News Kadaba

ಬಾಲಿವುಡ್ ಹಿರಿಯ ನಟ ಮತ್ತು ನಿರ್ದೇಶಕ ಸತೀಶ್ ಕೌಶಿಕ್  ವಿಧಿವಶ

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.09. ಬಾಲಿವುಡ್‌ ಹಿರಿಯ ನಟ ಮತ್ತು ನಿರ್ದೇಶಕ ಸತೀಶ್ ಕೌಶಿಕ್(66) ಮುಂಬೈನಲ್ಲಿ ನಿಧನರಾದರು ಎಂದು ವರದಿ ತಿಳಿಸಿದೆ. ಸತೀಶ್ ಕೌಶಿಕ್ ನಿಧನವನ್ನು ಹಿರಿಯ ನಟ ಅನುಪಮ್ ಖೇರ್ ಟ್ವಿಟರ್‌ನಲ್ಲಿ ಖಚಿತಪಡಿಸಿದ್ದಾರೆ. ನಟ, ಹಾಸ್ಯನಟ, ಚಿತ್ರಕಥೆಗಾರ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ಖ್ಯಾತಿಗಳಿಸಿದ್ದ ಅವರು ಗುರುಗ್ರಾಮ್‌ ನಲ್ಲಿ ಆಪ್ತರೊಬ್ಬರನ್ನು ಭೇಟಿಯಾಗಲು ತೆರಳುತ್ತಿದ್ದಾಗ ಅವರ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.  

ಬಾಲಿವುಡ್ ಹಿರಿಯ ನಟ ಮತ್ತು ನಿರ್ದೇಶಕ ಸತೀಶ್ ಕೌಶಿಕ್  ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ಇನ್‌ಸ್ಟಾಗ್ರಾಮ್ ಸರ್ವರ್‌ ಡೌನ್‌..!      ➤ 46 ಸಾವಿರಕ್ಕೂ ಅಧಿಕ ಬಳಕೆದಾರರ ಪರದಾಟ

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.09. ಮೆಟಾ ಒಡೆತನದ ಇನ್‌ಸ್ಟಾಗ್ರಾಮ್ ಸರ್ವರ್‌ ಡೌನ್‌ ಆಗಿ ಸಾವಿರಾರು ಬಳಕೆದಾರರಿಗೆ ತೊಂದರೆಯುಂಟಾಗಿದೆ ಎಂದು ವರದಿಯಾಗಿದೆ. ಸರ್ವರ್‌ ಸ್ಥಗಿತ ಟ್ರ್ಯಾಕಿಂಗ್ ವೆಬ್‌ಸೈಟ್ ಡೌನ್‌ ಡಿಟೆಕ್ಟರ್ ವರದಿ ಮಾಡಿರುವ ಪ್ರಕಾರ 46 ಸಾವಿರಕ್ಕೂ ಅಧಿಕ ಬಳಕೆದಾರರಿಗೆ ಇನ್‌ಸ್ಟಾಗ್ರಾಮ್ ಬಳಕೆಯಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.  

ಇನ್‌ಸ್ಟಾಗ್ರಾಮ್ ಸರ್ವರ್‌ ಡೌನ್‌..!      ➤ 46 ಸಾವಿರಕ್ಕೂ ಅಧಿಕ ಬಳಕೆದಾರರ ಪರದಾಟ Read More »

