News Kadaba

ಸುಣ್ಣವೆಂದು ಇಲಿ ಪಾಷಾಣ ಬೆರೆಸಿ ವೀಳ್ಯದೆಲೆ ಸೇವಿಸಿದ್ದ ವೃದ್ದೆ ಮೃತ್ಯು

(ನ್ಯೂಸ್ ಕಡಬ)newskadaba.com ಗಂಗೋಳ್ಳಿ, ಫೆ.14. ವೀಳ್ಯದೆಲೆಗೆ ಸುಣ್ಣವೆಂದು ತಿಳಿದು ಇಲಿ ಪಾಷಾಣ ಬೆರೆಸಿ ತಿಂದು ಅಸ್ವಸ್ಥಗೊಂಡಿದ್ದ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಸಾಧು ಪೂಜಾರ್ತಿ(71) ಎಂದು ಗುರುತಿಸಲಾಗಿದೆ. ಫೆ.6ರಂದು ವೀಳ್ಯದೆಲೆಗೆ ಸುಣ್ಣವೆಂದು ತಿಳಿದು ಇಲಿ ಪಾಷಾಣವನ್ನು ಸೇರಿಸಿ ತಿಂದಿದ್ದು, ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅಲ್ಲಿಂದ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರೂ ಫೆ.12ರಂದು ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸುಣ್ಣವೆಂದು ಇಲಿ ಪಾಷಾಣ ಬೆರೆಸಿ ವೀಳ್ಯದೆಲೆ ಸೇವಿಸಿದ್ದ ವೃದ್ದೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್ ➤ ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾಪು, ಫೆ.14. ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಬಳಿ ಸ್ಕೂಟರಿನಲ್ಲಿ ಚಲಾಯಿಸುತ್ತಿದ್ದ ಸಹಸವಾರೆಯ ಎಡ ಕಾಲಿಗೆ ಬಸ್ಸಿನ ಹಿಂಬದಿ ಢಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಸ್ಕೂಟರ್‌ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಬಿದ್ದು ಹಿಂಬದಿಯಿದ್ದ ಯುವತಿ ಮೃತಪಟ್ಟ, ಸವಾರ ಗಾಯಗೊಂಡ ಘಟನೆ ವರದಿಯಾಗಿದೆ.  

ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್ ➤ ಯುವತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮದುವೆಯಾಗುವಂತೆ ಯುವಕ ಮತ್ತವನ ಕುಟುಂಬದಿಂದ ಪೀಡನೆ   ➤ ವಿಷ ಸೇವಿಸಿದ್ದ ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಫೆ.14. ಎಂಸಿಎ ವ್ಯಾಸಂಗ ಪೂರ್ಣಗೊಳಿಸುವ ಕನಸು ಹೊಂದಿದ್ದ ಯುವತಿಯೊಬ್ಬಳು ಈ ಕಾರಣಕ್ಕಾಗಿಯೇ ಮದುವೆ ಮುಂದೂಡಿಕೊಂಡು ಬಂದಿದ್ದು, ಆದರೆ ಸಂಬಂಧಿ ಯುವಕ ಮತ್ತವನ ಕುಟುಂಬಸ್ಥರು ಪದೇ ಪದೇ ಪೀಡನೆ ನೀಡಿದ್ದರಿಂದ ಮನನೊಂದು ವಿಷ ಸೇವಿಸಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಶಿವಮೊಗ್ಗದಲ್ಲಿ ಈ ಘಟನೆ ನಡೆದಿದ್ದು, ಮೂಲತಃ ಕಂಕನಹಳ್ಳಿಯವರಾದ ನಿರ್ಮಲಾಬಾಯಿ ಎಂಬವರು ಸುಮಾ ಎಂಬಾಕೆಯನ್ನು ದತ್ತು ಪಡೆದು ಸಾಕಿಕೊಂಡಿದ್ದರು. ಪತಿ ಮೃತಪಟ್ಟ ಬಳಿಕ ನಿರ್ಮಲ ಬಾಯಿ, ಸುಮಾ ಜೊತೆ ಶಿವಮೊಗ್ಗದ ಬೊಮ್ಮನಕಟ್ಟೆ ಬಿ ಬ್ಲಾಕ್

ಮದುವೆಯಾಗುವಂತೆ ಯುವಕ ಮತ್ತವನ ಕುಟುಂಬದಿಂದ ಪೀಡನೆ   ➤ ವಿಷ ಸೇವಿಸಿದ್ದ ಯುವತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

