News Kadaba

ಭಾರತ ತಂಡಕ್ಕೆ ಉಪ ನಾಯಕನ ಅಗತ್ಯವಿಲ್ಲ ➤ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ..!

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.28. ಭಾರತ ತಂಡಕ್ಕೆ ಉಪ ನಾಯಕನ ಅಗತ್ಯವಿಲ್ಲ ಎಂದು ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ರವಿಶಾಸ್ತ್ರಿ, ದೇಶೀಯ ಸರಣಿಗೆ ಉಪ ನಾಯಕನ ನೇಮಕ ಅಷ್ಟೊಂದು ಸಮಂಜಸವಲ್ಲ. ನಾಯಕನೇ ಮೈದಾನದಲ್ಲಿ ಎಲ್ಲಾ ಆಟಗಾರರನ್ನು ಸಮಾನಾಗಿ ನೋಡಿಕೊಳ್ಳಬೇಕು. ಉಪ ನಾಯಕ ಜವಾಬ್ದಾರಿಯನ್ನು ವಹಿಸಿ ಯಾರಿಗೂ ಅನಗತ್ಯ ತೊಂದರೆ ನೀಡಬೇಡಿ ಎಂದಿದ್ದಾರೆ.

ಭಾರತ ತಂಡಕ್ಕೆ ಉಪ ನಾಯಕನ ಅಗತ್ಯವಿಲ್ಲ ➤ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ..! Read More »

ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ನಾಳೆಯಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ➤ ಬಹುತೇಕ ಸೇವೆಗಳಲ್ಲಿ ವ್ಯತ್ಯಯ!

(ನ್ಯೂಸ್ ಕಡಬ) newskadaba.com. ಬೆಂಗಳೂರು . ಫೆ.28.  ವೇತನ ಪರಿಷ್ಕರಣೆಗೆ ಆಗ್ರಹಿಸಿ, 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆಯಿಂದ ಅನಿರ್ದಿಷ್ಟಾವಧಿಗೆ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಯಲಿದೆ. ಈ ಬಾರಿಯ ಬಜೆಟ್ ನಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಪ್ರಸ್ತಾಪ ಮಾಡಿಲ್ಲ, ಇದನ್ನು ಖಂಡಿಸಿ ಹೊಸ ಪಿಂಚಣಿ ನೀತಿ  ರದ್ಧತಿಗೆ ಆಗ್ರಹಿಸಿ 5.11 ಲಕ್ಷ ನೌಕರರು ನಾಳೆಯಿಂದ ಅನಿರ್ದಿಷ್ಟಾವಧಿಯವರೆಗೆ ಮುಷ್ಕರ ನಡೆಸಲಿದ್ದಾರೆ. ಇದರಿಂದ ಶಾಲೆ-ಕಾಲೇಜು, ತ್ಯಾಜ್ಯ ವಿಲೇವಾರಿ, ಕಂದಾಯ ಮತ್ತು ಆರೋಗ್ಯ

ರಾಜ್ಯದಲ್ಲಿ ನಾಳೆಯಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ➤ ಬಹುತೇಕ ಸೇವೆಗಳಲ್ಲಿ ವ್ಯತ್ಯಯ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ವಿದ್ಯಾರ್ಥಿನಿಯರಿಗೆ ವಿಷ ಉಣಿಸಿದ ದುಷ್ಕರ್ಮಿಗಳು

(ನ್ಯೂಸ್ ಕಡಬ)newskadaba.com ಇರಾನ್, ಫೆ. 28. ಮಹಿಳೆಯರು ಶಿಕ್ಷಣ ಪಡೆಯುವುದನ್ನು ತಡೆಯುವ ಸಲುವಾಗಿ ಶಾಲಾ ವಿದ್ಯಾರ್ಥಿನಿಯರಿಗೆ ವಿಷ ಉಣಿಸಿದ ಘಟನೆ ಇರಾನ್ನಲ್ಲಿ ವ್ಯಾಪಕವಾಗಿ ನಡೆಯುತ್ತಿವೆ ಎಂದು ವರದಿಯಾಗಿದೆ. ಶರಿಯಾ ಕಠಿಣ ನಿರ್ಬಂಧಗಳನ್ನು ಮಹಿಳೆಯರ ಮೇಲೆ ಹೇರಲು ಇರಾನ್ನಲ್ಲಿ ಪ್ರಯತ್ನಗಳು ನಡೆಯುತ್ತಲೇ ಇದೆ. ಇದೀಗ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೇ ವಿಷ ಉಣಿಸುವ ಹಂತಕ್ಕೂ ಹೋಗಲಾಗಿದೆ.

