News Kadaba

ಇಂದಿನಿಂದ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ      ➤ ಸಿಎಂ ಚಾಲನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.23. ಇಂದಿನಿಂದ ಮಾರ್ಚ್ 30ರವರೆಗೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಲನಚಿತ್ರ ಅಕಾಡೆಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿಯಾಗಿ ಫಿಲಂ ಫೆಸ್ಟಿವಲ್ ಆಯೋಜಿಸಿವೆ. ವಿಧಾನಸೌಧದ ಎದುರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫಿಲಂ ಫೆಸ್ಟಿವಲ್ ಉದ್ಘಾಟಿಸಲಿದ್ದಾರೆ. ಚಲನಚಿತ್ರೋತ್ಸವ ಸ್ಮರಣ ಸಂಚಿಕೆಯನ್ನು ವಿಜಯೇಂದ್ರ ಪ್ರಸಾದ್ ಬಿಡುಗಡೆ ಮಾಡಲಿದ್ದಾರೆ. ಅಶೋಕ್ ಕಶ್ಯಪ್ ಉಪಸ್ಥಿತರಿರುತ್ತಾರೆ.  

ಇಂದಿನಿಂದ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ      ➤ ಸಿಎಂ ಚಾಲನೆ Read More »

ಕರ್ನಾಟಕ

ಉಳ್ಳಾಲ: ಮಾ. 25ರಂದು ಹೊನಲು‌ ಬೆಳಕಿನ ನರಿಂಗಾನ‌ ಕಂಬಳ

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.23. ಇದೇ ಮೊದಲ ಬಾರಿಗೆ ಸರಕಾರಿ ಕಂಬಳ ಆಯೋಜನೆ ಮಾಡಲಾಗಿದ್ದು, ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ಲವಕುಶ ಜೋಡುಕರೆ ಹೆಸರಿನಲ್ಲಿ ಹೊನಲು ಬೆಳಕಿನ ನರಿಂಗಾನ ಕಂಬಳ ಮಾ. 25ರಂದು ನಡೆಯಲಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ. ಕಂಬಳ ಕರೆಯ ಬಳಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 25ರಂದು ಬೆಳಗ್ಗೆ 10.30ಕ್ಕೆ ಶ್ರೀ ಕ್ಷೇತ್ರ ಶಾಂತಿಪಳಿಕೆಯ ಪ್ರಧಾನ ಪ್ರಧಾನ ತಂತ್ರಿಗಳಾದ ವರ್ಕಾಡಿ ರಾಜೇಶ್ ತಾಳಿತ್ತಾಯರವರು ಉದ್ಘಾಟಿಸಲಿದ್ದಾರೆ. ಕರೆಯನ್ನು ಶ್ರೀ ಕ್ಷೇತ್ರ ಕಣಂತೂರಿನ

ಉಳ್ಳಾಲ: ಮಾ. 25ರಂದು ಹೊನಲು‌ ಬೆಳಕಿನ ನರಿಂಗಾನ‌ ಕಂಬಳ Read More »

ಕರಾವಳಿ

ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಮೃತ್ಯು..!

(ನ್ಯೂಸ್ ಕಡಬ)newskadaba.com ಮ‌ಡಿಕೇರಿ, ಮಾ.23. ಉಂಗುರ ನುಂಗಿ 8 ತಿಂಗಳ ಮಗು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಮುನೀರ್ ಎಂಬವರ ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿದ್ದು, ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಗುವನ್ನು ದಾಖಲಿಸಿದರೂ ಉಸಿರಾಟದ ಸಮಸ್ಯೆಯಿಂದಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಉಂಗುರವನ್ನು ಹೊರತೆಗೆಯಲಾಗಿದೆ. ಆದರೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಸಾರ್ವಜನಿಕ ಸ್ಥಳದಲ್ಲೇ ಗಾಂಜಾ ಸೇವನೆ..!   ➤ ಐವರು ವಿದ್ಯಾರ್ಥಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com  ಉಡುಪಿ, ಮಾ.23. ಅಪಾರ್ಟ್ಮೆಂಟ್ ವೊಂದರ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿರುವ ಘಟನೆ ಮಣಿಪಾಲದಲ್ಲಿ ವರದಿಯಾಗಿದೆ. ವಶಕ್ಕೆ ಪಡೆದಿರುವ ವಿದ್ಯಾರ್ಥಿಗಳನ್ನು ನಿಖಿಲ್ ಎಂ. (22), ತನ್ವೀರ್ ರೆಡ್ಡಿ (25), ಶರಣ್ ಶೆಟ್ಟಿ (22), ರಾಹುಲ್ ಸೀಮಾ (21), ತುಶಾರ್ ಜಿ. (21) ಎಂದು ಗುರುತಿಸಲಾಗಿದೆ.  

