News Kadaba

ಕಾರಿನಿಂದ ನೋಟು ಎಸೆದು ರೀಲ್ಸ್ ➤ ಯೂಟ್ಯೂಬರ್ ಜೈಲುಪಾಲು

(ನ್ಯೂಸ್ ಕಡಬ) newskadaba.com ಗುರುಗ್ರಾಮ್,  ಮಾ. 15.  ವೆಬ್ ಸೀರೀಸ್‌ನಿಂದ ಪ್ರೇರಣೆ ಪಡೆದು ಚಲಿಸುತ್ತಿರುವ ಕಾರಿನಿಂದ ನೋಟು ಎಸೆದು ಯೂಟ್ಯೂಬರ್ ಸಹಿತ ಇಬ್ಬರು ಜೈಲು ಪಾಲಾದ ಘಟನೆ ಗುರುಗ್ರಾಮ್‌ನಲ್ಲಿ ನಡೆದಿದೆ. ಬಂಧಿತರನ್ನು ಯೂಟ್ಯೂಬರ್ ಜೋರಾವರ್ ಸಿಂಗ್ ಕಲ್ಸಿ ಮತ್ತು ಆತನ ಸ್ನೇಹಿತ ಲಕ್ಕಿ ಕಾಂಬೋಜ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಗುರುಗ್ರಾಮ್‌ನ ಡಿಎಲ್‌ಎಫ್ ಗಾಲ್ಫ್ ಕೋರ್ಸ್ ರಸ್ತೆಯ ಕೆಳಸೇತುವೆಯಲ್ಲಿ ಮಾರ್ಚ್ 02ರಂದು ಕಾರನ್ನು ಅಪಾಯಕಾರಿಯಾಗಿ ಚಲಾಯಿಸುತ್ತಾ ಹಿಂಬದಿಯಿಂದ ನೋಟುಗಳನ್ನು ಎಸೆಯುತ್ತಿದ್ದರು. ಇವರು ಶಾಹಿದ್‌ ಕಪೂರ್‌, ಕೆಕೆ ಮೆನನ್‌ ಅಭಿನಯದ ʼಫರ್ಜಿʼ […]

ಕಾರಿನಿಂದ ನೋಟು ಎಸೆದು ರೀಲ್ಸ್ ➤ ಯೂಟ್ಯೂಬರ್ ಜೈಲುಪಾಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

5, 8ನೇ ತರಗತಿ ಮಕ್ಕಳಿಗೆ 2 ಪರೀಕ್ಷೆ ಬರೆಯುವಂತೆ ಒತ್ತಡ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ. 15. ರಾಜ್ಯದ ಕೆಲವು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಒಂದು ಶಾಲೆಯಲ್ಲಿ ಕಲಿಸಿದ ಪಠ್ಯಕ್ರಮದ ಆಧಾರದ ಮೇಲೆ ಮತ್ತು ಇನ್ನೊಂದು ರಾಜ್ಯ ಮಂಡಳಿಯ ಪ್ರಕಾರ ಎರಡು ಪರೀಕ್ಷೆಗಳನ್ನು ಬರೆಯಲು ಒತ್ತಡ ಹೇರಲಾಗುತ್ತಿವೆ ಎಂಬ ಆರೋಪ ಕೇಳಿ ಬರುತ್ತಿದೆ. ರಾಜ್ಯ ಮಂಡಳಿಗೆ ಸಂಯೋಜಿತವಾಗಿದ್ದರೂ ಇತರ ಬೋರ್ಡ್ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಕೆಲವು ಶಾಲೆಗಳು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಸಂವಹನದ ಪ್ರಕಾರ, 5 ಮತ್ತು 8 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಹೈಕೋರ್ಟ್ ಮುಂದೆ ಅನುಮತಿ

5, 8ನೇ ತರಗತಿ ಮಕ್ಕಳಿಗೆ 2 ಪರೀಕ್ಷೆ ಬರೆಯುವಂತೆ ಒತ್ತಡ Read More »

