News Kadaba

ಬೆಂಗಳೂರಿನಲ್ಲಿ ವಾಸವಿದ್ದ ಪಾಕಿಸ್ತಾನ ಯುವತಿಯ ಗಡಿಪಾರು

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಫೆ.21. ವ್ಯಕ್ತಿಯನ್ನು ಮದುವೆಯಾವುದಕ್ಕಾಗಿ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಯುವತಿಯನ್ನು ಅವರ ಸ್ವದೇಶಕ್ಕೆ ಗಡಿಪಾರು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಇಕ್ರಾ ಜೀವನಿ ಎಂಬಾಕೆ ಡೇಟಿಂಗ್ ಅಪ್ಲಿಕೇಶನ್ ಮೂಲಕ ಉತ್ತರ ಪ್ರದೇಶದ ಮುಲಾಯಂ ಸಿಂಗ್ ಯಾದವ್‌ನನ್ನು ಜೊತೆ ಸಂಪರ್ಕ ಬೆಳೆಸಿ ತಾನು ಆತನನ್ನು ಮದುವೆಯಾಗುವುದಾಗಿ ಭಾರತ-ನೇಪಾಳ ಗಡಿಯ ಮೂಲಕ ನವೆಂಬರ್ 2022ರಲ್ಲಿ ಬೆಂಗಳೂರಿಗೆ ಬಂದಿದ್ದಳು ಎಂದು ಹೇಳಲಾಗಿತ್ತು.  

ಬೆಂಗಳೂರಿನಲ್ಲಿ ವಾಸವಿದ್ದ ಪಾಕಿಸ್ತಾನ ಯುವತಿಯ ಗಡಿಪಾರು Read More »

ಕರ್ನಾಟಕ

ಕಡಬದಲ್ಲಿ ‘ಆಫರೇಷನ್ ಎಲಿಫೆಂಟ್’; ಸಾಕಾನೆಗಳ ಸಹಕಾರದಲ್ಲಿ ಮುಂದುವರಿದ ಕಾರ್ಯಾಚರಣೆ !     

(ನ್ಯೂಸ್ ಕಡಬ)newskadaba.com ದಕ್ಷಿಣ ಕನ್ನಡ, ಫೆ.21. ಕಡಬ ತಾಲೂಕಿನ‌ ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಅಟ್ಟಹಾಸ ಮೆರೆದಿದ್ದ ಕಾಡಾನೆ ಎರಡು ಜೀವಗಳನ್ನು ಬಲಿ ಪಡೆದಿತ್ತು. ಇದರ ಬೆನ್ನಲ್ಲೆ ಕಾಡಾನೆಗಳನ್ನು‌ ಸೆರೆ ಹಿಡಿಯಲು ಕಡಬ ಭಾಗದಲ್ಲಿ ‘ಆಫರೇಷನ್ ಎಲಿಫೆಂಟ್’ ಕಾರ್ಯಾಚರಣೆ ಆರಂಭವಾಗಿದೆ. ಸಕಲ ಸಿದ್ಧತೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಭಿಮನ್ಯು, ಪ್ರಶಾಂತ್, ಹರ್ಷ, ಕಂಜನ್ ಹಾಗೂ ಮಹೇಂದ್ರ ಕಾಡಾನೆ ಸೆರೆ ಹಿಡಿಯುವುದರಲ್ಲಿ ಕರಗತವಾಗಿವೆ. ಹೀಗಾಗಿ ಈ ಸಾಕಾನೆಗಳು ಕಾರ್ಯಾಚರಣೆಗೆ ಲಗ್ಗೆ ಇಟ್ಟಿವೆ. ಅರಣ್ಯ ಇಲಾಖೆಯ ಸಿಬ್ಬಂದಿಗಳ

ಕಡಬದಲ್ಲಿ ‘ಆಫರೇಷನ್ ಎಲಿಫೆಂಟ್’; ಸಾಕಾನೆಗಳ ಸಹಕಾರದಲ್ಲಿ ಮುಂದುವರಿದ ಕಾರ್ಯಾಚರಣೆ !      Read More »