ಉಡುಪಿ: ಸಾರ್ವಜನಿಕ ಸ್ಥಳದಲ್ಲೇ ಗಾಂಜಾ ಸೇವನೆ..!   ➤ ಐವರು ವಿದ್ಯಾರ್ಥಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಆರೋಪಿಯನ್ನೇ ಅಪಹರಿಸಿ ಲಂಚಕ್ಕೆ ಬೇಡಿಕೆ ಇಟ್ಟ ಪೊಲೀಸರು..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.23. ಆರೋಪಿಯನ್ನೇ ಅಪಹರಿಸಿದ ಪೊಲೀಸರು ಆತನ ಸಂಬಂಧಿಕರ ಬಳಿ 40 ಲಕ್ಷ ರೂ.ಗೆ ಬೇಡಿಕೆ ಇಟ್ಟ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪಿಎಸ್​ಐ ರಂಗೇಶ್ ಸೇರಿ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ. ಎಫ್ಐಆರ್ ದಾಖಲಾದ ವಿಚಾರ ತಿಳಿಯುತ್ತಿದ್ದಂತೆಯೇ ಆರೋಪಿ ಪೊಲೀಸರು ತಲೆಮರೆಸಿಕೊಂಡಿದ್ದಾರೆ. ಕೆಲವು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.    

ಆರೋಪಿಯನ್ನೇ ಅಪಹರಿಸಿ ಲಂಚಕ್ಕೆ ಬೇಡಿಕೆ ಇಟ್ಟ ಪೊಲೀಸರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಸತಿ ಗೃಹದಲ್ಲೇ ಪೊಲೀಸ್ ಕಾನ್ಸ್’ಟೇಬಲ್ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com  ಬಳ್ಳಾರಿ, ಮಾ.23. ಪೊಲೀಸ್ ವಸತಿ ಗೃಹದಲ್ಲಿ ಡಿಎಆರ್ ಕಾನ್ಸ್’ಟೇಬಲ್ ಒಬ್ಬರ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಮೃತ ಕಾನ್ಸ್ ಟೇಬಲ್’ರನ್ನು ಜಾಫರ್ ಎಂದು ಗುರುತಿಸಲಾಗಿದೆ. ಪೊಲೀಸ್ ವಸತಿ ಗೃಹದಲ್ಲಿ ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ಬಿದ್ದಿದ್ದ ಜಾಫರ್ ಅವರನ್ನು ವಿಮ್ಸ್’ಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಾಫರ್ ಮೃತಪಟ್ಟಿದ್ದಾನೆ.

ವಸತಿ ಗೃಹದಲ್ಲೇ ಪೊಲೀಸ್ ಕಾನ್ಸ್’ಟೇಬಲ್ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೋನು ನಿಗಮ್ ತಂದೆ ಮನೆಯಿಂದ 72 ಲಕ್ಷ ರೂ. ಕಳವು ➤ ಮಾಜಿ ಕಾರು ಚಾಲಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ,23. ಖ್ಯಾತ ಗಾಯಕ ಸೋನು ನಿಗಮ್ ತಂದೆಯ ಮನೆಯಿಂದ 72 ಲಕ್ಷ ರೂಪಾಯಿ ಕಳ್ಳತನ ಮಾಡಿದ ಆರೋಪದಲ್ಲಿ ಅವರ ಮಾಜಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ. ಮಗಳಿಗೆ ಕರೆ ಮಾಡಿ, ಮರದ ಕಪಾಟಿಲ್ಲಿ ಇದ್ದ ಡಿಜಿಟಲ್ ಲಾಕರ್‌ನಿಂದ 40 ಲಕ್ಷ ರೂಪಾಯಿ ಕಾಣೆಯಾಗಿದೆ ಎಂದು ನಿಕಿತಾ ಪೊಲೀಸ್ ಠಾಣೆಗೆ ಆಗಮಿಸಿದ ದೂರು ನೀಡಿದ್ದಾರೆ.