ರಾಷ್ಟ್ರೀಯ ನ್ಯೂಸ್

ನ್ಯೂಯಾರ್ಕ್ ಜಿಲ್ಲಾ ನ್ಯಾಯಾಧೀಶರಾಗಿ ಭಾರತೀಯ ಮೂಲದ ಅರುಣ್ ಸುಬ್ರಮಣಿಯನ್ ನೇಮಕ

(ನ್ಯೂಸ್ ಕಡಬ)newskadaba.com  ನ್ಯೂಯಾರ್ಕ್, ಮಾ.09. ನ್ಯೂಯಾರ್ಕ್‌ ‌ನ ದಕ್ಷಿಣ ಜಿಲ್ಲೆಯ ಜಿಲ್ಲಾ ನ್ಯಾಯಾಧೀಶರಾಗಿ ಭಾರತೀಯ-ಅಮೆರಿಕನ್ ವಕೀಲ ಅರುಣ್ ಸುಬ್ರಮಣಿಯನ್ ಅವರನ್ನು ನೇಮಕ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ನ್ಯೂಯಾರ್ಕ್ ನ ಸದರ್ನ್ ಡಿಸ್ಟ್ರಿಕ್ಟ್ ನ್ಯಾಯಾಧೀಶರಾಗಿ ನೇಮಕ ಮಾಡಿರುವುದನ್ನ ಯುಎಸ್ ಸೆನೆಟ್ ಮಂಗಳವಾರ ಸಂಜೆ 58-37 ಮತಗಳಿಂದ ದೃಢಪಡಿಸಿದೆ ಎನ್ನಲಾಗಿದೆ.

ನ್ಯೂಯಾರ್ಕ್ ಜಿಲ್ಲಾ ನ್ಯಾಯಾಧೀಶರಾಗಿ ಭಾರತೀಯ ಮೂಲದ ಅರುಣ್ ಸುಬ್ರಮಣಿಯನ್ ನೇಮಕ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರಿನಲ್ಲಿ ದೇಶದಲ್ಲಿಯೇ ಗರಿಷ್ಠ ತಾಪಮಾನ    ➤ 38.8 ಡಿ.ಸೆ ದಾಖಲು

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.09. ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಏರಿಕೆಯಾಗುತ್ತಿದ್ದು, ಕರಾವಳಿ ಭಾಗದಲ್ಲಿ ಮತ್ತೊಮ್ಮೆ ತಾಪಮಾನ ದೇಶದಲ್ಲೇ ದಾಖಲೆಯ ಮಟ್ಟಕ್ಕೆ ತಲುಪಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 38.8 ಡಿ.ಸೆ. ದಾಖಲಾಗಿದ್ದು ಇದು ದೇಶದಲ್ಲಿಯೇ ಗರಿಷ್ಟ ತಾಪಮಾನವಾಗಿದೆ. ಈ ಬಾರಿ ಬೇಸಿಗೆಯು ವಾಡಿಕೆಗಿಂತ ಮೊದಲೇ ಪ್ರಾರಂಭವಾಗಿದೆ. ಇನ್ನು ಮಾರ್ಚ್‌ ಎರಡನೇ ವಾರದಿಂದ ಬಿಸಿಲ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಕೆಲವು ಕಡೆ ಸಾಮಾನ್ಯಕ್ಕಿಂತ 3 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗುವ ಸಾಧ್ಯತೆಗಳಿವೆ ಎಂದು

ಮಂಗಳೂರಿನಲ್ಲಿ ದೇಶದಲ್ಲಿಯೇ ಗರಿಷ್ಠ ತಾಪಮಾನ    ➤ 38.8 ಡಿ.ಸೆ ದಾಖಲು Read More »

ಕರಾವಳಿ

ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಪತನ

(ನ್ಯೂಸ್ ಕಡಬ)newskadaba.com  ಮುಂಬೈ, ಮಾ.08. ಭಾರತೀಯ ನೌಕಾಪಡೆಯ ಸುಧಾರಿತ ಲಘು ಹೆಲಿಕಾಪ್ಟರ್ ದ್ರುವ್ ಮುಂಬೈನ ಕರಾವಳಿ ತೀರದಲ್ಲಿ ಪತನವಾಗಿದೆ. ಹೆಲಿಕಾಪ್ಟರ್ ನಲ್ಲಿದ್ದ ಮೂವರು ಸಿಬ್ಬಂದಿಗಳನ್ನು ರಕ್ಷಿಸಲಾಗಿದೆ, ಘಟನೆಯ ತನಿಖೆಗೆ ಸಹ ಆದೇಶಿಸಲಾಗಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ. ಘಟನೆ ನಡೆದ ಕೂಡಲೇ ತಕ್ಷಣ ಶೋಧ ಮತ್ತು ಪಾರುಗಾಣಿಕಾ ನೌಕಾ ಗಸ್ತು ನೌಕೆ ಮೂಲಕ ಕಾರ್ಯ ಆರಂಭಿಸಿ, ಮೂವರು ಸಿಬ್ಬಂದಿಯನ್ನು ರಕ್ಷಿಸಲಾಗಿದೆ ಎಂದು ತನ್ನ ಅಧಿಕೃತ ಟ್ವಿಟರ್ ನಲ್ಲಿ ತಿಳಿಸಿದೆ.  

ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಪತನ Read More »

ರಾಷ್ಟ್ರೀಯ ನ್ಯೂಸ್

ದ್ವಿತೀಯ ಪಿಯುಸಿ ಪರೀಕ್ಷಾ ವಿದ್ಯಾರ್ಥಿಗಳಿಗೆ ಸೂಚನೆ       ➤ ಈ ನಿಯಮ ಪಾಲನೆ ಕಡ್ಡಾಯ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. ಮಾ. 09 ರ ನಾಳೆಯಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಈ ಪರೀಕ್ಷೆಗೆ ಹಿಜಾಬ್ ಸೇರಿದಂತೆ ಯಾವುದೇ ಧರ್ಮಧಾರಿತ ಉಡುಪು ಧರಿಸಿ ಬಂದರೆ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ನಾಳೆಯಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ ಸಿದ್ಧತೆ ಕೈಗೊಂಡಿದೆ. 1,109 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 7,26,213 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಹೊಸದಾಗಿ 6.29

ದ್ವಿತೀಯ ಪಿಯುಸಿ ಪರೀಕ್ಷಾ ವಿದ್ಯಾರ್ಥಿಗಳಿಗೆ ಸೂಚನೆ       ➤ ಈ ನಿಯಮ ಪಾಲನೆ ಕಡ್ಡಾಯ Read More »

ಕರ್ನಾಟಕ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅಪಸ್ವರವೇಕೆ ?    ➤ ಲೇಖನ; ದಿವಾಕರ್‌.ಡಿ.ಮಂಡ್ಯ               

(ನ್ಯೂಸ್ ಕಡಬ)newskadaba.com  ಕರ್ನಾಟಕದಲ್ಲಿ ಆಪರೇಷನ್ ಕಮಲದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರವು ಸದಾಕಾಲ ಒಂದಿಲ್ಲೊಂದು ವಿವಾದವನ್ನು ತನ್ನ ಮೇಲೆ ಎಳೆದುಕೊಳ್ಳುತ್ತದೆಯೋ ಅಥವಾ ಆಡಳಿತ ನಡೆಸಿ ಅನುಭವವಿಲ್ಲದ ಅನನುಭವಿಗಳ ದಂಡು ತುಂಬಿರುವ ಇವರ ಆಡಳಿತದಲ್ಲಿ ವಿವಾದಗಳನ್ನು ಹುಟ್ಟುಹಾಕುತ್ತಿದ್ದರೋ ಎಂಬುದು ಕರ್ನಾಟಕ ರಾಜ್ಯದ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರಿಗೆ ಅನುಮಾನ ಮೂಡುತ್ತಿದೆ. ಏಕೆಂದರೆ ಕರ್ನಾಟಕ ರಾಜ್ಯದಲ್ಲಿ ಆಡಳಿತರೂಢ ಪಕ್ಷವಾಗಿ ಅಧಿಕಾರಕ್ಕೆ ಬಂದು ಆಡಳಿತ ನಡೆಸುತ್ತಿರುವ ದಿನದಿಂದ ಇವರು ಮಾಡಿದ ಅವಾಂತರಗಳು ಒಂದೆರಡಲ್ಲ. ಶಾಲಾಪಠ್ಯಪುಸ್ತಕ, ಹಿಜಾಬ್ ನಿಷೇದ, ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವುದು,

