News Kadaba

ಹಾಸ್ಟೆಲ್ ಮೇಲಿಂದ ಹಾರಿ MBBS ವಿದ್ಯಾರ್ಥಿ ಆತ್ಮಹತ್ಯೆ           

(ನ್ಯೂಸ್ ಕಡಬ)newskadaba.com ಬೀದರ್, ಫೆ.28. ಬ್ರಿಮ್ಸ್ ಹಾಸ್ಟೆಲ್ ಮೇಲಿಂದ ಹಾರಿ ಎಂ.ಬಿ.ಬಿ.ಎಸ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.  ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಶ್ರೀರಾಮ್(22) ಎಂದು ಗುರುತಿಸಲಾಗಿದೆ. ಎಂಬಿಬಿಎಸ್‌ ಪ್ರಾಕ್ಟಿಕಲ್ ಎಕ್ಸಾಂ ಭಯದಲ್ಲಿ ಶ್ರೀರಾಮ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತ ಹೇಳಲಾಗುತ್ತಿದೆ. ಆದರೆ, ಮತ್ತೊಂದೆಡೆ ತಂದೆ ಸಾವಿನಿಂದ ಶ್ರೀರಾಮ್ ಮಾನಸಿಕವಾಗಿ ಕುಗ್ಗಿ ಹೋಗಿದ್ದನು ಎಂದು ಹೇಳಲಾಗುತ್ತಿದೆ. ಶ್ರೀರಾಮ್ ಸಾವಿಗೆ ಪೊಲೀಸರ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.  

ಹಾಸ್ಟೆಲ್ ಮೇಲಿಂದ ಹಾರಿ MBBS ವಿದ್ಯಾರ್ಥಿ ಆತ್ಮಹತ್ಯೆ            Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಂದೆ ಹತ್ಯೆಗೆ ಒಂದು ಕೋಟಿ ರೂ. ಸುಪಾರಿ ಕೊಟ್ಟ ಪಾಪಿ ಮಗ    ➤ ಹೆಣದ ಮುಂದೆ ಭಾರಿ ಹೈಡ್ರಾಮಾ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಇಲ್ಲೊಬ್ಬ ಪಾಪಿ ಮಗ ತಂದೆ ಹತ್ಯೆಗೆ ಸುಪಾರಿ ಕೊಟ್ಟಿದ್ದಾನೆ. ಅದು ಬರೋಬ್ಬರಿ ಒಂದು ಕೋಟಿ ರೂಪಾಯಿಗೆ ಎಂದು ವರದಿ ತಿಳಿಸಿದೆ. ತಂದೆಯನ್ನ ಕೊಚ್ಚಿ ಕೊಚ್ಚಿ ಕೊಂದು ಹಾಕ್ತಿದ್ರೆ ಮಗ ನೋಡ್ತಾ ನಿಂತಿದ್ದ. ಉಳಿಸಿಕೊಳ್ಳೋ ಹೈಡ್ರಾಮಾ ಆಡಿದ್ದ. ಆದರೆ ಪೊಲೀಸರ ತನಿಖೆ ಮುಂದೆ ಎಲ್ಲಾ ಬಟಾಬಯಲಾಗಿದೆ.  

ತಂದೆ ಹತ್ಯೆಗೆ ಒಂದು ಕೋಟಿ ರೂ. ಸುಪಾರಿ ಕೊಟ್ಟ ಪಾಪಿ ಮಗ    ➤ ಹೆಣದ ಮುಂದೆ ಭಾರಿ ಹೈಡ್ರಾಮಾ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ-ಕಾಲೇಜು ದೋಚುತ್ತಿದ್ದ ಗ್ಯಾಂಗ್ ಪೊಲೀಸ್ ಬಲೆಗೆ     