ಕರ್ನಾಟಕ

ಕೆಎಸ್ಆರ್ಟಿಸಿ ಬಸ್ ಪ್ರಯಾಣಿಕರಿಗೂ ತಟ್ಟಿದ ಬೆಂಗಳೂರು- ಮೈಸೂರು ಹೆದ್ದಾರಿ ಟೋಲ್ ಶುಲ್ಕದ ಬಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 15. ಬೆಂಗಳೂರು- ಮೈಸೂರು ಹೆದ್ದಾರಿ ಟೋಲ್ ಶುಲ್ಕದ ಬಿಸಿ ಕೆಎಸ್ಆರ್ಟಿಸಿ ಬಸ್ ಪ್ರಯಾಣಿಕರಿಗೂ ತಟ್ಟಿದೆ. ಉದ್ದೇಶಿತ ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ- 275ರ ಮೂಲಕ ಕಾರ್ಯಾಚರಣೆ ಮಾಡುವ ನಿಗಮದ ಬಸ್ ಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಬಳಕೆ ಶುಲ್ಕದ ರೂಪದಲ್ಲಿ ಕನಿಷ್ಠ 15 ರೂ.ಗಳಿಂದ ಗರಿಷ್ಠ 20 ರೂ. ವಸೂಲು ಮಾಡಲು ಕೆಎಸ್ಆರ್ಟಿಸಿ ನಿರ್ಧರಿಸಿದ್ದು, ಈ ಸಂಬಂಧ ಮಂಗಳವಾರ ಆದೇಶ ಹೊರಡಿಸಿದೆ.

ಕೆಎಸ್ಆರ್ಟಿಸಿ ಬಸ್ ಪ್ರಯಾಣಿಕರಿಗೂ ತಟ್ಟಿದ ಬೆಂಗಳೂರು- ಮೈಸೂರು ಹೆದ್ದಾರಿ ಟೋಲ್ ಶುಲ್ಕದ ಬಿಸಿ Read More »

ಕರ್ನಾಟಕ

ಗಣಿತ ಪರೀಕ್ಷೆಗೆ ಗೈರಾದ ಬಾಲಕಿ ➤ ತನಿಖೆಯ ವೇಳೆ ಬಾಲ್ಯವಿವಾಹ ಪ್ರಕರಣ ಬೆಳಕಿಗೆ

(ನ್ಯೂಸ್ ಕಡಬ) newskadaba.com ಔರಂಗಬಾದ್, ಮಾ. 15. ವಿದ್ಯಾರ್ಥಿನಿಯೊಬ್ಬಳು ಗಣಿತ ಪರೀಕ್ಷೆಗೆ ಗೈರು ಹಾಜರಾಗುವ ಮೂಲಕ ಬಾಲ್ಯವಿವಾಹ ಪ್ರಕರಣವೊಂದು ಬೆಳಕಿಗೆ ಬಂದ ಘಟನೆ ಔರಂಗಬಾದ್ನಲ್ಲಿ ನಡೆದಿದೆ. ಮಹಾರಾಷ್ಟ್ರ ಪ್ರೌಢ ಶಿಕ್ಷಣ ಮಂಡಳಿಯ ಗಣಿತ ಪರೀಕ್ಷೆಗೆ ಬಾಲಕಿಯೋರ್ವಳು ಗೈರಾಗಿದ್ದು, ಇದರಿಂದ ಅನುಮಾನಗೊಂಡ ಸಾಮಾಜಿಕ ಕಾರ್ಯಕರ್ತರೊಬ್ಬರು ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದರು. ಈ ದೂರನ್ನಾಧರಿಸಿ ಬಾಲಕಿಯ ಮನೆಗೆ ಬಂದ ಗ್ರಾಮ ಸೇವಕರಿಗೆ ಬಾಲ್ಯ ವಿವಾಹ ಮಾಡಿರುವ ವಿಚಾರ ತಿಳಿದುಬಂದಿದೆ.

