News Kadaba

ಬಿಸಿಎ ವಿದ್ಯಾರ್ಥಿಯೋರ್ವ ಐದನೇ ಮಹಡಿಯಿಂದ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.15. ಐದು ಅಂತಸ್ತಿನ ಕಟ್ಟಡದ ಮೇಲಿನಿಂದ ಬಿದ್ದು ಬಿಸಿಎ ಓದುತ್ತಿದ್ದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಆಂಧ್ರಪ್ರದೇಶದ ನೆಲ್ಲೂರು ಮೂಲದ ಸುಚೀರ್ (21) ಐದನೇ ಮಹಡಿಯ ಟೆರೇಸ್‌ಗೆ ನಡೆದುಕೊಂಡು ಹೋಗಿ ಅಲ್ಲಿಂದ ಬಿದ್ದಿದ್ದಾನೆ. ಸುಚೀರ್ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾನೆಯೇ ಅಥವಾ ಜಿಗಿದಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. […]

ಬಿಸಿಎ ವಿದ್ಯಾರ್ಥಿಯೋರ್ವ ಐದನೇ ಮಹಡಿಯಿಂದ ಬಿದ್ದು ಮೃತ್ಯು Read More »

ಕರ್ನಾಟಕ

ಪುತ್ತೂರು: ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ           ➤ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.15. ಕಾರು ನಿಯಂತ್ರಣ ಕಳೆದುಕೊಂಡು ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು 50 ಅಡಿ ಆಳದ ತೋಟಕ್ಕೆ ಬಿದ್ದು ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಸಂಟ್ಯಾರು ಬಳಿ ನಡೆದಿದೆ. ನಿಡ್ಪಳ್ಳಿ ಗ್ರಾ.ಪಂ.ನ ಬೆಂಬಲಿತ ಸದಸ್ಯ ಮುರಳೀಧರ್‌ ಭಟ್‌ ಮೃತರು ಎಂದು ಗುರುತಿಸಲಾಗಿದೆ. ಇವರು ಬೆಟ್ಟಂಪಾಡಿಯ ದಿಲೀಪ್‌ ಕುಮಾರ್‌ರಾವ್‌, ಶಶಿಕುಮಾರ್‌, ನವನೀತ್‌ ಜೊತೆ ಕಾರಿನಲ್ಲಿ ಬೆಟ್ಟಂಪಾಡಿ ಕಡೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಮುರಳೀಧರ್

ಪುತ್ತೂರು: ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ           ➤ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.14. ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ. ವಿದ್ಯಾರಣ್ಯಾಪುರದ ಎನ್ ಐಟಿ ಜಂಕ್ಷನ್ ಬಳಿ ಅಪಾರ್ಟ್ ಮೆಂಟ್ ನ ಸುಚಿರ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ತಂದೆ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದು, ಸುಚಿರ್, ತಾಯಿ ಜೊತೆ ಬೆಂಗಳೂರಿನಲ್ಲಿ ಕೆಲವು ವರ್ಷಗಳಿಂದ ವಾಸವಾಗಿದ್ದ. ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಖಿನ್ನತೆಯಿಂದ ಬಳುತ್ತಿದ್ದ ಸುಚಿರ್ ಈ ಹಿಂದೆಯೂ ಹಲವು ಬಾರಿ

ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ Read More »

ಕರ್ನಾಟಕ

ಯುವಕನಿಗೆ ಠಾಣೆಗೆ ಕರೆದೊಯ್ದು ಥಳಿತ ಆರೋಪ ➤ ಇಬ್ಬರು ಪೊಲೀಸರು ಅಮಾನತು

(ನ್ಯೂಸ್ ಕಡಬ)newskadaba.com ಮೂಡಿಗೆರೆ, ಫೆ.14. ಯುವಕನನ್ನು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದ ಆರೋಪದ ಮೇಲೆ ಮೂಡಿಗೆರೆ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ‌. ಮೂಡಿಗೆರೆ ಪೊಲೀಸ್ ಠಾಣೆಯ ಪೇದೆಗಳಾದ ವಸಂತ್, ಲೋಹಿತ್ ಅಮಾನತುಗೊಂಡವರಾಗಿದ್ದಾರೆ. ಇದರ ಜೊತೆಗೆ ಮೂಡಿಗೆರೆ ಠಾಣೆಯ ಸಬ್ ಇನ್ ಸ್ಪೆಕ್ಟರ್ ಆದರ್ಶ್ ವಿರುದ್ಧ ಇಲಾಖೆ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ವರದಿಯಾಗಿದೆ. ಕಳ್ಳತನದ ಆರೋಪದ ದೂರಿನನ್ವಯ ಮೂಡಿಗೆರೆ ಠಾಣೆಯ ಪೊಲೀಸರು ದಾರದಹಳ್ಳಿ ಗ್ರಾಮದ ಮಂಜು ಎಂಬವರನ್ನು ಠಾಣೆಗೆ ಕರೆದೊಯ್ದು