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಶಾಲಾ-ಕಾಲೇಜುಗಳನ್ನು ಗುರಿಯಾಗಿಸಿ ಕೊಂಡು ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಮೂವರು ಅಂತರ್ ರಾಜ್ಯ ಕಳ್ಳರನ್ನು ಜ್ಞಾನಭಾರತಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಗಳನ್ನು ತಮಿಳುನಾಡಿನ ಸೇಲಂ ಜಿಲ್ಲೆಯ ನಿವಾಸಿಗಳಾದ ಅಣ್ಣಾ ದೊರೈ (42), ವೀರಮಲೈ ಅಲಿಯಾಸ್ ಕುಮಾರ್ (40) ಮತ್ತು ಬಾಬು (34) ಎಂದು ಗುರುತಿಸಲಾಗಿದೆ ಎನ್ನಲಾಗಿದೆ. ಫೆಬ್ರವರಿ 10 ರಂದು ನಾಗದೇವನಹಳ್ಳಿಯ ವಿಎಸ್‌ಎಸ್ ಶಾಲೆಯಲ್ಲಿ ಕಳ್ಳತನ ನಡೆದಿದ್ದು, ದುಷ್ಕರ್ಮಿಗಳು ರೂ. 5 ಲಕ್ಷ ಮತ್ತು ಕೆಲವು ಎಲೆಕ್ಟ್ರಾನಿಕ್ ವಸ್ತುಗಳನ್ನು ಕದ್ದೊಯ್ದಿದ್ದರು

ಶಾಲಾ-ಕಾಲೇಜು ದೋಚುತ್ತಿದ್ದ ಗ್ಯಾಂಗ್ ಪೊಲೀಸ್ ಬಲೆಗೆ      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಎಸ್ ಐ ನಿಯಮ ಉಲ್ಲಂಘನೆ ➤ ಹಂಪಿ ಸ್ಮಾರಕ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ ಯುವಕನ ವಿರುದ್ದ ಕೇಸು ದಾಖಲು

ನ್ಯೂಸ್ ಕಡಬ) newskadaba.com. ಹೊಸಪೇಟೆ.  ಫೆ.28.  ಹಂಪಿಯ ಹೇಮಕೂಟ ಬೆಟ್ಟದಲ್ಲಿ ಯುವಕರು ಕುಣಿದು ಕುಪ್ಪಳಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 14ನೇ ಶತಮಾನದ ಪುರಾತನ ಸ್ಮಾರಕದ ಮಂಟಪಕ್ಕೆ ಹತ್ತುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ವಿರೋಧ ವ್ಯಕ್ತವಾಗಿ ಹಂಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಿಡಿಯೋ ಆಧರಿಸಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕಳೆದ ವಾರ ಹಂಪಿಯ ಪವಿತ್ರ ಪುರಂದರ ಮಂಟಪದಲ್ಲಿ ವಿದೇಶಿಗರ ಗುಂಪು ಪಾರ್ಟಿ ಮಾಡುತ್ತಿರುವುದು ಕಂಡು ಬಂದಿತ್ತು. ಇಂತಹ

ಎಎಸ್ ಐ ನಿಯಮ ಉಲ್ಲಂಘನೆ ➤ ಹಂಪಿ ಸ್ಮಾರಕ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ ಯುವಕನ ವಿರುದ್ದ ಕೇಸು ದಾಖಲು Read More »

ಕರ್ನಾಟಕ

ಮಗುವಿಗೆ ಜನ್ಮ ನೀಡಿದ ಬಳಿಕ ಎರಡೂ ಕೈ, ಕಾಲುಗಳನ್ನು ಕಳೆದುಕೊಂಡ ಮಹಿಳೆ

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್, ಫೆ.28. ಸಿಸೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಎರಡನೇ ಮಗುವಿಗೆ ಜನ್ಮನೀಡಿದ್ದ ಮಹಿಳೆ, ನಂತರ ಉಂಟಾದ ಸೋಂಕಿನಿಂದಾಗಿ ತನ್ನ ಎರಡೂ ಕೈಗಳು ಮತ್ತು ಕಾಲುಗಳನ್ನು ಕಳೆದುಕೊಂಡ ಆಘಾತಕಾರಿ ಘಟನೆ ಅಮೆರಿಕದ ಟೆಕ್ಸಾಸ್‌ನಲ್ಲಿ ನಡೆದಿದೆ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಸಿ- ಸೆಕ್ಷನ್‌ ಮೂಲಕ ಮಗುವನ್ನು ಹೆತ್ತಿದ್ದ ಮಹಿಳೆ, ಲ್ವಾಡ್ರಪಲ್ ಆಂಪ್ಯುಟೀ (ಎರಡೂ ಕೈ ಮತ್ತು ಕಾಲುಗಳನ್ನು ಕಳೆದುಕೊಂಡ ಸ್ಥಿತಿ) ರೋಗಿಯಾಗಿದ್ದಾರೆ.