ಗಣಿತ ಪರೀಕ್ಷೆಗೆ ಗೈರಾದ ಬಾಲಕಿ ➤ ತನಿಖೆಯ ವೇಳೆ ಬಾಲ್ಯವಿವಾಹ ಪ್ರಕರಣ ಬೆಳಕಿಗೆ Read More »

ಕ್ರೈಮ್ ನ್ಯೂಸ್

ಅಡ್ಡಾದಿಡ್ಡಿ ಕಾರು ಚಾಲನೆ ➤ ಇಬ್ಬರು ವಿದ್ಯಾರ್ಥಿಗಳ ದುರ್ಮರಣ

(ನ್ಯೂಸ್ ಕಡಬ) newskadaba.com ಬೆಂಗಳೂರು. ಮಾ. 15. ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿಕೊಂಡು ಬಂದ ಚಾಲಕ ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ವಾಹನಕ್ಕೆ ಗುದ್ದಿದ ಪರಿಣಾಮ ವಿದ್ಯಾರ್ಥಿ ಸೇರಿದಂತೆ ಇಬ್ಬರು ಮೃತಪಟ್ಟ ಘಟನೆ ಮಡಿವಾಳ ಸಂಚಾರಿ ಠಾಣೆ ವ್ಯಾಪ್ತಿಯ ಸಿಲ್ಕ್ ಬೋರ್ಡ್ ಬಳಿ ನಡೆದಿದೆ. ಮೃತಪಟ್ಟವರನ್ನು ಆಂಧ್ರಪ್ರದೇಶದ ಆನಂತಪುರ ಜಿಲ್ಲೆ ಬೊಮ್ಮನಹಳ್ಳ ನಿವಾಸಿ ಕಾರ್ತಿಕ್ (23) ಮತ್ತು ಪ್ರಕಾಶಂ ಜಿಲ್ಲೆಯ ಭಗಿರಥ ರೆಡ್ಡಿ (17) ಎಂದು ಗುರುತಿಸಲಾಗಿದೆ. ವ್ಯಾಸಂಗ ಸಲುವಾಗಿ ಬೆಂಗಳೂರಿಗೆ ಬಂದಿದ್ದ ಕಾರ್ತಿಕ್, ಖಾಸಗಿ ಕಾಲೇಜಿನಲ್ಲಿ

ಅಡ್ಡಾದಿಡ್ಡಿ ಕಾರು ಚಾಲನೆ ➤ ಇಬ್ಬರು ವಿದ್ಯಾರ್ಥಿಗಳ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ➤ ಲಕ್ಷಾಂತರ ರೂಪಾಯಿ ನಷ್ಟ

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 15. ಗುಜರಿ ಅಂಗಡಿಯ ವಸ್ತುಗಳಿಗೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದ ಘಟನೆ ಉಡುಪಿಯ ಕಿನ್ನಿಮುಲ್ಕಿ ಸ್ವಾಗತ ಗೋಪುರ ಸಮೀಪದ ಗುಜರಿ ಅಂಗಡಿಯಲ್ಲಿ ನಡೆದಿದೆ. ಪ್ಲಾಸ್ಟಿಕ್ ಮತ್ತು ಗುಜರಿ ವಸ್ತುಗಳಿಗೆ ಆಕಸ್ಮಿಕ ಬೆಂಕಿ ತಗುಲಿದೆ ಎನ್ನಲಾಗಿದೆ. ತಡರಾತ್ರಿ ಅಗ್ನಿಶಾಮದಳ ಸಿಬ್ಬಂದಿಗಳು ಹರಸಾಹಸಟ್ಟು ಬೆಂಕಿ ನಂದಿಸಿದರು. ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎನ್ನಲಾಗಿದೆ.    

ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ➤ ಲಕ್ಷಾಂತರ ರೂಪಾಯಿ ನಷ್ಟ Read More »

ಕರಾವಳಿ

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಹಾವೇರಿ, ಮಾ. 14.  ಆಗಸ್ಟ್ 15ರೊಳಗೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಹಾವೇರಿ ಜಿಲ್ಲೆ ಸ್ವಕ್ಷೇತ್ರ ಶಿಗ್ಗಾವಿ ವ್ಯಾಪ್ತಿಯ ಕೋಣನಕೇರಿಯಲ್ಲಿ ಕರ್ನಾಟಕ ಮಾದರಿ ಶಾಲೆಗಳ ಮಾರ್ಗದರ್ಶಿ ಕಾರ್ಯಕ್ರಮದಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯವನ್ನು ಅವರು ಉದ್ಘಾಟಿಸಿ, ಬಳಿಕ ವಿವೇಕ ಯೋಜನೆಯಡಿ ಶಾಲಾ ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಬೊಮ್ಮಾಯಿ ಅವರು ಮಾತನಾಡಿದರು.

