News Kadaba

ಬ್ಯಾಂಕ್ ಬಡ್ಡಿ ದರ ಶೇ.0.25 ಹೆಚ್ಚಳ ಸಾಧ್ಯತೆ ➤ಆರ್‌ಬಿಐ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ. 27. ಗೃಹ, ವಾಹನ ಸಾಲ ಇರುವವರಿಗೆ ಸದ್ಯದಲ್ಲೇ ಮತ್ತೊಂದು ಆಘಾತ ಎದುರಾಗುವ ಸಾಧ್ಯತೆಯಿದೆ. ಮುಂದಿನ ವಾರ ಅಂದರೆ ಏ. 3, 5 ಮತ್ತು 6ರಂದು ಆರ್‌ಬಿಐ ದ್ವೈಮಾಸಿಕ ಹಣಕಾಸು ನೀತಿ ಪರಾಮರ್ಶೆ ನಡೆಯಲಿದ್ದು, ಮತ್ತೂಂದು ಸುತ್ತಿನ ಬಡ್ಡಿ ದರ ಏರಿಕೆ ಘೋಷಣೆಯಾಗಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಚಿಲ್ಲರೆ ಹಣದುಬ್ಬರ ಪ್ರಮಾಣವು ಶೇ.6ಕ್ಕಿಂತಲೂ ಮೇಲಿರುವ ಕಾರಣ ಮತ್ತು ಜಾಗತಿಕ ತಲ್ಲಣಗಳು ಮುಂದುವರಿದಿರುವ ಕಾರಣ, ಆರ್‌ಬಿಐ ಮತ್ತೆ ಸಾಲದ ಮೇಲಿನ ಬಡ್ಡಿ ದರವನ್ನು […]

ಬ್ಯಾಂಕ್ ಬಡ್ಡಿ ದರ ಶೇ.0.25 ಹೆಚ್ಚಳ ಸಾಧ್ಯತೆ ➤ಆರ್‌ಬಿಐ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಪಘಾತವಾದ ಕಾರಿನಲ್ಲಿ ಸಿಟಿ ರವಿ ಫೋಟೋ ಇರುವ ಕ್ಯಾಲೆಂಡರ್, ಮದ್ಯ, ಮಾರಕಾಸ್ತ್ರ ಪತ್ತೆ

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಮಾ.27. ಅಪಘಾತಕ್ಕೀಡಾದ ಕಾರಿನಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿಯ ಭಾವಚಿತ್ರವುಳ್ಳ ಕ್ಯಾಲೆಂಡರ್, ತಲವಾರು ಮತ್ತು ಮದ್ಯದ ಪ್ಯಾಕೇಟ್ ಗಳು ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್‌ನಲ್ಲಿ ನಡೆದಿದೆ. ಕಾರುವೊಂದರ ಬ್ರೇಕ್ ಡೌನ್‌ ಆಗಿದೆ. ಈ ವೇಳೆ ಕಾರನ್ನು ತಳ್ಳಲು ಮುಂದಾದಾಗ ಚಾಲಕ ಹಾಗೂ ಅಲ್ಲಿದ್ದವರ ನಡುವೆ ಮಾತಿನ ಚಕಮಕಿ ನಡೆದಿದೆ.ಆ ಸಂದರ್ಭ ಕಾರಿನ ಒಳಗೆ ನೋಡಿದಾಗ ಅದರಲ್ಲಿ ಮದ್ಯದ ಪ್ಯಾಕೇಟ್ ಗಳು, ಮಾರಕಾಸ್ತ್ರ ಮತ್ತು ಸಿ.ಟಿ.ರವಿಯ ಫೋಟೋ ಇರುವ ಕ್ಯಾಲೆಂಡರ್ ಪತ್ತೆಯಾಗಿವೆ ಎಂದು

ಅಪಘಾತವಾದ ಕಾರಿನಲ್ಲಿ ಸಿಟಿ ರವಿ ಫೋಟೋ ಇರುವ ಕ್ಯಾಲೆಂಡರ್, ಮದ್ಯ, ಮಾರಕಾಸ್ತ್ರ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತ್ನಿಗೆ ಗಂಡು ಮಗು ಆಗಿಲ್ಲವೆಂದು ಪತಿಯಿಂದ ಮಾರಣಾಂತಿಕ ಹಲ್ಲೆ