ಮಗುವಿಗೆ ಜನ್ಮ ನೀಡಿದ ಬಳಿಕ ಎರಡೂ ಕೈ, ಕಾಲುಗಳನ್ನು ಕಳೆದುಕೊಂಡ ಮಹಿಳೆ Read More »

ರಾಷ್ಟ್ರೀಯ ನ್ಯೂಸ್

➤ ಇನ್ನೂ ಮುಂದೆ ರಾಜ್ಯ ಸರ್ಕಾರಿ ನೌಕರರು ಡಿಸೆಂಬರ್ 31 ರೊಳಗೆ ಕಂಪ್ಯೂಟರ್ ಕಲಿತರೆ ಮಾತ್ರ ಭಡ್ತಿ!

(ನ್ಯೂಸ್ ಕಡಬ) newskadaba.com. ಬೆಂಗಳೂರು .  ಫೆ.28.  ರಾಜ್ಯ ಸರ್ಕಾರಿ ನೌಕರರು ಡಿಸೆಂಬರ್ 31 ರೊಳಗೆ ಕಂಪ್ಯೂಟರ್ ಕಡ್ಡಾಯವಾಗಿ ಕಲಿಯದಿದ್ದರೆ ಹುದ್ದೆಯಲ್ಲಿ ಮುಂಬಡ್ತಿ, ವಾರ್ಷಿಕ ವೇತನ ಭಡ್ತಿ ಇಲ್ಲ ನೀಡಲಾಗುವುದಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗೆ ತಿದ್ದುಪಡಿ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈವರೆಗೆ ಅಧಿಸೂಚನೆ ಹೊರಡಿಸಿದ 10 ವರ್ಷದೊಳಗೆ ಪರೀಕ್ಷೆ ಪಾಸ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಅದಕ್ಕಾಗಿ 2012 ರಲ್ಲೇ ಸರ್ಕಾರ ನಿಯಮ ಜಾರಿಗೊಳಿಸಿತ್ತು.

➤ ಇನ್ನೂ ಮುಂದೆ ರಾಜ್ಯ ಸರ್ಕಾರಿ ನೌಕರರು ಡಿಸೆಂಬರ್ 31 ರೊಳಗೆ ಕಂಪ್ಯೂಟರ್ ಕಲಿತರೆ ಮಾತ್ರ ಭಡ್ತಿ! Read More »

ಕರ್ನಾಟಕ

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನ ಬರ್ಬರ ಹತ್ಯೆ    

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಚೆಟ್ಟೀಸ್ ಪೆಟ್ರೋಲ್ ಬಂಕ್ ಬಳಿಯ ಮನೆಯಲ್ಲಿ ನಡೆದಿದೆ. ಲಿಯಾಖತ್ ಅಲಿಖಾನ್ (44) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ರಾತ್ರಿ ಜಿಮ್ ಗೆ ಹೋಗಿದ್ದ ಲಿಯಾಖತ್ ಅಲಿಖಾನ್ ನಾಪತ್ತೆಯಾಗಿದ್ದ. ಈ ಹಿನ್ನೆಲೆಯಲ್ಲಿ ಲಿಯಾಖತ್ ಅಲಿಖಾನ್ ಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಬಳಿಕ ಬೆಳಗಿನ ಜಾವ ಮತ್ತೊಂದು ಮನೆಯಲ್ಲಿ ಲಿಯಾಕತ್ ಶವವಾಗಿ ಪತ್ತೆ ಆಗಿದ್ದಾನೆ.  

