News Kadaba

ಕಾರ್ಕಳ : ಕೆಮ್ಮುವಿನಿಂದ ಬಳಲುತ್ತಿದ್ದ ಯುವಕನೋರ್ವ ಕುಸಿದು ಬಿದ್ದು ಮೃತ್ಯು

(ನ್ಯೂಸ್‌ ಕಡಬ) newskadaba.com,  ಫೆ.21: ಮನೆಯಲ್ಲಿ ಕುರ್ಚಿಯಲ್ಲಿ ಕುಳಿತುಕೊಂಡಿದ್ದ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಕಾರ್ಕಳದ ಯರ್ಲಪಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಯರ್ಲಪಾಡಿ ಗ್ರಾಮದ ಹೇಮಲತಾ ಎಂಬವರ ಮಗ ಸುಹೇಶ್(22) ಎಂದು ಗುರುತಿಸಲಾಗಿದೆ. ಕಳೆದ 15 ದಿನಗಳಿಂದ ಕೆಮ್ಮುವಿನಿಂದ ಬಳಲುತ್ತಿದ್ದ ಇವರು ಔಷಧಿ ಸೇವಿಸುತ್ತಿದ್ದರು. ಫೆ.19ರಂದು ಮಧ್ಯಾಹ್ನ ಮನೆಯ ಡೈನಿಂಗ್ ರೂಮ್‌ನ ಕುರ್ಚಿಯಲ್ಲಿ ಕುಳಿತು ಕೊಂಡಿದ್ದ ಸುಹೇಶ್, ಒಮ್ಮೆಲೆ ಬೊಬ್ಬೆ ಹಾಕುತ್ತಾ ಕೆಳಗೆ ಬಿದ್ದರೆನ್ನಲಾಗಿದೆ. ಬಳಿಕ ನರಳಾಡಿ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಕೂಡಲೇ ಕಾರ್ಕಳದ ಖಾಸಗಿ […]

ಕಾರ್ಕಳ : ಕೆಮ್ಮುವಿನಿಂದ ಬಳಲುತ್ತಿದ್ದ ಯುವಕನೋರ್ವ ಕುಸಿದು ಬಿದ್ದು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂಡಗೋಡು ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ಫೆ.21: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲ್ಲೂಕಿನ ಕೊಳಗಿ ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಫೆಬ್ರವರಿ 20 ರಂದು ಸಂಜೆ ಈ ಘಟನೆ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಮುಂಡಗೋಡು ಪೊಲೀಸ್‌ ತಂಡವು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದೆ. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಮೃತ ಮಹಿಳೆಯನ್ನು ಎರಡು ದಿನಗಳ ಹಿಂದೆ ಅತ್ಯಾಚಾರ ಮಾಡಿದ ನಂತರ ಹತ್ಯೆ ಮಾಡಲಾಗಿದೆ ಮತ್ತು ಮೃತದೇಹವನ್ನು ಅರಣ್ಯದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಮುಂಡಗೋಡು ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ

(ನ್ಯೂಸ್‌ ಕಡಬ) newskadaba.com,  ಫೆ.21: ಚಿಕ್ಕಮುಡ್ನೂರು ಗ್ರಾಮದ ಏಕ ಬಳಕ್ಕ ಪರಿಸರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ ಸಂಭವಿಸಿದೆ. ಸ್ಥಳೀಯರಾದ ಲ್ಯಾನ್ಸಿ ಬಳಕ್ಕ ಅಜಿತ್ ಪ್ರಸಾದ್ ರೈ ಮತ್ತು ಉಮೇಶ್ ದೇವಾಡಿಗ ಅವರಿಗೆ ಸೇರಿದ ಗದ್ದೆಯು ಬೆಂಕಿಗೆ ಆಹುತಿಯಾಗಿದೆ.ಲ್ಯಾನ್ಸಿ ಬಳಕ್ಕ ಅವರಿಗೆ ಸೇರಿದ ಗದ್ದೆಯಲ್ಲಿ 40 ಫೀಟ್ ಉದ್ದದ ಪಿವಿಸಿ ಪೈಪು, ವೀಳ್ಯ ಕೃಷಿಗೆ ಹಾನಿ ಉಂಟಾಗಿದೆ. ಬೆಂಕಿ‌ ನಂದಿಸಲು ಸ್ಥಳೀಯರು ಶ್ರಮಿಸಿದರು.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಫೆ.21: ರಾಜ್ಯದಲ್ಲಿ ಮುಂದಿನ 7 ದಿನಗಳ ಒಣಹವೆ ಇರಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಸುಡುತ್ತಿರುವ ಬಿಸಿಲಿಂದ ಹೈರಾಣಾಗಿರುವ ಜನರಿಗೆ ಮಳೆಯ ಸಿಂಚನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡಲ್ಲಿ ಮುಂದಿನ 2-3 ದಿನಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪರೀಕ್ಷೆಯಲ್ಲಿ ನಕಲು ಮಾಡ್ತಿರೋದನ್ನ ತಡೆದಿದ್ದಕ್ಕೆ ವಿದ್ಯಾರ್ಥಿಯಿಂದ ಪ್ರಾಧ್ಯಾಪಕರ ಮೇಲೆ ಹಲ್ಲೆ