ಕರಾವಳಿ, ಕ್ರೈಮ್ ನ್ಯೂಸ್

ಟರ್ಕಿಯಲ್ಲಿ ಮತ್ತೆ ಪ್ರಬಲ ಭೂಕಂಪನ      ➤ ಕನಿಷ್ಟ 3 ಮೃತ್ಯು, 213 ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com ಟರ್ಕಿ, ಫೆ.21. ಭೂಕಂಪನ ಪೀಡಿತ ಟರ್ಕಿಯಲ್ಲಿ ಮತ್ತೆ ಪ್ರಬಲ ಭೂಕಂಪನ ಸಂಭವಿಸಿದ್ದು, ಈ ವೇಳೆ ಕನಿಷ್ಠ 3 ಮಂದಿ ಮೃತಪಟ್ಟು, 213 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಟರ್ಕಿಯ ದಕ್ಷಿಣ ಹೈಟಿ ಪ್ರಾಂತ್ಯದಲ್ಲಿ ಎರಡು ಹೊಸ ಭೂಕಂಪಗಳಿಂದ ಮೂವರು ಸಾವನ್ನಪ್ಪಿದ್ದಾರೆ ಮತ್ತು 213 ಮಂದಿ ಗಾಯಗೊಂಡಿದ್ದಾರೆ. ಟರ್ಕಿಯ ಆಂತರಿಕ ಸಚಿವ ಸುಲೇಮಾನ್ ಸೊಯ್ಲು ಅವರನ್ನು ಉಲ್ಲೇಖಿಸಿ ಅನಡೋಲು ಸುದ್ದಿ ಸಂಸ್ಥೆ ಈ ವರದಿ ತಿಳಿಸಿದೆ.  

ಟರ್ಕಿಯಲ್ಲಿ ಮತ್ತೆ ಪ್ರಬಲ ಭೂಕಂಪನ      ➤ ಕನಿಷ್ಟ 3 ಮೃತ್ಯು, 213 ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ವರದಕ್ಷಿಣೆಯಾಗಿ ‘ಹಳೆಯ’ ಪೀಠೋಪಕರಣ ನೀಡಿದಕ್ಕೆ ಮದುವೆ ರದ್ದುಗೊಳಿಸಿದ ವರ..!

(ನ್ಯೂಸ್ ಕಡಬ)newskadaba.com ಹೈದರಾಬಾದ್, ಫೆ.21. ವಧುವಿನ ಮನೆಯವರು ವರದಕ್ಷಿಣೆಯಾಗಿ “ಹಳೆಯ” ಪೀಠೋಪಕರಣಗಳನ್ನು ನೀಡಿದ್ದಾರೆ ಎಂಬ ಕಾರಣಕ್ಕೆ ವರ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಬಸ್ ಚಾಲಕನಾಗಿ ಕೆಲಸ ಮಾಡುತ್ತಿರುವ ವರ ಭಾನುವಾರ ನಡೆಯಬೇಕಿದ್ದ ಮದುವೆಗೆ ಬಾರದ ಹಿನ್ನೆಲೆಯಲ್ಲಿ ವಧುವಿನ ತಂದೆ ದೂರು ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವರದಕ್ಷಿಣೆಯಾಗಿ ‘ಹಳೆಯ’ ಪೀಠೋಪಕರಣ ನೀಡಿದಕ್ಕೆ ಮದುವೆ ರದ್ದುಗೊಳಿಸಿದ ವರ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್ ನಿಲ್ದಾಣದಲ್ಲಿ‌ ನಿಂತಿದ್ದ KSRTC ಬಸ್ಸನ್ನೇ ಕದ್ದ ಖತರ್ನಾಕ್ ಖದೀಮರು..!