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನ ಬರ್ಬರ ಹತ್ಯೆ     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಗ್ರಾ.ಪಂ ಉಪಚುನಾವಣೆ ➤ ಅನಂತಾಡಿಯಲ್ಲಿ ಕಾಂಗ್ರೆಸ್, ನೆಟ್ಲಮಡ್ನೂರಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.28. ಗ್ರಾ.ಪಂ ಉಪಚುನಾವಣೆಯಲ್ಲಿ ಅನಂತಾಡಿ ಗ್ರಾಮದಲ್ಲಿ ಕಾಂಗ್ರೆಸ್ ಬೆಂಬಲಿತ ಶಶಿಕಲಾ 254 ಮತಗಳನ್ನು ಗಳಿಸಿ ಬಿಜೆಪಿ ಬೆಂಬಲಿತ ಗೀತಾ 242 ಮತಗಳನ್ನು ಗಳಿಸಿದ್ದಾರೆ. ಇಲ್ಲಿ ಕಾಂಗ್ರೆಸ್ ಬೆಂಬಲಿತರು ಖಾತೆ ತೆರೆದಂತಾಗಿದೆ. ನೆಟ್ಲ ಮುಡ್ನೂರಿನಲ್ಲಿ ಬಿಜೆಪಿ ಬೆಂಬಲಿತ ಸುಜಾತ 353 ಮತ ಗಳಿಸಿ ಗೆಲುವು ಸಾಧಿಸಿದರೆ ಕಾಂಗ್ರೆಸ್ ಹರಿಣಾಕ್ಷಿ ಸೋಲು ಕಂಡರು ಎನ್ನಲಾಗಿದೆ.

ಬಂಟ್ವಾಳ: ಗ್ರಾ.ಪಂ ಉಪಚುನಾವಣೆ ➤ ಅನಂತಾಡಿಯಲ್ಲಿ ಕಾಂಗ್ರೆಸ್, ನೆಟ್ಲಮಡ್ನೂರಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು Read More »

ಕರಾವಳಿ

ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಾಮಕಿ      ➤  ಓರ್ವ ಉಗ್ರನ ಎನ್ ಕೌಂಟರ್..!

(ನ್ಯೂಸ್ ಕಡಬ)newskadaba.com ಆವಂತಿಪೋರ, ಫೆ.28. ಜಮ್ಮು-ಕಾಶ್ಮೀರದ ಅವಂತಿಪೋರಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು  ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ವರದಿಯಾಗಿದೆ. ಉಗ್ರನ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಎನ್ ಕೌಂಟರ್ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.  

ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಾಮಕಿ      ➤  ಓರ್ವ ಉಗ್ರನ ಎನ್ ಕೌಂಟರ್..! Read More »

ರಾಷ್ಟ್ರೀಯ ನ್ಯೂಸ್

ವಿದ್ಯುತ್ ತಗುಲಿ ತಾಯಿ-ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ವಿದ್ಯುತ್ ತಗುಲಿ ತಾಯಿ ಮತ್ತು ಆಕೆಯ ನಾಲ್ಕು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಬೆಂಗಳೂರು ಹೊರವಲಯ ಹೊಸ ಕೋಟೆಯಲ್ಲಿ ನಡೆದಿದೆ. ಮೃತರನ್ನು ಜ್ಯೋತಿ (25) ಮತ್ತು ಆಕೆಯ ಮಗ ಜಯಾನಂದ್ ಎಂದು ಗುರುತಿಸಲಾಗಿದೆ. ಗಾರೆ ಕೆಲಸಕ್ಕೆಂದು ಕುಟುಂಬ ಸಮೇತರಾಗಿ ಬಂದಿದ್ದ ಜ್ಯೋತಿ ಹೊಸಕೋಟೆ ತಾಲೂಕಿನ ಕನಕ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಜ್ಯೋತಿ ಅವರು ಭಾನುವಾರ ಮಧ್ಯಾಹ್ನ ಶೌಚಾಲಯದಲ್ಲಿ ನೀರು ಕಾಯಿಸಲು ಬಕೆಟ್ ನಲ್ಲಿ ಹೀಟರ್ ಹಾಕಿದ್ದಾಗ ಶೌಚಾಲಯಕ್ಕೆ ಬಾಲಕ

ವಿದ್ಯುತ್ ತಗುಲಿ ತಾಯಿ-ಮಗು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top