News Kadaba

ಮಂಗಳೂರು : ಬಸ್ ಡಿಕ್ಕಿ ಪ್ರಕರಣ – ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೃತ ದೀಪ್ತಿ ತಾಯಿ

(ನ್ಯೂಸ್‌ ಕಡಬ) newskadaba.com,ಫೆ.06: ನಗರದ ನಂತೂರು ಬಸ್ ನಿಲ್ದಾಣದ ಸಮೀಪ ಬುಧವಾರ ರಾತ್ರಿ ಸಂಭವಿಸಿದ ಹೃದಯ ವಿದ್ರಾವಕ ಅಪಘಾತದಲ್ಲಿ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ದೀಪ್ತಿ (24) ಎಂಬ ಯುವತಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯ ಅತ್ಯಂತ ನೋವಿನ ಅಂಶವೆಂದರೆ, ಸ್ಕೂಟರ್‌ಗೆ ಡಿಕ್ಕಿ ಹೊಡೆದ ಅದೇ ಬಸ್‌ನಲ್ಲಿ ಅವರ ತಾಯಿಯೂ ಪ್ರಯಾಣಿಸುತ್ತಿದ್ದರು… ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕೆಯಾಗಿರುವ ಶಾಲಿನಿ ಅವರ ಐದು ಹೆಣ್ಣುಮಕ್ಕಳಲ್ಲಿ ದೀಪ್ತಿ ಹಿರಿಯವಳು. ಪ್ರೀತಿಯ ಅಕ್ಕನನ್ನು ಕಳೆದುಕೊಂಡ ಕಿರಿಯ ಸಹೋದರಿಯರ ಆಕ್ರಂದನ […]

ಮಂಗಳೂರು : ಬಸ್ ಡಿಕ್ಕಿ ಪ್ರಕರಣ – ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೃತ ದೀಪ್ತಿ ತಾಯಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ

(ನ್ಯೂಸ್‌ ಕಡಬ) newskadaba.com,ಫೆ.06: ಕುಪ್ಪೆಪದವು-ಕಲ್ಲಾಡಿ-ಪೂವಣಿಬೆಟ್ಟು-ಮಂಗಳೂರು ಮಾರ್ಗದಲ್ಲಿ ಬುಧವಾರ ಸಂಭವಿಸಬಹುದಾಗಿದ್ದ ಭಾರೀ ಅಪಘಾತವೊಂದು ಖಾಸಗಿ ಬಸ್ ಚಾಲಕನ ಜಾಗರೂಕತೆ ಮತ್ತು ಸಮಯೋಚಿತ ನಿರ್ಧಾರದಿಂದ ಕೂದಲೆಳೆ ಅಂತರದಲ್ಲಿ ತಪ್ಪಿದೆ.ಕುಪ್ಪೆಪದವಿನಿಂದ ಕಲ್ಲಾಡಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ನೇರಳಿಕೆಯಲ್ಲಿನ ಕೆಳಮುಖ ತಿರುವು ಪಡೆಯುವ ವೇಳೆ ಅಕಸ್ಮಾತ್ತಾಗಿ ಬ್ರೇಕ್ ವೈಫಲ್ಯಕ್ಕೆ ಒಳಗಾಯಿತು. ಪರಿಸ್ಥಿತಿಯ ಗಂಭೀರತೆಯನ್ನು ತಕ್ಷಣವೇ ಅರಿತ ಚಾಲಕ ವಾಸು ಅಲಿಯಾಸ್ ಅಮ್ಮಿ ಅವರು, ಬಸ್ಸನ್ನು ಬಲಭಾಗದಲ್ಲಿರುವ ಗುಡ್ಡದ ಅಂಚಿನ ಚರಂಡಿಯ ಕಡೆಗೆ ತಿರುಗಿಸಿದರು. ಪರಿಣಾಮವಾಗಿ ಬಸ್ಸಿನ ಚಕ್ರಗಳು ಚರಂಡಿಯಲ್ಲಿ ಸಿಲುಕಿಕೊಂಡು ದೊಡ್ಡ

ಮಂಗಳೂರು : ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

WPL 2026 ಫೈನಲ್‌: ಡೆಲ್ಲಿ ಕ್ಯಾಪಿಟಲ್ಸ್‌ನ್ನು 6 ವಿಕೆಟ್‌ಗಳಿಂದ ಮಣಿಸಿದ RCB – ಎರಡನೇ ಬಾರಿ ಚಾಂಪಿಯನ್!