(ನ್ಯೂಸ್ ಕಡಬ)newskadaba.com ಕಲಬುರಗಿ, ಫೆ.21. ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸನ್ನೇ ಈ ಖತರ್ನಾಕ್ ಕಳ್ಳರು ಎಗರಿಸಿದ್ದು, ಈ ವಿಚಿತ್ರ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ಮುಂಜಾನೆ 3:30ಕ್ಕೆ ನಡೆದಿದೆ. ತಡರಾತ್ರಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಎನ್ ಈಕೆಆರ್ ಟಿಸಿ ಬಸ್ ಒಂದನ್ನು ಕಳ್ಳರು ನಸುಕಿನ ಜಾವ 3-30ರ ಸುಮಾರಿಗೆ ಕಳ್ಳತನ ಮಾಡಿರುವ ಘಟನೆ ಚಿಂಚೋಳಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಬಸ್ ನಿಲ್ದಾಣದಲ್ಲಿ‌ ನಿಂತಿದ್ದ KSRTC ಬಸ್ಸನ್ನೇ ಕದ್ದ ಖತರ್ನಾಕ್ ಖದೀಮರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೋಹಿಣಿ ಸಿಂಧೂರಿ, ಡಿ.ರೂಪ ಸಹಿತ ಮೂವರು ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪ ನಡುವಿನ ಜಟಾಪಟಿ ಇದೀಗ ಬೀದಿಗೆ ಬಂದಿದ್ದು, ಈ ಹಿನ್ನೆಲೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪ ರವರನ್ನು ಸ್ಥಳ ನಿಯೋಜಿಸದೇ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.

ರೋಹಿಣಿ ಸಿಂಧೂರಿ, ಡಿ.ರೂಪ ಸಹಿತ ಮೂವರು ಅಧಿಕಾರಿಗಳ ವರ್ಗಾವಣೆ Read More »

ಕರ್ನಾಟಕ

ಲಿವ್-ಇನ್ ಹತ್ಯೆ ➤ ಬೆಂಕಿ ಹಚ್ಚಿ ಕೊಲೆಗೈದ ಪ್ರಿಯಕರ!

(ನ್ಯೂಸ್ ಕಡಬ) newskadaba.com. ನವದೆಹಲಿ.  ಫೆ.21. ಶ್ರದ್ಧಾವಾಕರ್ ಹತ್ಯೆ ಪ್ರಕರಣ ಹಸಿರಾಗಿರುವಂತೆಯೇ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೊಂದು ‘ಲಿವ್-ಇನ್ ಹತ್ಯೆ’ ಪ್ರಕರಣ ಬೆಳಕಿಗೆ ಬಂದಿದ್ದು, ತನ್ನ ಪ್ರಿಯತಮೆಯನ್ನು ಪ್ರಿಯಕರ ಬೆಂಕಿ ಹಚ್ಚಿ ಕೊಲೆಗೈದಿದ್ದಾನೆ. ವಾಯವ್ಯ ದೆಹಲಿಯ ಅಮನ್ ವಿಹಾರ್‌ನಲ್ಲಿ ಈ ಘಟನೆ ನಡೆದಿದ್ದು, 28 ವರ್ಷದ ವಿವಾಹಿತ ಮಹಿಳೆಯನ್ನು ಆಕೆಯ ಪ್ರಿಯಕರ ಬೆಂಕಿ ಹಚ್ಚಿ ಕೊಂದು ಹಾಕಿದ್ದಾನೆ. ಫೆಬ್ರವರಿ 11 ರಂದು, ಸುಟ್ಟ ಗಾಯಗಳೊಂದಿಗೆ ಮಹಿಳೆಯನ್ನು ಎಸ್‌ಜಿಎಂ ಆಸ್ಪತ್ರೆಗೆ ದಾಖಲಿಸಿದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಪೊಲೀಸರು ಆಸ್ಪತ್ರೆಗೆ

ಲಿವ್-ಇನ್ ಹತ್ಯೆ ➤ ಬೆಂಕಿ ಹಚ್ಚಿ ಕೊಲೆಗೈದ ಪ್ರಿಯಕರ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಏ.01ರಿಂದ ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ..!     ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.21. ಏ.01ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು ಎಂದು ವರದಿಯಾಗಿದೆ. ಇಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ್ದು, ಮಹಿಳೆಯರಿಗೆ ಗೌರವದ ಜೊತೆಗೆ ಆರ್ಥಿಕವಾಗಿ ಸ್ವಾವಲಂಬಿಯಾಗಲು ಈ ಯೋಜನೆ ರೂಪಿಸಲಾಗಿದೆ. ಮಿನಿ ಸ್ಕೂಲ್ ಬಸ್ ಗಳನ್ನು ಪರಿಚಯಿಸಬೇಕು.