ಶಾಲಾ ವಿದ್ಯಾರ್ಥಿನಿಯರಿಗೆ ವಿಷ ಉಣಿಸಿದ ದುಷ್ಕರ್ಮಿಗಳು Read More »

ರಾಷ್ಟ್ರೀಯ ನ್ಯೂಸ್

ಕಾರು ಢಿಕ್ಕಿ ಹೊಡೆದು ಮೂರುವರೆ ವರ್ಷದ ಮಗು ಮೃತಪಟ್ಟ ಪ್ರಕರಣ   ➤  ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.28. ಕಾರು ಢಿಕ್ಕಿ ಹೊಡೆದು ಮೂರುವರೆ ವರ್ಷದ ಬಾಲಕಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕಾರು ಚಾಲಕ 20 ವರ್ಷದ ಯುವಕನನ್ನು ಬಂಧಿಸಿದ್ದಾರೆ ದೆಹಲಿ ಪೊಲೀಸರು ಬಂಧಿಸಿದ್ದಾರೆ  ಎನ್ನಲಾಗಿದೆ. ಸಮರ್ಕ್ ಮಲಿಕ್ (20) ಬಂಧಿತ ಚಾಲಕ ಎಂದು ಗುರುತಿಸಲಾಗಿದೆ. ಈತ ಭಾರತೀಯ ವಾಯುಪಡೆಯ ಅಧಿಕಾರಿಯ ಪುತ್ರನೆಂದು ತಿಳಿದು ಬಂದಿದೆ. ಈತ ಚಲಾಯಿಸುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ .  

ಕಾರು ಢಿಕ್ಕಿ ಹೊಡೆದು ಮೂರುವರೆ ವರ್ಷದ ಮಗು ಮೃತಪಟ್ಟ ಪ್ರಕರಣ   ➤  ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಮಾರ್ಚ್ 1 ರಿಂದ ತುರ್ತು ಸೇವೆ ಹೊರತುಪಡಿಸಿ ಇತರ ಸರ್ಕಾರಿ ಸೇವೆ ಸ್ಥಗಿತ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.28. ಮಾರ್ಚ್ 1 ರಿಂದ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ನಡೆಯಲಿದ್ದು, ಈ ಸಂದರ್ಭದಲ್ಲಿ ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಇತರೆ ಎಲ್ಲಾ ಸರ್ಕಾರಿ ಸೇವೆಗಳು ಸ್ಥಗಿತಗೊಳ್ಳಲಿವೆ ಎಂದು ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಆಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಹೇಳಿದರು.   ಉಡುಪಿ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ನಡೆದ, ಜಿಲ್ಲೆಯಲ್ಲಿ ಮಾರ್ಚ್ 1 ರಿಂದ ನಡೆಯುವ ನೌಕರರ ಅರ್ನಿದಿಷ್ಟಾವಧಿ ಮುಷ್ಕರದ ರೂಪು ರೇಷೆ ಕುರಿತ , ಜಿಲ್ಲೆಯ ಸರಕಾರಿ

ಉಡುಪಿ: ಮಾರ್ಚ್ 1 ರಿಂದ ತುರ್ತು ಸೇವೆ ಹೊರತುಪಡಿಸಿ ಇತರ ಸರ್ಕಾರಿ ಸೇವೆ ಸ್ಥಗಿತ Read More »

