News Kadaba

ಕೈದಿಗಳೊಂದಿಗೆ ಲೈಂಗಿಕ ಸಂಬಂಧ ➤ ಒಂದೇ ಜೈಲಿನ 18 ಮಹಿಳಾ ಅಧಿಕಾರಿಗಳು ವಜಾ

(ನ್ಯೂಸ್ ಕಡಬ)newskadaba.com ಬ್ರಿಟನ್, ಮಾ.14. ಕೈದಿಗಳೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ ಹದಿನೆಂಟು ಮಹಿಳಾ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಜೈಲಿನೊಳಗೆ ನಡೆದಿರುವ ಈ ಅನುಚಿತ ಸಂಬಂಧಗಳನ್ನು ಡೈಲಿ ಮಿರರ್ ಬಹಿರಂಗ ಪಡಿಸಿದೆ. ಇದು ಬ್ರಿಟನ್ ದೇಶದ ವ್ರೆಕ್ಸ್ಹ್ಯಾಮ್ನ ಎಚ್ಎಂಪಿ ಬರ್ವಿನ್ ಜೈಲಿನಲ್ಲಿ ನಡೆದಿದೆ. ಖಾಸಗಿಯಾಗಿ ನಡೆಸುವ ಜೈಲಿನಲ್ಲಿ ಆರು ವರ್ಷಗಳ ಅವಧಿಯಲ್ಲಿ ನಡೆದ ಲೈಂಗಿಕ ಚಟುವಟಿಕೆಗಳ ಹಿನ್ನೆಲೆಯಲ್ಲಿ ಮೂವರು ಮಹಿಳಾ ಅಧಿಕಾರಿಗಳನ್ನು ನ್ಯಾಯಾಲಯವು ವಿಚಾರಣೆಗೆ ಒಳಪಡಿಸಿತ್ತು

ಕೈದಿಗಳೊಂದಿಗೆ ಲೈಂಗಿಕ ಸಂಬಂಧ ➤ ಒಂದೇ ಜೈಲಿನ 18 ಮಹಿಳಾ ಅಧಿಕಾರಿಗಳು ವಜಾ Read More »

ರಾಷ್ಟ್ರೀಯ ನ್ಯೂಸ್

ಮಾ. 21ರಿಂದ ಅನಿರ್ದಿಷ್ಟಾವಧಿ ಮುಷ್ಕರ ಘೋಷಿಸಿದ ರಾಜ್ಯ ಸಾರಿಗೆ ನೌಕರರ ಸಂಘ ➤ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 14. ನೌಕರರಿಗೆ 6ನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 21 ರ ಬೆಳಿಗ್ಗೆ 6 ರಿಂದ ಕೆ.ಆರ್ ಟಿಸಿ ಕಾರ್ಮಿಕ ಸಂಘಗಳ ಜಂಟಿ ಕ್ರಿಯಾ ಸಮಿತಿಯು ಅನಿರ್ದಿಷ್ಟ ಮುಷ್ಕರಕ್ಕೆ ಕರೆ ನೀಡಿರುವುದರಿಂದ ಮುಂದಿನ ದಿನಗಳಲ್ಲಿ ಕರ್ನಾಟಕದಾದ್ಯಂತ ಬಸ್ ಕಾರ್ಯಾಚರಣೆಗೆ ಸ್ಥಗಿತವಾಗುವ ಸಾಧ್ಯತೆ ಇದೆ. ಕೆಎಸ್‌ಆರ್ಟಿಸಿಯ 35,013 ನೌಕರರ ಪೈಕಿ 15,000 ಕ್ಕೂ ಹೆಚ್ಚು ನೌಕರರನ್ನು ಪ್ರತಿನಿಧಿಸುವುದಾಗಿ ಹೇಳಿಕೊಂಡಿರುವ ಕೆಎಸ್‌ಆರ್ಟಿಸಿ ನೌಕರರ ಕೂಟವು ಮಾರ್ಚ್

ಮಾ. 21ರಿಂದ ಅನಿರ್ದಿಷ್ಟಾವಧಿ ಮುಷ್ಕರ ಘೋಷಿಸಿದ ರಾಜ್ಯ ಸಾರಿಗೆ ನೌಕರರ ಸಂಘ ➤ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ Read More »

ಕರ್ನಾಟಕ

ಸೇತುವೆಗೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಬಸ್ ➤ 20ಕ್ಕೂ ಅಧಿಕ ಮಂದಿಗೆ ಗಾಯ..!

