News Kadaba

ಮಾರ್ಚ್‌ನಲ್ಲಿ 3 ಬಾರಿ ಕರ್ನಾಟಕಕ್ಕೆ ಮೋದಿ ಆಗಮನ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.02. ಪ್ರಧಾನಿ ನರೇಂದ್ರ ಮೋದಿ ಅವರು ವಿಧಾನಸಭಾ ಚುನಾವಣೆ ಘೋಷಣೆಯಾಗುವ ಮೊದಲೇ ಈ ತಿಂಗಳಲ್ಲಿ ಮೂರು ಬಾರಿ ರಾಜ್ಯಕ್ಕೆ ಆಗಮಿಸುವ ಸಾಧ್ಯತೆಯಿದೆ. ಈ ಪೈಕಿ ಎರಡು ಬಾರಿ ಆಗಮಿಸುವುದು ನಿಶ್ಚಿತವಾಗಿದೆ. ಮೂರನೇ ಬಾರಿ ಆಗಮಿಸುವ ಕಾರ್ಯಕ್ರಮದ ರೂಪುರೇಷೆ ಅಂತಿಮಗೊಳ್ಳಬೇಕಿದೆ ಎಂದು ಮೂಲಗಳು ತಿಳಿಸಿವೆ. ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯನ್ನು ಮಾ.12 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ನಿರೀಕ್ಷೆಯಿದೆ. ಈ ಮೊದಲು 11ರಂದು ಮಂಡ್ಯಕ್ಕೆ ಆಗಮಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಇದೀಗ ಒಂದು ದಿನ […]

ಮಾರ್ಚ್‌ನಲ್ಲಿ 3 ಬಾರಿ ಕರ್ನಾಟಕಕ್ಕೆ ಮೋದಿ ಆಗಮನ..! Read More »

ಕರ್ನಾಟಕ

ಬೆಂಗಳೂರು: ನಿವೃತ್ತ ಮಹಿಳಾ ಸರ ದೋಚಿದ್ದ ಖದೀಮನ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.02. ಇತ್ತೀಚಿಗೆ ನಿವೃತ್ತ ಮಹಿಳಾ ಪೊಲೀಸ್‌ ಇನ್ಸ್ ಪೆಕ್ಟರ್‌ವೊಬ್ಬರಿಂದ ಚಿನ್ನದ ಸರ ದೋಚಿದ್ದ ಚಾಲಾಕಿ ಖದೀಮನೊಬ್ಬ ಚಂದ್ರಾಲೇಔಟ್‌ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಉಲ್ಲಾಳ ನಿವಾಸಿ ದರ್ಶನ್‌ ಬಂಧಿತನಾಗಿದ್ದು, ಆರೋಪಿಯಿಂದ 3 ಲಕ್ಷ ರು ಮೌಲ್ಯದ 76.4 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ಇತ್ತೀಚಿಗೆ ಮೂಡಲಪಾಳ್ಯ ಮುಖ್ಯರಸ್ತೆಯ ಕೆನರಾ ಬ್ಯಾಂಕ್‌ ಕಾಲೋನಿ ನಿವಾಸಿ ನಿವೃತ್ತ ಪೊಲೀಸ್‌ ಇನ್ಸ್‌ಪೆಕ್ಟರ್‌ ಗೀತಾರೆಡ್ಡಿ ಅವರು ಮನೆ ಮುಂದೆ ಕಸ ಗುಡಿಸುವಾಗ ಸರ ಕಳವು ಮಾಡಿ ಕಿಡಿಗೇಡಿ ಪರಾರಿಯಾಗಿದ್ದ.

ಬೆಂಗಳೂರು: ನಿವೃತ್ತ ಮಹಿಳಾ ಸರ ದೋಚಿದ್ದ ಖದೀಮನ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೊಬೈಲ್ ಬ್ಯಾಟರಿ ಸ್ಫೋಟಕ್ಕೆ ವ್ಯಕ್ತಿ ಬಲಿ; ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಶವ..!

