News Kadaba

ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟ ದಿ.ಸುಷ್ಮಾ ಸ್ವರಾಜ್ ಪುತ್ರಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.27. ಭಾರತೀಯ ಜನತಾ ಪಕ್ಷದ (ಬಿಜೆಪಿ) ಫೈರ್ ಬ್ರ್ಯಾಂಡ್ ನಾಯಕಿ ಎಂದೇ ಖ್ಯಾತಿ ಗಳಿಸಿದ್ದ ದಿ.ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್ ಈಗ ಸಕ್ರಿಯ ರಾಜಕಾರಣಕ್ಕೆ ಕಾಲಿರಿಸಿದ್ದಾರೆ. ಅವರು ದೆಹಲಿಯ ಬಿಜೆಪಿ ಕಾನೂನು ಘಟಕದ ಸಹ ಸಂಚಾಲಕರಾಗಿ ನೇಮಕಗೊಂಡಿದ್ದಾರೆ ಎನ್ನಲಾಗಿದೆ. ಬಾನ್ಸುರಿ ಸ್ವರಾಜ್​ ವಕೀಲೆಯಾಗಿದ್ದು, ಅವರು ಸುಪ್ರೀಂಕೋರ್ಟ್​​ನಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಅವರನ್ನು ಬಿಜೆಪಿಯ ದೆಹಲಿ ಅಧ್ಯಕ್ಷ ವೀರೇಂದ್ರ ಸಚ್​ದೇವಾ ಅವರು ಕಾನೂನು ಘಟಕದ ಸಹ ಸಂಚಾಲಕಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟ ದಿ.ಸುಷ್ಮಾ ಸ್ವರಾಜ್ ಪುತ್ರಿ..! Read More »

ಕರ್ನಾಟಕ

ವಿದ್ಯುತ್ ತಗುಲಿ ಕಾಡಾನೆ ಸಾವು

(ನ್ಯೂಸ್ ಕಡಬ) newskadaba.com. ಕೊಯಮತ್ತೂರು. ಮಾ.25. ಅರಣ್ಯ ವ್ಯಾಪ್ತಿಯ ಖಾಸಗಿ ಜಮೀನಿನೊಂದರಲ್ಲಿ ಕಾಡಾನೆಗೆ ವಿದ್ಯುತ್ ತಂತಿಯ ತಗುಲಿ ಸಾವನ್ನಪ್ಪಿರುವ ಘಟನೆ ಕೊಯಮತ್ತೂರು ವಿಭಾಗದ ಪೆರಿಯಾನಾಯ್ಕನ್‌ಪಾಳ್ಯಂ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಜಮೀನಿನಲ್ಲಿ ಮುಂಜಾನೆ ವಿದ್ಯುತ್ ತಂತಿಯು ಕಾಡಾನೆಯೊಂದು ಮೇಲೆ ಬಿದ್ದ ಪರಿಣಾಮ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಡಗಾಂ ಮೀಸಲು ಅರಣ್ಯ ಪ್ರದೇಶದ ಪಟ್ಟಾ ಜಮೀನಿನಲ್ಲಿದ್ದ ವಿದ್ಯುತ್ ಕಂಬಕ್ಕೆ ಆನೆಯು ತನ್ನ ದೇಹವನ್ನು ಉಜ್ಜುತ್ತಿದ್ದಾಗ ಆಕಸ್ಮಿಕವಾಗಿ ಅದರ ಮೇಲೆ ಬಿದ್ದಿದೆ ಗಂಡು ಆನೆ ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು

ವಿದ್ಯುತ್ ತಗುಲಿ ಕಾಡಾನೆ ಸಾವು Read More »

ರಾಷ್ಟ್ರೀಯ ನ್ಯೂಸ್

ಮನೆ ಕಾಮಗಾರಿ ವೇಳೆ ತಡೆಗೋಡೆ ಕುಸಿತ    ➤  ಮೂವರು ಕಾರ್ಮಿಕರ ಮೃತ್ಯು…!          