(ನ್ಯೂಸ್ ಕಡಬ) newskadaba.com ದಾವಣಗೆರೆ, ಮಾ. 14. ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ದಾವಣಗೆರೆ ನಗರದ ಹೊರ ವಲಯದ ಬೇತೂರ ರಸ್ತೆಯಲ್ಲಿ ನಡೆದಿದೆ. ಖಾಸಗಿ ಬಸ್ ದಾವಣಗೆರೆಯಿಂದ ಜಗಳೂರು ಕಡೆ ಹೋಗುತ್ತಿದ್ದು, ಬೇತೂರು ರಸ್ತೆ ದಾಟಿ ಮುಂದೆ ಬರುತ್ತಿದ್ದಂತೆ ಸಣ್ಣ ಹಳ್ಳಕ್ಕೆ ಕಟ್ಟಲಾದ ಸೇತುವೆಗೆ ಬಸ್ ಢಿಕ್ಕಿಯಾಗಿದೆ. ಇನ್ನು ಸ್ಥಳೀಯರು ಪ್ರಯಾಣಿಕರ ರಕ್ಷಣೆಗೆ ಆಗಮಿಸಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.

ಸೇತುವೆಗೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಬಸ್ ➤ 20ಕ್ಕೂ ಅಧಿಕ ಮಂದಿಗೆ ಗಾಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಾಳು ಬಿದ್ದ ಕಟ್ಟಡದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 14. ಕಲ್ಸಂಕ ಜಂಕ್ಷನ್ ಬಳಿ ಇರುವ ಪಾಳು ಬಿದ್ದ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಅನುಮಾನಸ್ಪದವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಸುರತ್ಕಲ್ ಮೂಲದ 32 ವರ್ಷದ ವ್ಯಕ್ತಿಯ ಮೃತದೇಹ ಎನ್ನಲಾಗುತ್ತಿದ್ದು, ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ವ್ಯಕ್ತಿ ಆಯ ತಪ್ಪಿ ಬಿದ್ದು ಮೃತಪಟ್ಟಿರಬಹುದೇ ಅಥವಾ ಯಾರಾದರೂ ತಳ್ಳಿ ಕೊಲೆ ಮಾಡಿರಬಹುದೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪಾಳು ಬಿದ್ದ ಕಟ್ಟಡದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ Read More »

ಕರಾವಳಿ

ಪ್ಲಾಸ್ಟಿಕ್ ನೀರಿನ ಬಾಟಲಿಗಳಲ್ಲಿ 40 ಸಾವಿರಕ್ಕೂ ಹೆಚ್ಚು ಮಾರಣಾಂತಿಕ ಬ್ಯಾಕ್ಟೀರಿಯಾಗಳು ➤ ಅಧ್ಯಯನ ವರದಿ

(ನ್ಯೂಸ್ ಕಡಬ) newskadaba.com ನವದೆಹಲಿ. ಮಾ. 14.  ಇಂದಿನ ದಿನಗಳಲ್ಲಿ ಹೆಚ್ಚಾಗಿ ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ಬಳಸುತ್ತೇವೆ. ಅದರಲ್ಲೇ ತಿಂಗಳುಗಳ ಕಾಲ ನೀರನ್ನು ಕುಡಿಯುತ್ತೇವೆ. ಕೆಲವೊಮ್ಮೆ ಅದನ್ನು ಸ್ವಚ್ಛಗೊಳಿಸುವುದೇ ಇಲ್ಲ, ಹಾಗೆಯೇ ಮೇಲೆ ಮೇಲೆ ನೀರಿನಿಂದ ತೊಳೆದು ಬಿಡುತ್ತೇವೆ. ಅಧ್ಯಯನವೊಂದರಲ್ಲಿ ಈ ಬಗ್ಗೆ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿದ್ದು, ವರದಿಯ ಪ್ರಕಾರ ಮರುಬಳಕೆ ಮಾಡಬಹುದಾದ ನೀರಿನ ಬಾಟಲಿಯಲ್ಲಿ ಲಕ್ಷಾಂತರ ಮಾರಕ ಬ್ಯಾಕ್ಟೀರಿಯಾಗಳು ಇರುತ್ತವೆ. ಅಮೆರಿಕದ ವಾಟರ್ ಫಿಲ್ಟರ್ ಗುರು ಎಂಬ ಸಂಸ್ಥೆ ಈ ವರದಿಯನ್ನು ಬಿಡುಗಡೆ ಮಾಡಿದೆ.