ಸೋನು ನಿಗಮ್ ತಂದೆ ಮನೆಯಿಂದ 72 ಲಕ್ಷ ರೂ. ಕಳವು ➤ ಮಾಜಿ ಕಾರು ಚಾಲಕ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಮತ್ತು KSRTC ಬಸ್ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಮಾ. 23. KSRTC ಬಸ್- ಬೈಕ್ ಗೆ ಢಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೃತರನ್ನು ಶ್ರೀಧರ್ (28) ದಯಾನಂದ (30) ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಬೈಕ್ ಮತ್ತು KSRTC ಬಸ್ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಲೆಗೆ ಕಲ್ಲು ಎತ್ತಿಹಾಕಿ ಸಾಮಾಜಿಕ ಕಾರ್ಯಕರ್ತೆಯ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಕಲಬುರಗಿ, ಮಾ. 23. ಸ್ಕೂಟಿಯಲ್ಲಿ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆಯೊಬ್ಬರನ್ನು ಕಾರಿನಿಂದ ಡಿಕ್ಕಿ ಹೊಡೆಸಿ, ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮೃತ ಸಾಮಾಜಿಕ ಕಾರ್ಯಕರ್ತೆಯನ್ನು ಕಲಬುರಗಿ ನಗರದ ಜಂಜಂ ಕಾಲೋನಿ ನಿವಾಸಿ ಮುಜತ್ ಸುಲ್ತಾನ್(35) ಎಂದು ಗುರುತಿಸಲಾಗಿದೆ. ಮುಜತ್ ಸುಲ್ತಾನ್ ರನ್ನು ವಸೀಂ ಶೇಖ್, ನದೀಮ್, ಅಜೀಮ್ ಶೇಖ್ ಮತ್ತು ನದೀಮ್ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ತಲೆಗೆ ಕಲ್ಲು ಎತ್ತಿಹಾಕಿ ಸಾಮಾಜಿಕ ಕಾರ್ಯಕರ್ತೆಯ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಯಾಂಡಲ್ ಫ್ಯಾಕ್ಟರಿ ಆಕಸ್ಮಿಕವಾಗಿ ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ಕಾರ್ಕಳ, ಮಾ. 23. ಕ್ಯಾಂಡಲ್ ಫ್ಯಾಕ್ಟರಿಯೊಂದು ಅಗ್ನಿ ಆಹುತಿಗೊಳಗಾಗಿ ಸಂಪೂರ್ಣವಾಗಿ ಭಸ್ಮಗೊಂಡಘಟನೆ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಚಚ್೯ ಪರಿಸರದಲ್ಲಿ ಸಂಭವಿಸಿದೆ. ನಿಟ್ಟೆ ಗ್ರಾಮ ಪಂಚಾಯತ್ ನ ಅತ್ತೂರು ಚರ್ಚ್ ಬಳಿ ಕ್ಯಾಂಡಲ್ ತಯಾರಿಕಾ ಕೇಂದ್ರ ದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಸುಮಾರು ಸತತ ಎರಡು ಅಗ್ನಿಶಾಮಕ ವಾಹನಗಳಿಂದ ಸುಮಾರು 03 ಗಂಟೆ ಕಾರ್ಯಾಚರಣೆ ಮಾಡಿ ಬೆಂಕಿಯನ್ನು ನಂದಿಸಲಾಗಿದೆ.

ಕ್ಯಾಂಡಲ್ ಫ್ಯಾಕ್ಟರಿ ಆಕಸ್ಮಿಕವಾಗಿ ಬೆಂಕಿಗಾಹುತಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top