News Kadaba

ಖಲಿಸ್ತಾನಿ ಉಗ್ರ ಜಾಲದ ಮೇಲೆ ದಾಳಿ ನಡೆಸಿದ NIA ➤ ಆರು ಮಂದಿ ಅರೆಸ್ಟ್

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.23. ದೇಶಾದ್ಯಂತ ಇತ್ತೀಚೆಗೆ ಎನ್.ಐ.ಎ ನಡೆಸಿದ ದಾಳಿಯಲ್ಲಿ 8 ರಾಜ್ಯಗಳ 76 ಸ್ಥಳಗಳಲ್ಲಿ ಒಟ್ಟು 6 ಮಂದಿಯನ್ನು ಬಂಧಿಸಿದೆ. ಬಂಧಿತರ ಪೈಕಿ ಕೆಲವರು ಖಲಿಸ್ತಾನ್ ಭಯೋತ್ಪಾದಕರೊಂದಿಗೆ ಸಂಪರ್ಕದಲ್ಲಿದ್ದವರೂ ಸೇರಿದ್ದಾರೆ ಎಂದು ತನಿಖಾ ಸಂಸ್ಥೆ ಹೇಳಿದೆ. ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿ, ಎನ್ ಸಿಆರ್, ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಎನ್.ಐ.ಎ ದಾಳಿ ನಡೆಸಿತ್ತು. ಈ ವೇಳೆ ಆರು ಮಂದಿಯನ್ನು ಬಂಧಿಸಲಾಗಿದೆ.

ಖಲಿಸ್ತಾನಿ ಉಗ್ರ ಜಾಲದ ಮೇಲೆ ದಾಳಿ ನಡೆಸಿದ NIA ➤ ಆರು ಮಂದಿ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಕಡಬ: ಕಾಡಾನೆ ದಾಳಿಯಿಂದ ಮೃತಪಟ್ಟ ಯಜಮಾನನ ಸಮಾಧಿ ಬಳಿ ನಿತ್ಯ ರೋಧಿಸುತ್ತಿರುವ ನಾಯಿ

(ನ್ಯೂಸ್ ಕಡಬ)newskadaba.com  ಕಡಬ, ಫೆ.23. ನಾಯಿಗೆ ಅನ್ನ ಹಾಕಿದರೆ ಅದು ಎಂದಿಗೂ ಮರೆಯೋದಿಲ್ಲ ಎಂಬ ಮಾತು ವಾಸ್ತವಿಕವಾಗಿ ಸತ್ಯವಾಗಿದ್ದು, ತನಗೆ ತುತ್ತು ಅನ್ನ ನೀಡುತ್ತಿದ್ದ ಯಜಮಾನ ಇಲ್ಲವೆಂಬ ಕೊರಗಿನಲ್ಲಿ ಯಜಮಾನನ ಸಮಾಧಿ ಬಳಿ ನಾಯಿಯ ಮೂಕ ರೋಧನಕ್ಕೆ ಮನಸು ಕರಗುವಂತಾಗಿದೆ. ಕಡಬದ ಮರ್ದಾಳ ಸಮೀಪ ಕಾಡಾನೆ ದಾಳಿಗೆ  ಇಬ್ಬರು ಪ್ರಾಣ ಕಳೆದುಕೊಂಡಿದ್ದರು. ಸಾಮಾಜಿಕ ಕಾರ್ಯಕರ್ತನಾಗಿ ಗುರತಿಸಿಕೊಂಡಿದ್ದ ಮೃತ ರಮೇಶ್ ರೈ  ಆನೆಯಿಂದ ಯುವತಿಯನ್ನು ರಕ್ಷಣೆ ಮಾಡಲು ಹೋಗಿ ತಾನೂ ಬಲಿಯಾಗಿದ್ದರು. ಬಳಿಕ ಅವರ ಅಂತ್ಯ ಸಂಸ್ಕಾರದ ಸ್ಥಳದಲ್ಲೇ ಅವರ ನಾಯಿ

ಕಡಬ: ಕಾಡಾನೆ ದಾಳಿಯಿಂದ ಮೃತಪಟ್ಟ ಯಜಮಾನನ ಸಮಾಧಿ ಬಳಿ ನಿತ್ಯ ರೋಧಿಸುತ್ತಿರುವ ನಾಯಿ Read More »