(ನ್ಯೂಸ್‌ ಕಡಬ) newskadaba.com,  ಫೆ.20 : ಪರೀಕ್ಷೆಯಲ್ಲಿ ನಕಲು ಮಾಡ್ತಿರೋದನ್ನ ಪ್ರಶ್ನಿಸಿ ತಡೆದಿದಕ್ಕೆ ಶಿಕ್ಷಕರ ಮೇಲೆ ವಿದ್ಯಾರ್ಥಿ ಹಲ್ಲೆ ನಡೆಸಿರುವ ಘಟನೆ ಕಲಬುರಗಿಯ ಹೋಮಿಯೋಪಥಿ ಕಾಲೇಜೊಂದರಲ್ಲಿ ನಡೆದಿದೆ.. ವಿದ್ಯಾರ್ಥಿ ಬ್ಲಾಕ್‌ನ ಮೇಲ್ವಿಚಾರಣೆ ಮಾಡುತ್ತಿದ್ದ ಸಹಾಯಕ ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಿದ್ದಾನೆ. ಕಾಲೇಜಿನಲ್ಲಿ ಹೋಮಿಯೋಪಥಿಕ್ ಮಟೇರಿಯಾ ಮೆಡಿಕಾ ವಿಷಯದ ಇಂಟರ್ನಲ್ ಎಕ್ಸಾಮ್ ನಡೆಯುತ್ತಿತ್ತು. ಈ ವೇಳೆ ಮೊಬೈಲ್ ಬಳಸಿ ನಕಲು ಮಾಡಲು ಮುಂದಾಗಿದ್ದ. ಇದನ್ನು ನೋಡಿದ ಪ್ರಾಧ್ಯಾಪಕರು ವಿದ್ಯಾರ್ಥಿಯನ್ನು  ಪ್ರಶ್ನಿಸಿ ಉತ್ತರ ಪತ್ರಿಕೆ ಪಡೆದಿದ್ದರು. ಬಳಿಕ ಕ್ಲಾಸ್ ರೂಮ್‌ನಿಂದ

ಪರೀಕ್ಷೆಯಲ್ಲಿ ನಕಲು ಮಾಡ್ತಿರೋದನ್ನ ತಡೆದಿದ್ದಕ್ಕೆ ವಿದ್ಯಾರ್ಥಿಯಿಂದ ಪ್ರಾಧ್ಯಾಪಕರ ಮೇಲೆ ಹಲ್ಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಂದ್ಯದ ವೇಳೆ ಜೇನು ದಾಳಿ: ಕ್ರಿಕೆಟ್ ಅಂಪೈರ್ ಮಾಣಿಕ್ ಗುಪ್ತಾ ಮೃತ್ಯು