(ನ್ಯೂಸ್‌ ಕಡಬ) newskadaba.com,ಫೆ.06: ಆರ್‌ಸಿಬಿ (RCB) ಅಭಿಮಾನಿಗಳಿಗೆ ಇದೊಂದು ಐತಿಹಾಸಿಕ ಕ್ಷಣ. WPL 2026 ರ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರ್‌ಸಿಬಿ ಬೌಲರ್‌ಗಳ ಸಂಘಟಿತ ದಾಳಿಗೆ ಸಿಲುಕಿ ಸಾಧಾರಣ ಮೊತ್ತಕ್ಕೆ ಕುಸಿಯಿತು. ಆರ್‌ಸಿಬಿಯ ಸ್ಪಿನ್ನರ್‌ಗಳು ಮಧ್ಯದ ಓವರ್‌ಗಳಲ್ಲಿ ವಿಕೆಟ್ ಪಡೆಯುವ ಮೂಲಕ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಶ್ರೇಯಾಂಕಾ ಪಾಟೀಲ್ ಅಥವಾ

WPL 2026 ಫೈನಲ್‌: ಡೆಲ್ಲಿ ಕ್ಯಾಪಿಟಲ್ಸ್‌ನ್ನು 6 ವಿಕೆಟ್‌ಗಳಿಂದ ಮಣಿಸಿದ RCB – ಎರಡನೇ ಬಾರಿ ಚಾಂಪಿಯನ್! Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲಿಫ್ಟ್‌ನಲ್ಲಿ ಅಗ್ನಿ ಅವಘಡ: ಹೈಡ್ರೋಜನ್ ಬಲೂನ್ ಸ್ಫೋಟಗೊಂಡು ಇಬ್ಬರಿಗೆ ಗಾಯ

(ನ್ಯೂಸ್‌ ಕಡಬ) newskadaba.com,ಫೆ.06: ಮುಂಬೈಯಲ್ಲಿನ ವಸತಿ ಕಟ್ಟಡವೊಂದರ ಲಿಫ್ಟ್ ಒಳಗೆ ಹೈಡ್ರೋಜನ್ ತುಂಬಿದ ಬಲೂನ್‌ಗಳು ಸ್ಫೋಟಗೊಂಡಿರುವ ಭಯಾನಕ ಘಟನೆ ಸಿಸಿ ಕ್ಯಾಮರಾ ದೃಶ್ಯದಲ್ಲಿ ದಾಖಲಾಗಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ಬಲೂನ್‌ಗಳಿಂದ ತುಂಬಿದ ಪ್ಲಾಸ್ಟಿಕ್ ಚೀಲವನ್ನು ಹೊತ್ತುಕೊಂಡು ಒಬ್ಬ ವ್ಯಕ್ತಿ ಲಿಫ್ಟ್ ಒಳಗೆ ಪ್ರವೇಶಿಸುತ್ತಿರುವುದು ಕಾಣುತ್ತದೆ. ಅವರೊಂದಿಗೆ ಮತ್ತೊಬ್ಬ ವ್ಯಕ್ತಿ ಟ್ರಾಲಿ ಬ್ಯಾಗ್ ಹಿಡಿದು ಲಿಫ್ಟ್‌ಗೆ ಬರುತ್ತಾರೆ. ಲಿಫ್ಟ್ ಬಾಗಿಲು ಮುಚ್ಚಿದ ತಕ್ಷಣವೇ ಹೈಡ್ರೋಜನ್ ತುಂಬಿದ ಬಲೂನ್‌ಗಳು ಏಕಾಏಕಿ ಸ್ಫೋಟಗೊಂಡಿವೆ. ಸ್ಫೋಟದ ಪರಿಣಾಮ ಬೆಂಕಿ

