News Kadaba

ಝೀರೋ ಟ್ರಾಫಿಕ್ ನಲ್ಲಿ ಹೋದ್ರು ಬೆಂಗಳೂರು ಟ್ರಾಫಿಕ್‌ಗೆ ಬಲಿಯಾದ ಕಂದಮ್ಮ!

(ನ್ಯೂಸ್ ಕಡಬ)newskadaba.com ಹಾಸನ, ಫೆ.04. ಬೆಂಗಳೂರಿನ ಟ್ರಾಫಿಕ್‌ನಿಂದಾಗಿ ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಆಂಬ್ಯುಲೆನ್ಸ್‌ನಲ್ಲೇ ಮೃತಪಟ್ಟ ಘಟನೆ ನೆಲಮಂಗಲದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಬುಲೇರೊ ಹಾಗು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ತಂದೆ ಅಹಮದ್, ತಾಯಿ ರುಕ್ಸಾನಾಗೆ ಗಂಭೀರ ಗಾಯಗಳಾಗಿತ್ತು. ಮಗುವಿಗೂ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಹಾಸನದ ಹಿಮ್ಸ್‌ಗೆ ತಿಪಟೂರು ವೈದ್ಯರು ಕಳಿಸಿದ್ದರು. ಹಾಸನದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಬೆಂಗಳೂರಿಗೆ ಸ್ಥಳಾಂತರಿಸಲು ಯತ್ನಿಸಲಾಗಿತ್ತು. ಆದರೆ ನೆಲಮಂಗಲದಿಂದ ಟ್ರಾಫಿಕ್ ನಡುವೆ ಆಂಬ್ಯುಲೆನ್ಸ್ ಸಿಲುಕಿಕೊಂಡು, […]

ಝೀರೋ ಟ್ರಾಫಿಕ್ ನಲ್ಲಿ ಹೋದ್ರು ಬೆಂಗಳೂರು ಟ್ರಾಫಿಕ್‌ಗೆ ಬಲಿಯಾದ ಕಂದಮ್ಮ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತ್ನಿಯನ್ನು ಕೊಂದು ಮೃತದೇಹ ಹೊಲದಲ್ಲಿ ಹೂತ ಪತಿ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಫೆ.04. ಗಾಜಿಯಾಬಾದ್‌ನಲ್ಲಿ ವ್ಯಕ್ತಿಯೊಬ್ಬ ಅಕ್ರಮ ಸಂಬಂಧ ಶಂಕೆಯಿಂದ ತನ್ನ ಪತ್ನಿಯನ್ನು ಕೊಂದು ಹೊಲದಲ್ಲಿ ಗುಂಡಿ ತೆಗೆದು 30 ಕೆಜಿ ಉಪ್ಪು ಹಾಕಿ ಹೂತು ಅದೇ ಜಾಗದಲ್ಲಿ ರಾಗಿ ಬೇಸಾಯ ಕೂಡ ಮಾಡಿರುವ ಘಟನೆ ನಡೆದಿದೆ. ಆರೋಪಿ ಪತಿ ದಿನೇಶ್ ತನ್ನ ಹೆಂಡತಿ ಅಂಜು ಇದ್ದಕ್ಕಿದ್ದಂತೆ ಎಲ್ಲೋ ಹೋಗಿದ್ದಾಳೆ. ನನಗೆ ಯಾವುದೇ ಸುಳಿವು ನೀಡಿಲ್ಲ ಎಂದು ಭೋಜ್‌ಪುರ ಠಾಣೆಗೆ ಬಂದು ಪೊಲೀಸರಿಗೆ ದೂರು ನೀಡಿದ್ದಾನೆ. ಇನ್ನು ದಿನೇಶ್ ದೂರಿನ ಮೇರೆಗೆ, ಗಾಜಿಯಾಬಾದ್‌ನ ಭೋಜ್‌ಪುರ

ಪತ್ನಿಯನ್ನು ಕೊಂದು ಮೃತದೇಹ ಹೊಲದಲ್ಲಿ ಹೂತ ಪತಿ Read More »

