News Kadaba

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ  ➤ ಸವಾರ ಮೃತ್ಯು..!   

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ. 14. ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರನೋರ್ವ ಮೃತಪಟ್ಟ ಘಟನೆ ನಗರದ ಲೇಡಿಹಿಲ್ ಬಳಿ ನಡೆದಿದೆ. ಮೃತ ಸವಾರನನ್ನು ಮುಹಮ್ಮದ್ ಹನೀಫ್(35) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಓರ್ವ ಗಾಯಗೊಂಡಿದ್ದು, ಗಾಯಾಳುವನ್ನು ಬಂಟ್ವಾಳ ತಾಲೂಕಿನ ಮುಹಮ್ಮದ್ ಖಾಸಿಂ ಎಂದು ಗುರುತಿಸಲಾಗಿದೆ. ಮೃತ ಸವಾರ ಮುಹಮ್ಮದ್ ಹನೀಫ್ ಎಂಬವರು ಲೇಡಿಹಿಲ್ ವೃತ್ತದ ಬಳಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬಡಿದು, ಬಳಿಕ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಈ ದುರ್ಘಟನೆ […]

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ  ➤ ಸವಾರ ಮೃತ್ಯು..!    Read More »

ಕರಾವಳಿ, ಕ್ರೈಮ್ ನ್ಯೂಸ್

ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ➤ ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗಾಂಜಾ ಸಹಿತ ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತರನ್ನು ಬಂಟ್ವಾಳ ಪಾಣೆಮಂಗಳೂರು ಅಲಡ್ಕ ನಿವಾಸಿ ಅಬ್ದುಲ್ ಸಾದಿಕ್ (35) ಹಾಗೂ ಬೆಳ್ತಂಗಡಿ ತಾಲೂಕು ಕಕ್ಕಿಂಜೆ ಗ್ರಾಮದ ನಿವಾಸಿ ನವಾಜ್(24) ಎಂದು ಗುರುತಿಸಲಾಗಿದೆ. ಇವರು ಕಂಕನಾಡಿ ರೈಲ್ವೆ ಸ್ಟೇಷನ್ ನ ಅಳಪೆ ಪರಿಸರದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿರುವ ಕುರಿತು ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆಯವರ

ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ➤ ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯದೆಲ್ಲೆಡೆ ಇಂದಿನಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ  ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 14. ಬಿಸಿಲಿನಿಂದ ತತ್ತರಿಸಿರುವ ಕರ್ನಾಟಕದ ಹಲವೆಡೆ, ಇಂದಿನಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಪರಿಣಾಮ ಮಳೆ ಆಗಲಿದೆ ಎನ್ನಲಾಗಿದ್ದು, ಮಾರ್ಚ್ 14 ರಿಂದ 18 ರ ವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೆಡೆ, ಮಾರ್ಚ್ 16 ರಿಂದ 18 ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆ ಆಗಲಿದೆ

ರಾಜ್ಯದೆಲ್ಲೆಡೆ ಇಂದಿನಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ  ➤ ಹವಾಮಾನ ಇಲಾಖೆ ಮುನ್ಸೂಚನೆ Read More »

