News Kadaba

ಒಂದೇ ತಿಂಗಳಿನಲ್ಲಿ ರೂ.6.7 ಲಕ್ಷ ದಂಡ ಸಂಗ್ರಹಿಸಿದ ಬಿಎಂಟಿಸಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಫೆ.23. ಸಂಸ್ಥೆಯ ಆದಾಯ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿರುವ ಬಿಎಂಟಿಸಿ, ದಂಡದ ರೂಪದಲ್ಲಿ ಜನವರಿ ಒಂದೇ ತಿಂಗಳಿನಲ್ಲಿ 6.77 ಲಕ್ಷ ರುಪಾಯಿಗಳನ್ನು ಸಂಗ್ರಹಿಸಿದೆ. ಬಿಎಂಟಿಸಿ ಸಂಸ್ಥೆಯ ತನಿಖಾ ತಂಡಗಳು 2023ರ ಜನವರಿ ತಿಂಗಳಿನಲ್ಲಿ ಒಟ್ಟು 16,226 ಟ್ರಿಪ್‌ಗಳನ್ನು ತಪಾಸಣೆ ಮಾಡಿದ್ದು, ಈ ವೇಳೆ 3591 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಮಾಡಿದೆ. ಇದರಿಂದ ಒಟ್ಟು ರೂ. 6,77,190 ದಂಡ ವಸೂಲಿಯಾಗಿದೆ. ಸಂಸ್ಥೆಯ ನಿರ್ವಾಹಕರ ವಿರುದ್ಧ 1,521 ಪ್ರಕರಣಗಳ ದಾಖಲಾಗಿದೆ.  

ಒಂದೇ ತಿಂಗಳಿನಲ್ಲಿ ರೂ.6.7 ಲಕ್ಷ ದಂಡ ಸಂಗ್ರಹಿಸಿದ ಬಿಎಂಟಿಸಿ Read More »

ಕರ್ನಾಟಕ

ಕಾರವಾರ ಬಳಿ ಅಪರೂಪದ ‘ಒಕ್ಕಣ್ಣಿನ ನಾಗರಹಾವು’ ಪತ್ತೆ

(ನ್ಯೂಸ್ ಕಡಬ)newskadaba.com  ಕಾರವಾರ, ಫೆ.23. ಕಾರವಾರ ಸಮೀಪದ ಕದ್ರಾದಲ್ಲಿ ಅಪರೂಪದ ಒಕ್ಕಣ್ಣಿನ ನಾಗರ ಹಾವು ಪತ್ತೆಯಾಗಿದ್ದು, ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ. ಕಾರವಾರ ತಾಲೂಕಿನ ಮಲ್ಲಾಪುರದ ಲಕ್ಷ್ಮೀನಗರದ ಆಕಾಶ ಎನ್.ಚೌಗ್ಲೆ ಎನ್ನುವವರ ಮನೆಯ ಬಳಿ ಈ ಅಪರೂಪದ ಹಾವು ಕಾಣಿಸಿಕೊಂಡಿದೆ. ಕೂಡಲೇ ಚೌಗ್ಲೆ ಅವರು ಕದ್ರಾ ಅರಣ್ಯ ವಿಭಾಗದ ಅರಣ್ಯ ವೀಕ್ಷಕ ಬಿಲಾಲ್ ಶೇಖ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.  

ಕಾರವಾರ ಬಳಿ ಅಪರೂಪದ ‘ಒಕ್ಕಣ್ಣಿನ ನಾಗರಹಾವು’ ಪತ್ತೆ Read More »

ಕರಾವಳಿ

ಮಾ. 2 ಅಥವಾ 3ಕ್ಕೆ ಅಧಿಕಾರಿಗಳಿಂದಲೇ ಬಿಬಿಎಂಪಿ ಬಜೆಟ್‌ ಮಂಡನೆ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.23. ರಾಜ್ಯ ಸರಕಾರದ ಬಜೆಟ್‌ ಮಂಡನೆಯಾದ ಬೆನ್ನಲ್ಲೇ ಬಿಬಿಎಂಪಿಯು 2023-24ನೇ ಸಾಲಿನ ಆಯವ್ಯಯ ಮಂಡಿಸಲು ಬಿರುಸಿನ ತಯಾರಿ ನಡೆಸಿದೆ. ಮಾರ್ಚ್ 2 ಅಥವಾ 3ರಂದು ಬಜೆಟ್‌ ಮಂಡಿಸುವ ಸಾಧ್ಯತೆಗಳಿವೆ. ಪಾಲಿಕೆಯಲ್ಲಿ ಕಳೆದ ಎರಡೂವರೆ ವರ್ಷಗಳಿಂದ ಜನಪ್ರತಿನಿಧಿಗಳ ಆಡಳಿತವಿಲ್ಲ. ಹೀಗಾಗಿ, ಎರಡೂ ವರ್ಷಗಳಿಂದಲೂ ಅಧಿಕಾರಿಗಳೇ ಆಯವ್ಯಯ ಮಂಡಿಸಿ, ಸರಕಾರದಿಂದ ಅನುಮೋದನೆ ಪಡೆದುಕೊಳ್ಳುತ್ತಿದ್ದಾರೆ.