(ನ್ಯೂಸ್ ಕಡಬ)newskadaba.com ಉಜ್ಜಯಿನಿ, ಮಾ.02. ಮೊಬೈಲ್‌ ಫೋನ್‌, ಅದ್ರಲ್ಲೂ ಸ್ಮಾರ್ಟ್‌ಫೋನ್‌ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಫೋನ್‌ಗಳ ಬಳಕೆ ಹೆಚ್ಚಾದಂತೆ ಮೊಬೈಲ್‌ ಫೋನ್‌ ಬ್ಯಾಟರಿ ಸ್ಫೋಟಗೊಳ್ಳುವ ಪ್ರಕರಣಗಳು ಸಹ ಆಗಾಗ್ಗೆ ವರದಿಯಾಗುತ್ತಿರುತ್ತದೆ. ಇದರಿಂದ ಅನೆಕ ಜೀವಗಳು ಹೋಗಿದ್ದು, ಕೆಲವರಿಗೆ ತೀವ್ರ ಗಾಯಗಳಾಗಿರುವ ವರದಿಗಳು ಸಾಕಷ್ಟಿವೆ. ಈಗ ಮಧ್ಯ ಪ್ರದೇಶದಲ್ಲಿ ಮತ್ತೆ ಇಂತದ್ದೇ ಆರೋಪವೊಂದು ಕೇಳಿಬಂದಿದೆ. ಮೊಬೈಲ್‌ ಫೋನ್‌ ಬ್ಯಾಟರಿ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಬಲಿಯಾಗಿದ್ದು, ಅವರ ದೇಹ ಮನೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿದೆ.

ಮೊಬೈಲ್ ಬ್ಯಾಟರಿ ಸ್ಫೋಟಕ್ಕೆ ವ್ಯಕ್ತಿ ಬಲಿ; ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಶವ..! Read More »

ರಾಷ್ಟ್ರೀಯ ನ್ಯೂಸ್

ಒಂದೇ ಮನೆಯ ಮೂವರು ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರ

(ನ್ಯೂಸ್ ಕಡಬ)newskadaba.com ಮುಂಬೈ, ಮಾ.02. ತನ್ನ ನೆರೆಹೊರೆಯಲ್ಲಿ ತಂಗಿದ್ದ ಮೂವರು ಅಪ್ರಾಪ್ತ ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಸೂತಿ ಕೆಲಸಗಾರನನ್ನು ಮುಂಬೈನ ಜೆಜೆ ಮಾರ್ಗ ಪೊಲೀಸರು ಬಂಧಿಸಿದ್ದಾರೆ. ತನ್ನ ಏಳು ವರ್ಷದ ಮಗಳು ಈ ಸಂಕಟವನ್ನು ವಿವರಿಸಿದ ನಂತರ ಸಂತ್ರಸ್ತೆಯ ತಾಯಿ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದಳು. ದಕ್ಷಿಣ ವಲಯದ ಹೆಚ್ಚುವರಿ ಪೊಲೀಸ್ ಕಮಿಷನರ್ ದಿಲೀಪ್ ಸಾವಂತ್ ಅವರು ತ್ವರಿತ ತನಿಖೆಗೆ ಭರವಸೆ ನೀಡಿದ್ದು, ಪ್ರಕರಣವನ್ನು ಕೈಗೆತ್ತಿಕೊಂಡಿದ್ದಾರೆ.

ಒಂದೇ ಮನೆಯ ಮೂವರು ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರ Read More »

