News Kadaba

ಮಾ. 25 ರಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿರುವ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಇದೇ ಮಾ. 25ರಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ, ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭವು ದಾವಣಗೆರೆಯಲ್ಲಿ ನಡೆಯಲಿದ್ದು, ಅದರಲ್ಲಿ ಭಾಗವಹಿಸಲಿರುವ ಪ್ರಧಾನಿ, ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಶ್ರೀಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಅದೇ ದಿನ ಬೆಂಗಳೂರಿನಲ್ಲಿ ಕೆ.ಆರ್. ಪುರ- ವೈಟ್ ಫೀಲ್ಡ್ ಮೆಟ್ರೊ ಮಾರ್ಗ […]

ಮಾ. 25 ರಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿರುವ ಪ್ರಧಾನಿ ಮೋದಿ Read More »

ಕರ್ನಾಟಕ

4 ವರ್ಷಗಳ ಬಿಕಾಂ ಕೋರ್ಸ್‌ಗೆ ಅನುಮೋದನೆ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯ

(ನ್ಯೂಸ್ಕಡಬ) newskadaba.com ಮಂಗಳೂರು, ಮಾ. 17. ಮಾ.16 ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯದ  ಅಕಾಡೆಮಿಕ್ ಕೌನ್ಸಿಲ್ ಸಭೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗುವ ನಾಲ್ಕು ವರ್ಷಗಳ ಬಿಕಾಂ ಇನ್ ಬ್ಯುಸಿನೆಸ್ ಡೇಟಾ ಅನಾಲಿಟಿಕ್ಸ್ ಕೋರ್ಸ್‌ಗೆ ಅನುಮೋದನೆ ನೀಡಲಾಯಿತು. ಮೊದಲ ಮತ್ತು ಎರಡನೇ ಸೆಮಿಸ್ಟರ್‌ಗಳ ಪಠ್ಯಕ್ರಮವನ್ನು ಅನುಮೋದಿಸಲಾಗಿದೆ. ಅಕಾಡೆಮಿಕ್ ಕೌನ್ಸಿಲ್ ಸಭೆಯ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಪಿ.ಎಸ್.ಯಡಪಡಿತ್ತಾಯ, ಕುಲಸಚಿವ (ಮೌಲ್ಯಮಾಪನ) ರಾಜು ಕೃಷ್ಣ ಚಲನ್ನವರ್, ಕುಲಸಚಿವರಾದ ಕಿಶೋರ್ ಕುಮಾರ್ ಸಿ.ಕೆ ಮತ್ತು ಇತರರು ವಹಿಸಿದ್ದರು.

4 ವರ್ಷಗಳ ಬಿಕಾಂ ಕೋರ್ಸ್‌ಗೆ ಅನುಮೋದನೆ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯ Read More »

ಕರ್ನಾಟಕ

ವಿಟ್ಲ: ಸಾಲಭಾದೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 17. ಸಾಲಭಾದೆಯಿಂದ ಮನನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೋಲ್ಪೆ ಬಂಗಾರಕೋಡಿ ನಿವಾಸಿ ವೀರಪ್ಪ ಗೌಡ (55) ಎಂದು ಗುರುತಿಸಲಾಗಿದೆ. ಕೃಷಿಕರಾಗಿರುವ ಇವರು ಸಾಲಭಾದೆಯಿಂದ ಮನನೊಂದು ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ವಿಟ್ಲ: ಸಾಲಭಾದೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24 ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 17. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24ಕ್ಕೂ ಅಧಿಕ ಸಂಖ್ಯೆಯ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿರುವ ಉಡುಪಿ ಪೊಲೀಸರು ಅವರನ್ನು ನ್ಯಾಯಾಲಯಗಳಿಗೆ ಹಾಜರು ಪಡಿಸಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಹಚ್ಚಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೇಂದ್ರ ಹಾಕೆ ಅವರು ವಿಶೇಷ ತಂಡಗಳನ್ನು ರಚಿಸಿದ್ದು, ಈ ತಂಡಗಳು ಸುಮಾರು 15 ದಿನಗಳಲ್ಲಿ ಹೊರ ಜಿಲ್ಲೆ ಹಾಗೂ ಹೊರರಾಜ್ಯಗಳಲ್ಲಿ

ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24 ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ

ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ಬಾಗಲಕೋಟೆ. ಮಾ. 17. ನಾಪತ್ತೆಯಾಗಿದ್ದ ಬಾಲಕಿಯೋರ್ವಳು ಶವವಾಗಿ ಪತ್ತೆಯಾದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮದ ರೇಖಾ ಸಂಗಪ್ಪ ಯಂಕಂಚಿ(11) ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ, ಮೃತದೇಹವನ್ನು ಚೀಲದಲ್ಲಿ ಹಾಕಿ ಬಾವಿಗೆ ಎಸೆದಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕೊಲೆ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಂದೆ ತಾಯಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ ಮಗಳನ್ನು ಕೊಂದ ತಂದೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ತಂದೆ ತಾಯಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ ಮಗಳನ್ನು ತಂದೆಯೇ ಕೊಂದ ಘಟನೆ ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಆಶಾ(32) ಎಂದು ಗುರುತಿಸಲಾಗಿದೆ. ತಂದೆ- ತಾಯಿ ಜೊತೆ ವಾಸವಿದ್ದ ಆಶಾ, ಮಾನಸಿಕ ಅಸ್ವಸ್ಥೆಯಂತೆ ವರ್ತಿಸುತ್ತಿದ್ದು, ತಂದೆ-ತಾಯಿಗೆ ನಿತ್ಯವೂ ಕಿರುಕುಳ ನಿಡುತ್ತಿದ್ದಳು ಎನ್ನಲಾಗಿದೆ. ಮಗಳ ಈ ವರ್ತನೆಯಿಂದ ಬೇಸತ್ತ ತಂದೆ ರಾತ್ರಿ ಮಲಗಿದ್ದ ಮಗಳ ತಲೆಗೆ ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ತಂದೆ ತಾಯಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ ಮಗಳನ್ನು ಕೊಂದ ತಂದೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜೂಜು ಅಡ್ಡೆಯ ಮೇಲೆ ಪೊಲೀಸ್ ದಾಳಿ ➤ 21 ಆರೋಪಿಗಳು ಅರೆಸ್ಟ್      

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಕೇಂದ್ರ ವಲಯ ಪೊಲೀಸರು 21 ಜನರನ್ನು ಬಂಧಿಸಿ, 25.15 ಲಕ್ಷ ನಗದು ವಶಪಡಿಸಿಕೊಂಡ ಘಟನೆ ನೆಲಮಂಗಲ ತಾಲೂಕಿನ ಇಸುವನಹಳ್ಳಿ ಎಂಬಲ್ಲಿ ನಡೆದಿದೆ. ಕೆಂದ್ರ ವಲಯದ ಐ.ಜಿ.ಪಿ ರವಿಕಾಂತೇಗೌಡ ಆದೇಶದ ಮೇರೆಗೆ ಕೇಂದ್ರ ವಲಯ ಅಪರಾಧ ವಿಭಾಗದ ಪೊಲೀಸ್ ಇನ್‌ಸ್ಪೆಕ್ಟರ್‌ ಕೆ .ಪಾಟೀಲ್ ಅವರ ತಂಡ ತ್ಯಾಮಗೊಂಡ್ಲು ಹೋಬಳಿ ಇಸುವನಹಳ್ಳಿ ಮಾವಿನ ತೋಟದಲ್ಲಿ ಸುಮಾರು 20 ರಿಂದ 30 ಮಂದಿ ಹಣವನ್ನು ಪಣವಾಗಿಟ್ಟು

ಜೂಜು ಅಡ್ಡೆಯ ಮೇಲೆ ಪೊಲೀಸ್ ದಾಳಿ ➤ 21 ಆರೋಪಿಗಳು ಅರೆಸ್ಟ್       Read More »

