News Kadaba

ರಾಜ್ಯ ಸರ್ಕಾರಿ ನೌಕರರ ಮುಷ್ಕರ ➤ ಹಲವು ಜಿಲ್ಲೆಗಳಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆಗಳು ಮುಂದೂಡಿಕೆ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ.01.  7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ  ನಡೆಸುತ್ತಿದ್ದಾರೆ.  ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಯ ಸುಮಾರು 10 ಲಕ್ಷ ನೌಕರರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ಪರೀಕ್ಷೆಗಳಿಗೂ ರಾಜ್ಯ ಸರ್ಕಾರಿ ನೌಕರರ ಮುಷ್ಕರ ಬಿಸಿ ತಟ್ಟಿದೆ. ಇಂದು ಬೆಂಗಳೂರು ದಕ್ಷಿಣ ಜಿಲ್ಲೆ, ಬಾಗಲಕೋಟೆಯಲ್ಲಿ ಪದವಿಪೂರ್ವ ಕಾಲೇಜುಗಳ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇನ್ನು ಕಲಬುರಗಿಯಲ್ಲಿ ಎಸ್​ಎಸ್​ಎಲ್​ಸಿ ಪೂರ್ವಬಾವಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದು […]

ರಾಜ್ಯ ಸರ್ಕಾರಿ ನೌಕರರ ಮುಷ್ಕರ ➤ ಹಲವು ಜಿಲ್ಲೆಗಳಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆಗಳು ಮುಂದೂಡಿಕೆ Read More »

ಕರ್ನಾಟಕ

ಮಾರಕಾಸ್ತ್ರದಿಂದ ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ

(ನ್ಯೂಸ್ ಕಡಬ)newskadaba.com  ಬೆಳಗಾವಿ, ಮಾ.01. ಮಗನ ಕಾಟವನ್ನು ತಾಳಲಾಗದೆ ತಂದೆಯೊಬ್ಬ ಆತನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ತಂದೆ ಮಾರಕಾಸ್ತ್ರದಿಂದ ಬೀಸಿದ ಹೊಡೆತಕ್ಕೆ ಮಗ ಸ್ಥಳದಲ್ಲೇ ಸಾವಿಗೀಡಾಗಿದ್ದು, ಶವ ರಕ್ತದ ಮಡುವಿನಲ್ಲಿ ಬಿದ್ದಿದ್ದ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಬಿಕೆ ಗ್ರಾಮದಲ್ಲಿ ಈ ಬರ್ಬರ ಕೊಲೆ ನಡೆದಿದೆ.  

ಮಾರಕಾಸ್ತ್ರದಿಂದ ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ಸರಕಾರಿ ಕಚೇರಿ ಬಂದ್     ➤ ಮುಷ್ಕರ ನಿರ್ಧಾರ  ಹಿಂದಕ್ಕೆ ಪಡೆಯದ  ರಾಜ್ಯ ಸರ್ಕಾರಿ ನೌಕರರ ಸಂಘ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.01. ಇಂದಿನಿಂದ  ಅನಿರ್ದಿಷ್ಟಾವಧಿ ಅವಧಿ ಮುಷ್ಕರಕ್ಕೆ ಕರೆ ನೀಡಿರುವ  ಸಂಘ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗಿನ ಸಭೆ ವಿಫಲ. ನಡುರಾತ್ರಿ ನಡೆದ ಸಭೆಯಲ್ಲಿ ಸರ್ಕಾರದ ಭರವಸೆ ಒಪ್ಪದ ಸಂಘದ ಪ್ರಮುಖರು ಎಂದು ವರದಿಯಾಗಿದೆ. ಹೀಗಾಗಿ ಇಂದು ಮುಷ್ಕರ ನಡೆಸಲು ನಿರ್ಧಾರ ಮಾಡಿದ್ದು,  ರಾಜ್ಯ ವ್ಯಾಪಿ 22 ಇಲಾಖೆಗಳ 5.30 ಲಕ್ಷ ಸರ್ಕಾರಿ ನೌಕರರು ಮುಷ್ಕರದಲ್ಲಿ ಭಾಗಿಯಾಗಿದ್ದಾರೆ.  