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಇಬ್ಬರು ಮಕ್ಕಳನ್ನು ಬಾವಿಗೆಸೆದು ಆತ್ಮಹತ್ಯೆ ಮಾಡಿಕೊಂಡ ತಾಯಿ…!

(ನ್ಯೂಸ್ ಕಡಬ) newskadaba.com ತಮಿಳುನಾಡು, ಮಾ. 15. ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ಎಸೆದು, ಬಳಿಕ ತಾನೂ ಮೋಟಾರ್ ಪಂಪ್ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ತಮಿಳುನಾಡು ನಾಮಕ್ಕಲ್ ಜಿಲ್ಲೆಯ ಮೋಹನೂರಿನಲ್ಲಿ ನಡೆದಿದೆ. ಮೃತರನ್ನು ಗುಣವತಿ, ಆಕೆಯ ಮಕ್ಕಳಾದ ಪ್ರಿಯಾನ್ (5) ಸುಜಿತ್ಪ್ರಿಯನ್ (2) ಎಂದು ಗುರುತಿಸಲಾಗಿದೆ.

ಇಬ್ಬರು ಮಕ್ಕಳನ್ನು ಬಾವಿಗೆಸೆದು ಆತ್ಮಹತ್ಯೆ ಮಾಡಿಕೊಂಡ ತಾಯಿ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಣೆಯಾಗಿದ್ದ ವ್ಯಕ್ತಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ.!

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 15. ನಾಪತ್ತೆಯಾಗಿದ್ದ ಹುಬ್ಬಳ್ಳಿ ಮೂಲದ ರವಿ ಎಂಬವರು ಕಟಪಾಡಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಗಿಡಗಂಟಿಗಳ ನಡುವೆ ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಕುರಿತು ಉಡುಪಿಯಲ್ಲಿ ವರದಿಯಾಗಿದೆ. ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಅವರು ತಕ್ಷಣ ಸ್ಥಳಕ್ಕೆ ಧಾವಿಸಿ ಸಾಮಾಜಿಕ ಕಾರ್ಯಕರ್ತರ ನೆರವಿನಿಂದ ವ್ಯಕ್ತಿಯನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಕಾಣೆಯಾಗಿದ್ದ ವ್ಯಕ್ತಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ.! Read More »

ಕರಾವಳಿ

ರ‍್ಯಾಶ್‌ ಡ್ರೈವಿಂಗ್‌ ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಬೆದರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 15. ರ‍್ಯಾಶ್‌ ಡ್ರೈವಿಂಗ್‌ ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಗೆ ಒಳಗಾದವರನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ. ಇವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೊಸಕೋಟೆಯಲ್ಲಿರುವ ಸ್ನೇಹಿತನ‌ ಮನೆಗೆ ಕಾರ್ಯಕ್ರಮಕ್ಕೆಂದು ವೆಂಕಟೇಶ್ ಹೋಗಿದ್ದ ವೇಳೆ ಗೋಪಾಲಸ್ವಾಮಿ ಎಂಬಾತ ರ‍್ಯಾಶ್‌ ಡ್ರೈವಿಂಗ್‌ ಮಾಡಿಕೊಂಡು ಬಂದಿದ್ದು, ಈ ವೇಳೆ ಇದನ್ನ ಪ್ರಶ್ನಿಸಿದಕ್ಕೆ ಕೊಡಿಗೇಹಳ್ಳಿಗೆ ಬಾ ನಿನ್ನನ್ನ ನೋಡಿಕೊಳ್ತೀನಿ ಎಂದು ಬೆದರಿಕೆ ಹಾಕಿದ್ದನು.

ರ‍್ಯಾಶ್‌ ಡ್ರೈವಿಂಗ್‌ ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಬೆದರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top