ಪ್ಲಾಸ್ಟಿಕ್ ನೀರಿನ ಬಾಟಲಿಗಳಲ್ಲಿ 40 ಸಾವಿರಕ್ಕೂ ಹೆಚ್ಚು ಮಾರಣಾಂತಿಕ ಬ್ಯಾಕ್ಟೀರಿಯಾಗಳು ➤ ಅಧ್ಯಯನ ವರದಿ Read More »

ರಾಷ್ಟ್ರೀಯ ನ್ಯೂಸ್

ನಾಲ್ವರು ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

(ನ್ಯೂಸ್ ಕಡಬ) newskadaba.com ಶ್ರೀಲಂಕಾ, ಮಾ. 14. ತಮಿಳುನಾಡಿನ ನಾಲ್ವರು ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಕೊಟ್ಟೈಪಟ್ಟಣಂ ಕರಾವಳಿ ಗ್ರಾಮದ ಮೀನುಗಾರರಾದ ಎಲ್. ಅರೋಕಿಯ ರಾಜ್ (54), ಎ. ಅಶೋಕ್ (28), ಎ. ಕರುಪ್ಪು (22) ಮತ್ತು ಎಸ್.ಶಕ್ತಿ (21) ಎಂದು ಗುರುತಿಸಲಾಗಿದೆ. ಬಂಧಿತರನ್ನು ಪರುಥಿತುರೈನಲ್ಲಿರುವ ಶ್ರೀಲಂಕಾ ನೌಕಾ ನೆಲೆಗೆ ಹೆಚ್ಚಿನ ವಿಚಾರಣೆಗಾಗಿ ಕೊಂಡೊಯ್ಯಲಾಗಿದೆ.

ನಾಲ್ವರು ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರು ಜನತೆ’ಗೆ ಬಿಗ್‌ ಶಾಕ್‌..! ➤ ಬಾಡಿಗೆ ಮನೆಗಳಿಗೆ ಮತ್ತೆ ಬೆಲೆ ಏರಿಕೆ

(ನ್ಯೂಸ್ ಕಡಬ) newskadaba.com. ಬೆಂಗಳೂರು.ಮಾ. 14. ಕೊರೊನಾ ಅರ್ಭಟ ತಣ್ಣಗಾದ ಬಳಿಕ ಮತ್ತೆ ಐಟಿ ಉದ್ಯೋಗಿಗಳು ಆಫೀಸ್‌  ಗೆ ಬಂದು ಕೆಲಸ ಮಾಡೋದಕ್ಕೆ ಶುರುವಾಗಿದ್ದೇ ತಡ. ಇತ್ತ ಮನೆ ಮಾಲೀಕರು ಬಾಡಿಗೆ ಮನೆಗಳಿಗೆ ಮತ್ತೆ ಬೆಲೆ ಏರಿಕೆ ಮಾಡಿದ್ದಾರೆ. ರಾಜಧಾನಿ ಬೆಂಗಳೂರಿಗೆ ಅದೆಷ್ಟೋ ಮಂದಿ ಕೆಲಸ ಅರಸಿಕೊಂಡು ಬರುವವರೇ ಆಗಿದ್ದು, ಅದರಲ್ಲೂ ಇದೀಗ ಕೊರೊನಾ ಸೋಂಕಿನ ಬಳಿಕ, ನಗರದಲ್ಲಿ ಐಟಿ ಕಂಪನಿಗಳು ಮತ್ತೆ ಗರಿಗೆದರಿದ್ದು, ಉದ್ಯೋಗಿಗಳನ್ನು ಆಫೀಸ್‌ಗೆ ಬಂದು ಕೆಲಸ ಮಾಡುವಂತೆ ಆದೇಶ ಹೊರಡಿಸಿದೆ ಈ ನಿಟ್ಟಿನಲ್ಲಿ