ಇಂದು ಸರಕಾರಿ ಕಚೇರಿ ಬಂದ್     ➤ ಮುಷ್ಕರ ನಿರ್ಧಾರ  ಹಿಂದಕ್ಕೆ ಪಡೆಯದ  ರಾಜ್ಯ ಸರ್ಕಾರಿ ನೌಕರರ ಸಂಘ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಸರ್ಕಾರಿ ನೌಕರರ ಮುಷ್ಕರ ➤ಚಿಕಿತ್ಸೆ ಸಿಗದೆ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಟ

ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ.01.  7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಮುಷ್ಕರಕ್ಕೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಕೂಡ ಬೆಂಬಲ ನೀಡಿದ್ದು, ರಾಜ್ಯದ ಹಲವೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್ ಮಾಡಲಾಗಿದೆ. ಸದ್ಯ ಇದರಿಂದ ರೋಗಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.​​​​​ ಬೆಂಗಳೂರಿನ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಡುತ್ತಿರುವ ದೃಶ್ಯಗಳು ಮನಕಲುಕುವಂತಿದೆ.

➤ ಸರ್ಕಾರಿ ನೌಕರರ ಮುಷ್ಕರ ➤ಚಿಕಿತ್ಸೆ ಸಿಗದೆ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಟ Read More »

ಕರ್ನಾಟಕ

ಆಳೆತ್ತರಕ್ಕೆ ಎದ್ದು ನಿಂತ ಕಾಳಿಂಗ ಸರ್ಪ     ➤ಅಬ್ಬಾ..! ಎಂದ ನೆಟ್ಟಿಗರು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.01. ನೋಡುಗರ ಎದೆಯಲ್ಲಿ ಭಯ ಹುಟ್ಟಿಸುವ ಕಾಳಿಂಗ ಸರ್ಪ ಮಳೆಕಾಡುಗಳಲ್ಲಿ ಆಗಾಗ ಅಪರೂಪಕ್ಕೆ ಎಂಬಂತೆ  ಕಾಣ  ಸಿಗುತ್ತದೆ. ಕಾಳಿಂಗ ಸರ್ಪ ಬುಸುಗುಟ್ಟುತ್ತಾ ಕೇವಲ ತೆವಳುತ್ತಾ ಹೋಗುವುದಿಲ್ಲ. ಕೆಲ ಸಂಧರ್ಭಗಳಲ್ಲಿ ಎದ್ದು ನಿಂತು ನೋಡುಗರ ಬೆಚ್ಚಿ ಬೀಳುವಂತೆ ಮಾಡುತ್ತದೆ.  

ಆಳೆತ್ತರಕ್ಕೆ ಎದ್ದು ನಿಂತ ಕಾಳಿಂಗ ಸರ್ಪ     ➤ಅಬ್ಬಾ..! ಎಂದ ನೆಟ್ಟಿಗರು..! Read More »

ಕರಾವಳಿ

ಮನೆಗಳಿಗೆ ನುಗ್ಗಿ ಚಿನ್ನಾಭರಣ ಕಳವು       ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.28. ಚಿಮೇನಿ ಪೊಲೀಸ್ ಠಾಣಾ ವ್ಯಾಪ್ತಿಯ ಕಯ್ಯೂರು ಆಲಂತಟ್ಟದಲ್ಲಿ ಹಾಡಹಗಲೇ ಮನೆಗಳ ಬೀಗ ಮುರಿದು ಚಿನ್ನಾಭರಣ ಮತ್ತು ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಿದ್ದಾರೆ. ಕಾಞ೦ಗಾಡ್ ರೈಲ್ವೇ ಪರಿಸರದ ಪಿ. ಎಚ್. ಆಶಿಫ್(21) ಬಂಧಿತ ಆರೋಪಿಯಾಗಿದ್ದಾನೆ.  

ಮನೆಗಳಿಗೆ ನುಗ್ಗಿ ಚಿನ್ನಾಭರಣ ಕಳವು       ➤ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲಿನಲ್ಲಿ ಕಳೆದುಹೋಗಿದ್ದ 8.57 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ ಕೊನೆಗೂ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.01. ಮುಂಬೈಯಿಂದ ಮಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ಕಳೆದುಹೋಗಿದ್ದ ಚಿನ್ನಾಭರಣಗಳಿದ್ದ ಟ್ರಾಲಿ ಬ್ಯಾಗ್‌ ನಗರದ ಕುಲಶೇಖರದಲ್ಲಿ ರೈಲು ಹಳಿ ಪಕ್ಕದಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ರವೀಂದ್ರ ಎಂ.ಶೆಟ್ಟಿ (74) ಮತ್ತು ಅವರ ಪತ್ನಿ ಶಶಿಕಲಾ ಶೆಟ್ಟಿ ಅವರು ಮಂಗಳೂರಿಗೆ ರೈಲಿನಲ್ಲಿ ಬರುತ್ತಿದ್ದಾಗ ಸುರತ್ಕಲ್‌ನಿಂದ ಮಂಗಳೂರು ನಡುವೆ ಅವರ ಟ್ರಾಲಿ ಬ್ಯಾಗ್‌ ಕಳೆದು ಹೋಗಿತ್ತು. ಕಳವಾಗಿರುವ ಬಗ್ಗೆ ಮಂಗಳೂರು ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ.