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.25. ತಡೆಗೋಡೆ ಕಾಮಗಾರಿ ಮೇಳೆ ಗುಡ್ಡದ ಮಣ್ಣು ಜರಿದು ಮೂವರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ಸುಳ್ಯದ ಗಾಂಧಿನಗರ ಬಳಿ ನಡೆದಿದೆ. ಮೃತರನ್ನು ಸೋಮಶೇಖರ (45), ಪತ್ನಿ ಶಾಂತ (40) ಮತ್ತು ಇನ್ನೋರ್ವ ಕಾರ್ಮಿಕ ಎಂದು ಗುರುತಿಸಲಾಗಿದೆ. ಸೋಮಶೇಖರ್ ಮತ್ತು ಶಾಂತಾ ಗದಗ ಮೂಲದ ಮುಂಡರಗಿ ತಾಲೂಕಿನವರು ಎಂದು ತಿಳಿದು ಬಂದಿದೆ. ಗಾಂಧಿನಗರ-ಆಲೆಟ್ಟಿ ರಸ್ತೆಯಲ್ಲಿ ಕಾರ್ಮಿಕರು ಸೆಂಟರಿಂಗ್ ಕೆಲಸ ಮಾಡುತ್ತಿದ್ದ ವೇಳೆ ಗುರುಂಪು ಬಳಿ ಬರೆ ಜರಿದು ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ

ಮನೆ ಕಾಮಗಾರಿ ವೇಳೆ ತಡೆಗೋಡೆ ಕುಸಿತ    ➤  ಮೂವರು ಕಾರ್ಮಿಕರ ಮೃತ್ಯು…!           Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಯವರಿಂದ ಪ್ರೀತಿ ನಿರಾಕರಣೆ ➤ 100 ಅಡಿ ಕಂದಕಕ್ಕೆ ಜಿಗಿದೂ ಬದುಕುಳಿದ ಪ್ರೇಮಿಗಳು..!

(ನ್ಯೂಸ್ ಕಡಬ)newskadaba.com ರಾಮನಗರ, ಮಾ.25. ಮನೆಯವರು ಪ್ರೀತಿ ನಿರಾಕರಿಸಿದ್ದಕ್ಕೆ ನೊಂದ ಪ್ರೇಮಿಗಳು ರಾಮದೇವರ ಬೆಟ್ಟದಿಂದ ಬಿದ್ದು ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿರುವುದು ನಡೆದಿದೆ. ಬೆಂಗಳೂರಿನ ನಾಗರಬಾವಿ ನಿವಾಸಿ ಚೇತನ್ (19) ಮತ್ತು ಕತ್ರಿಗುಪ್ಪೆಯ ಯುವತಿ (19) ಆತ್ಮಹತ್ಯೆಗೆ ಯತ್ನಿಸಿದವರು. ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಚೇತನ್ ಬಿಇ ವ್ಯಾಸಂಗ ಮಾಡುತ್ತಿದ್ದರೆ, ಯುವತಿಯೂ ಬಿಕಾಂ ಓದುತ್ತಿದ್ದಾಳೆ. ಇಬ್ಬರೂ 5 ವರ್ಷಗಳಿಂದ ಪ್ರೀತಿಸುತ್ತಿದ್ದು, ಈ ವಿಚಾರ ಮನೆಯವರಿಗೂ ತಿಳಿದಿದೆ.  

ಮನೆಯವರಿಂದ ಪ್ರೀತಿ ನಿರಾಕರಣೆ ➤ 100 ಅಡಿ ಕಂದಕಕ್ಕೆ ಜಿಗಿದೂ ಬದುಕುಳಿದ ಪ್ರೇಮಿಗಳು..! Read More »

ಕರ್ನಾಟಕ

‘ಶಾಶ್ವತವಾಗಿ ನನ್ನನ್ನು ಅನರ್ಹಗೊಳಿಸಿದರೂ ಯಾರಿಗೂ ಹೆದರಲ್ಲ’     ➤  ರಾಹುಲ್ ಮೊದಲ ಪ್ರತಿಕ್ರಿಯೆ..!     