ಏ.01ರಿಂದ ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ..!     ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ದೇಶದಲ್ಲಿ ಶೀಘ್ರದಲ್ಲೇ ಡಿಜಿಟಲ್ ವಹಿವಾಟು ಹೆಚ್ಚಾಗಲಿದೆ ➤ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com. ನವದೆಹಲಿ.  ಫೆ.21. ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ದೇಶದಲ್ಲಿ ಹೆಚ್ಚು ಆದ್ಯತೆಯ ಪಾವತಿ ಕಾರ್ಯವಿಧಾನವಾಗುತ್ತಿರುವುದರಿಂದ ಡಿಜಿಟಲ್ ವಹಿವಾಟು ಶೀಘ್ರದಲ್ಲೇ ನಗದು ವಹಿವಾಟನ್ನು ಮೀರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತದ ಡಿಜಿಟಲ್ ಪಾವತಿ ವಿಧಾನ ಯುಪಿಐ ಮತ್ತು ಸಿಂಗಾಪುರ ದೇಶದ ಪೇನೌ ನಡುವಿನ ಗಡಿಯಾಚೆಗಿನ ಡಿಜಿಟಲ್ ಹಣ ಪಾವತಿ ಸಂಪರ್ಕಕ್ಕೆ ಚಾಲನೆ ನೀಡಿ ಮಾತನಾಡಿದ ಮೋದಿಯವರು, 2022ರಲ್ಲಿ ಯುಪಿಐ ಮೂಲಕ ಸುಮಾರು 2 ಟ್ರಿಲಿಯನ್ ಸಿಂಗಾಪುರ್ ಡಾಲರ್ ಅಂದರೆ ಸುಮಾರು

ದೇಶದಲ್ಲಿ ಶೀಘ್ರದಲ್ಲೇ ಡಿಜಿಟಲ್ ವಹಿವಾಟು ಹೆಚ್ಚಾಗಲಿದೆ ➤ ಪ್ರಧಾನಿ ಮೋದಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವರ್ಷದಿಂದ ವರ್ಷಕ್ಕೆ ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚುತ್ತಿದೆ      ➤ ಆರಗ ಜ್ಞಾನೇಂದ್ರ…!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.21. ವರ್ಷದಿಂದ ವರ್ಷಕ್ಕೆ ರಾಜ್ಯದಲ್ಲಿ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ದಾಖಲಾದ ಪ್ರಕರಣಗಳು ಮತ್ತು ಮಕ್ಕಳ ನಾಪತ್ತೆ ಪ್ರಕರಣಗಳು 2018 ರಿಂದ ಗಣನೀಯವಾಗಿ ಏರಿಕೆ ಕಂಡಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು. ರಾಜ್ಯದಲ್ಲಿ ಪ್ರತಿವರ್ಷ ಪೋಕ್ಸೋ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ವಿಧಾನಪರಿಷತ್​ನಲ್ಲಿ ಪ್ರಶ್ನಿಸಿದ ಎಂಎಲ್​ಸಿ ಗೋವಿಂದರಾಜು ಅವರು ಕಳವಳ ವ್ಯಕ್ತಪಡಿಸಿದರು. 2022ರಲ್ಲಿ 3097 ಪೋಕ್ಸೋ ಪ್ರಕರಣಗಳು, 2021ರಲ್ಲಿ 2863 ಪೋಕ್ಸೋ ಕೇಸ್, 2020ರಲ್ಲಿ 2,166 ಪ್ರಕರಣಗಳು

ವರ್ಷದಿಂದ ವರ್ಷಕ್ಕೆ ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚುತ್ತಿದೆ      ➤ ಆರಗ ಜ್ಞಾನೇಂದ್ರ…! Read More »

ಕರ್ನಾಟಕ
Scroll to Top