ಕರ್ನಾಟಕ

ವಂದೇ ಭಾರತ್ ಎಕ್ಸ್‌ಪ್ರೆಸ್‌ ನ ಮೊದಲ ಮಹಿಳಾ ಲೋಕೋ ಪೈಲಟ್ ಆಗಿ ಸುರೇಖಾ ಯಾದವ್            

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 14. ಭಾರತದ ಮೊದಲ ಮಹಿಳಾ ಲೋಕೋಮೋಟಿವ್ ಪೈಲಟ್ ಸುರೇಖಾ ಯಾದವ್ ಅವರು ಸೊಲ್ಲಾಪುರದಿಂದ ಮಹಾರಾಷ್ಟ್ರದ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್‌ವರೆಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಚಲಾಯಿಸಿದ್ದು, ವಂದೇ ಭಾರತ್ ಎಕ್ಸ್‌ಪ್ರೆಸ್‌ ನ ಮೊದಲ ಮಹಿಳಾ ಲೋಕೋಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ವಂದೇ ಭಾರತ್ ನಾರಿ ಶಕ್ತಿಯಿಂದ ನಡೆಸಲ್ಪಡುತ್ತಿದೆ. ಸುರೇಖಾ ಯಾದವ್ ವಂದೇ ಭಾರತ್ ಎಕ್ಸ್‌ಪ್ರೆಸ್‌ ನ

ವಂದೇ ಭಾರತ್ ಎಕ್ಸ್‌ಪ್ರೆಸ್‌ ನ ಮೊದಲ ಮಹಿಳಾ ಲೋಕೋ ಪೈಲಟ್ ಆಗಿ ಸುರೇಖಾ ಯಾದವ್             Read More »

ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಅಂತರಾಜ್ಯ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ    ➤ 30 ಲಕ್ಷ ರೂ. ಮೌಲ್ಯದ ಸೊತ್ತು ಕಳವು

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.14. ಕೊಚ್ಚಿ,ಕೂಟನ್ನಾಡ್- ಮಂಗಳೂರು, ಬೆಂಗಳೂರು ಅಂತರಾಜ್ಯ ಗ್ಯಾಸ್‌ ಪೈಪ್‌ ಲೈನ್‌ ಕಾಮಗಾರಿಯ ರೂ.30 ಲಕ್ಷ ಬೆಲೆಯ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಹರೇಕಳ ಗ್ರಾಮದ ಇನೋಳಿ ಎಂಬಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಐಎಲ್‌ ಆಂಡ್‌ ಎಫ್‌ ಎಸ್‌ ಕಂಪೆನಿ ಕಾಮಗಾರಿಯನ್ನು ನಡೆಸುತ್ತಿದ್ದು, ಕಂಪೆನಿಯ ಎಡ್ಮಿನ್‌ ಆಫೀಸರ್‌ ಸತೀಶ್‌ ಪಾಲ್‌ ಎಂಬವರು ನೀಡಿರುವ ದೂರಿನಂತೆ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಳ್ಳಾಲ: ಅಂತರಾಜ್ಯ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ    ➤ 30 ಲಕ್ಷ ರೂ. ಮೌಲ್ಯದ ಸೊತ್ತು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಮಾ. 14. ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಪುರಸಭೆ ವ್ಯಾಪ್ತಿಯ ಜ್ಯೋತಿನಗರ ಎಂಬಲ್ಲಿ ವರದಿಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ಜ್ಯೋತಿನಗರ ನಿವಾಸಿ ಮಯ್ಯದ್ದಿ ಎಂಬವರ ಪುತ್ರಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಿಸ್ರಿಯಾ (17) ಎಂದು ಗುರುತಿಸಲಾಗಿದೆ. ಮಿಸ್ರಿಯಾ ಅವರಿಗೆ ಬಿಳಿ ರಕ್ತ ಕಣಗಳ ಕುಸಿತ ಕಂಡುಬಂದಿರುವುದರಿಂದ ಸಾವು ಸಂಭವಿಸಿದ್ದು, ಇದು ಡೆಂಗ್ಯೂ ಪ್ರಕರಣ ಎಂದು ಶಂಕಿಸಲಾಗಿದೆ. ಈಕೆ ಕೆಲವು ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದು, ಬಿಳಿ ರಕ್ತ ಕಣಗಳ

ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

2023 ನಾಟು ನಾಟು ಹಾಡಿಗೆ ಕೋಟಿ ಕೋಟಿ ಬೆಟ್ಟಿಂಗ್ ಕಟ್ಟಿದ ಸೆಲೆಬ್ರಿಟಿಗಳು

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ. 13. ನಾಟು ನಾಟು ಹಾಡು ಆಸ್ಕರ್ ಗೆಲ್ಲೋದು ಗ್ಯಾರೆಂಟಿ ಎನ್ನುವುದು ಜನರ ನಂಬಿಕೆ ಆಗಿತ್ತು. ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿಗಾಗಿ ಇಡೀ ಭಾರತವೇ ಪ್ರಾರ್ಥಿಸುತ್ತಿತ್ತು. ಮತ್ತೊಂದೆಡೆ, ಈ ಹಾಡು ಆಸ್ಕರ್ ಗೆಲ್ಲುತ್ತಾ? ಇಲ್ಲವಾ ಎನ್ನುವ ಬಗ್ಗೆ ಜೋರಾಗಿ ಬೆಟ್ಟಿಂಗ್ ನಡೆದೆದಿದೆ. ಆನ್ಲೈನ್ ಪ್ಲಾಟ್ಫಾರ್ಮ ನಲ್ಲಿ ಕೋಟಿಗಟ್ಟಲೆ ಹಣ ಕಟ್ಟಿರುವ ವರದಿ ಆಗಿದೆ. ಭಾರತದ ಪ್ರಮುಖ ನಗರಗಳಾದ ಮುಂಬೈ, ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ಆನ್ಲೈನ್ ಬುಕ್ಕಿಗಳು 1:4 ರ ರೇಂಜ್ ನಲ್ಲಿ

2023 ನಾಟು ನಾಟು ಹಾಡಿಗೆ ಕೋಟಿ ಕೋಟಿ ಬೆಟ್ಟಿಂಗ್ ಕಟ್ಟಿದ ಸೆಲೆಬ್ರಿಟಿಗಳು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

➤ ಆಕಾಶವಾಣಿ ನಿರೂಪಕಿ ಸುಮಂಗಲಾ ಎಸ್ ಮುಮ್ಮಿಗಟ್ಟಿ ವಿಧಿವಶ

(ನ್ಯೂಸ್ ಕಡಬ) newskadaba.com. ಬೆಂಗಳೂರು. 13.  ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದ ಆಕಾಶವಾಣಿ ಕಾರ್ಯಕ್ರಮಗಳ ನಿರೂಪಕಿ ಸುಮಂಗಲಾ ಎಸ್ ಮುಮ್ಮಿಗಟ್ಟಿ(59) ಅವರು, ವಿಧಿವಶರಾಗಿದ್ದಾರೆ. ಅಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದಂತ ಅವರು, ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದರು. ಮಾ. 12 ರಂದು  ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.  ಮೃತ ಸುಮಂಗಲಾ ಎಸ್ ಮುಮ್ಮಿಗಟ್ಟಿಗೆ ಪತಿ ಹಾಗೂ ಪುತ್ರರನ್ನು ಅಗಲಿದ್ದಾರೆ . 40ಕ್ಕೂ ಹೆಚ್ಚು ವಿಜ್ಞಾನ ಕೃತಿಗಳನ್ನು, ಸಾವಿರಾರೂ ಲೇಖನಗಳನ್ನು, ನೂರಾರು ವಿಜ್ಞಾನ ಕಾರ್ಯಕ್ರಮಗಳನ್ನು ನಿರೂಪಣೆ ಮಾಡಿದಂತ ಕೀರ್ತಿ ಇವರಿಗೆ ಸಲ್ಲುತ್ತದೆ.

