News Kadaba

ಇನ್ಮುಂದೆ ಪ್ರಾಧ್ಯಾಪಕ ಹುದ್ದೆಗೆ ಪಿಎಚ್‌.ಡಿ ಕಡ್ಡಾಯ ಇಲ್ಲ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.07. ವಿಶ್ವವಿದ್ಯಾಲಯ ಹಾಗೂ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ನಿಗದಿ ಮಾಡಿದ್ದ ಪಿ.ಎಚ್‌.ಡಿ ಕಡ್ಡಾಯ ನಿಯಮವನ್ನು ತೆಗೆದುಹಾಕಲು ವಿಶ್ವವಿದ್ಯಾಲಯ ಅನುದಾನ ಆಯೋಗ ಮುಂದಾಗಿದೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವೀಧರರು ರಾಷ್ಟ್ರೀಯ ಅರ್ಹತಾ ಪರೀಕ್ಷೆ ಅಥವಾ ಆಯಾ ರಾಜ್ಯದ ಅರ್ಹತಾ ಪರೀಕ್ಷೆ ತೇರ್ಗಡೆಯಾಗಿದ್ದರೆ ಸಾಕಿತ್ತು. ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಹೆಚ್ಚಿಸಲು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಪಿಎಚ್‌.ಡಿ ಕಡ್ಡಾಯಗೊಳಿಸಿತ್ತು ಆದರೆ ಇನ್ಮೇಲೆ ಕಡ್ಡಾಯ ನಿಯಮವನ್ನು ತೆಗೆದುಹಾಕಲು […]

ಇನ್ಮುಂದೆ ಪ್ರಾಧ್ಯಾಪಕ ಹುದ್ದೆಗೆ ಪಿಎಚ್‌.ಡಿ ಕಡ್ಡಾಯ ಇಲ್ಲ..! Read More »

ಕರ್ನಾಟಕ

ಶೀಘ್ರವೇ ವಿದ್ಯುತ್ ದರದಲ್ಲಿ ಏರಿಕೆ ಸಾಧ್ಯತೆ..!    

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.07. ರಾಜ್ಯದ ಜನತೆಗೆ ಮತ್ತೆ ಶಾಕಿಂಗ್ ಸುದ್ದಿ ಇದಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಈಗಾಗಲೇ ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳು ವಿದ್ಯುತ್ ದರ ಪರಿಷ್ಕರಣೆ ಕೋರಿದೆ ಎನ್ನಲಾಗಿದೆ. ಆಕ್ಷೇಪಣೆ, ಸಲಹೆ ಸೂಚನೆಗಳನ್ನು ಪರಿಗಣಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ ತನ್ನ ನಿರ್ಧಾರ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.    

ಶೀಘ್ರವೇ ವಿದ್ಯುತ್ ದರದಲ್ಲಿ ಏರಿಕೆ ಸಾಧ್ಯತೆ..!     Read More »

ಕರ್ನಾಟಕ

ತೆಂಗಿನ ಕಾಯಿ ಕೀಳಲು ಮರ ಹತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.07. ತೆಂಗಿನ ಕಾಯಿ ತೆಗೆಯಲು ಮರ ಹತ್ತಿದ್ದ ವ್ಯಕ್ತಿಯೊಬ್ಬರಿಗೆ ಮರದ ಮೇಲೆಯೇ ಹೃದಯಾಘಾತವಾಗಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮೃತರನ್ನು ನಾರಾಯಣಪ್ಪ (60) ಎಂದು ಗುರುತಿಸಲಾಗಿದೆ.  ತೆಂಗಿನ ಕಾಯಿ ಕೀಳುವಾಗ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ  ಎಂದು ವರದಿ ತಿಳಿಸಿದೆ. ಮರದ ಮೇಲೆ ಇದ್ದ ಅವರನ್ನು ಹಲವು ಬಾರಿ ಕರೆದರೂ ಪ್ರತಿಕ್ರಿಯಿಸದ ಕಾರಣ ತಕ್ಷಣ ಅಗ್ನಿಶಾಮಕದಳ, ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಬಂದು ಮೃತದೇಹ ಕೆಳಗಿಳಿಸಿದ್ದಾರೆ.      

ತೆಂಗಿನ ಕಾಯಿ ಕೀಳಲು ಮರ ಹತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮದ್ಯಪಾನದ ನಶೆಯಲ್ಲಿ ಬಾವಿಗೆ ಹಾರಿ ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಶಿರ್ವ,ಫೆ.07. ಕುಡಿದ ಮತ್ತಿನಲ್ಲಿ ಬಾವಿಗೆ ಹಾರಿದ ಯುವಕ ಮೃತಪಟ್ಟ ಘಟನೆ ವರದಿಯಾಗಿದೆ. ತೊಟ್ಲಗುರಿ ನಿವಾಸಿಯಾದ  ರಾಜು(45) ತನ್ನ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು,ಬಾವಿಗೆ ಹಾರುವ ವೇಳೆ ಮದ್ಯಪಾನ ಮಾಡಿದ್ದರು ಎನ್ನಲಾಗಿದೆ. ಕಾಪುವಿನ ಸಮಾಜ ಸೇವಕ ಸೂರಿ ಶೆಟ್ಟಿ ಹಾಗೂ ಅಶೋಕ್ ಶೆಟ್ಟಿ ಮೃತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದು ಉಡುಪಿಯ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಶಿರ್ವ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.    