ಲಿಫ್ಟ್‌ನಲ್ಲಿ ಅಗ್ನಿ ಅವಘಡ: ಹೈಡ್ರೋಜನ್ ಬಲೂನ್ ಸ್ಫೋಟಗೊಂಡು ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೊದಲ ಸಿನಿಮಾದ ಶೂಟಿಂಗ್ ಮುಗಿಸಿದ ಮಹಾಕುಂಭಮೇಳದ ಸುಂದರಿ

(ನ್ಯೂಸ್‌ ಕಡಬ) newskadaba.com,ಫೆ.06: ಮಹಾಕುಂಭಮೇಳದ ವೇಳೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಮೊನಾಲಿನಾ ಭೋಸ್ಲೆ ಅವರು ತಮ್ಮ ಮೊದಲ ಹಿಂದಿ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಕಳೆದ ವರ್ಷ ಮಹಾಕುಂಭಮೇಳದಲ್ಲಿ ಮೊನಾಲಿಸಾ ಭೋಸ್ಲೆ ಅವರು ಮಣಿ ಸರಗಳನ್ನು ಮಾರುತ್ತಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಅವರು ರಾತ್ರೋರಾತ್ರಿ ಜನಪ್ರಿಯತೆ ಪಡೆದುಕೊಂಡರು. ಅದಾದ ಬಳಿಕ ಕೆಲವೇ ದಿನಗಳಲ್ಲಿ ಅವರಿಗೆ ಹಿಂದಿ ಚಿತ್ರರಂಗದಿಂದ ಅವಕಾಶಗಳು ಬಂದಿತ್ತು. ಅವರಿಗೆ ನಾಯಕ ನಟಿಯಾಗುವ ಅವಕಾಶ ಸಿಕ್ಕಿತು. ಇದೀಗ ಅವರು ಶೂಟಿಂಗ್ ಮುಗಿಸಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ. ಮೊನಾಲಿಸಾ

ಮೊದಲ ಸಿನಿಮಾದ ಶೂಟಿಂಗ್ ಮುಗಿಸಿದ ಮಹಾಕುಂಭಮೇಳದ ಸುಂದರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

(ನ್ಯೂಸ್‌ ಕಡಬ) newskadaba.com,ಫೆ.06: ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ/ ಮಾಸ: ಮಾಘ / ಪಕ್ಷ: ಕೃಷ್ಣ / ತಿಥಿ: ಪಂಚಮಿ / ನಕ್ಷತ್ರ: ಹಸ್ತ / ಯೋಗ: ಧೃತಿ / ಕರಣ: ಕೌಲವ ಸೂರ್ಯೋದಯ – 06.46 ಸೂರ್ಯಾಸ್ತ – 6.23 ರಾಹುಕಾಲ – 10.30-12.00 ಯಮಗಂಡ ಕಾಲ – 3.00- 4.30 ಗುಳಿಕ ಕಾಲ – 7.30-9.00 ರಾಶಿಭವಿಷ್ಯ : ಮೇಷ: ಬರುವ ಅವಕಾಶಗಳನ್ನು ಸದುಪ ಯೋಗಪಡಿಸಿಕೊಳ್ಳಿ. ಸುಖ ಭೋಜನ