ಯುವಕನಿಗೆ ಠಾಣೆಗೆ ಕರೆದೊಯ್ದು ಥಳಿತ ಆರೋಪ ➤ ಇಬ್ಬರು ಪೊಲೀಸರು ಅಮಾನತು Read More »

ಕರ್ನಾಟಕ

ಆರ್​​ಸಿಬಿ ತಂಡಕ್ಕೆ ಕರ್ನಾಟಕದ ಆಟಗಾರ್ತಿ ಶ್ರೇಯಾಂಕ ಪಾಟೀಲ್ ಆಯ್ಕೆ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.14. ಮಹಿಳಾ ಪ್ರೀಮಿಯರ್ ಲೀಗ್ 2023ರ ಹರಾಜಿನಲ್ಲಿ ಆರ್​​ಸಿಬಿ ಫ್ರಾಂಚೈಸಿ ಬಲಿಷ್ಠವಾದ ತಂಡವನ್ನು ಕಟ್ಟಿದೆ. ಸ್ಮೃತಿ ಮಂದಾನ, ಎಲಿಸಾ ಪೆರ್ರಿ, ರಿಚಾ ಘೋಷ್, ರೇಣುಕಾ ಸಿಂಗ್ ಠಾಕೂರ್ ಸೇರಿದಂತೆ ಪ್ರಮುಖ ಆಟಗಾರರು ತಂಡ ಸೇರಿಕೊಂಡಿದ್ದು ತಂಡದ ಬಲವನ್ನು ಹೆಚ್ಚಿಸಿದೆ. ಪ್ರಮುಖ ಆಟಗಾರರ ಜೊತೆ ಆರ್​​ಸಿಬಿ ತಂಡದಲ್ಲಿ ಹಲವು ಯುವ ಆಟಗಾರರು ಸ್ಥಾನ ಪಡೆದುಕೊಂಡಿದ್ದಾರೆ. ಕರ್ನಾಟಕ ಮಹಿಳಾ ತಂಡಕ್ಕಾಗಿ ಆಡಿರುವ ಬೆಂಗಳೂರಿನ ಶ್ರೇಯಾಂಕ ಪಾಟೀಲ್ ಕೂಡ ಆರ್​​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಆರ್​​ಸಿಬಿ ತಂಡಕ್ಕೆ ಕರ್ನಾಟಕದ ಆಟಗಾರ್ತಿ ಶ್ರೇಯಾಂಕ ಪಾಟೀಲ್ ಆಯ್ಕೆ ! Read More »

ಕರ್ನಾಟಕ

ವ್ಹೀಲಿಂಗ್​ ಮಾಡುತ್ತಾ ಹುಡುಗಿಯರ ಮುಂದೆ ಪೋಸ್​ !     ➤ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಯುವಕ

(ನ್ಯೂಸ್ ಕಡಬ)newskadaba.com ತಿರುವನಂತಪುರಂ, ಫೆ.14. ಯುವಕನೊಬ್ಬ ಬೈಕ್​ನಲ್ಲಿ ವ್ಹೀಲಿಂಗ್​ ಮಾಡುತ್ತಾ ಶಾಲಾ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿರುವ ಘಟನೆ ತಿರುವನಂತಪುರಂನ ಕಲ್ಲಂಬಲಮ್​ನಲ್ಲಿ ಭಾನುವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆರೋಪಿ ಯುವಕನನ್ನು 18 ವರ್ಷದ ನೌಫಲ್​ ಎಂದು ಗುರುತಿಸಲಾಗಿದೆ. ಅಪಾಯಕಾರಿ ಡ್ರೈವಿಂಗ್​ ಸಂಬಂಧಿಸಿದಂತೆ ಯುವಕನ ವಿರುದ್ಧ 6 ಪ್ರಕರಣಗಳು ಈ ಹಿಂದೆಯೇ ದಾಖಲಾಗಿವೆ.

ವ್ಹೀಲಿಂಗ್​ ಮಾಡುತ್ತಾ ಹುಡುಗಿಯರ ಮುಂದೆ ಪೋಸ್​ !     ➤ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಯುವಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

3 ಲಕ್ಷ ಕೋಟಿ ಗಾತ್ರದ ದಾಖಲೆಯ ಬಜೆಟ್ ಮಂಡಿಸಲು ಸಜ್ಜಾದ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.14. ಸರ್ಕಾರದ ಬೊಕ್ಕಸಕ್ಕೆ ಅವಗೂ ಮೊದಲೇ ನಿರೀಕ್ಷೆಗೂ ಮೀರಿದ ತೆರಿಗೆ ಸಂಗ್ರಹಣೆಯಾಗಿರುವ ಹಿನ್ನೆಲೆಯಲ್ಲಿ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ದಾಖಲೆಯ ಮೂರು ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಲಿದ್ದಾರೆ. ವಿಧಾನಸೌಧದಲ್ಲಿ ಬೊಮ್ಮಯಿ ಅವರು ಬಿಜೆಪಿ ಸರ್ಕಾರದ ಕೊನೆಯ ಹಾಗೂ ಬಜೆಟ್ ಮಂಡಿಸಲಿದ್ದು, ಅಂದಾಜು 3 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಗೊತ್ತಾಗಿದೆ. ದೇಶದಲ್ಲೇ ಅತಿ ಹೆಚ್ಚು ತೆರಿಗೆ ಸಂದಾಯ ಮಾಡುವ ಮೂರನೇ ಸ್ಥಾನದಲ್ಲಿರುವ ಕರ್ನಾಟಕವು