ರಾಷ್ಟ್ರೀಯ ನ್ಯೂಸ್

ಕೊಡಗಿನಲ್ಲಿ ಮತ್ತೆ ಜಾನುವಾರುಗಳ ಮೇಲೆ ದಾಳಿ ನಡೆಸಿದ ಹುಲಿ

(ನ್ಯೂಸ್ ಕಡಬ)newskadaba.com ಕೊಡಗು, ಫೆ.04. ದಕ್ಷಿಣ ಕೊಡಗಿನಲ್ಲಿ ಹುಲಿಗಳ ಹಾವಳಿ ಮುಂದುವರಿದಿದ್ದು, ಜಿಲ್ಲೆಯಾದ್ಯಂತ ಹಲವು ಜಾನುವಾರುಗಳು ದಾಳಿಗೆ ಬಲಿಯಾಗುತ್ತಿರುವುದು ನಿವಾಸಿಗಳನ್ನು ಆತಂಕಕ್ಕೀಡು ಮಾಡಿದೆ. ಪೊನ್ನಂಪೇಟೆ ತಾಲೂಕಿನ ಸಮೀಪದ ಗ್ರಾಮಗಳಲ್ಲಿ ಎರಡು ದಿನಗಳ ಅಂತರದಲ್ಲಿ ಎರಡು ಹಸುಗಳು ಬಲಿಯಾಗಿದ್ದು, ಹುಲಿಯನ್ನು ಹಿಡಿಯುವಂತೆ ಗ್ರಾಮಸ್ಥರು ಈ ಹಿಂದೆ ಅಧಿಕಾರಿಗಳಿಗೆ ಒತ್ತಾಯಿಸಿದ್ದರು. ಪೊನ್ನಂಪೇಟೆ ತಾಲೂಕಿನ ಮಾಯಮುಡಿ ಪಂಚಾಯಿತಿ ವ್ಯಾಪ್ತಿಯ ರುದ್ರಗುಪ್ಪೆಯಲ್ಲಿ ಹಸುವೊಂದರ ಮೇಲೆ ಹುಲಿ ದಾಳಿ ನಡೆಸಿದ್ದು, ಹಸು ಬಲಿಯಾಗಿದೆ. ಈ ಸ್ಥಳದಿಂದ ಕೇವಲ 20 ಕಿ.ಮೀ ದೂರದಲ್ಲಿ, ಹಿಂದಿನ ದಿನ

ಕೊಡಗಿನಲ್ಲಿ ಮತ್ತೆ ಜಾನುವಾರುಗಳ ಮೇಲೆ ದಾಳಿ ನಡೆಸಿದ ಹುಲಿ Read More »

ಕರಾವಳಿ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಎಸ್ಎಸ್ಎಲ್‌ಸಿ ಪಾಸ್ ಅಂಕಗಳನ್ನು 28 ರಿಂದ 20ಕ್ಕೆ ಇಳಿಸಿ ಕರ್ನಾಟಕ ಸರ್ಕಾರಕ್ಕೆ ಸಮಿತಿ ಶಿಫಾರಸು

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.4. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾವಾರು ಉತ್ತೀರ್ಣತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ- II ಥಿಯರಿ ಪರೀಕ್ಷೆಗಳಲ್ಲಿ ಒಟ್ಟು 80 ಅಂಕಗಳ ಪೈಕಿ ಉತ್ತೀರ್ಣ ಅಂಕಗಳನ್ನು ಸದ್ಯದ 28 ಅಂಕಗಳಿಂದ 20 ಅಂಕಗಳಿಗೆ ಇಳಿಸಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮಾಜಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ನೇತೃತ್ವದ ಸಮಿತಿಯು ಶುಕ್ರವಾರ ನಾಲ್ಕು ಮತ್ತು ಐದನೇ ವರದಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿತು. ಆಯೋಗದ ಪ್ರಕಾರ, ಪ್ರಿ-ಯೂನಿವರ್ಸಿಟಿ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಎಸ್ಎಸ್ಎಲ್‌ಸಿ ಪಾಸ್ ಅಂಕಗಳನ್ನು 28 ರಿಂದ 20ಕ್ಕೆ ಇಳಿಸಿ ಕರ್ನಾಟಕ ಸರ್ಕಾರಕ್ಕೆ ಸಮಿತಿ ಶಿಫಾರಸು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಪ್ರತ್ಯೇಕ 5 ಕಳವು ಪ್ರಕರಣ ಭೇದಿಸಿದ ಕೊಡಗು ಪೊಲೀಸರು

(ನ್ಯೂಸ್ ಕಡಬ)newskadaba.com ಕೊಡಗು, ಫೆ.04. ಕೊಡಗು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 5 ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಖದೀಮರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಕುಶಾಲನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಕಳವು ಪ್ರಕರಣ ಭೇದಿಸಿದ ಪೊಲೀಸರಿಗೆ ಅಚ್ಚರಿ ಮೂಡುವಂತೆ ಖದೀಮರು ಐದು ಕಳವು ಪ್ರಕರಣದಲ್ಲಿ ಭಾಗಿಯಾಗಿರುವ ಸತ್ಯ ಬಯಲಾಗಿದೆ ಎಂದು ತಿಳಿದುಬಂದಿದೆ.