ಮದ್ಯಪಾನದ ನಶೆಯಲ್ಲಿ ಬಾವಿಗೆ ಹಾರಿ ಯುವಕನೋರ್ವ ಮೃತ್ಯು Read More »

ಕರಾವಳಿ

ಮಂಗಳೂರು: ವಿಷ ಆಹಾರ ಸೇವನೆ..!      ➤  ನೂರಾರು ಮಕ್ಕಳು ಅಸ್ವಸ್ತ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.07. ನರ್ಸಿಂಗ್ ಕಾಲೇಜಿನ ಹಾಸ್ಟೆಲೊಂದರಲ್ಲಿ ರಾತ್ರಿ ಆಹಾರ ಸೇವಿಸಿದ ಬಳಿಕ ನೂರಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ವಿಷ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದು ತಕ್ಷಣ ವಿದ್ಯಾರ್ಥಿಗಳನ್ನು ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಎಜೆ ಆಸ್ಪತ್ರೆ, ಸಿಟಿ ಆಸ್ಪತ್ರೆ, ಮಂಗಳ ಆಸ್ಪತ್ರೆ, ಫಾದರ್ ಮುಲ್ಲರ್ ಸೇರಿ ವಿವಿಧ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ತುರ್ತು ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದು, ಈ ಕುರಿತು ಹೆಚ್ಚಿನ

ಮಂಗಳೂರು: ವಿಷ ಆಹಾರ ಸೇವನೆ..!      ➤  ನೂರಾರು ಮಕ್ಕಳು ಅಸ್ವಸ್ತ Read More »

ಕರಾವಳಿ

➤ನಗರದ ನಾಯಂಡಳ್ಳಿ ಜಂಕ್ಷನ್ ಗೆ ನಟ ಪುನಿತ್ ರಾಜ್ ಕುಮಾರ್ ಹೆಸರು ನಾಮಕರಣ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.6. ನಗರದ ನಾಯಂಡಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ವರೆಗಿನ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರಿಡಲು ಸರ್ಕಾರ ನಿರ್ಧರಿಸಿದೆ. ಸುಮಾರು 12 ಕಿಲೋ ಮೀಟರ್ ರಸ್ತೆಗೆ ಪುನೀತ್ ರಾಜ್ ಕುಮಾರ್ ರಸ್ತೆ ಎಂದು ಹೆಸರಿಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು. ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ‌ ಹರೀಶ್ ಅವರೊಂದಿಗೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಪುನೀತ್ ರಾಜ್ ಕುಮಾರ್ ಅವರು ನಮ್ಮ ಮಧ್ಯೆ

➤ನಗರದ ನಾಯಂಡಳ್ಳಿ ಜಂಕ್ಷನ್ ಗೆ ನಟ ಪುನಿತ್ ರಾಜ್ ಕುಮಾರ್ ಹೆಸರು ನಾಮಕರಣ Read More »

ಕರ್ನಾಟಕ

ಮಲೆಮಹದೇಶ್ವರ ಬೆಟ್ಟದಲ್ಲಿ ಹಂದಿ ಕಾಟ ➤  ತಮಿಳುನಾಡು ಮೂಲದ ಭಕ್ತನ ಮೇಲೆ ದಾಳಿ    

(ನ್ಯೂಸ್ ಕಡಬ)newskadaba. ಚಾಮರಾಜನಗರ,ಫೆ.06. ಜಿಲ್ಲೆಯ  ಮಲೆಮಹದೇಶ್ವರ ಬೆಟ್ಟದಲ್ಲಿ ಹಂದಿ ಕಾಟ ಶುರುವಾಗಿದೆ. ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಬರುವ ಭಕ್ತರು ರಾತ್ರಿ ವಿಶ್ರಾಂತಿಗಾಗಿ ಮಲಗಿದ್ದಾಗ ಹಂದಿ ದಾಳಿ ನಡೆಸಿದೆ. ಆಹಾರಕ್ಕಾಗಿ ಮನುಷ್ಯರ ಮೇಲೆ ಹಂದಿಗಳು ದಾಳಿ ನಡೆಸಿದ್ದು ತಮಿಳುನಾಡು ಮೂಲದ ಭಕ್ತನಿಗೆ ಗಂಭೀರ ಗಾಯಗಳಾಗಿವೆ. ಘಟನೆ ಸಂಬಂಧ ಭಕ್ತರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಹಂದಿ ದಾಳಿಗೆ ತಮಿಳಿನಾಡು ಮೂಲದ ಭಕ್ತರೊಬ್ಬರು ಗಾಯಗೊಂಡಿದ್ದು, ಕಳೆದ ವರ್ಷ ಕೂಡ ಇದೇ ರೀತಿ ಹಂದಿಗಳು ನಾಲ್ಕು