ಕ್ರೈಮ್ ನ್ಯೂಸ್

ಕಡಬ: ಮತ್ತೇ ಅರಣ್ಯದಲ್ಲಿ ವ್ಯಕ್ತಿಯೊಬ್ಬರಿಗೆ ಕಾಣ ಸಿಕ್ಕ ಒಂಟಿ ಸಲಗ

(ನ್ಯೂಸ್ ಕಡಬ)newskadaba.com ಕಡಬ, ಮಾ.02. ಕಡಬ ತಾಲೂಕಿನ ಕಲ್ಲುಗುಡ್ಡೆ ಉದನೆ ಸಂಪರ್ಕ ರಸ್ತೆಯ ನಿಡ್ಡೋ ಬಳಿಯ ಅರಣ್ಯದಲ್ಲಿ ನಾಲ್ಕು ದಿನಗಳ ಹಿಂದೆ ಕಾಡಾನೆಯೊಂದು ವ್ಯಕ್ತಿಯೋರ್ವರಿಗೆ ಕಾಣಿಸಿದೆ ಎಂದು ವರದಿ ತಿಳಿಸಿದೆ. ರವಿವಾರ ಬೆಳಗ್ಗೆ ಕಾಡಾನೆ ಸಿಕ್ಕಿದ್ದು ಅವರು ನೀಡಿದ ಮಾಹಿತಿ ಆಧಾರಿಸಿ ಅರಣ್ಯ ಇಲಾಖೆಯ ತಂಡವು ಕಾಡಾನೆ ಪತ್ತೆ ಕಾರ್ಯವನ್ನು ಮತ್ತೆ ಚುರುಗೊಳಿಸಿದೆ.

ಕಡಬ: ಮತ್ತೇ ಅರಣ್ಯದಲ್ಲಿ ವ್ಯಕ್ತಿಯೊಬ್ಬರಿಗೆ ಕಾಣ ಸಿಕ್ಕ ಒಂಟಿ ಸಲಗ Read More »

ಕರಾವಳಿ, ಕ್ರೈಮ್ ನ್ಯೂಸ್

SDPI ಪಕ್ಷದ 2ನೇ ಪಟ್ಟಿ ರಿಲೀಸ್ ➤ ಶಾಫಿ ಬೆಳ್ಳಾರೆ ಪುತ್ತೂರು ಅಭ್ಯರ್ಥಿ !

(ನ್ಯೂಸ್ ಕಡಬ)newskadaba.com ಬೆಳ್ಳಾರೆ, ಮಾ.02. ವಿಧಾನಸಭೆ ಚುನಾವಣೆಗೆ ಎಸ್ ಡಿಪಿಐ ಪಕ್ಷವು ತನ್ನ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನಲ್ಲಿ ಎಸ್ ಡಿಪಿಐ ರಾಷ್ಟ್ರಾಧ್ಯಕ್ಷ ಎಂ.ಕೆ. ಫೈಝಿ 2ನೇ ಪಟ್ಟಿ ಬಿಡುಗಡೆ ಮಾಡಿದ್ದು ಇದರಲ್ಲಿ 9 ಮಂದಿ ಅಭ್ಯರ್ಥಿಗಳ ಹೆಸರಿದೆ. ಇನ್ನು ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಾಫಿ ಬೆಳ್ಳಾರೆ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸುವುದು ಇದೀಗ ಖಚಿತಗೊಂಡಿದೆ.

SDPI ಪಕ್ಷದ 2ನೇ ಪಟ್ಟಿ ರಿಲೀಸ್ ➤ ಶಾಫಿ ಬೆಳ್ಳಾರೆ ಪುತ್ತೂರು ಅಭ್ಯರ್ಥಿ ! Read More »

ಕರಾವಳಿ

ಮಂಗಳೂರು: 4 ವರ್ಷದ ಮಗುವಿನೊಂದಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ     

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.02. ತನ್ನ 4 ವರ್ಷದ ಮಗುವಿನೊಂದಿಗೆ ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೊಡಿಯಾಲ್ ಗುತ್ತಿನಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನ ಮಹಿಳೆ ತನ್ನ 4 ವರ್ಷದ ಮಗಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿಜಯ(33) ಮತ್ತು ಶೋಭಿತಾ (4) ಮೃತಪಟ್ಟವರು. ಇಬ್ಬರು ಮಕ್ಕಳ ಜತೆಗೆ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದು ಇನ್ನೋರ್ವ ಮಗಳು ನೇಣಿನ ಕುಣಿಕೆಯಿಂದ ತಪ್ಪಿಸಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.  

