News Kadaba

ಅಡಿಕೆ ಕೊಯ್ಯುವ ವೇಳೆ ಕೊಕ್ಕೆ ವಿದ್ಯುತ್ ತಂತಿಗೆ ತಗುಲಿ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com. ಕುಂದಾಪುರ, ಮಾ 3.  ಅಡಿಕೆ ಕೊಯ್ಯುವ ವೇಳೆ ಕಬ್ಬಿಣದ ಕೊಕ್ಕೆ ಹೈಟೆನ್ಯನ್ ವಯರ್ ನ ವಿದ್ಯುತ್ ತಂತಿಗೆ ತಾಗಿದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಕೊನ್ಕೆಯ ಅಂಗಡಿ ಮನೆಯಲ್ಲಿ ಇಂದು ನಡೆದಿದೆ. ಕೊನ್ಕೆಯ ಅಂಗಡಿ ಮನೆಯ ನಿವಾಸಿ ಭಜಂಗ ಶೆಟ್ಟಿ (59) ಸಾವನ್ನಪ್ಪಿದವರು. ತಮ್ಮದೇ ಮನೆಯ ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಅಡಿಕೆ ಕೊಯ್ಯುವ ವೇಳೆ ಕೊಕ್ಕೆ ವಿದ್ಯುತ್ ತಂತಿಗೆ ತಗುಲಿ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಟೆಂಪೊ ಮತ್ತು ಸ್ಕೂಟರ್ ನಡುವೆ ಅಪಘಾತ..! ➤ ಓರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.03. 407 ಟೆಂಪೊ ಹಾಗೂ ಸ್ಕೂಟರ್ ನಡುವಿನ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕರಾವಳಿ ಬೈಪಸ್ ನಲ್ಲಿ ವರದಿಯಾಗಿದೆ. ಗಣಪತಿ ಪೈ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಗಣಪತಿಯವರು ಕರಾವಳಿ ಬೈಪಸ್ ನಿಂದ ಸಂತೆಕಟ್ಟೆಯತ್ತ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಸ್ಕೂಟರ್ ನಿಯಂತ್ರಣ ಕಳೆದುಕೊಂಡು ಟೆಂಪೋಗೆ ಡೀಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟೆಂಪೊ ಮತ್ತು ಸ್ಕೂಟರ್ ನಡುವೆ ಅಪಘಾತ..! ➤ ಓರ್ವ ಮೃತ್ಯು Read More »

ಕರಾವಳಿ

ಅರ್ಜೆಂಟೀನಾ ನಾಪತ್ತೆಯಾಗಿದ್ದ ವ್ಯಕ್ತಿ ಶಾರ್ಕ್ ಹೊಟ್ಟೆಯೊಳಗೆ ಪತ್ತೆ..!

(ನ್ಯೂಸ್ ಕಡಬ) newskadaba.com. ಅರ್ಜೆಂಟೀನಾ,  ಮಾ 3. ಕಳೆದ ತಿಂಗಳ ಆರಂಭದಲ್ಲಿ ನಾಪತ್ತೆಯಾಗಿದ್ದ ಅರ್ಜೆಂಟೀನಾದ ವ್ಯಕ್ತಿಯ ಅವಶೇಷಗಳು ಶಾರ್ಕ್ ಹೊಟ್ಟೆಯೊಳಗೆ ಪತ್ತೆಯಾಗಿವೆ. ಕೆಲವು ದಿನಗಳ ಹಿಂದೆ ಅರ್ಜೆಂಟೀನಾದ ದಕ್ಷಿಣ ಚುಬುಟ್ ಪ್ರಾಂತ್ಯದ ಕರಾವಳಿಯಲ್ಲಿ ತಿರುಗಾಟಕ್ಕೆ ಹೋಗಿದ್ದ 32 ವರ್ಷದ ಡಿಯಾಗೋ ಬರ್ರಿಯಾ ಎಂಬ ವ್ಯಕ್ತಿ ನಾಪತ್ತೆಯಾಗಿದ್ದನು. ಫೆಬ್ರವರಿ 20 ರಂದು, ರೋಕಾಸ್ ಕೊಲೊರಾಡಾಸ್ ಬಳಿಯ ಕಡಲತೀರದಲ್ಲಿ ಶೋಧ ತಂಡವು ಅವರ ವಾಹನವನ್ನು ಪತ್ತೆ ಮಾಡಿತ್ತು. ಹುಡುಕಾಟ ತಂಡವು ಬಾರ್ರಿಯಾ ಅವರ ಹೆಲ್ಮೆಟ್ ಅನ್ನು ಸಹ ಪತ್ತೆ ಮಾಡಿತ್ತು.