ಕರ್ನಾಟಕ

ಗುತ್ತಿಗಾರು ಸರಕಾರಿ ಪ್ರೌಢ ಶಾಲೆಯಿಂದ ಕಂಪ್ಯೂಟರ್ ಬ್ಯಾಟರಿ ಕಳವು ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಮಾ. 17. ಇಲ್ಲಿನ  ಸರಕಾರಿ ಪ್ರೌಢ ಶಾಲೆಯಲ್ಲಿನ ಕೊಠಡಿಯಲ್ಲಿದ್ದ ಕಂಪ್ಯೂಟರ್ ನ ಹಳೆಯ ಬ್ಯಾಟರಿಗಳನ್ನು ಕಳವುಗೈದಿರುವ ಬಗ್ಗೆ ಶಾಲಾ ಮುಖ್ಯಸ್ಥರು ದೂರು ದಾಖಲಿಸಿದ್ದಾರೆ. ಇಲಾಖೆಯಿಂದ ಪೂರೈಕೆಯಾಗಿದ್ದ 16 ಬ್ಯಾಟರಿಗಳು ಕಳವಾಗಿದ್ದು, ಈ ಬ್ಯಾಟರಿಗಳ ಅಂದಾಜು ಮೌಲ್ಯ 16 ಸಾವಿರ ರೂ. ಎನ್ನಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಐಪಿಸಿ ಕಲಂ 380,454, 457ರಂತೆ ಪ್ರಕರಣ ದಾಖಲಿಸಲಾಗಿದೆ.

ಗುತ್ತಿಗಾರು ಸರಕಾರಿ ಪ್ರೌಢ ಶಾಲೆಯಿಂದ ಕಂಪ್ಯೂಟರ್ ಬ್ಯಾಟರಿ ಕಳವು ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬೀದಿಬದಿ ವ್ಯಾಪಾರಿಗಳಿಂದ ನಿಯಮಾನುಸಾರ ವ್ಯಾಪಾರ ನಡೆಸಲು ಸಿ.ಎಂ.ಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 17. ಇಲ್ಲಿನ ಪಾಲಿಕೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ ನಿಯಮಾನುಸಾರ ವ್ಯಾಪಾರ ನಡೆಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿ ಸಂಘದ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ವ್ಯಾಪಾರಿಗಳಿಗೆ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಕಾಯ್ದೆ ಮತ್ತು 2019 ರ ಕರ್ನಾಟಕ ಬೀದಿಬದಿ ವ್ಯಾಪಾರ ನಿಯಮಗಳ ವ್ಯಾಪಾರಕ್ಕೆ ಅವಕಾಶ ನೀಡುತ್ತಿಲ್ಲ. ಅಧಿಕಾರಿಗಳು ಗುರುತಿನ ಚೀಟಿ ಮತ್ತು

ಬೀದಿಬದಿ ವ್ಯಾಪಾರಿಗಳಿಂದ ನಿಯಮಾನುಸಾರ ವ್ಯಾಪಾರ ನಡೆಸಲು ಸಿ.ಎಂ.ಗೆ ಮನವಿ Read More »

ಕರಾವಳಿ, ಕರ್ನಾಟಕ

ಬೆಂಗಳೂರಿನಲ್ಲಿ ಮೊದಲ ಮುಂಗಾರು ಪೂರ್ವ ಮಳೆ ➤ ರಾಜಧಾನಿಯಲ್ಲಿ 3.4 ಮಿ.ಮೀ ವರ್ಷಧಾರೆ           

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಅಲ್ಲಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ತುಂತುರು ಹನಿಯ ಸಿಂಚನವಾಗಿ ಮಧ್ಯರಾತ್ರಿ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವು ಮಳೆಯ ಮುನ್ಸೂಚನೆ ನೀಡಿತ್ತು. ಬೇಸಿಗೆ ಬಿಸಿಲಿನ ಝಳದ ನಡುವೆ ಮಳೆಯ ವಾತಾವರಣವು ಮುದ ನೀಡಿದೆ. ಇದು ಬೇಸಿಗೆಯ ಮೊದಲ ಅಕಾಲಿಕ ಮಳೆಯಾಗಿದೆ.  

ಬೆಂಗಳೂರಿನಲ್ಲಿ ಮೊದಲ ಮುಂಗಾರು ಪೂರ್ವ ಮಳೆ ➤ ರಾಜಧಾನಿಯಲ್ಲಿ 3.4 ಮಿ.ಮೀ ವರ್ಷಧಾರೆ            Read More »

ಕರ್ನಾಟಕ
Scroll to Top