ಕರಾವಳಿ

ಹಗ್ಗ ಜಗ್ಗಾಟ ಸ್ಪರ್ಧೆಯ ವೇಳೆ ಹೃದಯಾಘಾತ ➤ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com. ಮಂಗಳೂರು .  ಫೆ.28. ಮಂಗಳೂರು  ಬಂಟರ  ಸಂಘದ ವತಿಯಿಂದ  ಏರ್ಪಡಿಸಿದ್ದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ರಿಯಲ್ ಎಸ್ಟೇಟ್  ಉದ್ಯಮಿ ಹೃದಯಾಘಾತದಿಂದ ಮೃತಪಟ್ಟ  ಘಟನೆ ನಡೆದಿದೆ. ಕಾರ್ಯಕಾರಿ ಸಮಿತಿ ಸದಸ್ಯ ಕುಶಲನಾಥ ಶೆಟ್ಟಿ(50) ಮೃತಪಟ್ಟವರು.  ಸಂಘದ ವತಿಯಿಂದ  ಏರ್ಪಡಿಸಿದ್ದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಇವರು ಪಾಲ್ಗೊಂಡಿದ್ದರು. ಸ್ಪರ್ಧೆಯ ಬಳಿಕ ಇವರಿಗೆ ಎದೆನೋವು ಕಾಣಿಸಿಕೊಂಡಿತು. ಅವರು ಅಸ್ಪತ್ರೆಗೆ  ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಹಗ್ಗ ಜಗ್ಗಾಟ ಸ್ಪರ್ಧೆಯ ವೇಳೆ ಹೃದಯಾಘಾತ ➤ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಹೈ ಕೋರ್ಟ್ ಆದೇಶದಂತೆ 15,000 ಶಿಕ್ಷಕರ ಹೊಸ ಪಟ್ಟಿ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಹೈಕೋರ್ಟ್ ಆದೇಶ ದಂತೆ ತಂದೆಯ ಆದಾಯ ಪ್ರಮಾಣ ಪತ್ರ ಸಲ್ಲಿಸಿರುವ ವಿವಾಹಿತ ಮಹಿಳಾ ಅಭ್ಯರ್ಥಿಗಳನ್ನೂ ಪರಿಗಣಿಸಿ 1:1 ಅನುಪಾತದಲ್ಲಿ ಹೊಸ ತಾತ್ಕಾಲಿಕ ಪಟ್ಟಿಯನ್ನು ಸೋಮವಾರ ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ ಎಂದು ವರದಿ ತಿಳಿಸಿದೆ. 15 ಸಾವಿರ ಶಿಕ್ಷಕರ ಹುದ್ದೆಗಳಿಗೆ ಪರೀಕ್ಷೆ ನಡೆಸಿದ್ದ ಶಿಕ್ಷಣ ಇಲಾಖೆಯು 2022ರ ನವೆಂಬರ್ನಲ್ಲಿ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿತ್ತು ಎನ್ನಲಾಗಿದೆ.

ಹೈ ಕೋರ್ಟ್ ಆದೇಶದಂತೆ 15,000 ಶಿಕ್ಷಕರ ಹೊಸ ಪಟ್ಟಿ ಪ್ರಕಟ Read More »

ಕರ್ನಾಟಕ

ಕುಟ್ರುಪ್ಪಾಡಿ ಗ್ರಾ.ಪಂ ಉಪಚುನಾವಣೆ   ➤ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶ್ ಜಯಭೇರಿ

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.28. ಕಡಬ ತಾಲೂಕಿನ ಕುಟ್ರುಪಾಡಿ ಗ್ರಾ.ಪಂ ನ ಬಲ್ಯ ವಾರ್ಡ್ 1ರಲ್ಲಿ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶ್ ರವರು 221 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದು, ಒಟ್ಟು 1055 ಮತಗಳು 750 ಮತಗಳು ಚಲಾವಣೆಯಾಗಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶರವರು 400 ಮತಗಳನ್ನು ಪಡೆದು 179 ಮತಗಳನ್ನು ತನ್ನ ಸಮೀಪದ ಪ್ರತಿಸ್ಪರ್ದಿ ಕರುಣಾಕರ ವಿರುದ್ಧ 221 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ ಎನ್ನಲಾಗಿದೆ.  