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,ಫೆ.06: ಪಾಣೆಮಂಗಳೂರು ಸಮೀಪ ಕಂಚಿಕಾರಪೇಟೆ ಬಳಿ ನೇತ್ರಾವತಿ ನದಿಯಲ್ಲಿ ಗುರುವಾರ ಸಂಜೆ ಮೃತದೇಹವೊಂದು ಪತ್ತೆಯಾಗಿದೆ. ವೀರಕಂಭ ಗ್ರಾಮದ ಬಾಯಿಲ ನಿವಾಸಿ ಪ್ರಕಾಶ್ (35) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಂಚಿಕಾರಪೇಟೆ ಸೇತುವೆ ಬಳಿ ನದಿ ಮಧ್ಯೆ ತೇಲಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರ ಗಮನಕ್ಕೆ ತಂದಿದ್ದು, ಕೂಡಲೇ ದೋಣಿ ಸಹಾಯದಿಂದ ಸ್ಥಳೀಯರ ನೆರವಿನಿಂದ ದಡಕ್ಕೆ ತರಲಾಯಿತು. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಫೆ.06: ರಾಜ್ಯದಲ್ಲಿ ಚಳಿಯ ಕಡಿಮೆಯಾಗುತ್ತಿದೆ. ಬಹುತೇಕ ಭಾಗಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಮಾತ್ರ ಚಳಿ ಇರಲಿದ್ದು, ಮಧ್ಯಾಹ್ನದ ಬಿಸಿಲು ನೆತ್ತಿ ಸುಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಛತ್ತೀಸ್‌‍ಗಢ : ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಕ್ಸಲ್‌ ಬಲಿ

(ನ್ಯೂಸ್‌ ಕಡಬ) newskadaba.com,ಫೆ.05 : ಛತ್ತೀಸ್‌‍ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲೀಯನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಜಿಲ್ಲೆಯ ದಕ್ಷಿಣ ಭಾಗದ ಕಾಡಿನಲ್ಲಿ ಇಂದು ಬೆಳಿಗ್ಗೆ 7.30 ಕ್ಕೆ ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲೀಯ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಇನ್ನೂ ಮಧ್ಯಂತರ ಗುಂಡಿನ ಚಕಮಕಿ ನಡೆಯುತ್ತಿದೆ. ಇಲ್ಲಿಯವರೆಗೆ, ಎಕೆ -47 ರೈಫಲ್‌ ಜೊತೆಗೆ ಒಬ್ಬ ನಕ್ಸಲೀಯನ ಮೃತದೇಹವನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು

ಛತ್ತೀಸ್‌‍ಗಢ : ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಕ್ಸಲ್‌ ಬಲಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ SITಯಿಂದ IT ಅಧಿಕಾರಿಗಳ ವಿಚಾರಣೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,ಫೆ.05 ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿಜೆ ರಾಯ್ ಅವರು ತಮ್ಮ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡರಚಿಸಿದೆ. ಆದರೆ, ಈ ಪ್ರಕರಣದಲ್ಲಿ ಆದಾಯ ತೆರಿಗೆ ಅಧಿಕಾರಿಗಳ ಪಾತ್ರದ ಕುರಿತು ತನಿಖೆಯ ವ್ಯಾಪ್ತಿ ಕುರಿತು ಚರ್ಚೆಗಳು ಶುರುವಾಗಿವೆ. ಸಿಜೆ ರಾಯ್ ಕುಟುಂಬವು, “ಐಟಿ ಅಧಿಕಾರಿಗಳ ಕಿರುಕುಳವೇ ಆತ್ಮಹತ್ಯೆಗೆ ಕಾರಣ” ಎಂದು ಗಂಭೀರ ಆರೋಪ ಮಾಡಿದ್ದು, ತೆರಿಗೆ ತಪ್ಪಿಸುವಿಕೆ ಸಂಬಂಧಿತ ಎಲ್ಲಾ ಕಡತಗಳು ಮತ್ತು ದಾಖಲೆಗಳು ಕೇಂದ್ರ ಸರ್ಕಾರದ

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ SITಯಿಂದ IT ಅಧಿಕಾರಿಗಳ ವಿಚಾರಣೆ ಸಾಧ್ಯತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top