➤ ಆಕಾಶವಾಣಿ ನಿರೂಪಕಿ ಸುಮಂಗಲಾ ಎಸ್ ಮುಮ್ಮಿಗಟ್ಟಿ ವಿಧಿವಶ Read More »

ಕರ್ನಾಟಕ

➤ ಕಡಬ ನಾಯಿಯನ್ನು ಹೊತ್ತೊಯ್ದ ಚಿರತೆ

(ನ್ಯೂಸ್ ಕಡಬ) newskadaba.com. ಕಡಬ . 13. ಸಾಕು ನಾಯಿಯನ್ನು ಚಿರತೆಯೊಂದು ತಡರಾತ್ರಿ ಹೊತ್ತೊಯ್ದ ಘಟನೆ ಕಡಬ ತಾಲೂಕಿನ  ಸುಬ್ರಹ್ಮಣ್ಯ ಸಮೀಪದ ಕೈಕಂಬ ದಲ್ಲಿ ನಡೆದಿದೆ. ಕೈಕಂಬ ಬಳಿಯ ವೆಂಕಟಪುರ ಲೀಲಾವತಿ ದೇವರಾಜ್ ಅವರ ಮನೆಯ ಸಾಕು ನಾಯಿಯನ್ನು ಚಿರತೆ ದಾಳಿ ನಡೆಸಿ ಹೊತ್ತೊಯ್ದಿದೆ. ನಾಯಿಯ ಕೂಗಾಟ ಕೇಳಿ ಕೆಲಸದಾಳು ಎಚ್ಚರಗೊಂಡಿದ್ದು, ಕೆಲಸದಾಳುವಿನ ಎದುರಲ್ಲೇ ಚಿರತೆ ನಾಯಿ ಮೇಲೆ ದಾಳಿ ನಡೆಸಿರುವುದು ಮನೆಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.

➤ ಕಡಬ ನಾಯಿಯನ್ನು ಹೊತ್ತೊಯ್ದ ಚಿರತೆ Read More »

ಕರಾವಳಿ, ಕ್ರೈಮ್ ನ್ಯೂಸ್

➤ ಸುಮಾರು 400 ವರ್ಷ ಹಳೆಯ ಲಿಂಗ ಮುದ್ರೆ ಕಲ್ಲು ಪತ್ತೆ.!

(ನ್ಯೂಸ್ ಕಡಬ) newskadaba.com. ಕುಂದಾಪುರ. ಮಾ 13. ಕುಂದಾಪುರ ತಾಲೂಕು ಬಸ್ರೂರು ಗ್ರಾಮ ಪಂಚಾಯತ್ ಹಿಂಭಾಗದ ಅಶೋಕ ಪಾರ್ಕ್ ಜೀರ್ಣೋದ್ಧಾರ ಕಾರ್ಯವು ಸ್ಧಳೀಯರ ಸಹಕಾರದಲ್ಲಿ ನಡೆಯುತ್ತಿದ್ದು,  ಜಾಗ ಸಮತಟ್ಟು ಮಾಡುವ ಸಂದರ್ಭ ಲಿಂಗಮುದ್ರೆ ಕಲ್ಲು ಪತ್ತೆಯಾಗಿದೆ. ಈ ಕಲ್ಲಿನ ಬಗ್ಗೆ ಭಾರತೀಯ ಇತಿಹಾಸ ಸಂಕಲನ ಸಮಿತಿ ಕರ್ನಾಟಕ ಉಡುಪಿ ಜಿಲ್ಲೆಯ ಜಿಲ್ಲಾ ಸಂಚಾಲಕರು ಪ್ರದೀಪ ಕುಮಾರ್ ಬಸ್ರೂರು ಇವರ ಗಮನಕ್ಕೆ ತಂದಿದ್ದರು. ಕಲ್ಲಿನಲ್ಲಿ ಸೂರ್ಯ,ಚಂದ್ರ,ಶಿವಲಿಂಗ,ನಂದಿ ವಿಗ್ರಹ ಇರುವುದು ಕಂಡು ಬಂದಿದೆ. ಕೆಳದಿಯ ಸ.ಸೂ ನಾಲ್ಕು ನೂರು ವಷ೯ದ

➤ ಸುಮಾರು 400 ವರ್ಷ ಹಳೆಯ ಲಿಂಗ ಮುದ್ರೆ ಕಲ್ಲು ಪತ್ತೆ.! Read More »

ಕರ್ನಾಟಕ
Scroll to Top