(ನ್ಯೂಸ್‌ ಕಡಬ) newskadaba.com,  ಫೆ.20 : ಕ್ರಿಕೆಟ್ ಪಂದ್ಯದ ವೇಳೆ ಜೇನು ದಾಳಿಯಿಂದ ಅನುಭವಿ ಕ್ರಿಕೆಟ್ ಅಂಪೈರ್ ಮಾಣಿಕ್ ಗುಪ್ತಾ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಉನ್ನಾವೊದ ಸಪ್ರು ಕ್ರೀಡಾಂಗಣದಲ್ಲಿ ನಡೆದಿದೆ. ಮಾಣಿಕ್ ಕಾನ್ಪುರ ಕ್ರಿಕೆಟ್ ಸರ್ಕ್ಯೂಟ್‌ನಲ್ಲಿ ಗಣ್ಯ ಅಂಪೈರ್ ಆಗಿದ್ದರು. ಕಾನ್ಪುರ ಕ್ರಿಕೆಟ್ ಅಸೋಸಿಯೇಷನ್‌ನೊಂದಿಗೆ ಸಹ ಸಂಬಂಧ ಹೊಂದಿದ್ದರು. ಪಂದ್ಯ ಮುಗಿಸಿದ ನಂತರ, ಮಾಣಿಕ್ ಪಾನೀಯ ವಿರಾಮದ ಸಮಯದಲ್ಲಿ ಸಹ ಅಂಪೈರ್ ಅವರನ್ನು ಭೇಟಿಯಾಗಲು ಹೋದಾಗ, ಜೇನು ಹಿಂಡು ಇದ್ದಕ್ಕಿದ್ದಂತೆ ಅಲ್ಲಿದ್ದವರ ಮೇಲೆ ದಾಳಿ ಮಾಡಿತು.

ಪಂದ್ಯದ ವೇಳೆ ಜೇನು ದಾಳಿ: ಕ್ರಿಕೆಟ್ ಅಂಪೈರ್ ಮಾಣಿಕ್ ಗುಪ್ತಾ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,  ಫೆ.20: ಬೆಂಗಳೂರು: ನಿನ್ನೆ ಏರಿಕೆ ಕಂಡು ಬಂದಿದ್ದ ಚಿನ್ನದ ಬೆಲೆಯಲ್ಲಿ ಇಂದು (ಶುಕ್ರವಾರ) ಕೊಂಚ ಇಳಿಕೆಯಾಗಿದೆ.ಬೆಂಗಳೂರಿನಲ್ಲಿ ಗುರುವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 30 ರೂ. ಇಳಿಕೆಯಾಗಿ 14,315 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂನಲ್ಲಿ 32 ರೂ. ಇಳಿಕೆಯಾಗಿ 15,617 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,14,520 ರೂ. ಹಾಗೂ 10 ಗ್ರಾಂಗೆ ನೀವು 1,43,150 ರೂ. ಮತ್ತು 100 ಗ್ರಾಂಗೆ ನೀವು 14,31,500

ಇಂದಿನ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ

(ನ್ಯೂಸ್‌ ಕಡಬ) newskadaba.com,  ಫೆ.20: ನಗರದ ಕೊಟ್ಟಾರ ಬಳಿಯ ಕಾಲ್ಬಾವಿ ರಸ್ತೆಯ ಸಾಗರ್ ಕೋರ್ಟ್ಸ್ ಬಳಿ ಮನೆಯೊಂದು ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಘಟನೆ ನಡೆದಿದೆ. ಕೊಟ್ಟಾರ ಬಳಿಯ ಕಾಲ್ಬಾವಿ ರಸ್ತೆಯ ಸಾಗರ್ ಕೋರ್ಟ್ಸ್ ನಲ್ಲಿರುವ ಉದಯ ಕುಮಾರ್ ಎನ್ನುವವರಿಗೆ ಸೇರಿದ ಮನೆಯಾಗಿದ್ದು , ಮುಂಜಾನೆ 3.15 ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಂಡು ಮನೆಯಲ್ಲಿ ಮಲಗಿದ್ದ ಉದಯ್ ಕುಮಾರ್ ದಂಪತಿ ಹಾಗು ಇಬ್ಬರು ಮಕ್ಕಳು ಮನೆಯಿಂದ ಹೊರಬಂದಿದ್ದಾರೆ.

ಮಂಗಳೂರು : ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

​”ಹೈನುಗಾರರಿಗೆ ಬೇಸಿಗೆಯ ಗಿಫ್ಟ್: ಪ್ರತಿ ಲೀಟರ್ ಹಾಲಿಗೆ 1 ರೂ. ಹೆಚ್ಚುವರಿ ಪ್ರೋತ್ಸಾಹಧನ ಘೋಷಣೆ!”