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.25. ನನ್ನನ್ನು ಶಾಶ್ವತವಾಗಿ ಅನರ್ಹಗೊಳಿಸಿದರೂ ನಾನು ಯಾರಿಗೂ ಹೆದರುವುದಿಲ್ಲ ಎಂದು ಕಾಂಗ್ರೆಸ್ ನ ರಾಹುಲ್ ಗಾಂಧಿ ಹೇಳಿದ್ದಾರೆ. ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದ ತೀರ್ಪಿನ ನಂತರ ಸಂಸದ ಸ್ಥಾನದಿಂದ ಅನರ್ಹಗೊಂಡ ರಾಹುಲ್ ಗಾಂಧಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿರುವ ಅವರು, ನಾನು ಯಾರಿಗೂ ಹೆದರುವುದಿಲ್ಲ, ಶಾಶ್ವತವಾಗಿ ನನ್ನನ್ನು ಅನರ್ಹಗೊಳಿಸಿದರೂ ನನ್ನ ಕೆಲಸವನ್ನು ಮಾಡುತ್ತೇನೆ ಎಂದರು.    

‘ಶಾಶ್ವತವಾಗಿ ನನ್ನನ್ನು ಅನರ್ಹಗೊಳಿಸಿದರೂ ಯಾರಿಗೂ ಹೆದರಲ್ಲ’     ➤  ರಾಹುಲ್ ಮೊದಲ ಪ್ರತಿಕ್ರಿಯೆ..!      Read More »

ರಾಷ್ಟ್ರೀಯ ನ್ಯೂಸ್

`PSI’ ನೇಮಕಾತಿ ಪ್ರಕರಣ   ➤  ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com  ಕಾರವಾರ, ಮಾ.25. 545 ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣಕ್ಕೆಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದ ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ ಭಟ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಣಪತಿ ಭಟ್ ಕಳೆದ ಜುಲೈ 13 ರಂದು ಸಿಐಡಿ ವಿಚಾರಣೆ ಎದುರಿಸಿದ್ದರು. ತಟ್ಟೀಕೈ ಎಂ.ಆರ್‌.ಭಟ್ಟ ಅವರ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  

`PSI’ ನೇಮಕಾತಿ ಪ್ರಕರಣ   ➤  ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಐಪಿಎಸ್‌ ಅಧಿಕಾರಿ ರೂಪಾಗೆ ಕೋರ್ಟ್‌ ನೋಟಿಸ್‌

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.25. ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಕ್ರಿಮಿನಲ್‌ ಮಾನನಷ್ಟ ಪ್ರಕರಣ ದಾಖಲಿಸಿಕೊಂಡಿರುವ 8ನೇ ಎಸಿಎಂಎಂ ನ್ಯಾಯಾಲಯವು ಎ.26ಕ್ಕೆ ಹಾಜರಾಗುವಂತೆ ರೂಪಾ ಮೌದ್ಗಿಲ್ ಗೆ ಸಮನ್ಸ್‌ ಜಾರಿಗೊಳಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ರೋಹಿಣಿ ಸಿಂಧೂರಿ ವೈಯಕ್ತಿಕ ಫೋಟೋ ಹರಿಬಿಟ್ಟು ಆರೋಪಗಳನ್ನು ಮಾಡಿದ್ದಕ್ಕೆ ರೂಪಾ ಮೌದ್ಗಿಲ್‌ ವಿರುದ್ಧ ರೋಹಿಣಿ ಸಿಂಧೂರಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.    

ಐಪಿಎಸ್‌ ಅಧಿಕಾರಿ ರೂಪಾಗೆ ಕೋರ್ಟ್‌ ನೋಟಿಸ್‌ Read More »