ಕರಾವಳಿ

ಲಾಡ್ಜ್‌‌ ನಲ್ಲಿ ಅನೈತಿಕ ವೇಶ್ಯಾವಟಿಕೆ ➤ ಇಬ್ಬರು ಮಹಿಳೆ ಸೇರಿ ಮೂವರು ವಶಕ್ಕೆ

(ನ್ಯೂಸ್ ಕಡಬ)newskadaba.com ಮಣಿಪಾಲ, ಫೆ.23. ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ವೊಂದಕ್ಕೆ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆ ಸೇರಿ ಮೂವರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಅನೈತಿಕ ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆದು ಅವರ ವಶದಲ್ಲಿದ್ದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಹೋಟೆಲ್‌‌ನ ಮೇನೇಜರ್‌ ಸಂಪತ್‌ ಕುಮಾರ್‌ ಮತ್ತು ಕೆಲಸಕ್ಕೆ ಇರುವ ಸಂತೋಷ್‌ ಮತ್ತು ದಿನೇಶ್‌ ಇವರು ಹೆಂಗಸರನ್ನು ಅನೈತಿಕ ವೇಶ್ಯವಾಟಿಕೆ ಚಟುವಟಿಕೆ ಮಾಡುವಂತೆ ಈ ರೂಮಿನಲ್ಲಿ ಇರಿಸಿದ್ದಾರೆಂದು ವರದಿಯಾಗಿದೆ.

ಲಾಡ್ಜ್‌‌ ನಲ್ಲಿ ಅನೈತಿಕ ವೇಶ್ಯಾವಟಿಕೆ ➤ ಇಬ್ಬರು ಮಹಿಳೆ ಸೇರಿ ಮೂವರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ನೇಮಕ      

(ನ್ಯೂಸ್ ಕಡಬ)newskadaba.com   ಮಂಗಳೂರು, ಫೆ.23. ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿ.ಸಿ.ಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಪೊಲೀಸ್ ಕಮೀಷನರ್ ಆಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿ.ಐ.ಜಿಯಾಗಿ ವರ್ಗಾವಣೆ ಮಾಡಲಾಗಿದ್ದು, ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾಗಿ ನಿಯೋಜಿಸಿ ಸರ್ಕಾರ ಆದೇಶಿಸಿದೆ.  

ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ನೇಮಕ       Read More »

ಕರಾವಳಿ

ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ವರ್ಗಾವಣೆ         ➤  ರೈಲ್ವೇ ಡಿಐಜಿಯಾಗಿ ನೇಮಿಸಿದ ಸರಕಾರ

(ನ್ಯೂಸ್ ಕಡಬ)newskadaba.com  ಮಂಗಳೂರು, ಫೆ.23. ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸೇರಿ 6 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ. ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆಯ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದೆ. ಇದರ ಜೊತೆಗೆ ಬೆಂಗಳೂರು ಪಶ್ವಿಮ ಸಂಚಾರ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ.  

ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ವರ್ಗಾವಣೆ         ➤  ರೈಲ್ವೇ ಡಿಐಜಿಯಾಗಿ ನೇಮಿಸಿದ ಸರಕಾರ Read More »