ಪ್ರತ್ಯೇಕ 5 ಕಳವು ಪ್ರಕರಣ ಭೇದಿಸಿದ ಕೊಡಗು ಪೊಲೀಸರು Read More »

ಕರಾವಳಿ

ಮಂಗಳೂರು: ಹಾಡಹಗಲೇ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಸಿಬ್ಬಂದಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.04. ಹಾಡಹಗಲೇ ಜ್ಯುವೆಲ್ಲರಿ ಶಾಪ್ಗೆ ನುಗ್ಗಿ ಸಿಬ್ಬಂದಿಯನ್ನ ಚೂರಿ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ‌ಮಂಗಳೂರು ನಗರದ ಹಂಪನಕಟ್ಟೆ ಬಳಿ‌ ನಡೆದಿದೆ. ಹಂಪನಕಟ್ಟೆಯ ಮಂಗಳೂರು ‌ಜ್ಯುವೆಲ್ಲರಿ ಹೆಸರಿನ ಶಾಪ್ ನಲ್ಲಿ ಘಟನೆ ನಡೆದಿದ್ದು, ಜ್ಯುವೆಲ್ಲರಿ ಸಿಬ್ಬಂದಿ, ಅತ್ತಾವರ ನಿವಾಸಿ ರಾಘವೇಂದ್ರ(50) ಹತ್ಯೆಯಾದವರು ಎಂದು ತಿಳಿದುಬಂದಿದೆ.‌ ಕೇಶವ ಆಚಾರ್ಯ ಎಂಬವರಿಗೆ ಸೇರಿದ ಶಾಪ್ ಇದಾಗಿದ್ದು, ಮಾಲೀಕ ‌ಮಧ್ಯಾಹ್ನ ಊಟಕ್ಕೆ ಹೋಗಿದ್ದ ವೇಳೆ ಒಬ್ಬನೇ ಇದ್ದ ಸಿಬ್ಬಂದಿ ರಾಘವೇಂದ್ರ ಮೇಲೆ ದಾಳಿ ನಡೆಸಲಾಗಿದೆ. ಮಾಸ್ಕ್ ಮತ್ತು

ಮಂಗಳೂರು: ಹಾಡಹಗಲೇ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಸಿಬ್ಬಂದಿಯ ಬರ್ಬರ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

➤ತಾಯಿಗೆ ಬೆಂಕಿ ಹಚ್ಚಿದ ನಂತರ ತಂದೆಗೂ ಜೀವ ಬೆದರಿಕೆ ಹಾಕಿದ ದತ್ತು ಪುತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.4. ದತ್ತು ಪುತ್ರನೊಬ್ಬ ತನ್ನ ತಾಯಿಯನ್ನು ಸುಟ್ಟುಹಾಕಿದ್ದು, ತನ್ನ ತಂದೆಗೂ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆತನನ್ನು ಬಂಧಿಸಲಾಗಿದೆ. ಆರೋಪಿಯನ್ನು ಉತ್ತಮ್ ಕುಮಾರ್ ಎಂದು ಗುರುತಿಸಲಾಗಿದೆ. ಮಂಜುನಾಥ್ ಮತ್ತು ಆತನ ಪತ್ನಿಯು ತಮಗೆ ಮಕ್ಕಳಿಲ್ಲದ ಕಾರಣ ಆರೋಪಿಯನ್ನು ದತ್ತು ಪಡೆದಿದ್ದರು ಎಂದು ತಿಳಿದು ಬಂದಿದೆ. ಆದರೆ, ಉತ್ತಮ್ ಕುಮಾರ್ ಪೋಷಕರಿಗೆ ಅಗೌರವ ತೋರಿ ಅವರ ಮೇಲೆ ದ್ವೇಷ ಬೆಳೆಸಿಕೊಂಡಿದ್ದನು. 2018ರಲ್ಲಿ ತನ್ನ ದತ್ತು ಪಡೆದ ತಾಯಿಯನ್ನು ಸುಟ್ಟು ಹಾಕಿದ್ದ