3 ಲಕ್ಷ ಕೋಟಿ ಗಾತ್ರದ ದಾಖಲೆಯ ಬಜೆಟ್ ಮಂಡಿಸಲು ಸಜ್ಜಾದ ಬೊಮ್ಮಾಯಿ Read More »

ಕರ್ನಾಟಕ

ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟ ➤ ಕಡಬದ ಭಾಸ್ಕರ್ ರಾಷ್ಟ್ರಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ)newskadaba.com ಕಡಬ, ಫೆ.14. ಕೋಲಾರದಲ್ಲಿ ನಡೆದ ರಾಜ್ಯಮಟ್ಟದ 41ನೇ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕಡಬ ತಾಲೂಕು ಐತ್ತೂರು ಗ್ರಾಮದ ಮಾಳ ನಿವಾಸಿ ಭಾಸ್ಕರ್ ಗೌಡರವರು 200 ಮೀ. ಓಟ ಹಾಗೂ ರೀಲೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಭಾಸ್ಕರ ಗೌಡರವರು 200 ಮೀ. ಓಟದಲ್ಲಿ ಪ್ರಥಮ ಹಾಗೂ 400 ಮೀ.ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. 1500 ಮೀ. ಹಾಗೂ 400 ಮೀ.ಓಟದಲ್ಲಿ

ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟ ➤ ಕಡಬದ ಭಾಸ್ಕರ್ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಪುಲ್ವಾಮಾ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್➤ ಇಂಜಿನಿಯರಿಂಗ್ ವಿದ್ಯಾರ್ಥಿಗೆ 5 ವರ್ಷ ಜೈಲು ಶಿಕ್ಷೆ!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.14 ಫೆಬ್ರವರಿ 14, 2019 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬೆಂಗಳೂರಿನ 20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗೆ ಎನ್ಐಎ ವಿಶೇಷ ನ್ಯಾಯಾಲಯವು ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಎನ್‌ಐಎ ನ್ಯಾಯಾಲಯ ಶಿಕ್ಷೆ ವಿಧಿಸಿದ್ದು, 5 ವರ್ಷಗಳ ಸಾಮಾನ್ಯ ಜೈಲು ಶಿಕ್ಷೆಯೊಂದಿಗೆ 10,000 ರೂ. ದಂಡ ವಿಧಿಸಿದೆ. ಎಚ್ ಆರ್ ಬಿಆರ್ ಲೇಔಟ್ ನಿವಾಸಿ ಫೈಜ್ ರಶೀದ್ ಎಂಬಾತನೇ ಶಿಕ್ಷೆಗೆ ಗುರಿಯಾಗಿರುವ ವಿದ್ಯಾರ್ಥಿ.

ಪುಲ್ವಾಮಾ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್➤ ಇಂಜಿನಿಯರಿಂಗ್ ವಿದ್ಯಾರ್ಥಿಗೆ 5 ವರ್ಷ ಜೈಲು ಶಿಕ್ಷೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಡಿದ ಮತ್ತಿನಲ್ಲಿ ಕಟ್ಟಡದಿಂದ ಜಿಗಿದು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳಗಾವಿ, ಫೆ.14. ಕುಡಿದ ಮತ್ತಿನಲ್ಲಿ ಯುವಕನೊಬ್ಬ ಕಟ್ಟಡದ 3ನೇ ಮಹಡಿಯಿಂದ ಜಿಗಿದು ಮೃತಪಟ್ಟ ಘಟನೆ ಬೆಳಗಾವಿ ನಗರದ ಅಂಬೇಡ್ಕರ್ ರಸ್ತೆಯ ತಮ್ಮಣ್ಣ ಆರ್ಕೆಡ್ ನಲ್ಲಿ ನಡೆದಿದೆ. ಯೋಗೇಶ್ ಶಾನಭಾಗ (28) ಮೃತ ಯುವಕ. ಈತ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಮೂಲದವರು. ಸ್ನೇಹಿತರೊಂದಿಗೆ ಬ್ರೂ 59 ಪಬ್ ಗೆ ಬಂದಿದ್ದು, ಕುಡಿದ ಮತ್ತಿನಲ್ಲಿ ಪಬ್ ನ ಕಿಟಕಿ ಬಳಿ ಬಂದ ಯುವಕ ಏಕಾಏಕಿ ಕಟ್ಟಡದಿಂದ ಕೆಳಗೆ ಜಿಗಿದಿದ್ದಾನೆ.

ಕುಡಿದ ಮತ್ತಿನಲ್ಲಿ ಕಟ್ಟಡದಿಂದ ಜಿಗಿದು ಯುವಕ ಮೃತ್ಯು Read More »

ಕರ್ನಾಟಕ
Scroll to Top