News Kadaba

ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು !

(ನ್ಯೂಸ್ ಕಡಬ)newskadaba.com ತೀರ್ಥಹಳ್ಳಿ, ಮಾ.24. ದನದ ಕುತ್ತಿಗೆ ಕಡಿದು ತಲೆಯ ಭಾಗವನ್ನು ತುಂಗಾ ನದಿಗೆ ದುಷ್ಕರ್ಮಿಗಳು ಎಸೆದಿರುವ ಘಟನೆ ವರದಿಯಾಗಿದೆ. ಸ್ಥಳೀಯರು ಸ್ನಾನ ಮಾಡಲು ತುಂಗಾ ನದಿಯ ಹೊಳೆಗೆ ಇಳಿದಾಗ ಘಟನೆ ಬೆಳಕಿಗೆ ಬಂದಿದೆ. ತುಂಗಾನದಿಯಲ್ಲಿ ನಾಲ್ಕು ಪವಿತ್ರ ಸ್ಥಳಗಳಲ್ಲಿ ಒಂದಾದ ಚಕ್ರತೀರ್ಥದಲ್ಲಿ ಈ ಅಮಾನವೀಯ ಘಟನೆ ಜರುಗಿದೆ. ಶಂಖತೀರ್ಥ, ಚಕ್ರತೀರ್ಥ, ಗದಾತೀರ್ಥ, ಪದ್ಮತೀರ್ಥ ಎಂಬ ಪವಿತ್ರ ತೀರ್ಥಗಳ ಸಮಾಗಮ ಆಗುವ ತುಂಗಾ ನದಿಯ ರಾಮೇಶ್ವರ ದೇವಸ್ಥಾನದ ಹಿಂಭಾಗದ ಸ್ಥಳಗಳಲ್ಲಿ ಈ ಘಟನೆ ನೆಡೆದಿದ್ದು ದನದ ರುಂಡವನ್ನು […]

ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನಗತ್ಯವಾಗಿ ಜನರನ್ನು ಜೈಲಿಗೆ ಕಳಿಸುವ ನ್ಯಾಯಾಧೀಶರಿಗೆ ತರಬೇತಿ ಅನಿವಾರ್ಯ     ➤ ಸುಪ್ರೀಂ ಕೋರ್ಟ್  

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ, 24. ಅನಗತ್ಯವಾಗಿ ಜನರನ್ನು ಜೈಲಿಗೆ ಕಳಿಸುವ ನ್ಯಾಯಾಧೀಶರಿಗೆ ಕೌಶಲ್ಯ ವೃದ್ಧಿ ತರಬೇತಿ ಅನಿವಾರ್ಯ ಎಂದು ನ್ಯಾಯಾಧೀಶರಾದ ಸಂಜಯ್ ಕಿಶನ್ ಕೌಲ್, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಅರವಿಂದ್ ಕುಮಾರ್ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್‌ ಪೀಠವು ಹೇಳಿದೆ. ಜನರನ್ನು ಅನಗತ್ಯವಾಗಿ ಕಸ್ಟಡಿಗೆ ಕಳುಹಿಸುವಂತಹ ಮ್ಯಾಜಿಸ್ಟ್ರೇಟ್‌ಗಳ ನ್ಯಾಯಾಂಗ ಕೆಲಸವನ್ನು ಹಿಂಪಡೆಯಬೇಕು. ಅವರನ್ನು ನ್ಯಾಯಾಂಗ ಅಕಾಡೆಮಿಗಳಿಗೆ ತರಬೇತಿಗಾಗಿ ಕಳುಹಿಸಬೇಕು ಎಂದು ಪೀಠವು ತಿಳಿಸಿದೆ.  

ಅನಗತ್ಯವಾಗಿ ಜನರನ್ನು ಜೈಲಿಗೆ ಕಳಿಸುವ ನ್ಯಾಯಾಧೀಶರಿಗೆ ತರಬೇತಿ ಅನಿವಾರ್ಯ     ➤ ಸುಪ್ರೀಂ ಕೋರ್ಟ್   Read More »

ರಾಷ್ಟ್ರೀಯ ನ್ಯೂಸ್

ನಾಳೆ(ಮಾ.25) ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.24. ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮಾರ್ಚ್ 25ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆ, ಮಧ್ಯಾಹ್ನ 1 ಗಂಟೆಗೆ ವೈಟ್ಫೀಲ್ಡ್ನಿಂದ (ಕಾಡುಗೋಡಿ) ಕೃಷ್ಣರಾಜಪುರದ ನಮ್ಮ ಮೆಟ್ರೊ ಮಾರ್ಗದ ಮೂಲಕ ಮೆಟ್ರೊದಲ್ಲಿ ಸಂಚರಿಸಿ ಸಂಜೆ ದಾವಣಗೆರೆಯಲ್ಲಿ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ.

ನಾಳೆ(ಮಾ.25) ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ Read More »

ರಾಷ್ಟ್ರೀಯ ನ್ಯೂಸ್

ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ     ➤ ದೂರು ದಾಖಲು…..! 