5, 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ➤ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.14. ರಾಜ್ಯ ಸರಕಾರವು ಇದೇ ಮೊದಲ ಬಾರಿಗೆ ರಾಜ್ಯ ಪಠ್ಯಕ್ರಮವನ್ನು ಅಧ್ಯಯನ ಮಾಡುತ್ತಿರುವ 5 ಮತ್ತು 8ನೆ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಯನ್ನು ನಡೆಸುತ್ತಿದ್ದು, ಮಾದರಿ ಪ್ರಶ್ನೆ ಪತ್ರಿಕೆಗಳನ್ನು https://kseab.karnataka.gov.in/ ನಲ್ಲಿ ಪ್ರಕಟಿಸಿದೆ. 5ನೆ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲೀಷ್, ಗಣಿತ ಮತ್ತು ಪರಿಸರ ಅಧ್ಯಯನ ವಿಷಯಗಳಿಗೆ ಪರೀಕ್ಷೆ ನಡೆಸಲಾಗುತ್ತದೆ. 8ನೆ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲಿಷ್, ಹಿಂದಿ, ಗಣಿತ, ಸಮಾಜ, ವಿಜ್ಞಾನ ವಿಷಯಗಳಿಗೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ಎರಡು ತರಗತಿಯ ಪ್ರತಿ ವಿಷಯದಲ್ಲೂ

5, 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ➤ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ Read More »

ಕರ್ನಾಟಕ

ರಾಜ್ಯದ ಜನತೆಗೆ ಗುಡ್ ನ್ಯೂಸ್   ➤ ಸದ್ಯಕ್ಕೆ ‘ವಿದ್ಯುತ್’ ದರ ಹೆಚ್ಚಳ ಇಲ್ಲ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.14. ಕಳೆದ ಹಲವು ದಿನಗಳಿಂದ ಬೆಲೆ ಏರಿಕೆಗೆ ತತ್ತರಿಸಿದ್ದ ಜನರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿತ್ತು. ವಿದ್ಯುತ್ ದರದಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಇದೀಗ ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ ಮೂಲಕ ರಾಜ್ಯದ ಜನರಿಗೆ ಸದ್ಯಕ್ಕೆ ಬಿಗ್ ರಿಲೀಫ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ಸದ್ಯಕ್ಕೆ ವಿದ್ಯುತ್ ದರ ಏರಿಕೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ನಾಗರಾಜ್ ಯಾದವ್ ವಿಷಯ ಪ್ರಸ್ತಾಪ ಮಾಡಿದ್ದರು.

ರಾಜ್ಯದ ಜನತೆಗೆ ಗುಡ್ ನ್ಯೂಸ್   ➤ ಸದ್ಯಕ್ಕೆ ‘ವಿದ್ಯುತ್’ ದರ ಹೆಚ್ಚಳ ಇಲ್ಲ Read More »

ಕರ್ನಾಟಕ

`SSLC’ ಪೂರ್ವ ಸಿದ್ದತಾ ಪರೀಕ್ಷೆ ಶುಲ್ಕ 50 ರೂ.ಗೆ ಇಳಿಕೆ ➤ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.14. ಪ್ರಸಕ್ತ ಸಾಲಿನಲ್ಲಿ ಎಸ್‌.ಎಸ್.ಎಲ್.ಸಿ ಪೂರ್ವ ಸಿದ್ದತಾ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತಲಾ 60 ರೂ. ಬದಲಾಗಿ 50 ರೂ. ಪರೀಕ್ಷಾ ಶುಲ್ಕ ಪಡೆಯುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ ಹೊರಡಿಸಿದ್ದಾರೆ. ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸುತ್ತಿದ್ದು, ಈ ಕೆಳಕಂಡ ಬದಲಾವಣೆಗಳನ್ನೊಳಗೊಂಡಂತೆ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲು ಸೂಚಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಿಂದ ಪ್ರಶ್ನೆ ಪತ್ರಿಕೆಗಳನ್ನು ಸಿದ್ದಪಡಿಸುವುದರ ಬದಲಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ

`SSLC’ ಪೂರ್ವ ಸಿದ್ದತಾ ಪರೀಕ್ಷೆ ಶುಲ್ಕ 50 ರೂ.ಗೆ ಇಳಿಕೆ ➤ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ Read More »

ಕರ್ನಾಟಕ

➤ಬೆಂಗಳೂರು ಕ್ಯಾಂಟರ್ ಹರಿದು ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.14.  ಕಸ್ತೂರಬಾ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಭಾರತೀನಗರದ ನಿವಾಸಿ ಸುಧಾ (37) ಮೃತಪಟ್ಟ ಮಹಿಳೆಯಾಗಿದ್ದಾರೆ. ಮಗಳನ್ನು ಕಾಲೇಜಿಗೆ ಬಿಟ್ಟು ಮನೆಗೆ ಹಿಂತಿರುಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಸುಧಾ ಅವರು ಪ್ರತೀನಿತ್ಯ ತಮ್ಮ ಮಕ್ಕಳನ್ನು ಪಿಕ್ ಆ್ಯಂಡ್ ಡ್ರಾಪ್ ಮಾಡುತ್ತಿದ್ದರು. ಅಂತೆಯೇ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ದ್ವಿತೀಯ ಪಿಯುತಿ ಓದುತ್ತಿದ್ದ ಮಗಳನ್ನು ಡ್ರಾಪ್ ಮಾಡಿ ಬೆಳಿಗ್ಗೆ ಸುಧಾ ಮರಳುತ್ತಿದ್ದರು. ಈ ವೇಳೆ ಕಸ್ತೂರ ಬಾ ರಸ್ತೆಯಲ್ಲಿ ಅವರ