(ನ್ಯೂಸ್ ಕಡಬ)newskadaba.com  ಮೈಸೂರು, ಮಾ.27. ಮೈಸೂರು ಜಿಲ್ಲೆ ಹೆಚ್​ಡಿ ಕೋಟೆ ತಾಲೂಕಿನ ಸೋನಹಳ್ಳಿ ಗ್ರಾಮದಲ್ಲಿ ಗಂಡು ಮಗು ಆಗಿಲ್ಲ ಎಂಬ ಕಾರಣಕ್ಕೆ ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಶಿವಮ್ಮ ಮೇಲೆ ಪತಿ ಚಂದ್ರು ಹಲ್ಲೆ ನಡೆಸಿದ್ದಾನೆ. ಹಲ್ಲೆಗೆ ಮಾವ ರಾಮೇಗೌಡ ಹಾಗೂ ಅತ್ತೆ ಕೆಂಪಮ್ಮ ಸಹಕಾರ ನೀಡಿರುವ ಆರೋಪ ಕೇಳಿ ಬಂದಿದೆ. ಕಿರುಕುಳ ತಾಳಲಾರದೆ ಕಳೆದ ವರ್ಷ ಎಚ್.ಡಿ.ಕೋಟೆ ಪೊಲೀಸರಿಗೆ ಶಿವಮ್ಮ ದೂರು (Complaint) ನೀಡಿದ್ದರು. ಸದ್ಯ ಪತಿ ಚಂದ್ರು ಬಂಧನವಾಗಿದ್ದು

ಪತ್ನಿಗೆ ಗಂಡು ಮಗು ಆಗಿಲ್ಲವೆಂದು ಪತಿಯಿಂದ ಮಾರಣಾಂತಿಕ ಹಲ್ಲೆ Read More »

ಕರ್ನಾಟಕ

ಪೂರ್ವ ಮುಂಗಾರು ಆರಂಭ ➤ ರಾಜ್ಯದಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.27. ಈಗಾಗಲೇ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಪೂರ್ವ ಮುಂಗಾರು ಆರಂಭವಾಗಿದ್ದು,ರಾಜ್ಯದ ಹಲವೆಡೆ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ರಾಮನಗರ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.  

ಪೂರ್ವ ಮುಂಗಾರು ಆರಂಭ ➤ ರಾಜ್ಯದಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆ Read More »

ಕರ್ನಾಟಕ

ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 22 ಲಕ್ಷ ಮೌಲ್ಯದ ಸೀರೆಗಳನ್ನು ಜಪ್ತಿ ಮಾಡಿದ GST ಅಧಿಕಾರಿಗಳು

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ, ಮಾ.27. ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 22 ಲಕ್ಷ ಮೌಲ್ಯದ 2 ಲೋಡ್ ಸೀರೆಗಳನ್ನು GST ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬೆಂಗಳೂರಿನಿಂದ ಚಿಂತಾಮಣಿಗೆ ಟೆಂಪೋದಲ್ಲಿ ಸಾಗಿಸುತ್ತಿದ್ದಾಗ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ಕ್ರಾಸ್ ಬಳಿ ದಾಳಿ ಮಾಡಿ ಜಪ್ತಿ ಮಾಡಲಾಗಿದೆ. ವಶಪಡಿಸಿಕೊಳ್ಳಲಾದ ವಸ್ತುಗಳು ಶಿಡ್ಲಘಟ್ಟ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಸೀಕಲ್ ರಾಮಚಂದ್ರಗೌಡ ಎಂಬುವರಿಗೆ ಸೇರಿದ್ದು ಎನ್ನಲಾಗುತ್ತಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 22 ಲಕ್ಷ ಮೌಲ್ಯದ ಸೀರೆಗಳನ್ನು ಜಪ್ತಿ ಮಾಡಿದ GST ಅಧಿಕಾರಿಗಳು Read More »

ಕರ್ನಾಟಕ

ಪುತ್ತೂರಿನ ಯುವಕ ಬಂಟ್ವಾಳದಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.27. ನೇತ್ರಾವತಿ‌ ನದಿಗೆ ಹಾರಿ ಪುತ್ತೂರಿನ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಠ್ಠಲ್ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್(32) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಪುತ್ತೂರು ಕೋರ್ಟ್ ರೋಡ್ ನಲ್ಲಿ ಜಿನಸಿ ಅಂಗಡಿಯನ್ನು ಕಳೆದ ಹಲವು‌ ವರ್ಷಗಳಿಂದ ನಡೆಸುತ್ತಿದ್ದರು ಎನ್ನಲಾಗಿದೆ. ವಿಘ್ನೇಶ್ ಈ ಮೊದಲು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ನೇತ್ರಾವತಿ ನದಿ ಬಳಿ ಸಂಶಯಾಸ್ಪದ ನೆಲೆಯಲ್ಲಿ ವಾಹನ‌ ಕಂಡ ಹಿನ್ನೆಲೆ ಸ್ಥಳೀಯರು ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ಪುತ್ತೂರಿನ ಯುವಕ ಬಂಟ್ವಾಳದಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್‌ ನಲ್ಲಿ ಚಿನ್ನ ಗೆದ್ದ ನಿಖತ್ ಜರೀನ್