➤ತಾಯಿಗೆ ಬೆಂಕಿ ಹಚ್ಚಿದ ನಂತರ ತಂದೆಗೂ ಜೀವ ಬೆದರಿಕೆ ಹಾಕಿದ ದತ್ತು ಪುತ್ರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ! ➤ ಮಂಗಳೂರಿನ ಮೂವರು ಯುವಕರು ಮೃತ್ಯು

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾದ, ಫೆ.04. ರಿಯಾದ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕರಾವಳಿ ಮಂಗಳೂರಿನ ಮೂವರು ಸೇರಿ ಒಟ್ಟು ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.‌ ಅಕೀಲ್, ನಾಸಿರ್, ರಿಝ್ವಾನ್, ಶಿಹಾಬ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಖುರೈಸ್ ರಸ್ತೆಯಲ್ಲಿ ಇವರು ತೆರಳುವಾಗ ಒಂಟೆಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತದೇಹಗಳನ್ನು ಅಲ್ ಹಸ್ಸಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಕೀಲ್ ಅವರು ಮಂಗಳೂರಿನ ಬೋಳಾರ್ ನಿವಾಸಿಯಾಗಿದ್ದು, ರಿಝ್ವಾನ್ ಹಳೆಯಂಗಡಿ ಕದಿಕೆ ನಿವಾಸಿ

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ! ➤ ಮಂಗಳೂರಿನ ಮೂವರು ಯುವಕರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮುಲ್ಕಿ: ಅಪಘಾತ ಪ್ರಕರಣ ! ➤ ತುಳು ಸ್ಟ್ಯಾಂಡ್ ಆಫ್ ಕಾಮಿಡಿಯನ್ ಅರ್ಪಿತ್ ಅರೆಸ್ಟ್

(ನ್ಯೂಸ್ ಕಡಬ)newskadaba.com ಮುಲ್ಕಿ, ಫೆ.04. ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿದ್ದ ಆರೋಪಿ ಕಾರು ಚಾಲಕನನ್ನು ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಕಾರು ಸಮೇತ ಬಂಧಿಸಿರುವುದಾಗಿ ವರದಿಯಾಗಿದೆ. ಆರೋಪಿ ಕಾರು ಚಾಲಕನನ್ನು ಹಳೆಯಂಗಡಿ ಇಂದ್ರ ನಗರ ನಿವಾಸಿ ಅರ್ಪಿತ್ ಎಂದು ಗುರುತಿಸಲಾಗಿದ್ದು, ಈತ ತುಳು ಸ್ಟ್ಯಾಂಡ್ ಆಫ್ ಕಾಮಿಡಿ ಯೂಟ್ಯೂಬರ್ ಎಂದು ತಿಳಿದು ಬಂದಿದೆ. ಮಧ್ಯಪ್ರದೇಶದ

ಮುಲ್ಕಿ: ಅಪಘಾತ ಪ್ರಕರಣ ! ➤ ತುಳು ಸ್ಟ್ಯಾಂಡ್ ಆಫ್ ಕಾಮಿಡಿಯನ್ ಅರ್ಪಿತ್ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಇನ್ಮುಂದೆ ‘ಚರ, ಸ್ಥಿರಾಸ್ತಿ ವಿವರ’ ಸಲ್ಲಿಸಲು ಮಾ.31 ಕೊನೆ ದಿನ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.04. ರಾಜ್ಯ ಸರ್ಕಾರಿ ನೌಕರರು ತಮ್ಮ ಚರ, ಸ್ಥಿರಾಸ್ತಿಯ ವಿವರವನ್ನು ಸಲ್ಲಿಸೋದಕ್ಕೆ ಅವಕಾಶ ನೀಡಲಾಗುತ್ತಿತ್ತು. ಇದೀಗ ಕೊನೆ ದಿನವನ್ನು ಬದಲಾವಣೆ ಮಾಡಲಾಗಿದೆ. ಇನ್ಮುಂದೆ ಮಾರ್ಚ್ 31 ಸರ್ಕಾರಿ ನೌಕರರು ಆಸ್ತಿ ವಿವರ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2021ರ ನಿಯಮ 24ರ ಉಪ ನಿಯಮ (2) ಕ್ಕೆ ತಿದ್ದುಪಡಿಯನ್ನು

ಇನ್ಮುಂದೆ ‘ಚರ, ಸ್ಥಿರಾಸ್ತಿ ವಿವರ’ ಸಲ್ಲಿಸಲು ಮಾ.31 ಕೊನೆ ದಿನ ! Read More »

ಕರ್ನಾಟಕ
Scroll to Top