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಮಾ.24. ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 22-24 ವರ್ಷದ ಇಬ್ಬರು ಯುವಕರು ಆಕೆಯ ಗೆಳೆಯನನ್ನು ಮರಕ್ಕೆ ಕಟ್ಟಿಹಾಕಿ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಒಂದು ದಿನದ ನಂತರ ಅವರನ್ನು ಬಂಧಿಸಿ ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಮಾರ್ಚ್ 27 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  

ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ     ➤ ದೂರು ದಾಖಲು…..!  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫ್ರಿಜ್ ​ನಲ್ಲಿಟ್ಟ ಚಿಕನ್​ ನೂಡಲ್ಸ್​ ತಿಂದು ಕಿಡ್ನಿ ಕಳೆದುಕೊಂಡ ಯುವಕ..!

(ನ್ಯೂಸ್ ಕಡಬ) Newskadaba.com ನ್ಯೂಯಾರ್ಕ್​: ಮಾ,24 ರೆಫ್ರಿಜರೇಟರ್‌ನಲ್ಲಿಟ್ಟ ಆಹಾರವನ್ನು ತಿನ್ನುವುದು ತುಂಬಾ ಸಾಮಾನ್ಯ ಎಂದು ಜನರು ಭಾವಿಸುತ್ತಾರೆ. ನಾವೆಲ್ಲರೂ ಒಂದಲ್ಲ ಒಂದು ಹಂತದಲ್ಲಿ ಎರಡು ಮೂರು ದಿನಗಳ ಕಾಲ ಫ್ರಿಜ್ ನಲ್ಲಿಟ್ಟ ಆಹಾರವನ್ನು ಸೇವಿಸಿದ್ದೇವೆ. ಇದು ನಿತ್ಯದ ಅಭ್ಯಾಸವಾಗಿ ಬದಲಾಗಿದೆ.ನಾವು ನಮ್ಮ ವಿದ್ಯಾರ್ಥಿ ಜೀವನದಲ್ಲಿ ಫ್ರಿಜ್ ಇಲ್ಲದೆ ಜೀವನ ಸಾಗಿಸಿದ್ದೆವು ಎಂದು ಕಲ್ಪಿಸಿಕೊಳ್ಳುವುದೂ ಕಷ್ಟವಾಗಿದೆ. ಇತ್ತೀಚಿನ ದಿನಗಳಲ್ಲಿ ಫ್ರಿಜ್ ಇಲ್ಲದಿರುವ ಮನೆಗಳನ್ನು ಅತೀ ಕಡಿಮೆ ಪ್ರಮಾಣಗಳಲ್ಲಿ ಕಾಣಬಹುದು.ಫ್ರಿಜ್ ನಮಗೆ ಎಷ್ಟು ಉಪಯಕಾರಿಯೋ, ಅಷ್ಷೇ ಅಪಾಯಕಾರಿ ಕೂಡ ಆಗಿದೆ.

ಫ್ರಿಜ್ ​ನಲ್ಲಿಟ್ಟ ಚಿಕನ್​ ನೂಡಲ್ಸ್​ ತಿಂದು ಕಿಡ್ನಿ ಕಳೆದುಕೊಂಡ ಯುವಕ..! Read More »

ರಾಷ್ಟ್ರೀಯ ನ್ಯೂಸ್

ಐದರ ಬಾಲಕ ಮಕ್ಕಳ ಕಾನ್‌ಸ್ಟೇಬಲ್ ಆಗಿ ನೇಮಕ

(ನ್ಯೂಸ್ ಕಡಬ)newskadaba.com ಛತ್ತೀಸ್ ಗಢ, ಮಾ.24. ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಐದು ವರ್ಷದ ಬಾಲಕನನ್ನು ಮಕ್ಕಳ ಕಾನ್‌ಸ್ಟೇಬಲ್ ಹುದ್ದೆಗೆ ನೇಮಿಸಲಾಗಿದೆ. ಅನುಕಂಪದ ಆಧಾರದಲ್ಲಿ ಮಗುವಿಗೆ ಈ ಹುದ್ದೆ ಲಭಿಸಿದೆ. ಯುಕೆಜಿ ವಿದ್ಯಾರ್ಥಿಯಾಗಿರುವ ನಮನ್ ರಾಜ್‌ವಾಡೆ ಅವರೇ ಮಕ್ಕಳ ಕಾನ್‌ಸ್ಟೇಬಲ್ ಆಗಿ ನೇಮಕಗೊಂಡ ಬಾಲಕ ಛತ್ತೀಸ್‌ಗಢದ ಸರ್ಗುಜಾದಲ್ಲಿ ಅವರು ಈ ಹುದ್ದೆಗೆ ನಿಯೋಜನೆಗೊಂಡಿದ್ದಾರೆ. ಪೊಲೀಸ್ ಅಧಿಕಾರಿಯಾಗಿದ್ದ ಬಾಲಕನ ತಂದೆ ರಾಜ್‌ಕುಮಾರ್ ರಾಜವಾಡೆ ಅಪಘಾತವೊಂದರಲ್ಲಿ ಸಾವನ್ನಪ್ಪಿದ್ದರು. ಅವರ ಸಾವಿನ ಬೆನ್ನಲ್ಲೇ ಆಡಳಿತ ಮಂಡಳಿಯು ರಾಜ್‌ಕುಮಾರ್ ಅವರ ಪುತ್ರ,