ಬೆಂಗಳೂರು ಜನತೆ’ಗೆ ಬಿಗ್‌ ಶಾಕ್‌..! ➤ ಬಾಡಿಗೆ ಮನೆಗಳಿಗೆ ಮತ್ತೆ ಬೆಲೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಳವೆ ಬಾವಿಗೆ ಬಿದ್ದು 5 ವರ್ಷದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಮಾ. 14. ತೆರೆದ ಕೊಳವೆ ಬಾವಿಗೆ ಬಿದ್ದಿದ್ದ 5 ವರ್ಷದ ಬಾಲಕ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯಲ್ಲಿ ನಡೆದಿದೆ. ಈತ ಜಮೀನೊಂದರಲ್ಲಿ ತೆರೆದಿಟ್ಟ ಕೊಳವೆ ಬಾವಿಗೆ ಬಿದ್ದಿದ್ದು, ಈ ವಿಚಾರ ಅಧಿಕಾರಿಗಳಿಗೆ ತಿಳಿಯುತ್ತಿದ್ದಂತೆಯೇ ಎನ್‌ ಡಿಆರ್‌ ಎಫ್‌ ರಕ್ಷಣಾ ಸಿಬ್ಬಂದಿಗಳು ತಕ್ಷಣ ಕಾರ್ಯಾಚರಣೆಗೆ ಇಳಿದಿದ್ದಾರೆ. ಆ್ಯಂಬುಲೆನ್ಸ್, ಆಕ್ಸಿಜನ್‌, ವೈದ್ಯರು ಎಲ್ಲರೂ ಘಟನಾ ಸ್ಥಳದಲ್ಲಿದ್ದು ಬಾಲಕನ ಚಲನವಲನವನ್ನು ಗಮನಿಸಿ ಆತನಿಗೆ ಕೃತಕ ಆಕ್ಸಿಜನ್‌ ನೆರವನ್ನು ನೀಡಿದ್ದಾರೆ. ಆದರೂ ದುರದೃಷ್ಟವಶಾತ್ ಬಾಲಕ

ಕೊಳವೆ ಬಾವಿಗೆ ಬಿದ್ದು 5 ವರ್ಷದ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾವಿಯಲ್ಲಿ ಹತ್ತು ವರ್ಷದ ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಮಾ. 14. ಹತ್ತು ವರ್ಷದ ಬಾಲಕನ ಮೃತದೇಹ ಬಾವಿಯಲ್ಲಿ ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪನತ್ತಡಿ ಸಮೀಪದ ಚಾಮುಂಡಿ ಕುನ್ನು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಪ್ರಭಾಕರ ಎಂಬವರ ಪುತ್ರ 5ನೇ ತರಗತಿ ವಿದ್ಯಾರ್ಥಿ ಅರ್ಜುನ್ (10) ಎಂದು ಗುರುತಿಸಲಾಗಿದೆ. ದಿಢೀರ್ ನಾಪತ್ತೆಯಾಗಿದ್ದ ಬಾಲಕನನ್ನು ಮನೆಯವರು ಹಾಗೂ ಪರಿಸರ ವಾಸಿಗಳು ಶೋಧ ನಡೆಸಿದಾಗ ಆವರಣ ಇಲ್ಲದ ಬಾವಿಯಲ್ಲಿ ಬಿದ್ದಿರುವುದು ಕಂಡು ಬಂದಿದ್ದು, ಕೂಡಲೇ ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿಸಿದರೂ ಅದಾಗಲೇ ಮೃತಪಟ್ಟಿದ್ದನು

ಬಾವಿಯಲ್ಲಿ ಹತ್ತು ವರ್ಷದ ಬಾಲಕನ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಮೋದಿ ಸುನಾಮಿ ಸೃಷ್ಟಿಯಾಗಿದೆ ➤ ಸಿಎಂ ಬೊಮ್ಮಾಯಿ..!       

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 14. ರಾಜ್ಯದಲ್ಲಿ ಮೋದಿ ಸುನಾಮಿ ಪ್ರಕಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿ, “ಮೋದಿಯವರು ಭಾರತದ ಮಹಾನ್ ನಾಯಕ. ಅತ್ಯಂತ ಕಷ್ಟ ಕಾಲದಲ್ಲಿ ಭಾರತವನ್ನು ಎತ್ತಿಹಿಡಿದು, ಭಾರತದ ಗಡಿ ರಕ್ಷಣೆ ಮಾಡಿ ಆಂತರಿಕ ಸುರಕ್ಷತೆಯನ್ನು ಖಾತ್ರಿಪಡಿಸಿದ್ದಾರೆ” ಎಂದು ಹೇಳಿದರು.  

ರಾಜ್ಯದಲ್ಲಿ ಮೋದಿ ಸುನಾಮಿ ಸೃಷ್ಟಿಯಾಗಿದೆ ➤ ಸಿಎಂ ಬೊಮ್ಮಾಯಿ..!        Read More »

ಕರ್ನಾಟಕ
Scroll to Top