News Kadaba

ಧಾರವಾಡದಿಂದ ಬಂದ ರೈಲಿನಲ್ಲಿ 3 ವರ್ಷದ ಬಾಲಕಿಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಬೆಳಗಾವಿ, ಮಾ. 17. ಧಾರವಾಡದಿಂದ ಬೆಳಗಾವಿಗೆ ಬಂದ ಪ್ಯಾಸೆಂಜರ್ ರೈಲಿನ ಸೀಟಿನ ಕೆಳಗಡೆ ಮೂರು ವರ್ಷದ ಬಾಲಕಿಯ ಶವ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೂಲಗಳ ಪ್ರಕಾರ, ಮೈಸೂರು-ಧಾರವಾಡ ಎಕ್ಸ್ಪ್ರೆಸ್ (ರೈಲು ಸಂಖ್ಯೆ 07357) ಮಧ್ಯಾಹ್ನ 1 ಗಂಟೆಗೆ ಬೆಳಗಾವಿ ರೈಲು ನಿಲ್ದಾಣವನ್ನು ತಲುಪಿತ್ತು. ಎಸ್ 3 ಕೋಚ್ ನ ಸೀಟ್ ನಂ. 20ರ ಕೆಳಗೆ ಸಂಜೆ 4 ಗಂಟೆ ಸುಮಾರಿಗೆ ರೈಲ್ವೇ ಸಿಬ್ಬಂದಿ ಸ್ವಚ್ಛಗೊಳಿಸುತ್ತಿದ್ದಾಗ ಗುಲಾಬಿ ಬಣ್ಣದ ಸ್ಲೀವ್ ಲೆಸ್ ಫ್ರಾಕ್ ಧರಿಸಿದ್ದ […]

ಧಾರವಾಡದಿಂದ ಬಂದ ರೈಲಿನಲ್ಲಿ 3 ವರ್ಷದ ಬಾಲಕಿಯ ಶವ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟರ್ಕಿ ಭೂಕಂಪ ನೆಲೆಯಲ್ಲಿ ಪ್ರವಾಹ ➤ 14 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಟರ್ಕಿ, ಮಾ. 17. ಟರ್ಕಿ ಸಿರಿಯಾ ಗಡಿಯಲ್ಲಿ ಭೂಕಂಪ ಸಂಭವಿಸಿದ್ದ ಪ್ರದೇಶದಲ್ಲಿ ದಿಢೀರ್ ಪ್ರವಾಹ ನುಗ್ಗಿದ್ದರಿಂದ ಹಲವರು ಕೊಚ್ಚಿ ಹೋಗಿದ್ದು, 14 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಟರ್ಕಿ ಸಿರಿಯಾ ಗಡಿಯ ಸನ್ಲಿಯುರ್ಫಾ ಒಂದರಲ್ಲಿಯೇ ಇಬ್ಬರು ಮಕ್ಕಳು ಸೇರಿ 12 ಮಂದಿ ಮೃತರಾದರು. ಪ್ರವಾಹ ಸಂತ್ರಸ್ತರ ರಕ್ಷಣೆಗೆ 10 ತಂಡಗಳನ್ನು ರಚಿಸಲಾಗಿದೆ. 5 ಮಂದಿ ಕಾಣೆಯಾಗಿದ್ದಾರೆ ಎನ್ನಲಾಗಿದೆ.  

ಟರ್ಕಿ ಭೂಕಂಪ ನೆಲೆಯಲ್ಲಿ ಪ್ರವಾಹ ➤ 14 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಅವಕಾಶ ➤ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ದಾವಣಗೆರೆ, ಮಾ. 17.  ಭಾರತದ ಚುನಾವಣಾ ಆಯೋಗವು ಪ್ರಥಮ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನ ಮಾಡುವ ಅವಕಾಶ ಕಲ್ಪಿಸಿದೆ. 80 ವರ್ಷ ಮೇಲ್ಪಟ್ಟವರ ಮನೆಗಳಿಗೆ ಬಿಎಲ್ ಒಗಳು ಭೇಟಿ ನೀಡಿ ಮಾಹಿತಿ ನೀಡುತ್ತಾರೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ಆಸಕ್ತರು ಚುನಾವಣಾ ಅಧಿಸೂಚನೆ ಪ್ರಕಟವಾದ 5 ದಿನಗಳ ಒಳಗೆ 11 ಬಿ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಜಿಲ್ಲೆಯಿಂದ ಇಂತಹ ಒಟ್ಟು 27,000 ಮತದಾರರನ್ನು ಪಟ್ಟಿ ಮಾಡಲಾಗಿದೆ. ತೀವ್ರ ಅನಾರೋಗ್ಯದಿಂದ

80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಅವಕಾಶ ➤ ಜಿಲ್ಲಾಧಿಕಾರಿ Read More »