ಅರ್ಜೆಂಟೀನಾ ನಾಪತ್ತೆಯಾಗಿದ್ದ ವ್ಯಕ್ತಿ ಶಾರ್ಕ್ ಹೊಟ್ಟೆಯೊಳಗೆ ಪತ್ತೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಮಂಗಳೂರು: ಕರ್ತವ್ಯ ಲೋಪ..! ➤ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಅಮಾನತು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.03. ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪಾಂಡೇಶ್ವರ ಠಾಣೆಯ ಹೆಡ್‌  ಕಾನ್‌ ಸ್ಟೆಬಲ್‌ ಶ್ರೀಲತಾ ಅವರನ್ನು ಪೊಲೀಸ್‌ ಆಯುಕ್ತರು ಅಮಾನತುಗೊಳಿಸಿರುವುದಾಗಿ ವರದಿಯಾಗಿದೆ. ನಗರದ ಕ್ಲಾಕ್‌ ಟವರ್‌ ಬಳಿ ಹೊಯ್ಸಳ ವಾಹನದಲ್ಲಿ ಕರ್ತವ್ಯದಲ್ಲಿದ್ದ ಶ್ರೀಲತಾ ಅಲ್ಲಿಂದ ಖಾಸಗಿ ವಾಹನದಲ್ಲಿ ತೆರಳಿ ಕರ್ತವ್ಯ ಲೋಪವೆಸಗಿದ್ದರು.  

ಮಂಗಳೂರು: ಕರ್ತವ್ಯ ಲೋಪ..! ➤ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಅಮಾನತು Read More »

ಕರಾವಳಿ

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಲೆಕ್ಕಾಧಿಕಾರಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.03. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದಿದ್ದಾರೆ. ಟೆಂಡರ್ ಕೊಡಿಸುವ ವಿಚಾರದಲ್ಲಿ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಡಿಮ್ಯಾಂಡ್ ಮಾಡಿದ್ದು, ಮುಂಗಡವಾಗಿ 40 ಲಕ್ಷಕ್ಕೂ ಹೆಚ್ಚು ಹಣ ಪಡೆದುಕೊಳ್ಳುವ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಶಾಸಕರ ಪುತ್ರ ಪ್ರಶಾಂತ್‌ BWSSB ಮುಖ್ಯ ಲೆಕ್ಕಾಧಿಕಾರಿಯಾಗಿದ್ದಾರೆ. KSDL ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎನ್ನಲಾಗುತ್ತಿದೆ.

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಲೆಕ್ಕಾಧಿಕಾರಿ..! Read More »

ಕರ್ನಾಟಕ

ಜ್ಯುವೆಲ್ಲರಿಗೆ ನುಗ್ಗಿ ದರೋಡೆ – ಕೊಲೆ ಪ್ರಕರಣ..! ➤ ಒಂದು ತಿಂಗಳ ಬಳಿಕ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.03. ಹಂಪನಕಟ್ಟೆಯಲ್ಲಿನ ಜ್ಯುವೆಲ್ಲರಿಗೆ ನುಗ್ಗಿ ದರೋಡೆ – ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 1 ತಿಂಗಳ ಬಳಿಕ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಝಿಕ್ಕೋಡ್ ಕೊಯಿಲಾಂಡಿಯ ಶಿಫಾಝ್ (33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ. ಅತ್ತಾವರದ ನಿವಾಸಿ ರಾಘವ(50) ಎಂಬವರನ್ನು ಚೂರಿಯಿಂದ ಇರಿದು ಕೊಲೆಗೈದು ದರೋಡೆ ಮಾಡಿಕೊಂಡು ಮುಸುಕುದಾರಿ ಪರಾರಿಯಾಗಿದ್ದ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು.

ಜ್ಯುವೆಲ್ಲರಿಗೆ ನುಗ್ಗಿ ದರೋಡೆ – ಕೊಲೆ ಪ್ರಕರಣ..! ➤ ಒಂದು ತಿಂಗಳ ಬಳಿಕ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಲೋಕಾಯುಕ್ತ ದಾಳಿ..! ➤ ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ ₹6 ಕೋಟಿ ನಗದು ವಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.03. ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಬರೋಬ್ಬರಿ 6 ಕೋಟಿ ರೂ. ನಗದನ್ನು ಲೋಕಾಯುಕ್ತ ಪೊಲೀಸರು ಗುರುವಾರ ತಡರಾತ್ರಿ ವಶಪಡಿಸಿಕೊಂಡಿದ್ದಾರೆ. ಪ್ರಶಾಂತ್ ಅವರನ್ನು 40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಗುರುವಾರ ಸಂಜೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಅವರ ಖಾಸಗಿ ಕಚೇರಿಯಲ್ಲಿ ಇನ್ನೂ 1.62 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಡಾಲರ್ಸ್ ಕಾಲೋನಿಯ ಪ್ರಶಾಂತ್ ಮನೆಯ ಮೇಲೆ ದಾಳಿ ಮಾಡಿ ಲೋಕಾಯುಕ್ತ ಪೊಲೀಸರು