ಮಲೆಮಹದೇಶ್ವರ ಬೆಟ್ಟದಲ್ಲಿ ಹಂದಿ ಕಾಟ ➤  ತಮಿಳುನಾಡು ಮೂಲದ ಭಕ್ತನ ಮೇಲೆ ದಾಳಿ     Read More »

ಕರ್ನಾಟಕ

ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.06. ಯುವಕ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಶಿವರಾಜ್‌( 33) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ತಿಳಿದುಬಂದಿದೆ. ಶಿವರಾಜ್‌ ಅವರು ಜೂಜಾಟಕ್ಕೆ ರೇಣುಕಾರಾಧ್ಯ ಎಂಬ ವ್ಯಕ್ತಿಯಿಂದ 30 ಸಾವಿರ ರೂ. ಸಾಲ ಪಡೆದಿದ್ದ. ಈ ಮಧ್ಯೆ ರೇಣುಕಾರಾಧ್ಯ ಅವರಿಗೆ ಶಿವರಾಜ್‌ ಹಣ ವಾಪಸ್‌ ನೀಡದಿದ್ದಾಗ, ರೇಣುಕರಾಧ್ಯ ಅವರು ಶಿವರಾಜ್‌ ಅವರ ಬೈಕ್‌ ತೆಗೆದುಕೊಂಡು ಹೋಗಿದ್ದರು. ಇದರಿಂದ ನೊಂದಿದ್ದ ಶಿವರಾಜ್‌ ಸೆಲ್ಪಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ

ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬ್ಯಾಂಕ್ ನಲ್ಲಿ ಕಳವು ಮಾಡಲು ಯತ್ನ ➤  ಆರೋಪಿ ಅರೆಸ್ಟ್.!

(ನ್ಯೂಸ್ ಕಡಬ)newskadaba.com ಹೊಸನಗರ, ಫೆ.06. ಇಲ್ಲಿನ ಪಿಕಾರ್ಡ್ ಬ್ಯಾಂಕ್‌ನಲ್ಲಿ ಕಳವು ಮಾಡಲು ಯತ್ನಿಸಿದ್ದ ಆರೋಪಿಯನ್ನು ಹೊಸನಗರ ಪೊಲೀಸರು ಬಂಧಿಸಿದ್ದಾರೆ. ಬ್ಯಾಂಕ್ ಮುಂಭಾಗದ ಎರಡು ಬಾಗಿಲು ಬೀಗ ಮುರಿದು ಒಳ ನುಗ್ಗಿದ ಆರೋಪಿ, ಅಲ್ಲಿ ಹಣಕ್ಕಾಗಿ ಹುಡುಕಾಡುತ್ತಿರುವಾಗ ಶಬ್ದ ಕೇಳಿ ಅಕ್ಕ ಪಕ್ಕದ ಕಾವಲುಗಾರರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪೊಲೀಸರು ಬರುವ ಮುನ್ನವೇ ಆರೋಪಿ ಅಲ್ಲಿಂದ ಓಡಿ ಹೋಗಿದ್ದಾನೆ. ಬ್ಯಾಂಕ್ ಪಿಗ್ಮಿ ಸಂಗ್ರಾಹಕ, ಕಾವಲುಗಾರರ ಸಹಕಾರದಿಂದ ಪೊಲೀಸರು ಹಿಡಿಯಲು ಪ್ರಯತ್ನಿಸಿದರು. ಹೆಲ್ಮೆಟ್‌ ಹಾಕಿಕೊಂಡು ಓಡುತ್ತಿದ್ದ ಆರೋಪಿ ಓಡಿ ಓಡಿ

ಬ್ಯಾಂಕ್ ನಲ್ಲಿ ಕಳವು ಮಾಡಲು ಯತ್ನ ➤  ಆರೋಪಿ ಅರೆಸ್ಟ್.! Read More »

ಕರ್ನಾಟಕ

ಮಹಿಳೆಯೋರ್ವರ ಅಸ್ಥಿಪಂಜರ ಪತ್ತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.06. ಪುಷ್ಪದಾಮಿ ಎಂಬ ಮಹಿಳೆಯ ಮೇಲೆ ಹುಳಿಮಾವು ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲು ಮಾಡಲಾಗಿತ್ತು. ಆದರೆ, ಇದೀಗ ಮಹಿಳೆಯ ಅಸ್ತಿಪಂಜರ ಪತ್ತೆಯಾಗಿದ್ದು, ಕುಟುಂಬಸ್ಥರು ಕೊಲೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ. ಡೆತ್ ಸೀಕ್ರೆಟ್ ಭೇಧಿಸಲು ಇದೀಗ ಪೊಲೀಸರು ಬೆನ್ನತ್ತಿದ್ದಾರೆ.  

ಮಹಿಳೆಯೋರ್ವರ ಅಸ್ಥಿಪಂಜರ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top