ರೈಲಿನಲ್ಲಿ ಕಳೆದುಹೋಗಿದ್ದ 8.57 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ ಕೊನೆಗೂ ಪತ್ತೆ Read More »

ಕರಾವಳಿ

ಹಂಪಿ ಸ್ಮಾರಕ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ ಯುವಕ      ➤ ಪೊಲೀಸರಿಂದ ಸ್ವಯಂಪ್ರೇರಿತ ಕೇಸು ದಾಖಲು

(ನ್ಯೂಸ್ ಕಡಬ)newskadaba.com ಹೊಸಪೇಟೆ, ಫೆ.28. ಹಂಪಿಯ ಹೇಮಕೂಟ ಬೆಟ್ಟದಲ್ಲಿ ಯುವಕರು ಕುಣಿದು ಕುಪ್ಪಳಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 14ನೇ ಶತಮಾನದ ಪುರಾತನ ಸ್ಮಾರಕದ ಮಂಟಪಕ್ಕೆ ಹತ್ತುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ವಿರೋಧ ವ್ಯಕ್ತವಾಗಿ ಹಂಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಿಡಿಯೋ ಆಧರಿಸಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕಳೆದ ವಾರ ಹಂಪಿಯ ಪವಿತ್ರ ಪುರಂದರ ಮಂಟಪದಲ್ಲಿ ವಿದೇಶಿಗರ ಗುಂಪು ಪಾರ್ಟಿ ಮಾಡುತ್ತಿರುವುದು ಕಂಡು ಬಂದಿತ್ತು.

ಹಂಪಿ ಸ್ಮಾರಕ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ ಯುವಕ      ➤ ಪೊಲೀಸರಿಂದ ಸ್ವಯಂಪ್ರೇರಿತ ಕೇಸು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೊಬ್ಬರ ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com. ಮಡಿಕೇರಿ. ಫೆ.28.  ಚಾಲಕನ ನಿಯಂತ್ರಣ ತಪ್ಪಿ ಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮೇಕೇರಿ ಬಳಿ ವರದಿಯಾಗಿದೆ. ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಕಡೆಯಿಂದ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಗೆ ಲಾರಿಯಲ್ಲಿ ಗೊಬ್ಬರ ಸಾಗಿಸಲಾಗುತ್ತಿತ್ತು. ಮೇಕೇರಿ ಮಸೀದಿ ಬಳಿಯ ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆ ಬದಿಗೆ ಮುಗುಚಿ ಬಿದ್ದಿದೆ. ಗೊಬ್ಬರ ಚೀಲಗಳು ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿದ್ದು,  ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಗೊಬ್ಬರ ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಿಂಟಿಂಗ್ ಏಜೆನ್ಸಿ ಮಾಲೀಕನ ಕೊಚ್ಚಿ ಕೊಲೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಲಕ್ಷಗಟ್ಟಲೆ ಪಡೆದ ಸಾಲ ವಾಪಸ್ ಕೊಡದ ವಿಚಾರದ ಹಿನ್ನೆಲೆಯಲ್ಲಿ ನಡೆದ ಗಲಾಟೆಯಲ್ಲಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಜಾಹೀರಾತು ಪ್ರಿಂಟಿಂಗ್ ಏಜೆನ್ಸಿ ಮಾಲೀಕರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ದಾರುಣ ಘಟನೆ ನಾಯಂಡಹಳ್ಳಿ ಚೆಟ್ಟೀಸ್ ಪೆಟ್ರೋಲ್ ಬಂಕ್ ಹಿಂಭಾಗ ನಿನ್ನೆ ಮಧ್ಯರಾತ್ರಿ ನಡೆದಿದೆ. ಚಂದ್ರ ಲೇಔಟ್ ನ ಮೊದಲ ಹಂತದ ದುರ್ಗಾಪರಮೇಶ್ವರಿ ದೇವಸ್ಥಾನ ಬಳಿಯ ಲಿಯಾಖತ್ ಅಲಿಖಾನ್ (44) ಕೊಲೆಯಾದವರು ಎಂದು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.  

ಪ್ರಿಂಟಿಂಗ್ ಏಜೆನ್ಸಿ ಮಾಲೀಕನ ಕೊಚ್ಚಿ ಕೊಲೆ Read More »

ಕರ್ನಾಟಕ
Scroll to Top