(ನ್ಯೂಸ್‌ ಕಡಬ) newskadaba.com,  ಫೆ. 20: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 1 ರೂಪಾಯಿ ಹೆಚ್ಚುವರಿ ಪ್ರೋತ್ಸಾಹಧನ ನೀಡಲು ಒಕ್ಕೂಟ ನಿರ್ಧರಿಸಿದೆ.     ಹಳೆಯ ದರವು ಪ್ರತಿ ಲೀಟರ್ ಗುಣಮಟ್ಟದ ಹಾಲಿಗೆ 40.76 ರೂ. ನೀಡಲಾಗುತ್ತಿತ್ತು. ಆದರೆ ಇಂದಿನ ನಿರ್ಧಾರದ ನಂತರ ಇದು 41.76 ರೂ. ಗೆ ಏರಿಕೆಯಾಗಲಿದೆ.ಇದರಲ್ಲಿ ಒಕ್ಕೂಟವು ಮೊದಲೇ ನೀಡುತ್ತಿದ್ದ 1.50 ರೂ. ಪ್ರೋತ್ಸಾಹಧನವೂ ಒಳಗೊಂಡಿದೆ. ಈ ಹೆಚ್ಚುವರಿ ಪ್ರೋತ್ಸಾಹಧನವು ಸೀಮಿತ ಅವಧಿಗೆ ಮಾತ್ರ ಅನ್ವಯವಾಗುತ್ತದೆ: ಫೆಬ್ರವರಿ

​”ಹೈನುಗಾರರಿಗೆ ಬೇಸಿಗೆಯ ಗಿಫ್ಟ್: ಪ್ರತಿ ಲೀಟರ್ ಹಾಲಿಗೆ 1 ರೂ. ಹೆಚ್ಚುವರಿ ಪ್ರೋತ್ಸಾಹಧನ ಘೋಷಣೆ!” Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಆಟದ ವೇಳೆ ‘ಚೆಂಡು’ ಎಂದು ಸ್ಫೋಟಕ ಎಸೆದ ಬಾಲಕ ಭಾರಿ ಅನಾಹುತದಿಂದ ಕೂದಲೆಳೆ ಅಂತರದಲ್ಲಿ ಪಾರು!

(ನ್ಯೂಸ್‌ ಕಡಬ) newskadaba.com,  ಫೆ.20  ಆಟವಾಡುತ್ತಿದ್ದ ವೇಳೆ ಅಪರಿಚಿತ ವಸ್ತುವೊಂದು ಸ್ಫೋಟಗೊಂಡು ಬಾಲಕನೊಬ್ಬ ಗಾಯಗೊಂಡ ಘಟನೆ ಮಂಗಳವಾರ ಸಂಜೆ ಬಂದಾರು ಗ್ರಾಮದಲ್ಲಿ ಸಂಭವಿಸಿದೆ.ಗಾಯಗೊಂಡ ಬಾಲಕನ  ಪಯಸ್ಸು 11 ಎಂದು ಗುರುತಿಸಲಾಗಿದೆ. ಅದೃಷ್ಟವಶಾತ್ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ​ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಅವರಿಗೆ ಚೆಂಡಿನ ಆಕಾರದ ಒಂದು ವಸ್ತು ಸಿಕ್ಕಿದೆ. ಆ ವಸ್ತು ಸ್ಫೋಟಕವೆಂದು ತಿಳಿಯದ ಮಕ್ಕಳು ಅದನ್ನು ಕ್ರಿಕೆಟ್ ಆಡಲು ಬಳಸಿದ್ದಾರೆ.ಒಬ್ಬ ಬಾಲಕ ಬೌಲಿಂಗ್ ಮಾಡಿದಾಗ, ಮತ್ತೊಬ್ಬ ಬಾಲಕ ಬ್ಯಾಟ್‌ನಿಂದ ಆ

ಬೆಳ್ತಂಗಡಿ: ಆಟದ ವೇಳೆ ‘ಚೆಂಡು’ ಎಂದು ಸ್ಫೋಟಕ ಎಸೆದ ಬಾಲಕ ಭಾರಿ ಅನಾಹುತದಿಂದ ಕೂದಲೆಳೆ ಅಂತರದಲ್ಲಿ ಪಾರು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top