News Kadaba

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವದಿಂದ ಅನರ್ಹ    ➤ ಸಚಿವಾಲಯ ಅಧಿಸೂಚನೆ

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.24. ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. C.C./18712/2019 ರಲ್ಲಿ ಸೂರತ್‌ನ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅವರಿಗೆ ಶಿಕ್ಷೆ ವಿಧಿಸಿದ ಪರಿಣಾಮವಾಗಿ, ಕೇರಳದ ವಯನಾಡ್ ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯರಾದ ಶ್ರೀ ರಾಹುಲ್ ಗಾಂಧಿ ಅವರು ಅಪರಾಧ ಸಾಬೀತಾದ ದಿನಾಂಕದಿಂದ ಲೋಕಸಭೆಯ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖವಾಗಿದೆ.  

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವದಿಂದ ಅನರ್ಹ    ➤ ಸಚಿವಾಲಯ ಅಧಿಸೂಚನೆ Read More »

ರಾಷ್ಟ್ರೀಯ ನ್ಯೂಸ್

SC/ST ಮೀಸಲಾತಿ ಹೆಚ್ಚಳ     ➤ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.24. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ  SC/ST ಕಾಯ್ದೆ 2023ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ನಗರದ ಕೆಎಲ್‌ಇ ಕಾನೂನು ಕಾಲೇಜಿನ ವಿದ್ಯಾರ್ಥಿ ಮಹೇಶ್‌ ಎಂಬುವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್‌ ಕಿಣಗಿ ಅವರಿದ್ದ ವಿಭಾಗೀಯ

SC/ST ಮೀಸಲಾತಿ ಹೆಚ್ಚಳ     ➤ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ Read More »

ಕರ್ನಾಟಕ

ಮೆಜೆಸ್ಟಿಕ್‌ನಲ್ಲಿ ಸಿಕ್ಕ ಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ      ➤ ಓರ್ವ ಮೃತ್ಯು- ಇಬ್ಬರ ಸ್ಥಿತಿ ಗಂಭೀರ     

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.24. ಮಾದಕ ವ್ಯಸನಿಯೊಬ್ಬ ರಸ್ತೆಯಲ್ಲಿ ಸಿಕ್ಕ ಸಿಕ್ಕವರಿಗೆ ಹಾಗೂ ಸುಮ್ಮನೆ ಕುಳಿತುಕೊಂಡಿದ್ದವರಿಗೆ ಚಾಕುವಿನಿಂದ ಇರಿದು ವಿಕೃತಿ ಮೆರೆದಿರುವ ಘಟನೆ ಸರಣಿ ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಗಣಪತಿ ದೇವಸ್ಥಾನ ಬಳಿ ನಡೆದಿದೆ. ಸುಮ್ಮನೆ ಕುಳಿತವರಿಗೆ ಚಾಕು ಇರಿತದ ಘಟನೆಯಿಂದ ಪ್ರಯಾಣಿಕರು ಹಾಗೂ ಇತರೆ ಸಾರ್ವಜನಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಗಾಂಜಾ ಸೇವನೆಯ ಮತ್ತಿನಲ್ಲಿ ಇದ್ದ ವ್ಯಕ್ತಿ ಮಾನಸಿಕ ಅಸ್ವಸ್ಥನಂತೆ (ಸೈಕೋ) ನಡೆದುಕೊಂಡಿದ್ದಾನೆ. ಗಣಪತಿ ದೇವಸ್ಥಾನದ ಬಳಿ ಊರಿಗೆ ಹೋಗಬೇಕೆಮದು

ಮೆಜೆಸ್ಟಿಕ್‌ನಲ್ಲಿ ಸಿಕ್ಕ ಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ      ➤ ಓರ್ವ ಮೃತ್ಯು- ಇಬ್ಬರ ಸ್ಥಿತಿ ಗಂಭೀರ      Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ದೃಢ ರಾಜಕೀಯ ಭಾಷಣ ಪ್ರಜಾಪ್ರಭುತ್ವದ ಮೂಲ ತತ್ವ’     ➤ ಪಿ. ಚಿದಂಬರಂ