ಕರ್ನಾಟಕ

ಕಡಬ: ಆಸ್ಪತ್ರೆಯ ಮುಂಭಾಗವೇ ಗಂಡು ಮಗುವಿಗೆ ಜನ್ಮವಿತ್ತ ತಾಯಿ

(ನ್ಯೂಸ್ ಕಡಬ)newskadaba.com  ಕಡಬ, ಮಾ.25. ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಟೋ ರಿಕ್ಷಾದಲ್ಲೇ ಗಂಡು ಮಗುವಿಗೆ ತಾಯಿ ಜನ್ಮವಿತ್ತ  ಅಪರೂಪದ ಘಟನೆ ಕಡಬದಲ್ಲಿ ವರದಿಯಾಗಿದೆ. ಆಲಂಕಾರು ಸಮೀಪದ ಮಣಿಕ್ಕಲದ  ಗರ್ಭಿಣಿ ಮಹಿಳೆ ತನ್ನ ಪತಿ ಜೊತೆ  ಬಲ್ಯದ  ತನ್ನ ಕುಟುಂಬಸ್ಥರ ಮನೆಗೆ ಬಂದಿದ್ದರು. ಸಾಯಂಕಾಲದ ವೇಳೆ ಅವರಿಗೆ ಆರೋಗ್ಯದಲ್ಲಿ ಬದಲಾವಣೆ ಕಂಡು ಬಂದಿತ್ತು. ತಕ್ಷಣ ಆರೋ ರಿಕ್ಷಾದಲ್ಲಿ ಕಡಬದ ಸಮುದಾಯ ಆಸ್ಪತ್ರೆಗೆ  ಕರೆದುಕೊಂಡು ಬಂದಿದ್ದು, ಆಸ್ಪತ್ರೆ ಮುಂಭಾಗಕ್ಕೆ ತಲುಪುತ್ತಿದ್ದಂತೆ ತಾಯಿ ಮಗುವಿಗೆ ಜನ್ಮನೀಡಿದ್ದಾರೆ. ಕೂಡಲೇ ಆಸ್ಪತ್ರೆ ಸಿಬ್ಬಂದಿಗಳು

ಕಡಬ: ಆಸ್ಪತ್ರೆಯ ಮುಂಭಾಗವೇ ಗಂಡು ಮಗುವಿಗೆ ಜನ್ಮವಿತ್ತ ತಾಯಿ Read More »

ಕರಾವಳಿ

SBI ಗ್ರಾಹಕರಿಗೆ ಉಚಿತವಾಗಿ ಸಿಗುತ್ತೆ ಈ 10 ಸೇವೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.25. ದೇಶದ ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌.ಬಿ.ಐ) ತನ್ನ ಗ್ರಾಹಕರಿಗೆ ಮೊಬೈಲ್ ಮೂಲಕವೇ ಪಡೆಯಬಹುದಾದ ಅನೇಕ ಸೇವೆಗಳನ್ನು ಉಚಿತವಾಗಿ ಕೊಡ ಮಾಡುತ್ತಿದೆ. ಎಸ್‌ಬಿಐ ಕ್ವಿಕ್ – ಮಿಸ್ಡ್‌ ಕಾಲ್ ಬ್ಯಾಂಕಿಂಗ್ ಮೂಲಕ ನೀವು ನಿಮ್ಮ ಅಕೌಂಟ್ ಬ್ಯಾಲೆಕ್ಸ್‌, ಮಿನಿ ಸ್ಟೇಟ್ಮೆಂಟ್ ಸೇರಿದಂತೆ ಅನೇಕ ವಿಚಾರಗಳನ್ನು ನಿಮ್ಮ ನೋಂದಾಯಿತ ಮೊಬೈಲ್‌ನಿಂದ ಎಸ್‌ಎಂಎಸ್ ಕಳಿಸುವ ಮೂಲಕ ಪಡೆಯಬಹುದಾಗಿದೆ ಎಂದು ವರದಿಯಾಗಿದೆ. ಸೇವೆಗಳ ಪಟ್ಟಿ ಇಂತಿದೆ: ಬ್ಯಾಲೆನ್ಸ್

SBI ಗ್ರಾಹಕರಿಗೆ ಉಚಿತವಾಗಿ ಸಿಗುತ್ತೆ ಈ 10 ಸೇವೆ.! Read More »

ಕರ್ನಾಟಕ

ಮೀನು ಮಾರುಕಟ್ಟೆಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಮಾ.25. ತೀರ್ಥಹಳ್ಳಿ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ. ಪೊಲೀಸ್ ಕಾನ್‌ಸ್ಟೆಬಲ್ ಪೂರ್ಣೇಶ್ ಎಂಬವರ ಶವ ಪತ್ತೆಯಾಗಿದೆ ಎಂದು ಗುರುತಿಸಲಾಗಿದೆ.

ಮೀನು ಮಾರುಕಟ್ಟೆಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top