➤ಬೆಂಗಳೂರು ಕ್ಯಾಂಟರ್ ಹರಿದು ಮಹಿಳೆ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮರ್ಧಾಳ: ರಬ್ಬರ್ ತೋಟ ಬೆಂಕಿಗಾಹುತಿ

(ನ್ಯೂಸ್ ಕಡಬ)newskadaba.com ಮರ್ಧಾಳ, ಫೆ.14. ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಯ ಸಮೀಪದ ರಬ್ಬರ್  ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ರಬ್ಬರ್ ಮರಗಳು ಬೆಂಕಿಗಾಹುತಿಯಾಗಿರುವ ಘಟನೆ  ಮಧ್ಯಾಹ್ನ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಗೆ ಬೆಥನಿ ಜೀವನ್ ಜ್ಯೋತಿ ವಿಶೇಷ  ಶಾಲೆಯ ರಬ್ಬರ್ ತೋಟಕ್ಕೆ ಹಾಗೂ ಪಕ್ಕದಲ್ಲಿರುವ ಕುಕ್ಕೆ ಸುಬ್ರಮಣ್ಯ ಮಠದ ಜಾಗಕ್ಕೆ ವ್ಯಾಪಿಸಿದೆ.

ಮರ್ಧಾಳ: ರಬ್ಬರ್ ತೋಟ ಬೆಂಕಿಗಾಹುತಿ Read More »

ಕರಾವಳಿ

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌ ➤ ಜೈಲುಪಾಲಾಗಿದ್ದ ʼಶಾಫಿ ಬೆಳ್ಳಾರೆಗೆ ಟಿಕೆಟ್ ಘೋಷಿಸಿದ SDPI

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.14. ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ತನಿಕಾ ಸಂಸ್ಥೆಗಳ ವಶದಲ್ಲಿರುವ ಶಾಫಿ ಬೆಳ್ಳಾರೆಗೆ ಮುಂದಿನ ವಿಧಾನಸಭಾ ಚುನಾವಣೆಗೆ ಎಸ್‌ಡಿಪಿಐ (SDPI)ಯಿಂದ ಪುತ್ತೂರು ಟಿಕೆಟ್‌ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ. ಇದೀಗ ರಾಜ್ಯದೆಲ್ಲೆಡೆ ಮುಂದಿನ ವಿಧಾನ ಸಭಾ ಚುನಾವಣೆಗೆ ರಣತಂತ್ರ ರೂಪಿಸುತ್ತಿದ್ದ ಬೆನ್ನಲ್ಲೆ ಎಸ್‌ಡಿಪಿಐಯಿಂದ ಪುತ್ತೂರು ಟಿಕೆಟ್‌ ಘೋಷಣೆ ಮಾಡಿದ್ದು, ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಗೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಶಾಫಿ ಎಸ್‌ಡಿಪಿಐ ಟಿಕೆಟ್‌ ನೀಡಿದೆ.

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌ ➤ ಜೈಲುಪಾಲಾಗಿದ್ದ ʼಶಾಫಿ ಬೆಳ್ಳಾರೆಗೆ ಟಿಕೆಟ್ ಘೋಷಿಸಿದ SDPI Read More »

ಕರಾವಳಿ, ಕ್ರೈಮ್ ನ್ಯೂಸ್

ಲಿಫ್ಟ್ ನಲ್ಲಿ ಸಿಲುಕಿ ಬಾಲಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.14. ಉತ್ತರ ದಿಲ್ಲಿ ಜಿಲ್ಲೆಯ ಹೊರ ವಲಯದ ಬವಾನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೂಲರ್ ಫ್ಯಾಕ್ಟರಿಯೊಂದರ ಲಿಫ್ಟ್‌ ಅಡಿ ಸಿಲುಕಿ 15 ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕನನ್ನು ಲೋಕೇಶ್ ಎಂದು ಗುರುತಿಸಲಾಗಿದ್ದು, ಆತನ ತಾಯಿಯು ಆ ಫ್ಯಾಕ್ಟರಿಯಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಇನ್ನು ಬಾಲಕ ಆಟವಾಡುತ್ತಾ, ಲಿಫ್ಟ್ ಅಡಿಗೆ ಹೋಗಿದ್ದು, ಯಾರೋ ಲಿಫ್ಟ್ ಗಾಗಿ ಗುಂಡಿ ಒತ್ತಿದಾಗ ಕೆಳಗೆ ಬಂದಿರುವ ಎಲಿವೇಟರ್ ಅಡಿಗೆ ಸಿಕ್ಕಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಲಿಫ್ಟ್ ನಲ್ಲಿ ಸಿಲುಕಿ ಬಾಲಕನೋರ್ವ ಮೃತ್ಯು Read More »

ರಾಷ್ಟ್ರೀಯ ನ್ಯೂಸ್
Scroll to Top