ಕರಾವಳಿ

ಕಾನೂನು ಬಾಹಿರ ಶಸ್ತ್ರಾಸ್ತ್ರ ತರಬೇತಿ ➤ ಫ್ರೀಡಂ ಕಮ್ಯೂನಿಟಿ ಹಾಲ್‌ NIA ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.23. ಬೆಳ್ಳಾರೆ ಸಮೀಪದ ನೆಟ್ಟಾರ್ ನಿವಾಸಿ ಪ್ರವೀಣ್ ಅವರ ಹತ್ಯೆಗೆ ಸಂಬಂಧಿಸಿದಂತೆ ನಡೆದ ತನಿಖೆಯ ವೇಳೆ ಕಬಕ ಸಮೀಪದ ಇಡ್ಕಿದು ಗ್ರಾಮದ ಮಿತ್ತೂರು ಎಂಬಲ್ಲಿರುವ ಫ್ರೀಡಂ ಕಮ್ಯೂನಿಟಿ ಹಾಲ್‌ನಲ್ಲಿ ಪಾಪ್ಯುಲರ್‌ ಫ್ರಂಟ್‌ ಅಫ್‌ ಇಂಡಿಯಾದ(ಪಿಎಫ್‌ಐ) ಸದಸ್ಯರಿಗೆ ಅನಧಿಕೃತವಾಗಿ ಭಯೋತ್ಪಾದನೆಗೆ ಸಹಕಾರಿಯಾಗುವಂತಹ ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲಾಗುತ್ತಿದೆ. ಈ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಫ್ರೀಡಂ ಕಮ್ಯೂನಿಟಿ ಹಾಲ್‌ನ್ನು ಸ್ವಾಧೀನ ಪಡಿಸಿಕೊಂಡಿರುವುದಾಗಿ ವರದಿಯಾಗಿದೆ.

ಕಾನೂನು ಬಾಹಿರ ಶಸ್ತ್ರಾಸ್ತ್ರ ತರಬೇತಿ ➤ ಫ್ರೀಡಂ ಕಮ್ಯೂನಿಟಿ ಹಾಲ್‌ NIA ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪತ್ನಿ ಕೊಂದು ವಾಟ್ಸಾಪ್ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ಪತಿ

(ನ್ಯೂಸ್ ಕಡಬ)newskadaba.com  ಚಾಮರಾಜನಗರ, ಫೆ.22. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ವಾಟ್ಸಾಪ್ ಸ್ಟೇಟಸ್ ಹಾಕಿ ಖತರ್ನಾಕ್ ಪತಿಯೊಬ್ಬ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದಿದೆ. ನಾಗಮಲೆಯ ಲಕ್ಷ್ಮಿ ಕೊಲೆಯಾದ ದುರ್ದೈವಿ ಎನ್ನಲಾಗಿದೆ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಎರಭಯ್ಯನ ಹಳ್ಳಿಯ ಮುನಿರಾಜ್ ಎಂಬವರನ್ನು ಮದುವೆಯಾಗಿದ್ದಳು. ಬಳಿಕ ತನ್ನ ಗಂಡನನ್ನು ತೊರೆದು ಬೇರೊಬ್ಬನೊಂದಿಗೆ ನಾಗಮಲೆಯಲ್ಲಿ ವಾಸವಾಗಿದ್ದಳು. ಇದರಿಂದ ಬೇಸತ್ತಿದ್ದ ಗಂಡ ಮುನಿರಾಜ್ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ.  

ಪತ್ನಿ ಕೊಂದು ವಾಟ್ಸಾಪ್ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಕರಾವಳಿಯಲ್ಲಿ ಇದೇ ಮೊದಲ ಬಾರಿಗೆ ಅತಿರುದ್ರ ಮಹಾಯಾಗ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.23.  ಮೊದಲ ಬಾರಿಗೆ 4 ಕೋಟಿ ರೂ. ವೆಚ್ಚದಲ್ಲಿ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ಮತ್ತು ಅತಿರುದ್ರ ಮಹಾಯಾಗ ಸಮಿತಿ ಆಶ್ರಯದಲ್ಲಿ ಶಿವಪಾಡಿ ದೇವಸ್ಥಾನದಲ್ಲಿ ಫೆ. 22 ರಿಂದ ಮಾ.5ರವರೆಗೆ 121 ಋತ್ವಿಜರ ನೇತೃತ್ವದಲ್ಲಿ 11 ಕುಂಡಗಳಲ್ಲಿ 12 ದಿನ ಅತಿರುದ್ರ ಮಹಾಯಾಗ ಜರಗಲಿದೆ. ಅವರು ಶಿವಪಾಡಿ ದೇವಸ್ಥಾನ ದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ವಿವರಿಸಿದರು.