ಐದರ ಬಾಲಕ ಮಕ್ಕಳ ಕಾನ್‌ಸ್ಟೇಬಲ್ ಆಗಿ ನೇಮಕ Read More »

ರಾಷ್ಟ್ರೀಯ ನ್ಯೂಸ್

ಯುಗಾದಿ ಹಬ್ಬಕ್ಕೆ ಅತ್ತೆ ಮನೆಗೆ ಬಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಹಾವೇರಿ, ಮಾ.24. ಯುಗಾದಿ ಹಬ್ಬದ ಆಚರಣೆಗೆಂದು ದಾವಣಗೆರೆಯಲ್ಲಿರುವ ತನ್ನ ಅತ್ತೆ ಮನೆಗೆ ಬಂದಿದ್ದ ಹಾನಗಲ್ ಮೂಲದ ವಿವಾಹಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬೈಚವಳ್ಳಿ ಗ್ರಾಮದ ಮಹಾಂತೇಶ್ ಪುಟ್ಟಪ್ಪ ಚೌರದ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈತನ ಕಣ್ಣಿಗೆ ಖಾರದ ಪುಡಿ ಎರಚಿ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.  

ಯುಗಾದಿ ಹಬ್ಬಕ್ಕೆ ಅತ್ತೆ ಮನೆಗೆ ಬಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮತ್ತೆ ಶುರುವಾಗಲಿದೆಯೇ ಕೋವಿಡ್ ಅಲೆ..

(ನ್ಯೂಸ್ ಕಡಬ) Newskadaba.com ನವದೆಹಲಿ,ಮಾ.24 ಕೋವಿಡ್‌-19 ಸೋಂಕು   ದೇಶದಲ್ಲಿ ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಮಾರ್ಗಸೂಚಿ ರವಾನಿಸಿರುವ ಕೇಂದ್ರ ಆರೋಗ್ಯ ಇಲಾಖೆ, ಸೋಂಕು ವ್ಯಾಪಿಸದಂತೆ ತಡೆಯಲು ಪರೀಕ್ಷೆ, ಪತ್ತೆ, ಚಿಕಿತ್ಸೆ, ಕೋವಿಡ್‌  ನಿಯಮ ಪಾಲನೆ, ಲಸಿಕಾಕರಣದ ಕಡೆ ಹೆಚ್ಚು ಒತ್ತು ನೀಡುವಂತೆ ಸಲಹೆ ನೀಡಿದೆ.    

ಮತ್ತೆ ಶುರುವಾಗಲಿದೆಯೇ ಕೋವಿಡ್ ಅಲೆ.. Read More »

ರಾಷ್ಟ್ರೀಯ ನ್ಯೂಸ್

ಹೋಟೆಲ್ ವೊಂದರ ರೂಮ್‌ ನಲ್ಲಿ ಇಬ್ಬರ ಶವ ಪತ್ತೆ !

(ನ್ಯೂಸ್ ಕಡಬ)newskadaba.com ವಿಜಯಪುರ, ಮಾ.24. ವಿಜಯಪುರದ ಹೋಟೆಲ್ ರೂಮ್‌ ನಲ್ಲಿ ಇಬ್ಬರ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಬಳ್ಳಾರಿ ಮೂಲದ ಸಿ.ಇಂದ್ರಕುಮಾರ ಹಾಗೂ ಮತ್ತೋರ್ವನ ಶವಗಳು ರಕ್ತದ ಮಡುವಿನಲ್ಲಿ ದೊರೆತಿದ್ದು, ಸಾಕಷ್ಟು ಅನುಮಾನ ಮೂಡಿಸಿದೆ ಎಂದು ವರದಿ ತಿಳಿಸಿದೆ.

ಹೋಟೆಲ್ ವೊಂದರ ರೂಮ್‌ ನಲ್ಲಿ ಇಬ್ಬರ ಶವ ಪತ್ತೆ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮುಂದಿನ 2 ದಿನ ರಾಜ್ಯದಲ್ಲಿ ಮಳೆ ಅಬ್ಬರ !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.24. ಯುಗಾದಿ ಹಬ್ಬಕ್ಕೂ ಮುನ್ನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿಯಾಗಿ ಸುರಿದಿದ್ದ ಬೇಸಿಗೆ ಮಳೆ ಹಲವು ಅವಾಂತರಗಳನ್ನು ಸೃಷ್ಟಿ ಮಾಡಿತ್ತು. ಸದ್ಯ ಹಬ್ಬದ ಬಳಿಕ ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನು ನೀಡಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಅನ್ವಯ ರಾಜ್ಯದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ತುಮಕೂರು, ರಾಯಚೂರು ಜಿಲ್ಲೆಗಳಲ್ಲಿ

ಮುಂದಿನ 2 ದಿನ ರಾಜ್ಯದಲ್ಲಿ ಮಳೆ ಅಬ್ಬರ ! Read More »

ಕರ್ನಾಟಕ
Scroll to Top