ಮಾ. 2 ಅಥವಾ 3ಕ್ಕೆ ಅಧಿಕಾರಿಗಳಿಂದಲೇ ಬಿಬಿಎಂಪಿ ಬಜೆಟ್‌ ಮಂಡನೆ ಸಾಧ್ಯತೆ Read More »

ಕರ್ನಾಟಕ

ವಸತಿಗೃಹದಲ್ಲಿ ನೇಣು ಬಿಗಿದು ಪ್ರೊಫೆಸರ್‌ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಮಣಿಪಾಲ, ಫೆ.23. ನೇಣು ಬಿಗಿದು ಪ್ರೊಫೆಸರ್‌ ರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದಶರಥ ನಗರದ ಖಾಸಗಿ ವಸತಿಗೃಹದ ನಾಲ್ಕನೇ ಮಹಡಿಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಉತ್ತರಪ್ರದೇಶದ ಅಹ್ಮದ್‌ ಮಿರ್ಜಾ (38) ನೇಣಿಗೆ ಶರಣಾದವರು. ಮೃತಪಟ್ಟು ನಾಲ್ಕು ದಿನ ಕಳೆದಿರಬಹುದು ಎಂದು ಅಂದಾಜಿಸಲಾಗಿದೆ. ಇವರು ಮಣಿಪಾಲದ ಆರ್ಕಿಟೆಕ್‌ ಕಾಲೇಜಿನಲ್ಲಿ ಪ್ರೊಫೆಸರ್‌ ಆಗಿದ್ದರು.    

ವಸತಿಗೃಹದಲ್ಲಿ ನೇಣು ಬಿಗಿದು ಪ್ರೊಫೆಸರ್‌ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

7ನೇ ವೇತನ ಮಧ್ಯಂತರ ವರದಿ ಪಡೆದು ವೇತನ ಮತ್ತು ಭತ್ಯೆಗಳ ಪರಿಷ್ಕರಣೆ     ➤  ಇಂದು ಸಿಎಂ ಬೊಮ್ಮಾಯಿ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.23. 7ನೇ ವೇತನ ಆಯೋಗದಂತೆ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಿಸಿ, ಜಾರಿಗೊಳಿಸುವಂತೆ ರಾಜ್ಯ ಸರ್ಕಾರಿ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಮಾರ್ಚ್ 1ರಿಂದ ಅನಿರ್ಧಿಷ್ಟಾವಧಿಗೆ ಮುಷ್ಕರ ಕೈಗೊಳ್ಳೋದಾಗಿ ಎಚ್ಚರಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ 7ನೇ ವೇತನ ಆಯೋಗದ ಮಧ್ಯಂತರ ವರದಿ ಆದರಿಸಿ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಣೆಗೆ ಮುಂದಾಗಿದೆ ಎನ್ನಲಾಗುತ್ತಿದೆ.  

7ನೇ ವೇತನ ಮಧ್ಯಂತರ ವರದಿ ಪಡೆದು ವೇತನ ಮತ್ತು ಭತ್ಯೆಗಳ ಪರಿಷ್ಕರಣೆ     ➤  ಇಂದು ಸಿಎಂ ಬೊಮ್ಮಾಯಿ ಘೋಷಣೆ Read More »

ಕರ್ನಾಟಕ

ಸಿಸಿಟಿವಿ ನಂಬಿ ಶಂಕಿತನೆಂದು ಕೂಲಿ ಕಾರ್ಮಿಕನನ್ನು ಹೊಡೆದು ಕೊಲೆ

(ನ್ಯೂಸ್ ಕಡಬ)newskadaba.com ತೆಲಂಗಾಣ, ಫೆ.23. ತೆಲಂಗಾಣದ ಮೇಡಕ್ ಜಿಲ್ಲೆಯಲ್ಲಿ ಪೋಲೀಸರ ಕಸ್ಟಡಿ ಚಿತ್ರಹಿಂಸೆಯಿಂದಾಗಿ 36 ವರ್ಷದ ದೈನಂದಿನ ಕೂಲಿ ಕಾರ್ಮಿಕ ಖದೀರ್ ಖಾನ್ ಎಂಬ ವ್ಯಕ್ತಿ ಮೃತಪಟ್ಟಿದ್ದು, ಇದೀಗ ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಮೆಡಕ್‌ ನಲ್ಲಿನ ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬರುವ ಚೈನ್ ಸ್ನಾಚರ್ ಮತ್ತು ಖದೀರ್‌ನ ನಡುವೆ ಸಾಮ್ಯತೆ ಇದ್ದುದ್ದರಿಂದ ಜನವರಿ 29 ರಂದು ಖದೀರ್‌ನನ್ನು ತಪ್ಪಾಗಿ ಗುರುತಿಸಿ ಬಂಧಿಸಲಾಗಿತ್ತು.  