ಕುಟ್ರುಪ್ಪಾಡಿ ಗ್ರಾ.ಪಂ ಉಪಚುನಾವಣೆ   ➤ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶ್ ಜಯಭೇರಿ Read More »

ಕರಾವಳಿ

ಲಿಯೋನೆಲ್ ಮೆಸ್ಸಿಗೆ ಅತ್ಯುತ್ತಮ ಫಿಫಾ ಪುರುಷ ಆಟಗಾರ ಪ್ರಶಸ್ತಿ

(ನ್ಯೂಸ್ ಕಡಬ)newskadaba.com ಪ್ಯಾರಿಸ್, ಫೆ.28. ಅರ್ಜೆಂಟೀನಾ ತಂಡದ ನಾಯಕ ಲಿಯೋನೆಲ್ ಮೆಸ್ಸಿ 2022 ರ ಅತ್ಯುತ್ತಮ ಫಿಫಾ ಪುರುಷ ಆಟಗಾರ ಪ್ರಶಸ್ತಿಯನ್ನು ಗೆದ್ದಿದ್ದಾರೆ ಎಂದು ವರದಿ ತಿಳಿಸಿದೆ. ಇದರ ಜೊತೆಗೆ ಸ್ಪೇನ್ನ ಅಲೆಕ್ಸಿಯಾ ಪುಟೆಲ್ಲಾಸ್ 2022 ರ ಅತ್ಯುತ್ತಮ ಮಹಿಳಾ ಆಟಗಾರ್ತಿ ಪ್ರಶಸ್ತಿಯನ್ನು ಉಳಿಸಿಕೊಂಡಿದ್ದಾರೆ. 2022 ರ ಅತ್ಯುತ್ತಮ ಫಿಫಾ ಪುರುಷರ ಆಟಗಾರ ಪ್ರಶಸ್ತಿ ಪ್ಯಾರಿಸ್ ಸೇಂಟ್ ಜರ್ಮೈನ್ (ಪಿಎಸ್ಜಿ) ತಂಡದ ಸಹ ಆಟಗಾರ ಕೈಲಿಯನ್ ಎಂಬಪ್ಪೆ ಮತ್ತು ರಿಯಲ್ ಮ್ಯಾಡ್ರಿಡ್ ನಾಯಕ ಕರೀಮ್ ಬೆಂಜೆಮಾ ನಾಮ

ಲಿಯೋನೆಲ್ ಮೆಸ್ಸಿಗೆ ಅತ್ಯುತ್ತಮ ಫಿಫಾ ಪುರುಷ ಆಟಗಾರ ಪ್ರಶಸ್ತಿ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕದಲ್ಲಿ ಇನ್ನಷ್ಟು ನಗರಗಳಿಗೆ ಎಲೆಕ್ಟ್ರಿಕ್ ಬಸ್ ಸೇವೆ ಆರಂಭ       

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಪರಿಸರ ಸ್ನೇಹಿ ಎಲೆಕ್ಟ್ರಿಕ್‌ ಬಸ್‌ ಸೇವೆ ಆರಂಭಿಸಿರುವ ಕೆ.ಎಸ್‌.ಆರ್‌ಟಿ.ಸಿ ಗೆ ಮಾರ್ಚ್‌ 15ರೊಳಗೆ ಮತ್ತೆ 25 ಬಸ್‌ಗಳು ಸೇರ್ಪಡೆಯಾಗಲಿದ್ದು, ಶೀಘ್ರದಲ್ಲೇ ಬಸ್‌ಗಳನ್ನು ಯಾವ ಮಾರ್ಗಗಳಿಗೆ ನಿಯೋಜಿಸಬೇಕೆನ್ನುವ ಬಗ್ಗೆ ನಿಗಮ ತೀರ್ಮಾನ ಕೈಗೊಳ್ಳಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.   ಕೆಎಸ್‌ಆರ್‌ಟಿಸಿ ಜ.16ರಂದು ಮೊದಲ ಎಲೆಕ್ಟ್ರಿಕ್‌ ಬಸ್‌(ಇವಿ ಪವರ್‌ ಪ್ಲಸ್‌) ಕಾರ್ಯಾಚರಣೆಯನ್ನು ಬೆಂಗಳೂರು-ಮೈಸೂರು ನಡುವೆ ಆರಂಭಿಸಿತ್ತು.    

ಕರ್ನಾಟಕದಲ್ಲಿ ಇನ್ನಷ್ಟು ನಗರಗಳಿಗೆ ಎಲೆಕ್ಟ್ರಿಕ್ ಬಸ್ ಸೇವೆ ಆರಂಭ        Read More »

ಕರ್ನಾಟಕ
Scroll to Top