ಲೋಕಾಯುಕ್ತ ದಾಳಿ..! ➤ ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ ₹6 ಕೋಟಿ ನಗದು ವಶ Read More »

ಕರ್ನಾಟಕ

ಮಂಗಳೂರು: ಭ್ರಷ್ಟಾಚಾರ ಪ್ರಕರಣ..! ➤ ಗ್ರಾಮ ಕರಣಿಕನಿಗೆ ನಾಲ್ಕು ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.03. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಕರಣಿಕನಿಗೆ ಮಂಗಳೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿರುವ ಘಟನೆ ನಡೆದಿದೆ. ಶಿಕ್ಷೆಗೊಳಗಾದವರನ್ನು ಎಸ್‌. ಮಹೇಶ್‌ ಎಂದು ಗುರುತಿಸಲಾಗಿದೆ. ಸುಳ್ಯ ಮಂಡೆಕೋಲಿನ ಗೋಪಾಲಕೃಷ್ಣ ಅವರ ಅಕ್ರಮ ಸಕ್ರಮದ ಅರ್ಜಿ ವಿಲೇವಾರಿಗೆ 60,000 ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, 2016ರ ಜೂ. 7ರಂದು 45,000 ರೂ.ಗಳನ್ನು ಲಂಚದ ಹಣವಾಗಿ ಸ್ವೀಕರಿಸುವ ಸಂದರ್ಭ ಮಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಬಂಧಿಸಿದ್ದರು.

ಮಂಗಳೂರು: ಭ್ರಷ್ಟಾಚಾರ ಪ್ರಕರಣ..! ➤ ಗ್ರಾಮ ಕರಣಿಕನಿಗೆ ನಾಲ್ಕು ವರ್ಷ ಜೈಲು ಶಿಕ್ಷೆ Read More »

ಕರಾವಳಿ

➤ ಬಾಲಿವುಡ್ ನಟಿ ಸುಶ್ಮಿತಾ ಸೇನ್ ಗೆ ಹೃದಯಾಘಾತ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ.02.  ಬಾಲಿವುಡ್ ನಟಿ, ಮಾಜಿ ಭುವನ ಸುಂದರಿ ಸುಶ್ಮಿತಾ ಸೇನ್ ಅವರಿಗೆ ಹೃದಯಾಘಾತ ಸಂಭವಿಸಿದೆ. 47 ವರ್ಷದ ಸುಶ್ಮಿತಾ ಸೇನ್ ಹೃದಯಾಘಾತಕ್ಕೊಳಗಾಗಿದ್ದಾರೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು, ಸದ್ಯ ಸುಶ್ಮಿತಾ ಸೇನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ  ತಿಳಿದು ಬಂದಿದೆ.

➤ ಬಾಲಿವುಡ್ ನಟಿ ಸುಶ್ಮಿತಾ ಸೇನ್ ಗೆ ಹೃದಯಾಘಾತ Read More »

ರಾಷ್ಟ್ರೀಯ ನ್ಯೂಸ್

➤ಹೆಂಡತಿ ಮತ್ತು ಇಬ್ಬರು ಮಕ್ಕಳಿಗೆ ವಿಷ ಕೊಟ್ಟು ಕೊಂದ ಪಾಪಿ ಪತಿ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ.02.  ಹೆಂಡತಿ ಹಾಗೂ ಇಬ್ಬರು ಮಕ್ಕಳಿಗೆ ಊಟದಲ್ಲಿ ವಿಷ ಹಾಕಿ ತಾನೂ ಆತ್ಮಹತ್ಯೆಗೆ ಯತ್ನಿಸಿದ  ಘಟನೆ ಕೋಣನಕುಂಟೆಯಲ್ಲಿ ನಡೆದಿದೆ.  ವಿಜಯ (28) ನಿಷಾ(7)  ದೀಕ್ಷಾ(5) ಮೃತ ಪಟ್ಟವರು . ಪತಿ ನಾಗೇಂದ್ರ  ವಿಷ ಬೆರೆಸಿದ ಊಟವನ್ನು ನೀಡಿದ್ದು, ಹೆಂಡತಿ ಹಾಗೂ ಮಕ್ಕಳು ಮನೆಯಲ್ಲಿಯೇ ನರಳಾಡಿ ಸಾವನ್ನಪ್ಪಿದ್ದಾರೆ.  ಬಳಿಕ ನಾಗೇಂದ್ರ  ಆತ್ಮಹತ್ಯೆಗೆ ಯತ್ನಿಸಿದ್ದಾನೆ.   ಇನ್ನು ಪತಿ ನಾಗೇಶ್ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.

➤ಹೆಂಡತಿ ಮತ್ತು ಇಬ್ಬರು ಮಕ್ಕಳಿಗೆ ವಿಷ ಕೊಟ್ಟು ಕೊಂದ ಪಾಪಿ ಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top