀಲಾವತಿ ಆಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ ಲೀಲಾವತಿಯನ್ನು ಇಂದು ಬೆಳಗ್ಗಿನ ಜಾವ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಹೆರಿಗೆಗೆಂದು ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರು ಪರಿಶೀಲಿಸಿ ಲೀಲಾವತಿಯನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಅದರಂತೆ

ಬೆಳ್ತಂಗಡಿ : ಆಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

(ನ್ಯೂಸ್‌ ಕಡಬ) newskadaba.com,ಫೆ.23: ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ಆದರೆ, ಈಗ ಮತ್ತೆ ದರ ಏರಿಕೆ ಚರ್ಚೆ ಮುನ್ನೆಲೆಗೆ ಬಂದಿದೆ.‌ ದರ ಏರಿಕೆ ಆಗೋದು ನಿಶ್ಚಿತ ಎನ್ನಲಾಗುತ್ತಿದೆ ಕಳೆದ ಬಾರಿ 5% ಮೆಟ್ರೋ ದರ ಏರಿಕೆಗೆ ತಾತ್ಕಾಲಿಕವಾಗಿ ತಡೆ ನೀಡಲಾಗಿತ್ತು. ಮೆಟ್ರೋ ಖರ್ಚು ವೆಚ್ಚಗಳ ಬಗ್ಗೆ ಆಡಿಟ್ ಮಾಡಿ ಅಂತ ಬಿಎಂಆರ್‌ಸಿಎಲ್‌ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸೂಚಿಸಿದ್ದರು‌. ಬಿಎಂಆರ್‌ಸಿಎಲ್ (BMRCL) ಆಂತರಿಕ ಅಡಿಟ್ ಮಾಡಿದೆ. ಮೆಟ್ರೋ ನಿರ್ವಹಣೆ, ಖರ್ಚು ವೆಚ್ಚ, ಸಿಬ್ಬಂದಿ ಸಂಬಳ,

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಲ್ಸಂಕ ಸರ್ಕಲ್‌ನಲ್ಲಿ ಹೈಡ್ರಾಮಾ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ!

(ನ್ಯೂಸ್‌ ಕಡಬ) newskadaba.com,ಫೆ.23: ಉಡುಪಿ ನಗರದ ಜನನಿಬಿಡ ಪ್ರದೇಶವಾದ ಕಲ್ಸಂಕ ಸರ್ಕಲ್‌ನಲ್ಲಿ ಭಾನುವಾರ ಸಂಜೆ ಅಪರಿಚಿತ ವ್ಯಕ್ತಿಯೋರ್ವ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಪೊಲೀಸರು ಮತ್ತು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ.   ​ ಗದಗ ಮೂಲದ ವ್ಯಕ್ತಿಯೊಬ್ಬ ಪೆಟ್ರೋಲ್ ಬಾಟಲಿ ಹಿಡಿದು ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಕೂಗಾಡಿ ಆತಂಕ ಸೃಷ್ಟಿಸಿದ್ದನು. ​ಪೊಲೀಸ್ ಕಾರ್ಯಾಚರಣೆ: ಒಮ್ಮೆ ಆತನಿಂದ ಪೆಟ್ರೋಲ್ ಕಸಿದುಕೊಂಡರೂ, ಮತ್ತೆ ಬಾಟಲಿ ಹಿಡಿದು

ಕಲ್ಸಂಕ ಸರ್ಕಲ್‌ನಲ್ಲಿ ಹೈಡ್ರಾಮಾ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top