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.27. ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್‌ ನ 50 ಕೆಜಿ ವಿಭಾಗದ ಫೈನಲ್‌ನಲ್ಲಿ ಚಿನ್ನದ ಪದಕವನ್ನು ಬಾಕ್ಸರ್ ನಿಖತ್ ಜರೀನ್ ಗೆದ್ದುಕೊಂಡಿದ್ದು ಇದೀಗ ಅವರನ್ನು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅಭಿನಂದಿಸಿದ್ದಾರೆ. ವಿಯೆಟ್ನಾಂ ನ ಬಾಕ್ಸರ್ ನುಯೆನ್ ವಿರುದ್ಧ 5-0 ಅಂತರದಲ್ಲಿ ಜಯಗಳಿಸಿ ಚಿನ್ನದ ಪದಕ ಗೆದ್ದ ಜರೀನ್ ತೆಲಂಗಾಣದ ಹೆಮ್ಮೆಯ ಪುತ್ರಿ ಎಂದು ಕೆಸಿಆರ್‌ ಶುಭ ಹಾರೈಸಿದ್ದಾರೆ.

ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್‌ ನಲ್ಲಿ ಚಿನ್ನ ಗೆದ್ದ ನಿಖತ್ ಜರೀನ್ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಕಾರ್ಯಕ್ರಮವೊಂದಕ್ಕೆ ನುಗ್ಗಿ ದಾಂಧಲೆ ಪ್ರಕರಣ ➤ ಆರು ಮಂದಿ ಭಜರಂಗದಳದ ಕಾರ್ಯಕರ್ತರ ಬಂಧನ..!

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.27. ನಗರದ ಮರೋಳಿಯಲ್ಲಿ ನಡೆದ ಹೋಳಿ ಕೂಟಕ್ಕೆ ಅಡ್ಡಿಪಡಿಸಲು ಯತ್ನಿಸಿದ ಆರೋಪದ ಮೇಲೆ ಬಜರಂಗದಳದ ಆರು ಕಾರ್ಯಕರ್ತರನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಗಣೇಶ್ ಅತ್ತಾವರ, ಜೈ ಪ್ರಶಾಂತ್, ಬಾಲಚಂದ್ರ, ಅಕ್ಷಯ್, ಚಿರಾಗ್, ಮಿಥುನ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  

ಮಂಗಳೂರು: ಕಾರ್ಯಕ್ರಮವೊಂದಕ್ಕೆ ನುಗ್ಗಿ ದಾಂಧಲೆ ಪ್ರಕರಣ ➤ ಆರು ಮಂದಿ ಭಜರಂಗದಳದ ಕಾರ್ಯಕರ್ತರ ಬಂಧನ..! Read More »

ಕರಾವಳಿ

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ➤ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.27. ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಉಪ-ನಿರೀಕ್ಷಕ ಜಯಶ್ರೀ ಪ್ರಭಾಕರ ರವರು ರೌಂಡ್ಸ್‌ ಕರ್ತವ್ಯದಲ್ಲಿದ್ದ ವೇಳೆ ತುಂಬೆ ಸಾರ್ವಜನಿಕ ಬಸ್‌ ತಂಗುದಾಣದ ಬಳಿ ಓರ್ವ ವ್ಯಕ್ತಿ ಯಾವುದೋ ಮಾದಕ ವಸ್ತುವನ್ನು ಸೇವಿಸಿ ಅಮಲಿನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಎನ್ನಲಾಗಿದೆ.

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ➤ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು..! Read More »

ಕರ್ನಾಟಕ

ಕಾರು, ಬೈಕ್ ಮತ್ತು ಬಸ್ ನಡುವೆ ಸರಣಿ ಅಪಘಾತ ➤ ಯುವಕ ಮೃತ್ಯು..!

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.27. ಕುಂಭಾಶಿಯಿಂದ ಕುಂದಾಪುರ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ಯುವಕನಿಗೆ ಕುಂಭಾಶಿ ಪಾಕಶಾಲಾ ಸಮೀಪದ ಕಡೆಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಕುಂಭಾಶಿಯಲ್ಲಿ ನಡೆದಿದೆ. ಕುಂಭಾಶಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಳೆಕಟ್ಟು ನಿವಾಸಿ ಪ್ರಶಾಂತ್ ಹಾಗೂ ಅವರ ಸ್ನೇಹಿತ ವಿಘ್ನೇಶ್ ಕೆಲಸದನಿಮಿತ್ತ ಕುಂದಾಪುರ ಕಡೆಗೆ ಹೋಗುವಾಗ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲನೆ ಮಾಡುತ್ತಿದ್ದ ಯುವಕ ಪ್ರಶಾಂತ್ ಪೂಜಾರಿ (25) ತೀವ್ರ ಸ್ವರೂಪದ ಗಾಯಗಳಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ

ಕಾರು, ಬೈಕ್ ಮತ್ತು ಬಸ್ ನಡುವೆ ಸರಣಿ ಅಪಘಾತ ➤ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top