ಕರ್ನಾಟಕ
crime, arrest, suspected

ಅಕ್ರಮ ಮಾದಕ ವಸ್ತು ಗಾಂಜಾ ಮಾರಾಟ ಪ್ರಕರಣ ➤ ಓರ್ವ ಅರೆಸ್ಟ್, ಇನ್ನೋರ್ವ ಆರೋಪಿ ಪರಾರಿ

(ನ್ಯೂಸ್ ಕಡಬ)newskadaba.com ಪುತ್ತೂರು, ಮಾ.17. ಮಾದಕ ಪದಾರ್ಥ ಗಾಂಜಾವನ್ನು ಮಾರಾಟ ಮಾಡಲು ಉದ್ದೇಶದಿಂದ ಕಾರಿನಲ್ಲಿ ಸಾಗಾದ ಮಾಡುತ್ತಿದ್ದ ಸಂಧರ್ಭ ಸಂಪ್ಯ ಪೊಲೀಸ್ ಕಾರ್ಯಾಚರಣೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರಿನ ಅಬೂಬಕ್ಕರ್ ಸಿದ್ದಿಕ್ ಎಂದು ಗುರುತಿಸಲಾಗಿದೆ. ಪರಾರಿಯಾದವನನ್ನು ಸುಳ್ಯದ ಸರ್ಪುದ್ದಿನ್ ಎಂದು ಗುರುತಿಸಲಾಗಿದೆ.

ಅಕ್ರಮ ಮಾದಕ ವಸ್ತು ಗಾಂಜಾ ಮಾರಾಟ ಪ್ರಕರಣ ➤ ಓರ್ವ ಅರೆಸ್ಟ್, ಇನ್ನೋರ್ವ ಆರೋಪಿ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಕಾರು ಪಲ್ಟಿ➤ ದಂಪತಿಗಳು ಮೃತ್ಯು..!

(ನ್ಯೂಸ್ ಕಡಬ) newskadaba.com.ಕೋಲಾರ,  ಮಾ 17. ಇಂದು ಮುಂಜಾನೆ ಕಾರು ಪಲ್ಟಿಯಾಗಿ ದಂಪತಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಪುರ ಕ್ರಾಸ್ ಬಳಿ ನಡೆದಿದೆ.  ಶಫಿ (55), ಶಮಾ (50) ಮೃತ ದಂಪತಿಗಳು.   ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಿ ಮಗಳನ್ನು ಡ್ರಾಪ್ ಮಾಡಿ ಆಂಧ್ರಪ್ರದೇಶದ ಮದನಪಲ್ಲಿಗೆ ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ರಸ್ತೆಯ ಬಲ ಬದಿಯ 20ರಿಂದ 25 ಅಡಿಗಳ ಹಳ್ಳಕ್ಕೆ ಕಾರು ಬಿದ್ದಿದೆ. ಕಾರಿನಲ್ಲಿದ್ದ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಘಟನಾ

ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಕಾರು ಪಲ್ಟಿ➤ ದಂಪತಿಗಳು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಮರಳುಗಾರಿಕೆ ಅಡ್ಡೆಗಳಿಗೆ ಪೊಲೀಸ್ ದಾಳಿ        ➤ 6 ಲಾರಿಗಳು ವಶಕ್ಕೆ 

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.17. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ 5 ಕಡೆ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯ ಅಡ್ಡೆಗಳಿಗೆ ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ ಮರಳು ಸಮೇತ 6 ಲಾರಿಗಳನ್ನು ವಶ ಪಡೆಸಿಕಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೆಂಜಾರು ಪಡುಪೆರಾರು ದ್ವಾರ, ಪೊಳಲಿ ದ್ವಾರ, ಅಡ್ಡೂರು ಸಮೀಪದ ನೂಯಿ ತಲಾ ಒಂದೊಂದು ಹಾಗೂ ಬಡಗ ಎಡಪದವಿನಲ್ಲಿ 2 ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ

ಅಕ್ರಮ ಮರಳುಗಾರಿಕೆ ಅಡ್ಡೆಗಳಿಗೆ ಪೊಲೀಸ್ ದಾಳಿ        ➤ 6 ಲಾರಿಗಳು ವಶಕ್ಕೆ  Read More »

ಕರಾವಳಿ

➤ ಡಿಸಿಎಂ ಪತ್ನಿಗೆ 1 ಕೋಟಿ ರೂ. ಲಂಚದ ಆಫರ್ ➤ಮಹಿಳೆ ಬಂಧನ

(ನ್ಯೂಸ್ ಕಡಬ) newskadaba.com. ಮುಂಬೈ,  ಮಾ 17. ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿಗೆ 1 ಕೋಟಿ ರೂಪಾಯಿ ಲಂಚದ ಆಮಿಷವೊಡ್ಡಿ ಬೆದರಿಕೆ ಹಾಕಿದ್ದ ಮಹಿಳೆಯನ್ನು ಪೊಲೀಸರು  ಬಂಧಿಸಿದ್ದಾರೆ. ಡಿಸೈನರ್ ಅನಿಕ್ಷಾ ಅನಿಲ್ ಜೈಸಿಂಘಾನಿ ಬಂಧಿತ ಆರೋಪಿ. ತನ್ನ ತಂದೆ ಮೇಲಿದ್ದ ಕೇಸ್‌ನ್ನು ತೆಗೆದು ಹಾಕುವಂತೆ ಒತ್ತಾಯಿಸಿ ಫಡ್ನವೀಸ್ ಪತ್ನಿ ಅಮೃತಾ ಫಡ್ನವೀಸ್ ಅವರಿಗೆ ಈಕೆ 1 ಕೋಟಿ ರೂಪಾಯಿ ಲಂಚದ ಆಮಿಷವೊಡ್ಡಿದ್ದಳು ಎಂದು ಆರೋಪಿಸಲಾಗಿದೆ. ಅನಿಕ್ಷಾ ಮತ್ತು ಆಕೆಯ ತಂದೆ ವಿರುದ್ದ ಫೆಬ್ರವರಿ