ಸಿಸಿಟಿವಿ ನಂಬಿ ಶಂಕಿತನೆಂದು ಕೂಲಿ ಕಾರ್ಮಿಕನನ್ನು ಹೊಡೆದು ಕೊಲೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಟ್ಲ ಅಕ್ರಮ ಜಾನುವಾರು ಸಾಗಾಟದ ಕಾರು ಪಲ್ಟಿ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com. ವಿಟ್ಲ. ಫೆ.23. ವಿಟ್ಲದ ಕಂಬಳಬೆಟ್ಟು ಮಸೀದಿ ಬಳಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ, ವೇಳೆ ಕಾರೊಂದು ಪಲ್ಟಿಯಾದ ಘಟನೆ ಇಂದು ನಡೆದಿದೆ. ಕಾರೊಂದರಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದು, ಈ ವೇಳೆ ಕಾರು ಪಲ್ಟಿಯಾಗಿ ಬಿದ್ದಿದೆ. ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.

ವಿಟ್ಲ ಅಕ್ರಮ ಜಾನುವಾರು ಸಾಗಾಟದ ಕಾರು ಪಲ್ಟಿ ➤ ಆರೋಪಿಗಳು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪೊಲೀಸ್ ಜೀಪ್     ➤  ಓರ್ವ ಪೊಲೀಸ್‌ ಗೆ ಗಾಯ

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.23. ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ಗಾಯಗೂಂಡ ಘಟನೆ ವಿದ್ಯಾನಗರ ಪಾರೆ ಕಟ್ಟೆಯಲ್ಲಿ ನಡೆದಿದೆ. ವಿದ್ಯಾನಗರ ಠಾಣಾ ಪೊಲೀಸ್ ಬಿಜು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ರಾತ್ರಿ ಗಸ್ತು ಮುಗಿಸಿ ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ. ಜೀಪು ಅಗ್ನಿ ಗಾಯುತಿಯಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.  

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪೊಲೀಸ್ ಜೀಪ್     ➤  ಓರ್ವ ಪೊಲೀಸ್‌ ಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

1 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು ➤ ರೂಪಾಗೆ ಲೀಗಲ್ ನೊಟೀಸ್ ನೀಡಿ ಕೋರ್ಟ್ ಮೆಟ್ಟಿಲೇರಿದ ಅಧಿಕಾರಿ ರೋಹಿಣಿ ಸಿಂಧೂರಿ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.23.  ಕಳೆದ ಕೆಲ ದಿನಗಳಿಂದ ರಾಜ್ಯದ ಇಬ್ಬರು ಮಹಿಳಾ ಅಧಿಕಾರಿಗಳಾದ ಡಿ ರೂಪಾ ಮತ್ತು ರೋಹಿಣಿ ಸಿಂಧೂರಿಯವರಿಗೆ ಸಂಬಂಧಿಸಿದ ಸುದ್ದಿಗಳು ಸಾಕಷ್ಟು ಹೊರಬಿದ್ದಿದೆ. ವೃತ್ತಿಪರ ಮಟ್ಟದಿಂದ ವೈಯಕ್ತಿಕ ಮಟ್ಟಕ್ಕೆ ಇವರಿಬ್ಬರ ಆರೋಪ-ಪ್ರತ್ಯಾರೋಪ ಸಾಗಿ ಇಬ್ಬರಿಗೂ ಸರ್ಕಾರ ಹುದ್ದೆಯನ್ನು ತೋರಿಸದೆ ವರ್ಗಾವಣೆ ಮಾಡಿದೆ. ಇವರಿಬ್ಬರ ಕಿತ್ತಾಟದಲ್ಲಿ ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನೂ ಸರ್ಕಾರ ಬೇರೆ ಇಲಾಖೆಗೆ ವರ್ಗಾಯಿಸಿದೆ. ಇದೀಗ ರೋಹಿಣಿ ಸಿಂಧೂರಿ ಐಪಿಎಸ್ ಅಧಿಕಾರಿ ರೂಪಾ ವಿರುದ್ಧ ಕಾನೂನು ಸಮರಕ್ಕೆ ಕೋರ್ಟ್

1 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು ➤ ರೂಪಾಗೆ ಲೀಗಲ್ ನೊಟೀಸ್ ನೀಡಿ ಕೋರ್ಟ್ ಮೆಟ್ಟಿಲೇರಿದ ಅಧಿಕಾರಿ ರೋಹಿಣಿ ಸಿಂಧೂರಿ Read More »

ಕರ್ನಾಟಕ

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಹಾವೇರಿ, ಫೆ.23. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಸಂಭವಿಸಿದೆ. ತೊಂಡೂರು ಗ್ರಾಮದ ಹನುಮಂತಗೌಡ (55), ಲಲಿತಾ ಪಾಟೀಲ್ (50), ಮಗಳು ನೇತ್ರಾ ಪಾಟೀಲ (22) ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸಾಲ ಮಾಡಿ ಮಗಳ ಮದುವೆ ಮಾಡಿದ್ದು, ಹೀಗಾಗಿ ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.  

ಒಂದೇ ಕುಟುಂಬದ ಮೂವರು ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top