ಉಡುಪಿ: ಕರಾವಳಿಯಲ್ಲಿ ಇದೇ ಮೊದಲ ಬಾರಿಗೆ ಅತಿರುದ್ರ ಮಹಾಯಾಗ Read More »

ಕರಾವಳಿ

ಉಡುಪಿ: ಇಂದಿನಿಂದ ನ್ಯಾಷನಲ್ ಡ್ರ್ಯಾಗನ್ ಬೋಟ್ ಸ್ಪರ್ಧೆ ಆರಂಭ

(ನ್ಯೂಸ್ ಕಡಬ)newskadaba.com  ಉಡುಪಿ, ಫೆ.23. ಕರ್ನಾಟಕದಲ್ಲಿ ಮೊದಲ ಬಾರಿಗೆ ರಾಷ್ಟ್ರಮಟ್ಟದ ಡ್ರ್ಯಾಗನ್ ಬೋಟ್ ಸ್ಪರ್ಧೆ 4 ದಿನಗಳ ಕಾಲ ಉಡುಪಿಯ ಹೇರೂರು ಸೇತುವೆಯ ಬಳಿ ಸುವರ್ಣ ನದಿಯಲ್ಲಿ ನಡೆಯಲಿದೆ. ಇಂಡಿಯನ್ ಕಯಾಕಿಂಗ್ ಆ್ಯಂಡ್ ಕನೋಯಿಂಗ್ ಅಸೋಸಿಯೇಷನ್ ಸಹಯೋಗದಲ್ಲಿ ಉಡುಪಿ ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಯೋಜನೆ ವತಿಯಿಂದ ನಡೆಯುತ್ತಿರುವ ಈ 11ನೇ ರಾಷ್ಟ್ರೀಯ ಡ್ರ್ಯಾಗನ್ ಬೋಟ್ ಚಾಂಪಿಯನ್ ಶಿಪ್ ನಲ್ಲಿ ಹಾಲಿ ಚಾಂಪಿಯನ್ ಕರ್ನಾಟಕವೂ ಸೇರಿದಂತೆ 15 ರಾಜ್ಯಗಳ 700 ಕ್ರೀಡಾ ಪಟುಗಳು ಭಾಗವಹಿಸಲಿದ್ದಾರೆ.  

ಉಡುಪಿ: ಇಂದಿನಿಂದ ನ್ಯಾಷನಲ್ ಡ್ರ್ಯಾಗನ್ ಬೋಟ್ ಸ್ಪರ್ಧೆ ಆರಂಭ Read More »

ಕರಾವಳಿ

ಲಂಚ ಪ್ರಕರಣದಲ್ಲಿ ಪಂಜಾಬ್ ಎಎಪಿ ಶಾಸಕ ಅಮಿತ್ ರತ್ತನ್ ಕೋಟ್ಫಟ್ಟಾ ಬಂಧನ

(ನ್ಯೂಸ್ ಕಡಬ)newskadaba.com ಚಂಢೀಗಡ, ಫೆ. 23. ಪಂಜಾಬ್‌ನ ಬಟಿಂಡಾ ಗ್ರಾಮಾಂತರ ಕ್ಷೇತ್ರದ ಎಎಪಿ ಶಾಸಕ ಅಮಿತ್ ರತ್ತನ್ ಕೋಟ್ಫಟ್ಟಾ ಅವರನ್ನು ಲಂಚ ಪ್ರಕರಣದಲ್ಲಿ ವಿಜಿಲೆನ್ಸ್ ಬ್ಯೂರೋ ಬಂಧಿಸಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅದೇ ಪ್ರಕರಣದಲ್ಲಿ ಪಂಜಾಬ್ ವಿಜಿಲೆನ್ಸ್ ಬ್ಯೂರೋ ಅವರ ಆಪ್ತ ಸಹಾಯಕ ರಶೀಮ್ ಗಾರ್ಗ್ ಅವರನ್ನು ಬಂಧಿಸಿದ ಕೆಲವು ದಿನಗಳ ನಂತರ ಈ ಶಾಸಕರನ್ನು ಬಂಧಿಸಿದೆ.

ಲಂಚ ಪ್ರಕರಣದಲ್ಲಿ ಪಂಜಾಬ್ ಎಎಪಿ ಶಾಸಕ ಅಮಿತ್ ರತ್ತನ್ ಕೋಟ್ಫಟ್ಟಾ ಬಂಧನ Read More »

ರಾಷ್ಟ್ರೀಯ ನ್ಯೂಸ್
Scroll to Top