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅಪಸ್ವರವೇಕೆ ?    ➤ ಲೇಖನ; ದಿವಾಕರ್‌.ಡಿ.ಮಂಡ್ಯ                Read More »

ಕರ್ನಾಟಕ

ಬೈಕ್ ನಲ್ಲಿ ಹೋಗುವಾಗ ಹೆಜ್ಜೇನು ದಾಳಿ     ➤  ವ್ಯಕ್ತಿಯೊಬ್ಬರ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com  ಶಿವಮೊಗ್ಗ, ಮಾ.08. ಬೈಕ್ ನಲ್ಲಿ ಹೋಗುವಾಗ ಹೆಜ್ಜೇನು ದಾಳಿ ನಡೆಸಿದ್ದು, ಮತ್ತೊಬ್ಬರ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಹುಲಿಕಲ್ ನ ಮೂರ್ತಿ ಪೂಜಾರ್ ಎಂಬವರು ಮಾರುತಿಪುರ ಸಮೀಪದ ಹೊಸ ಕೆಸರೆಯಲ್ಲಿರುವ ಪತ್ನಿ ಮನೆಗೆ ಬೈಕಿನಲ್ಲಿ ಹೋಗುವಾಗ ಏಕಾಏಕಿ ಹೆಜ್ಜೇನು ದಾಳಿ ನಡೆಸಿದೆ. ಕೂಡಲೇ ಅಲ್ಲಿಯೇ ಇದ್ದ ಮಹಮದ್ ಗೌಸ್ ಎಂಬವರು ತಮ್ಮ ಜೀವದ ಹಂಗು ತೊರೆದು ಮೂರ್ತಿ ಪೂಜಾರ್ ಅವರಿಗೆ ಕಂಬಳಿ ಹೊದಿಸಿ ಮಾರುತಿಪುರದ ಪ್ರಾಥಮಿಕ ಆರೋಗ್ಯ

ಬೈಕ್ ನಲ್ಲಿ ಹೋಗುವಾಗ ಹೆಜ್ಜೇನು ದಾಳಿ     ➤  ವ್ಯಕ್ತಿಯೊಬ್ಬರ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ

ವಿದ್ಯಾರ್ಥಿ ಗೆ ಚಾಕು ತೋರಿಸಿ, ಬೆದರಿಸಿ ದರೋಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.08. ಬೆಂಗಳೂರು-ಆನೇಕಲ್ ರಸ್ತೆಯಲ್ಲಿರುವ ಮನೆಯೊಂದಕ್ಕೆ ನುಗ್ಗಿರುವ ಖದೀಮರು ಒಬ್ಬಂಟಿಯಾಗಿದ್ದ ವಿದ್ಯಾರ್ಥಿನಿಗೆ ಚಾಕು ತೋರಿಸಿ, ಬೆದರಿಸಿ ದರೋಡೆ ಮಾಡಿರುವ ಘಟನೆ ನಡೆದಿದೆ. ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿಯಾಗಿರುವ ಆರ್.ಕೀರ್ತನಾ ಅವರಿಗೆ ಚಾಕು ತೋರಿಸಿ ಬೆದರಿಸಿರುವ ದರೋಡೆಕೋರರು, ನಂತರ ಮನೆಯಲ್ಲಿದ್ದ ಚಿನ್ನಾಭರಣ, ಹಣವನ್ನು ದೋಚಿ ಪರಾರಿಯಾಗಿದ್ದಾರೆ.  

ವಿದ್ಯಾರ್ಥಿ ಗೆ ಚಾಕು ತೋರಿಸಿ, ಬೆದರಿಸಿ ದರೋಡೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ 24 ವರ್ಷದ ಮಹಿಳೆ ಬಂಧನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ ಆರೋಪದ ಮೇರೆಗೆ ಸುಮಾರು 24 ವರ್ಷದ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಪೊಲೀಸರು ಭಾನುವಾರ ತಡರಾತ್ರಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.  

ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ 24 ವರ್ಷದ ಮಹಿಳೆ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top