➤ ಡಿಸಿಎಂ ಪತ್ನಿಗೆ 1 ಕೋಟಿ ರೂ. ಲಂಚದ ಆಫರ್ ➤ಮಹಿಳೆ ಬಂಧನ Read More »

ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 17.  ಬಾವಿಗೆ ಬಿದ್ದ ಕೊಡವನ್ನು ಮೇಲಕ್ಕೆತ್ತಲು ಬಾವಿಗೆ ಇಳಿದಿದ್ದ ವ್ಯಕ್ತಿಯೋರ್ವ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ವರದಿಯಾಗಿದೆ. ಮೃತರನ್ನು ಪ್ರವೀಣ್ ಎಂದು ಗುರುತಿಸಲಾಗಿದೆ.  ಇವರು ವಸಂತಿ ಎಂಬವರ ಮನೆಯ ಬಾವಿಗೆ ಬಿದ್ದಿದ್ದ ಕೊಡವನ್ನು ಮೇಲಕ್ಕೆತ್ತಲೆಂದು ಹಗ್ಗದ ಸಹಾಯದಿಂದ ಇಳಿದು, ಬಳಿಕ ಕೊಡಪಾನವನ್ನು ಮೇಲಕ್ಕೆ ಕಳುಹಿಸಿದ್ದರು. ಬಳಿಕ ಅದೇ ಹಗ್ಗವನ್ನು ಬಳಸಿಕೊಂಡು ಅವರು ಮೇಲಕ್ಕೇರಲು ಪ್ರಯತ್ನಿಸಿದ್ದಾರೆ. ಆದರೆ, ಅರ್ಧಕ್ಕೆ ತಲುಪಿದ ವೇಳೆ ಕೈಜಾರಿ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ.  

ಬೆಳ್ತಂಗಡಿ: ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ: ಲಾರಿ ಢಿಕ್ಕಿಯಾಗಿ ಬಸ್ ಪಲ್ಟಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.17. ಡಿಪೋದಿಂದ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ಸರ್ಕಾರಿ ಬಸ್ಸೊಂದು ಯೂ ಟರ್ನ್ ತೆಗೆದುಕೊಳ್ಳುವ ವೇಳೆ‌ ಲಾರಿ‌ ಡಿಕ್ಕಿಯಾದ ಪರಿಣಾಮ ಪಲ್ಟಿಯಾದ ಘಟನೆ‌ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರದ ಸಂತೆ ಮಾರ್ಕೆಟ್ ಬಳಿ ನಡೆದಿದೆ. ಎಂದಿನಂತೆ ಕೆಎಸ್ಆರ್ಟಿಸಿ ಬಸ್ ಸರ್ವೀಸ್ ರಸ್ತೆಯಲ್ಲಿ‌ ಬಂದು ಸಂತೆ ಮಾರ್ಕೆಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯು ಟರ್ನ್ ತೆಗೆದುಕೊಂಡಿದ್ದಾರೆ. ಇದೇ ಸಂದರ್ಭ ಹಿಂದಿನಿಂದ ಬಂದ ಲಾರಿ‌ ಡಿಕ್ಕಿಹೊಡೆದಿದೆ ಎನ್ನಲಾಗಿದೆ. ಪ್ತಯಾಣಿಕರಿಲ್ಲದ ಬಸ್ ತಿರುವು ತೆಗೆದುಕೊಳ್ಳುತ್ತಿದ್ದುದರಿಂದ ನಿಯಂತ್ರಣ

ಕುಂದಾಪುರ: ಲಾರಿ ಢಿಕ್ಕಿಯಾಗಿ ಬಸ್ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: 1.8 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 17. ದುಬೈ ಮತ್ತು ಅಬುದಾಬಿಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1,08,28,240 ರೂ.ಮೌಲ್ಯದ 1,913 ಗ್ರಾಂ. ಅಕ್ರಮ ಚಿನ್ನ ಸಾಗಾಟವನ್ನು ಮಂಗಳೂರು ವಿಮಾನ  ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ ಘಟನೆ ವರದಿಯಾಗಿದೆ. ಆರೋಪಿಗಳು ಚಿನ್ನವನ್ನು ಪೇಸ್ಟ್ ಮಾಡಿ ಟಿ ಶರ್ಟ್ ನಲ್ಲಿ ಅಳವಡಿಸಿ, ಗುದದ್ವಾರದಲ್ಲಿ ಅಡಗಿಸಿಟ್ಟು ಸಾಗಾಟ ಮಾಡಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಂಗಳೂರು: 1.8 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top