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.24. ಪ್ರತಿಪಕ್ಷಗಳ ಧ್ವನಿ ಅಡಗಿಸಲು ಕಾನೂನನ್ನು ತರುವುದು ಸರಿಯಲ್ಲ. ದೃಢ ರಾಜಕೀಯ ಭಾಷಣ ಪ್ರಜಾಪ್ರಭುತ್ವದ ಮೂಲ ತತ್ವ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಪಿ. ಚಿದಂಬರಂ ಹೇಳಿದ್ದಾರೆ. ‘ಮೋದಿ ಉಪನಾಮ’ ಕುರಿತ ಟೀಕೆ ವಿಚಾರವಾಗಿ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಗಾಂಧಿಯವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ತೀರ್ಪು ಪ್ರಕಟವಾದ ಬಳಿಕ ಶುಕ್ರವಾರ ಟ್ವೀಟ್ ಮಾಡಿರುವ ಅವರು, ಪ್ರಜಾಸತ್ತಾತ್ಮಕ ವಿರೋಧದ ಧ್ವನಿ ಸಾಮಾನ್ಯ. ಅದನ್ನು ಅಡಗಿಸಲು ಕಾನೂನನ್ನು ಬಳಸಿಕೊಳ್ಳುವ ಬೆಳವಣಿಗೆ ಸರಿಯಲ್ಲ ಎಂದರು.

‘ದೃಢ ರಾಜಕೀಯ ಭಾಷಣ ಪ್ರಜಾಪ್ರಭುತ್ವದ ಮೂಲ ತತ್ವ’     ➤ ಪಿ. ಚಿದಂಬರಂ Read More »

ರಾಷ್ಟ್ರೀಯ ನ್ಯೂಸ್

ಬಹ್ರೈನ್‌ನಿಂದ ಮಂಗಳೂರಿಗೆ ಆಗಮಿಸಲು 48 ಗಂಟೆ ತೆಗೆದುಕೊಂಡ ಇಂಡಿಗೋ ವಿಮಾನ !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.24. ಕೆಲವೇ ಗಂಟೆಗಳಲ್ಲಿ ಬಹ್ರೇನ್‌ನಿಂದ ಮಂಗಳೂರಿಗೆ ಕ್ರಮಿಸಬೇಕಿದ್ದ ಇಂಡಿಗೋ ವಿಮಾನವೊಂದು ಇಲ್ಲಿಗೆ ಆಗಮಿಸಲು ಎರಡು ದಿನ ತೆಗೆದುಕೊಂಡ ಪ್ರಸಂಗ ಇತ್ತೀಚೆಗೆ ನಡೆದಿದೆ. ವಿಮಾನಯಾನ ಸಂಸ್ಥೆಯ ಈ ಕಳಪೆ ಸೇವೆಗೆ ವಿಮಾನದಲ್ಲಿದ್ದ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಬೈ ಮತ್ತು ಬಹ್ರೈನ್‌ನಲ್ಲಿ ಎದುರಾದ ವಿವಿಧ ಸಮಸ್ಯೆಗಳಿಂದಾಗಿ ಪ್ರಯಾಣಿಕರು ಯಾತನೆ ಅನುಭವಿಸಿದ್ದರು. ಬಹ್ರೈನ್‌ನಲ್ಲಿ ವಿಮಾನಕ್ಕೆ ಹಕ್ಕಿ ಹೊಡೆತದಿಂದಾಗಿ ಎರಡ ದಿನಗಳಷ್ಟು ತಡವಾಗಿ ವಿಮಾನ ಆಗಮಿಸಲು ಕಾರಣವಾಯಿತು. ಆದರೆ ಮಂಗಳೂರಿಗೆ ಬರಲು ಕಾದು ಕುಳಿತಿದ್ದ ಪ್ರಯಾಣಿಕರಿಗೆ ಕನಿಷ್ಠ ಹೊಟೇಲ್‌ಗಳಲ್ಲಿ

ಬಹ್ರೈನ್‌ನಿಂದ ಮಂಗಳೂರಿಗೆ ಆಗಮಿಸಲು 48 ಗಂಟೆ ತೆಗೆದುಕೊಂಡ ಇಂಡಿಗೋ ವಿಮಾನ ! Read More »