ಮಂಗಳೂರು: 4 ವರ್ಷದ ಮಗುವಿನೊಂದಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ      Read More »

ಕರಾವಳಿ, ಕ್ರೈಮ್ ನ್ಯೂಸ್

ಪಿಯು ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅನುಮತಿ ಇಲ್ಲ     ➤ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.02. ಹಿಜಾಬ್‌ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಾಗಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಸಮಯದಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡುವ ಪ್ರಶ್ನೆಯೇ ಇಲ್ಲ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ. 9ರಿಂದ ಆರಂಭವಾಗಲಿದೆ. ಪರೀಕ್ಷೆಯಲ್ಲಿ ಹಿಜಾಬ್‌ಗೆ ಅನುಮತಿ ನೀಡುವಂತೆ ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದರು.  

ಪಿಯು ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅನುಮತಿ ಇಲ್ಲ     ➤ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ! Read More »

ಕರ್ನಾಟಕ

ವ್ಯಕ್ತಿಯೋರ್ವನ ಹೊಟ್ಟೆಯಿಂದ 4.5 ಕೆಜಿ ತೂಕದ ಗೆಡ್ಡೆ ಹೊರ ತೆಗೆದ ವೈದ್ಯರು     

(ನ್ಯೂಸ್ ಕಡಬ)newskadaba.com ಬಿಹಾರ, ಮಾ.02. ವ್ಯಕ್ತಿಯೋರ್ವನ ಹೊಟ್ಟೆಯಿಂದ ಬರೊಬ್ಬರಿ 4.5 ಕೆ.ಜಿ ಗೆಡ್ಡೆಯನ್ನು ಶಸ್ತ್ರಚಿಕಿತ್ಸೆ ನಡೆಸಿ ವೈದ್ಯರು ಹೊರತೆಗೆದಿದ್ದಾರೆ. ಬಿವಾಶ್ ಚಂದ್ರ ತಿವಾರಿ ಎಂಬವರು ಎರಡು ತಿಂಗಳಿನಿಂದ ತೀವ್ರ ಹಸಿವು, ಮಲಬದ್ಧತೆ ಮತ್ತು ಕಿಬ್ಬೊಟ್ಟೆಯ ಹಿಗ್ಗುವಿಕೆಯಿಂದ ಬಳಲುತ್ತಿದ್ದರು.ವೈದ್ಯರು ತಪಾಸಣೆ ನಡೆಸಿದಾಗ ಗೆಡ್ಡೆ ಇರುವುದು ಕಂಡು ಬಂದಿದೆ.

ವ್ಯಕ್ತಿಯೋರ್ವನ ಹೊಟ್ಟೆಯಿಂದ 4.5 ಕೆಜಿ ತೂಕದ ಗೆಡ್ಡೆ ಹೊರ ತೆಗೆದ ವೈದ್ಯರು      Read More »

ಕರಾವಳಿ

ಮಂಗಳೂರು: ಕಾರಿಗೆ ಮೀನು ಸಾಗಾಟ ಲಾರಿ ಢಿಕ್ಕಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.02. ಮೀನು ಸಾಗಾಟದ ಲಾರಿಯೊಂದು ಚಾಲಕನ ನಿರ್ಲಕ್ಷತನದ ಚಾಲನೆಯಿಂದ ಕಾರೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಡು ಪಣಂಬೂರು ಕೀರು ಸೇತುವೆ ಬಳಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಡುಪಿ ಕಡೆಯಿಂದ ಕೇರಳ ಕಡೆಗೆ ಹೋಗುತ್ತಿದ್ದ ಮೀನಿನ ಲಾರಿ ಪಡುಪಣಂಬೂರು ಕಿರು ಸೇತುವೆ ಬಳಿ ಚಾಲಕನ ನಿರ್ಲಕ್ಷ ಚಾಲನೆಯಿಂದ ಅದೇ ದಿಕ್ಕಿನಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ

ಮಂಗಳೂರು: ಕಾರಿಗೆ ಮೀನು ಸಾಗಾಟ ಲಾರಿ ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top