ಕರ್ನಾಟಕ

ನವಜಾತ ಶಿಶುವನ್ನು 4.5 ಲಕ್ಷಕ್ಕೆ ಮಾರಾಟ ಮಾಡಿದ ತಾಯಿ ➤ 11 ಮಂದಿ ಬಂಧನ

(ನ್ಯೂಸ್ ಕಡಬ)newskadaba.com ಮಾ.24. ಹೆರಿಗೆಯಾದ ತಕ್ಷಣ ಗಂಡು ಶಿಶುವನ್ನು ತಾಯಿಯೇ 4.5 ಲಕ್ಷಕ್ಕೆ ಮಾರಾಟ ಮಾಡಿರುವ ಘಟನೆ ಜಾರ್ಖಂಡ್ನವ ಛತ್ರಾ ಜಿಲ್ಲೆಯಲ್ಲಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ನವಜಾತ ಶಿಶುವಿನ ತಾಯಿ ಆಶಾದೇವಿ ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ. ಛತ್ರ ಜಿಲ್ಲೆಯ ಮಕ್ಕಳ ಕಲ್ಯಾಣ ಇಲಾಖೆಯ ಉಪ ಆಯುಕ್ತ ಅಬು ಇಮ್ರಾನ್ ಮಾಹಿತಿ ನೀಡಿದ ಕೂಡಲೇ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು 24 ಗಂಟೆಗಳಲ್ಲಿ ಬೊಕಾರೊ ಜಿಲ್ಲೆಯಿಂದ ನವಜಾತ ಶಿಶುವನ್ನು

ನವಜಾತ ಶಿಶುವನ್ನು 4.5 ಲಕ್ಷಕ್ಕೆ ಮಾರಾಟ ಮಾಡಿದ ತಾಯಿ ➤ 11 ಮಂದಿ ಬಂಧನ Read More »

ಕ್ರೈಮ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ ➤ ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

(ನ್ಯೂಸ್ ಕಡಬ)newskadaba.com ತಿರುವನಂತಪುರಂ, ಮಾ.24.ಲೇಡಿಸ್‌ ಹಾಸ್ಟೆಲ್‌ ಬಳಿ ಆಟೋದಲ್ಲಿ ಬಂದು ಖಾಸಗಿ ಅಂಗ ಪ್ರದರ್ಶನ ಮಾಡಿ ಅಸಭ್ಯವಾಗಿ ವರ್ತಿಸಿದ ಆಟೋ ಚಾಲಕನನ್ನು ಅರೆಸ್ಟ್ ಮಾಡಲಾಗಿದೆ. ಮೂನ್ನ ಮೂಡು ವಟಿಯೂರ್ಕಾವಿನ ವಯಲಿಕಾಡದ ಚಂದ್ರಿಕಾ ಭವನದ ನಿವಾಸಿ ರಾತ್ರಿ 11ರ ಸುಮಾರಿಗೆ ಕಾಟನ್‌ ಹಿಲ್‌ ಸ್ಕೂಲ್‌ ಬಳಿಯಿರುವ ಲೇಡಿಸ್‌ ಹಾಸ್ಟೆಲ್‌ ಮುಂದೆ ಆಟೋ ನಿಲ್ಲಿಸಿ ಚಾಲಕ ಖಾಸಗಿ ಅಂಗ ಪ್ರದರ್ಶನ ಮಾಡುವ ಮೂಲಕ ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನು ಮಹಡಿಯಲ್ಲಿ ಓದುತ್ತಿದ್ದ ಮಕ್ಕಳು ಗಮನಿಸಿದ್ದು ಕೂಡಲೇ ಮಕ್ಕಳು ಆಟೋ ರಿಕ್ಷಾದ ನಂಬರ್‌

ಲೇಡಿಸ್ ಹಾಸ್ಟೆಲ್ ಬಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ ➤ ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು Read More »

ರಾಷ್ಟ್ರೀಯ ನ್ಯೂಸ್

ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 24. ದಿವಂಗತ ನಟ ಡಾ.ಪುನೀತ್ ರಾಜ್​ ಕುಮಾರ್ ಅವರ ಹೆಸರಿನಲ್ಲಿ ಗೋವಿಂದರಾಜನಗರ ಕ್ಷೇತ್ರದ ನಾಯಂಡಹಳ್ಳಿಯಲ್ಲಿ ನಿರ್ಮಾಣ ಮಾಡಲಾದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಸಿಎಂ ಬೊಮ್ಮಾಯಿ ಉದ್ಘಾಟಿಸಿದರು. ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಈ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 209 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜ್‍ಕುಮಾರ್, ಎಂ‌ಎಲ್‌ಸಿ ಅ ದೇವೇಗೌಡ, ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎನ್.ಆರ್.ರಮೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು. ಬಳಿಕ ಮಾತನಾಡಿದ

ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ವಿಮಾನದಲ್ಲಿ ಮದ್ಯ ಸೇವಿಸಿ ಗಲಾಟೆ ➤ ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ, ಮಾ. 24. ದುಬೈ-ಮುಂಬೈ ಇಂಡಿಗೋ ಏರ್‌ಲೈನ್ಸ್’ನಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಪ್ರಯಾಣಿಕರನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ಈ ಇಬ್ಬರು ಪ್ರಯಾಣಿಕರು ವಿಮಾನ ಹಾರಾಟದಲ್ಲಿದ್ದ ವೇಳೆ ಗಲಾಟೆ ಸೃಷ್ಟಿಸಿ ಸಿಬ್ಬಂದಿ ಮತ್ತು ಸಹ ಪ್ರಯಾಣಿಕರಿಗೂ ಕಿರಿಕಿರಿಯುಂಟು ಮಾಡಿದ್ದರು. ಏರ್ ಲೈನ್ ಸಿಬ್ಬಂದಿಯ ದೂರಿನ ಮೇರೆಗೆ ಎಫ್’ಐಆರ್ ದಾಖಲಿಸಿ ಪಾಲ್ಘರ್ ಜಿಲ್ಲೆಯ ಜಾನ್ ಜಿ ಡಿಸೋಜಾ (49) ಮತ್ತು ಕೊಲ್ಲಾಪುರದ ಮಾನ್ಬೆಟ್ನ ದತ್ತಾತ್ರೇಯ ಬಾಪರ್ಡೇಕರ್ (47) ಎಂಬವರನ್ನು

ವಿಮಾನದಲ್ಲಿ ಮದ್ಯ ಸೇವಿಸಿ ಗಲಾಟೆ ➤ ಇಬ್ಬರು ಆರೋಪಿಗಳು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋರ್ಟ್ ಆವರಣದಲ್ಲೇ ಪತ್ನಿ ಮುಖಕ್ಕೆ ಆ್ಯಸಿಡ್ ಎರಚಿದ ಭೂಪ

(ನ್ಯೂಸ್ ಕಡಬ) newskadaba.com ತಮಿಳುನಾಡು, ಮಾ. 24. ಕೋರ್ಟ್ ಆವರಣದಲ್ಲೇ ಪತ್ನಿಯ ಮುಖದ ಮೇಲೆ ಪತಿಯೊಬ್ಬ ಆ್ಯಸಿಡ್ ಎಸೆದಿರುವ ಘಟನೆ ತಮಿಳುನಾಡಿನ ಕೊಯಮತ್ತೂರುನಲ್ಲಿ ನಡೆದಿದೆ. ಇಲ್ಲಿನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಆ್ಯಸಿಡ್ ಎರಚಿದ್ದು, ಆಕೆ ಮತ್ತು ಇತರ ಇಬ್ಬರು ಗಾಯಗೊಂಡಿದ್ದಾರೆ. ಪ್ರಕರಣವೊಂದರ ವಿಚಾರಣೆಗೆ ಸಂಬಂಧಿಸಿದಂತೆ ಕವಿತಾ ಇಂದು ನ್ಯಾಯಾಲಯಕ್ಕೆ ಆಗಮಿಸಿದ್ದ ವೇಳೆ ಪತಿ ಶಿವಕುಮಾರ್ ಆಸಿಡ್ ಎರಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  

ಕೋರ್ಟ್ ಆವರಣದಲ್ಲೇ ಪತ್ನಿ ಮುಖಕ್ಕೆ ಆ್ಯಸಿಡ್ ಎರಚಿದ ಭೂಪ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top